ಗ್ರಾಮದ ಸಮಸ್ಯೆ ಬಗ್ಗೆ ಜನರು ತಿಳಿಸಬೇಕು 


Team Udayavani, Feb 20, 2022, 8:58 AM IST

ಗ್ರಾಮದ ಸಮಸ್ಯೆ ಬಗ್ಗೆ ಜನರು ತಿಳಿಸಬೇಕು 

ದೇವನಹಳ್ಳಿ: ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಸರ್ಕಾರಿ ಸೇವೆಗಳು ಜನರ ಬಳಿಗೆ ತಲುಪಿಸಲು ಸರ್ಕಾರಗಳು ಮುಂದಾಗಬೇಕು. ಹಳ್ಳಿಯ ಜನ ತಮ್ಮ ಸಮಸ್ಯೆಗಳನ್ನುಪತ್ರದ ಮೂಲಕ ಸಲ್ಲಿಸಬೇಕು ಎಂದು ಶಾಸಕ ಎಲ್‌. ಎನ್‌.ನಾರಾಯಣಸ್ವಾಮಿ ಹೇಳಿದರು.

ತಾಲೂಕಿನ ಕಸಬಾ ಹೋಬಳಿ ಆವತಿ ಗ್ರಾಮಾಂತರ ಪ್ರೌಢಶಾಲೆಯಲ್ಲಿ ತಾಲೂಕು ಆಡಳಿತ ವತಿಯಿಂದಹಮ್ಮಿಕೊಂಡಿದ್ದ ಜಿಲ್ಲಾಧಿಕಾರಿಗಳ ನಡಿಗೆ ಹಳ್ಳಿಗಳ ಕಡೆಗೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಜಿಲ್ಲಾಧಿಕಾರಿ, ಕಂದಾಯ ಇಲಾಖೆಯ ಗುಮಾಸ್ತರನ್ನು ಹೊರತುಪಡಿಸಿ ಉಳಿದ ಅಧಿಕಾರಿಸಿಬ್ಬಂದಿ ಪ್ರತಿ ತಿಂಗಳ ಮೂರನೇ ಶನಿವಾರದಂದುಹಳ್ಳಿಗಳಿಗೆ ಭೇಟಿ ನೀಡಿ, ಹಳ್ಳಿ ವಾಸ್ತವ್ಯ ಮಾಡಬೇಕು.ಸರ್ಕಾರಿ ಶಾಲೆಗಳಲ್ಲಿ, ಎಸ್‌ಸಿ ಹಾಗೂ ಎಸ್‌ಟಿ ವಸತಿ ನಿಲಯದಲ್ಲಿ ಭೋಜನ ಸ್ವೀಕರಿಸಬೇಕು ಎಂದರು.

ಕಾರ್ಯಕ್ರಮದ ಒಂದು ವಾರದ ಮೊದಲೇ ಕಂದಾಯ ಇಲಾಖೆಯ ಅಧಿಕಾರಿಗಳು ಹಳ್ಳಿಗಳಿಗೆಭೇಟಿ ನೀಡಿ, ಸರ್ಕಾರದಿಂದ ನೀಡಿರುವ ಕಾರ್ಯಸೂಚಿ ಗಳನ್ವಯ ಫ‌ಲಾನುಭವಿಗಳ ಅರ್ಜಿಗಳನ್ನುಸಂಗ್ರಹಿಸಿ, ಅರ್ಜಿಗಳ ಬಗ್ಗೆ ಯಾವ ಹಂತದಲ್ಲಿ ಕ್ರಮತೆಗೆದುಕೊಳ್ಳಬೇಕು ಎಂದು ಮೊದಲೇ ಪ್ರಕ್ರಿಯೆಯನ್ನುಪೂರ್ಣಗೊಳಿಸಿ, ಹಳ್ಳಿಗಳಿಗೆ ಭೇಟಿ ನೀಡಿದಸಂದರ್ಭದಲ್ಲಿ ಅರ್ಜಿಗಳು ವಿಲೇವಾರಿಯಾಗಿರುವಬಗ್ಗೆ ಸಂಬಂಧಪಟ್ಟ ಫ‌ಲಾನುಭವಿಗಳಿಗೆ ಮಾಹಿತಿ ನೀಡಬೇಕು ಎಂದು ತಿಳಿಸಿದರು.

ಅರ್ಜಿಗಳ ಮೇಲೆ ಬೇರೆ ಬೇರೆ ಹಂತದಲ್ಲಿ ವಿಚಾರಣೆಯ ಅವಶ್ಯಕತೆ ಇದ್ದಲ್ಲಿ ಅದನ್ನು ಪೂರ್ಣಗೊಳಿಸಲು ಕ್ರಮ ತೆಗೆದುಕೊಳ್ಳಬೇಕು. ಈ ಕೆಲಸವನ್ನು ಅಧಿಕಾರಿಗಳುಪ್ರಾಮಾಣಿಕವಾಗಿ ಮಾಡಿದಾಗ ಮಾತ್ರ ಈಕಾರ್ಯಕ್ರಮಗಳು ಯಶಸ್ವಿಯಾಗುತ್ತವೆ. ಆವತಿ ಗ್ರಾಮಕ್ಕೆ ಹೆಚ್ಚಿನ ಅಭಿವೃದ್ಧಿ ಕಾರ್ಯಗಳಿಗೆ ಹೆಚ್ಚಿನಒತ್ತನ್ನು ನೀಡಿದ್ದೇನೆ. ಪ್ರತಿ ಗ್ರಾಮವು ಸರ್ವ ತೋಮುಖಅಭಿವೃದ್ಧಿಯಾಗಬೇಕು. ತಾಲೂಕಿನ ಸರ್ವತೋಮುಖ ಅಭಿವೃದ್ಧಿಯೇ ನನ್ನ ಅಜೆಂಡಾ ಆಗಿದೆ ಎಂದರು.

ತಹಶೀಲ್ದಾರ್‌ ಶಿವರಾಜ್‌ ಮಾತನಾಡಿ,ಜನಸಾಮಾನ್ಯರ ಅನುಕೂಲ ಕ್ಕಾಗಿ ಸರ್ಕಾರ ಅನೇಕಯೋಜನೆಗಳನ್ನು ಜಾರಿಗೆ ತಂದಿದೆ. ಜನರುಕಚೇರಿಗಳಿಗೆ ಅಲೆದಾಟವನ್ನು ತಪ್ಪಿಸಲು ಹಾಗೂಗ್ರಾಮಗಳ ಸರ್ವತೋ ಮುಖ ಅಭಿವೃದ್ಧಿಗೆ ಎಲ್ಲಾಇಲಾಖೆಗಳು ಒಂದೆಡೆ ಸೇರಿ ಸಮಸ್ಯೆಗಳಿಗೆ ಪರಿಹಾರನೀಡಿ ಆಯಾ ಗ್ರಾಮ ಅಭಿವೃದ್ಧಿಪಡಿಸುವುದೇ ಗ್ರಾಮವಾಸ್ತವ್ಯದ ಗುರಿಯಾಗಿದೆ. ಗ್ರಾಮ ವಾಸ್ತವ್ಯದಿಂದ ಸಮಸ್ಯೆ ಬಗೆಹರಿಸಲಾಗುತ್ತಿದೆ.

ಗ್ರಾಮದ ಸಮಸ್ಯೆಗಳಿಗೆ ಸ್ಪಂದಿಸಿ, ಸಮಸ್ಯೆಗಳನ್ನು ಸ್ಥಳಗಳಲ್ಲಿಯೇ ಬಗೆಹರಿಸಲಾಗುತ್ತದೆ. ಸರ್ಕಾರಿ ಸೌಲಭ್ಯಗಳನ್ನು ಸ್ಥಳದಲ್ಲಿಯೇ ಕೊಡಲಾಗುತ್ತಿದೆ. ಸಾರ್ವಜನಿಕರ ಸಮಸ್ಯೆಗಳಿಗೆ ಹೆಚ್ಚಿನ ಒತ್ತನ್ನು ಕೊಡಲಾಗಿದೆ. ಕಾಲೋನಿಗಳಲ್ಲಿ ಒಂದೇ ಮನೆಗಳಲ್ಲಿ ಮೂರ್‍ನಾಲ್ಕು ಕುಟುಂಬಗಳು ವಾಸಿಸುತ್ತಿರುವುದು ಗಮನಕ್ಕೆ ಬಂದಿದೆ. ಗುಂಪುಮನೆಗಳನಿರ್ಮಾಣ ಮಾಡಿದರೆ ಫ‌ಲಾನುಭವಿಗಳು ಇಂತಿಷ್ಟು ಹಣವನ್ನು ಕಟ್ಟಬೇಕು. ಜಾಗವನ್ನು ಗುರ್ತಿಸಿಕೊಡಲಾಗುವುದು ಎಂದು ಹೇಳಿದರು.

ಗ್ರಾಪಂ ಸದಸ್ಯ ಮಂಜುನಾಥ್‌ ಮಾತನಾಡಿ, ಆವತಿ ಗ್ರಾಮದ ಹೊಸಬಡಾವಣೆಯಲ್ಲಿ ವಸತಿ ಗೃಹಗಳಿಗೆಹೋಗುವ ರಸ್ತೆಯನ್ನು ಅರಣ್ಯ ಇಲಾಖೆ ಒತ್ತುವರಿಮಾಡಿಕೊಂಡಿದೆ. ಸಾರ್ವಜನಿಕರಿಗೆ ತೊಂದರೆಯಾಗುತ್ತಿದೆ. ಸರ್ವೇ ಇಲಾಖೆ, ಅರಣ್ಯ ಇಲಾಖೆ ಮತ್ತು ಕಂದಾಯ ಇಲಾಖೆ ಜಂಟಿ ಸರ್ವೇ ಕಾರ್ಯ ಮಾಡಿ ರಸ್ತೆಯನ್ನು ಬಿಡಿಸಿಕೊಡಬೇಕು ಎಂದು ಒತ್ತಾಯಿಸಿದರು.

ಡಿಎಸ್‌ಎಸ್‌ ಜಿಲ್ಲಾ ಸಂಘಟನಾ ಸಂಚಾಲಕ ಆವತಿ ತಿಮ್ಮರಾಯಪ್ಪ ಮಾತನಾಡಿ, ಕಾಲೋನಿಗಳಲ್ಲಿ ಎರಡು ಮೂರು ಕುಟುಂಬಗಳು ವಾಸಮಾಡುತ್ತಿದ್ದು, ನಿವೇಶ  ನದ ಸಮಸ್ಯೆ ಇದೆ. ಅಧಿಕಾರಿಗಳು ಸಮಸ್ಯೆಯನ್ನು ಬಗೆಹರಿಸಿಕೊಡಬೇಕು. ಜಿಲ್ಲಾಧಿಕಾರಿಗಳ ನಡಿಗೆ ಹಳ್ಳಿಗಳ ಕಡೆಗೆ ಕಾರ್ಯಕ್ರಮವನ್ನು ಮಾಡಿದರೆ ಸಾಲದು ಗ್ರಾಮಗಳ ಸಮಸ್ಯೆಗಳು ಪರಿಹಾರವಾದರೆ ಮಾತ್ರ ಈ ಕಾರ್ಯಕ್ರಮಗಳು ಅರ್ಥಪೂರ್ಣವಾಗುತ್ತದೆ. ಆವತಿ ಗ್ರಾಮಠಾಣ ವಿಸ್ತರಣೆಯಾಗಬೇಕು. ಆವತಿ ಗ್ರಾಮಕ್ಕೆ ನಿರ್ದಿಷ್ಟವಾದ ನಕ್ಷೆ ಇರುವುದಿಲ್ಲ. ಅಧಿಕಾರಿಗಳು ಇತ್ತ ಗಮನಹರಿಸಬೇಕು. ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಗ್ರಾಮಗಳಿಗೆ ಭೇಟಿ ನೀಡದೆ ಕಚೇರಿಯಲ್ಲಿ ಕುಳಿತು ಕೆಲಸ ಮಾಡುತ್ತಾರೆ. ಜನರಸಮಸ್ಯೆ ಹೇಗೆ ಅರ್ಥವಾಗುತ್ತದೆ ಎಂದು ಅಧಿಕಾರಿಗಳ ಗಮನಕ್ಕೆ ತಂದರು.

ತಾಪಂ ಇಒ ಎಚ್‌.ಡಿ.ವಸಂತ್‌ ಕುಮಾರ್‌ ಮಾತನಾಡಿ, ಗ್ರಾಮ ಪಂಚಾಯಿತಿಗಳಲ್ಲಿ ಸಿಗಬೇಕಾಗಿರುವ ಸೌಲಭ್ಯಗಳಲ್ಲಿ ಲೋಪದೋಷ ವಾಗಿದ್ದರೆ, ನೇರವಾಗಿ ದೂರು ಕೊಡಿ, ಸೌಲಭ್ಯಗಳು ಸಿಗದಿದ್ದಲ್ಲಿ ಅವುಗಳನ್ನು ತಲುಪಿಸುವಂತಹ ಕಾರ್ಯ ಮಾಡಲಾಗುತ್ತದೆ ಎಂದರು.

ಆರೋಗ್ಯ ಇಲಾಖೆ, ಕೃಷಿ ಇಲಾಖೆ, ಸಮಾಜ ಕಲ್ಯಾಣ ಇಲಾಖೆ, ರೇಷ್ಮೆ ಇಲಾಖೆ, ಬೆಸ್ಕಾಂ, ಮೀನುಗಾರಿಕೆ ಇಲಾಖೆ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ತಮ್ಮ ಇಲಾಖೆಗಳಲ್ಲಿ ಸಿಗುವಂತಹ ಸೌಲತ್ತುಗಳ ಬಗ್ಗೆ ಮಾಹಿತಿ ನೀಡಿದರು. ವೃದ್ಧರಿಗೆಪಿಂಚಣಿ ಮಂಜೂರಾತಿ ಪತ್ರಗಳನ್ನು ವಿತರಣೆ ಮಾಡಿದರು.

ಗ್ರಾಪಂ ಅಧ್ಯಕ್ಷರಾದ ಮಮತಾಸಾಮಿ, ಉಪಾಧ್ಯಕ್ಷೆ ಮುನಿರತ್ನಮ್ಮ, ಗ್ರಾಪಂ ಸದಸ್ಯ ಅತ್ತಿಬೆಲೆ ನರಸಪ್ಪ, ಮಂಜುನಾಥ್‌, ಪಿಡಿಒ ಶಿವರಾಜ್‌, ಕಾರ್ಯದರ್ಶಿ ಹರೀಂದ್ರ, ರಾಜಸ್ವ ನಿರೀಕ್ಷಕ ಉಪೇಂದ್ರ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಇದ್ದರು.

ಟಾಪ್ ನ್ಯೂಸ್

NITK-Padavi-pradana

Surathkal: ಎಐಯಿಂದ ಉದ್ಯೋಗ, ನಂಬಿಕೆಗೆ ಕುತ್ತು: ಪ್ರೊ| ಗೋವಿಂದನ್‌ ರಂಗರಾಜನ್‌

Nalin-Kateel

Result: ಮಹಾರಾಷ್ಟ್ರದಲ್ಲಿ ಎನ್‌ಡಿಎಗೆ ಜಯಭೇರಿ; ಮೋದಿ ನಾಯಕತ್ವಕ್ಕೆ ಮನ್ನಣೆ: ನಳಿನ್‌

Padmaraj–JPoojary

Mangaluru: ಗೊಂದಲ ಮೂಡಿಸುವ ಬಿಜೆಪಿಗೆ ತಕ್ಕ ಪಾಠ: ಕೆಪಿಸಿಸಿ ಪ್ರ.ಕಾರ್ಯದರ್ಶಿ ಪದ್ಮರಾಜ್‌

Sanjeev-Matandoor

Putturu: ಬಜೆಟ್‌ನಲ್ಲಿ ಹೊರಡಿಸಿರುವ ಆದೇಶ ಅನುಷ್ಠಾನಿಸದೆ ಕೃಷಿಕರಿಗೆ ವಂಚನೆ: ಮಠಂದೂರು

Sri-Home-minister

Udupi: ಪೇಜಾವರ ಶ್ರೀವಿಶ್ವಪ್ರಸನ್ನತೀರ್ಥ ಸ್ವಾಮೀಜಿ -ಗೃಹ ಸಚಿವ ಅಮಿತ್‌ ಶಾ ಭೇಟಿ

Udupi-DC-Dr.-Vidya-kumari

Udupi: ಮಂಗನಕಾಯಿಲೆ ಪ್ರಕರಣ: ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಿ: ಡಿಸಿ ಡಾ.ವಿದ್ಯಾಕುಮಾರಿ

adani (2)

Adani; 2,200 ಕೋಟಿ ರೂ. ಲಂಚ: ಅಮೆರಿಕ ಸಮನ್ಸ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Anekal: ರೌಡಿಶೀಟರ್‌ ಮೇಲೆ ಮಾರಕಾಸ್ತ್ರಗಳಿಂದ ದಾಳಿ

Anekal: ರೌಡಿಶೀಟರ್‌ ಮೇಲೆ ಮಾರಕಾಸ್ತ್ರಗಳಿಂದ ದಾಳಿ

nelamangala

Leopard Attack: ನೆಲಮಂಗಲ ಸಮೀಪ ಚಿರತೆ ದಾಳಿಗೆ ರೈತ ಮಹಿಳೆ ಬಲಿ

Stray dogs: ಅಂ.ರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬೀದಿ ನಾಯಿಗಳ ಹಾವಳಿ

Stray dogs: ಅಂ.ರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬೀದಿ ನಾಯಿಗಳ ಹಾವಳಿ

Tragic: ಮರದ ಕಾರ್ಖಾನೆಯಲ್ಲಿ ಆಕಸ್ಮಿಕ ಬೆಂಕಿ; ಕಾರ್ಮಿಕ ಸಜೀವ ದಹನ

Tragic: ಮರದ ಕಾರ್ಖಾನೆಯಲ್ಲಿ ಆಕಸ್ಮಿಕ ಬೆಂಕಿ; ಕಾರ್ಮಿಕ ಸಜೀವ ದಹನ

Market: ಬೆಲೆ ಕುಸಿತ; ಬೂದು ಕುಂಬಳ ಬೀದಿಪಾಲು!

Market: ಬೆಲೆ ಕುಸಿತ; ಬೂದು ಕುಂಬಳ ಬೀದಿಪಾಲು!

MUST WATCH

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

ಹೊಸ ಸೇರ್ಪಡೆ

NITK-Padavi-pradana

Surathkal: ಎಐಯಿಂದ ಉದ್ಯೋಗ, ನಂಬಿಕೆಗೆ ಕುತ್ತು: ಪ್ರೊ| ಗೋವಿಂದನ್‌ ರಂಗರಾಜನ್‌

Nalin-Kateel

Result: ಮಹಾರಾಷ್ಟ್ರದಲ್ಲಿ ಎನ್‌ಡಿಎಗೆ ಜಯಭೇರಿ; ಮೋದಿ ನಾಯಕತ್ವಕ್ಕೆ ಮನ್ನಣೆ: ನಳಿನ್‌

Padmaraj–JPoojary

Mangaluru: ಗೊಂದಲ ಮೂಡಿಸುವ ಬಿಜೆಪಿಗೆ ತಕ್ಕ ಪಾಠ: ಕೆಪಿಸಿಸಿ ಪ್ರ.ಕಾರ್ಯದರ್ಶಿ ಪದ್ಮರಾಜ್‌

Sanjeev-Matandoor

Putturu: ಬಜೆಟ್‌ನಲ್ಲಿ ಹೊರಡಿಸಿರುವ ಆದೇಶ ಅನುಷ್ಠಾನಿಸದೆ ಕೃಷಿಕರಿಗೆ ವಂಚನೆ: ಮಠಂದೂರು

Sri-Home-minister

Udupi: ಪೇಜಾವರ ಶ್ರೀವಿಶ್ವಪ್ರಸನ್ನತೀರ್ಥ ಸ್ವಾಮೀಜಿ -ಗೃಹ ಸಚಿವ ಅಮಿತ್‌ ಶಾ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.