ಕೇಂದ್ರದ ಯೋಜನೆ ರೈತರಿಗೆ ತಲುಪಿಸಿ: ಈರಣ್ಣ ಕಡಾಡಿ
Team Udayavani, Sep 8, 2020, 1:20 PM IST
ದೇವನಹಳ್ಳಿ: ಕೇಂದ್ರ-ರಾಜ್ಯ ಸರ್ಕಾರದ ಯೋಜನೆಗಳನ್ನು ಪ್ರತಿ ರೈತರಿಗೆ ತಲುಪಿಸುವ ಕಾರ್ಯವನ್ನು ರೈತ ಮೋರ್ಚಾ ಪದಾಧಿಕಾರಿಗಳು ರಾಯ ಭಾರಿಗಳಾಗಿ ಕಾರ್ಯನಿರ್ವಹಿಸಬೇಕು ಎಂದು ರಾಜ್ಯ ಸಭಾ ಸದಸ್ಯ ಹಾಗೂ ಬಿಜೆಪಿ ರಾಜ್ಯ ರೈತ ಮೋರ್ಚಾ ರಾಜ್ಯಾಧ್ಯಕ್ಷ ಈರಣ್ಣ ಕಡಾಡಿ ತಿಳಿಸಿದರು.
ತಾಲೂಕಿನ ಕಸಬಾ ಹೋಬಳಿ ಅತ್ತಿಬೆಲೆ ಸಮೀಪದ ಅನಂತ ವಿದ್ಯಾನಿ ಕೇತನ ಸಭಾಂಗಣದಲ್ಲಿ ಬಿಜೆಪಿ ಜಿಲ್ಲಾ ರೈತ ಮೋರ್ಚಾ ವತಿಯಿಂದ ಹಮ್ಮಿಕೊಂಡಿದ್ದ ಬಿಜೆಪಿ ಜಿಲ್ಲಾ ಮಟ್ಟದ ರೈತ ಮೋರ್ಚಾ ಕಾರ್ಯಕಾರಣಿ ಸಭೆ ಉದ್ಘಾ ಟಿಸಿ ಮಾತನಾಡಿದರು. ಪ್ರಧಾನಿ ಮೋದಿ ನೇತೃತ್ವದ ಸರ್ಕಾರ ಕಿಸಾನ್ ಸಮ್ಮಾನ್ ಯೋಜನೆಯಡಿ ಪ್ರತಿ ತಿಂಗಳು 2 ಸಾವಿರದಂತೆ ವರ್ಷಕ್ಕೆ 6 ಸಾವಿರ ರೂ. ನೀಡುತ್ತಿದ್ದಾರೆ. ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ನೇತೃತ್ವದ ಸರ್ಕಾರ ರೈತರಿಗೆ 4 ಸಾವಿರ ರೂ. ಹಣ ನೀಡುತ್ತಿದ್ದಾರೆ. ಒಟ್ಟು ರೈತರಿಗೆ 10 ಸಾವಿರರೂ. ತಲುಪುವಂತೆ ಮಾಡಿದ್ದಾರೆಂದರು. ಕೇವಲ ಪದಾಧಿಕಾರಿಗಳಾದರೆ ಸಾಲದು, ರೈತರ ಸಮಸ್ಯೆ ಅರಿತು ಕೆಲಸ ಮಾಡಬೇಕು ಎಂದು ಹೇಳಿದರು.
ವಾರದೊಳಗೆ ಪಟ್ಟಿ:ಜಿಲ್ಲಾ ರೈತ ಮೋರ್ಚಾ ಅಧ್ಯಕ್ಷ ಎಚ್.ಎಂ.ರವಿಕುಮಾರ್, ಇನ್ನೊಂದು ವಾರದೊಳಗೆ ರೈತ ಮೋರ್ಚಾ ಪದಾಧಿಕಾರಿಗಳ ಪಟ್ಟಿ ಸಿದ್ಧಗೊಂಡಿದ್ದು, ಬಿಡುಗಡೆಗೆ ಸಿದ್ಧತೆ ಮಾಡಿಕೊಳ್ಳಲಾಗುವುದು ಎಂದರು.
ಬಿಜೆಪಿ ತನಗೆ 3 ವರ್ಷಗಳ ಅವಧಿ ನೀಡಿರುವುದರಿಂದ ಪ್ರತಿ ಜಿಲ್ಲೆಯ ಪ್ರವಾಸಗಳನ್ನು ಮಾಡಿ, ರೈತರ ಸಂಕಷ್ಟಗಳ ಪಟ್ಟಿ ಮಾಡಿ, ಸರ್ಕಾರಕ್ಕೆ ತಲುಪಿಸುವ ಕೆಲಸ ಮಾಡುತ್ತೇನೆಂದರು. ರಾಜ್ಯ ರೈತ ಮೋರ್ಚಾ ಪ್ರಧಾನ ಕಾರ್ಯದರ್ಶಿ ಶಿವಪ್ರಸಾದ್, ಬಿಜೆಪಿ ಜಿಲ್ಲಾಧ್ಯಕ್ಷ ಎ.ವಿ.ನಾರಾಯಣಸ್ವಾಮಿ, ರಾಜ್ಯ ರೈತ ಮೋರ್ಚಾ ಉಪಾಧ್ಯಕ್ಷ ಗುರುಲಿಂಗನಗೌಡ, ಸಿ.ವಿ.ಲೋಕೇಶ್, ಖಜಾಂಚಿ ನಲ್ಲೇಶ್‌ರೆಡ್ಡಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕುಮಾರ್‌ಗೌಡ, ಪುರು ಷೋತ್ತಮ್‌ಗೌಡ, ದೇವನಹಳ್ಳಿ ತಾಲೂಕು ಅಧ್ಯಕ್ಷ ಸುಂದರೇಶ್ (ಸುನಿ), ಪ್ರ. ಕಾರ್ಯದರ್ಶಿ ಮಂಜುನಾಥ್, ಸೊಣ್ಣೇ ಗೌಡ, ಬಸವರಾಜು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.