ಗುಂಡಿ ಬಿದ್ದ ದೇವನಹಳ್ಳಿ-ಚಿಕ್ಕಬಳ್ಳಾಪುರ ರಸ್ತೆ : ಸಂಕಷ್ಟ
ಮಳೆ ಬಂದರಂತೂ ಸವಾರರ ಪಾಡು ಹೇಳತೀರದು
Team Udayavani, Sep 22, 2020, 1:12 PM IST
ದೇವನಹಳ್ಳಿ: ಕಳೆದ ಒಂದು ವಾರದಿಂದ ಮಳೆ ಆಗುತ್ತಿರುವುದರಿಂದ ತಾಲೂಕಿನಲ್ಲಿ ರಸ್ತೆಗಳೆಲ್ಲಾ ಕೆಸರುಮಯವಾಗಿರುವಂತೆಯೇ ರಾಷ್ಟ್ರೀಯ ಹೆದ್ದಾರಿ 207ರ ರಸ್ತೆ ಮಧ್ಯೆ ದೊಡ್ಡ ಗಾತ್ರದ ಗುಂಡಿಗಳುಬಿದ್ದಿರುವುದರಿಂದ ವಾಹನ ಸವಾರರು ಎದ್ದು ಬಿದ್ದು ಹೋಗುವ ಪರಿಸ್ಥಿತಿ ಎದುರಾಗಿದೆ.
ನಿತ್ಯ ಸಂಕಷ್ಟ: ದೇವನಹಳ್ಳಿ ನಗರದ ಗಿರಿಯಮ್ಮ ವೃತ್ತದಿಂದ ಹಿಡಿದು, ರಾಣಿ ಸರ್ಕಲ್‌ವರೆಗೆ ರಸ್ತೆಗಳು ಗುಂಡಿ ಬಿದ್ದಿವೆ. ನಗರದ ಹಳೇ ಆರ್‌ಟಿಒ ಕಚೇರಿಯಿಂದ ಸ್ವಲ್ಪ ದೂರ ಹೋಗುತ್ತಿದ್ದಂತೆ, ಬೃಹತ್ ಗಾತ್ರದ ಗುಂಡಿ ಬಿದ್ದಿದ್ದು ವಾಹನ ಸವಾರರು ಸಂಚರಿಸಲು ಸಂಕಷ್ಟ ಪಡುವಂತಾಗಿದೆ.
ಚಿಕ್ಕಬಳ್ಳಾಪುರಕ್ಕೆ ಹೋಗುವ ರಾಷ್ಟ್ರೀಯ ಹೆದ್ದಾರಿ ಆಗಿರುವುದರಿಂದ ಬಸ್, ಲಾರಿ, ಕಾರು, ಬೈಕ್‌ಗಳು ದಿನನಿತ್ಯ ಸಾವಿರಾರು ಸಂಖ್ಯೆಯಲ್ಲಿ ಸಂಚರಿಸುತ್ತವೆ.ರಸ್ತೆಯಲ್ಲಿರುವ ಗುಂಡಿಯ ಪಕ್ಕದಲ್ಲಿಯೇ ವಾಹನ ಸವಾರರು ಗುಂಡಿ ತಪ್ಪಿಸಿ ಹೋಗುವ ಸ್ಥಿತಿ ನಿರ್ಮಾಣವಾಗಿದೆ. ಸ್ವಲ್ಪ ಯಾಮಾರಿದರೆ ಸಾವು ಕಟ್ಟಿಟ್ಟ ಬುತ್ತಿ.
ಕೆಸರುಗದ್ದೆ: ಎನ್‌ಎಚ್ ವ್ಯಾಲಿ ನೀರು ಹರಿಸಲು ಪೈಪ್‌ಲೈನ್ ಅಳವಡಿಸಲೆಂದು ರಾಷ್ಟ್ರೀಯ ಹೆದ್ದಾರಿ ಅಗೆದು 1 ವರ್ಷ ಕಳೆದರೂ ರಸ್ತೆಗೆ ಡಾಂಬರೀಕರಣ ಮಾಡದೇ ಹಾಗೆಯೇ ಬಿಟ್ಟಿದ್ದಾರೆ. ಕಾಮಗಾರಿ ವರ್ಷ ಮುಗಿದು ವರ್ಷ ಕಳೆದರೂ ರಸ್ತೆಯಲ್ಲಿ ಅಗೆದಿರುವ ಜಾಗದಲ್ಲಿ ಜಲ್ಲಿ ಕಲ್ಲುಹಾಕಿ ಬಿಡಲಾಗಿದೆ. ಮಳೆ ಬಂತೆಂದರೆ, ರಸ್ತೆ ಇಕ್ಕಲೆಗಳಲ್ಲೆಲ್ಲಾ ಕೆಸರುಗದ್ದೆಯಾಗಲಿದೆ. ರಸ್ತೆ ಗುಂಡಿಗೆ ಮಣ್ಣು ಹಾಕಿರುವುದರಿಂದ ಮಳೆ ಬಂದಿರುವುದರಿಂದ ಕೆಸರು ಗದ್ದೆಯಾಗಿ ಮಾರ್ಪಟ್ಟಿದೆ.
ವಾಹನ ಸವಾರರು ಒಂದು ಗುಂಡಿ ತಪ್ಪಿಸಲು ಹೋಗಿ ಮತ್ತೂಂದು ಗುಂಡಿಯಲ್ಲಿ ಚಕ್ರವನ್ನು ಇಳಿಸುವ ದುಸ್ಥಿತಿಗೆ ಮುಕ್ತಿ ಇಲ್ಲದಂತಾಗಿದೆ. ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಖ್ಯಾತಿ ಹೊಂದಿರುವ ದೇವನಹಳ್ಳಿ ರಸ್ತೆಗಳ ಸ್ಥಿತಿಯನ್ನು ಕೇಳ್ಳೋರಿಲ್ಲದಂತಾಗಿದೆ.
ಅರ್ಧಕ್ಕೆ ನಿಂತ ಕಾಮಗಾರಿ: ದೇವನಹಳ್ಳಿ – ದೊಡ್ಡಬಳ್ಳಾಪುರ ಮಾರ್ಗದ ರಸ್ತೆಗಳಲ್ಲಿಯೂ ಗುಂಡಿಗಳದ್ದೇ ಕಾರುಬಾರು. ಇತ್ತೀಚೆಗೆ ರಸ್ತೆ ಅಪಘಾತಗಳು ಹೆಚ್ಚಾಗುತ್ತಿದ್ದು, ಜನರಲ್ಲಿ ಆತಂಕ ಭಯ ಹೆಚ್ಚು ಮಾಡಿದೆ. ಡಾಬಸ್‌ಪೇಟೆಯಿಂದ ಹೊಸೂರು ಮುಖ್ಯರಸ್ತೆಗೆ ಸೇರಲು ರಿಂಗ್‌ರೋಡ್ ರಸ್ತೆಯನ್ನು 2010ರಲ್ಲಿ ಕೈಗೊಳ್ಳಲಾಗಿತ್ತು. ಆದರೆ, ಇದುವರೆಗೂ ಕಾಮಗಾರಿ ಅರ್ಧಕ್ಕೆ ನಿಂತುಹೋಗಿದೆ. ದಿನೇ ದಿನೆ ದೇವನಹಳ್ಳಿ ನಗರದಲ್ಲಿ ವಾಹನ ದಟ್ಟಣೆ ಹೆಚ್ಚಾಗುತ್ತಿರುವ ಮಧ್ಯೆ ರಸ್ತೆಗಳ ಸಂಚಾರ ಬಲು ಕಷ್ಟಕರವಾಗಿದೆ.
ಇನ್ನಾದರೂ ಸಂಬಂಧಪಟ್ಟ ಅಧಿಕಾರಿಗಳು ರಸ್ತೆಯಲ್ಲಿ ಬಿದ್ದಿರುವ ಗುಂಡಿಗಳನ್ನು ಮುಚ್ಚಿ ಸವಾರರು, ಚಾಲಕರ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಬೇಕು ಎಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.
ದೇವನಹಳ್ಳಿ ನಗರ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಖ್ಯಾತಿ ಹೊಂದಿದೆ. ಆದರೆ, ರಸ್ತೆಗಳಲ್ಲಿ ಗುಂಡಿ ಗಳನ್ನು ನೋಡಿದರೆ, ಭಯವಾಗುತ್ತದೆ. ಲೋಕೋಪಯೋಗಿ ಇಲಾಖೆಯನ್ನು ಕೇಳಿದರೆ, ರಾಷ್ಟ್ರೀಯ ಹೆದ್ದಾರಿಗೆ ಬರುತ್ತದೆ ಎಂದು ಹೇಳುತ್ತಾರೆ. ಪುರಸಭೆಯನ್ನು ಕೇಳಿದರೆ ಪಿಡಬ್ಲ್ಯುಡಿಗೆ ಬರುತ್ತದೆ ಎಂದು ಹಾರಿಕೆ ಉತ್ತರ ನೀಡಿ ಅಧಿಕಾರಿಗಳು ನುಣುಚಿಕೊಳ್ಳುತ್ತಿದ್ದಾರೆ. -ಎಚ್.ಕೆ.ವೆಂಕಟೇಶಪ್ಪ, ಡಿಎಸ್‌ಎಸ್ ಜಿಲ್ಲಾ ಕಾರ್ಯಕಾರಿ ಸಮಿತಿ ಸದಸ್ಯ
ಮಳೆಗಾಲ ಪ್ರಾರಂಭವಾಗಿರುವುದರಿಂದಕೂಡಲೇ ಪಿಡಬ್ಲ್ಯುಡಿ ಇಲಾಖೆ ಅಧಿಕಾರಿಗಳು ರಸ್ತೆ ಗುಂಡಿ ಮುಚ್ಚಿಸುವ ಕಾರ್ಯ ಮಾಡಬೇಕು. ರಸ್ತೆಕಾಮಗಾರಿಗೆ ಕ್ರಿಯಾಯೋಜನೆ ರೂಪಿಸಬೇಕು. ಅಧಿಕಾರಿಗಳು ಎಲ್ಲಿ ರಸ್ತೆ ಗುಂಡಿ ಬಿದ್ದಿದೆಯೋ ಅದನ್ನು ಕೂಡಲೇ ಮುಚ್ಚಿಸಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಬೇಕು. –ಎಲ್.ಎನ್.ನಾರಾಯಣಸ್ವಾಮಿ, ಶಾಸಕ
ಡಾಂಬರೀಕರಣ ಮಾಡುವಂತೆ ನಾವು ಈಗಾಗಲೇ 2ಬಾರಿರಾಷ್ಟ್ರೀಯಹೆದ್ದಾರಿ ಪ್ರಾಧಿಕಾರಕ್ಕೆ ನೋಟಿಸ್ ನೀಡಿದ್ದೇವೆ. ಇದುವರೆಗೆಕೆಲಸ ಮಾಡಿಲ್ಲ. ಹಾಗಾಗಿ ಶಾಸಕರ ಗಮನಕ್ಕೆ ತರಲಾಗಿದೆ. ಶಾಸಕರು ಆದಷ್ಟು ಬೇಗ ಸಭೆಕರೆದು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದೊಂದಿಗೆ ಮಾತನಾಡಿ ಡಾಂಬರೀಕರಣಕ್ಕೆ ಸೂಚನೆ ನೀಡಲಿದ್ದಾರೆ. –ಕೃಷ್ಣಪ್ಪ, ಪಿಡಬ್ಲ್ಯುಡಿ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರ
–ಎಸ್.ಮಹೇಶ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Nelamangala: ಸಾಕು ನಾಯಿ ಸತ್ತಿದ್ದಕ್ಕೆ ಮಾಲಕ ಆತ್ಮಹ*ತ್ಯೆ
Doddaballapur: ಹೊಲದಲ್ಲಿ ಹೂ ಬಿಡಿಸುತ್ತಿದ್ದ ಮಹಿಳೆಗೆ ಕಾರು ಡಿಕ್ಕಿ: ಸಾವು
Road Mishap: ಬೈಕ್ ವ್ಹೀಲಿಂಗ್ ಮಾಡುವಾಗ ಕ್ಯಾಂಟರ್‌ಗೆ ಡಿಕ್ಕಿ; ಇಬ್ಬರು ಸಾವು
Tragic: ಮದುವೆ ಹರಕೆ ಹೊತ್ತು ಘಾಟಿ ದೇಗುಲಕ್ಕೆ ಬಂದಿದ್ದ ಯುವತಿ ಸಾವು
Ayodhya ರಾಮನ ದರ್ಶನ ಪಡೆದಿದ್ದ “ಬಸಪ್ಪ” ಈಗ ಶಬರಿಮಲೆಗೆ ಪ್ರಯಾಣ!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Vande Bharat Sleeper Train: ಪರೀಕ್ಷಾರ್ಥ ಓಡಾಟದಲ್ಲಿ ಗಂಟೆಗೆ 180 ಕಿ.ಮೀ ವೇಗ
Suraj Revanna ಎಲ್ಲೇ ಹೋದ್ರೂ ಕಿತಾಪತಿ ಮಾಡಿ ಬರ್ತಾರೆ: ಶ್ರೇಯಸ್ ಪಟೇಲ್
Karnataka Govt. : ನಾಲ್ವರು ಡಿವೈಎಸ್‌ಪಿಗಳು ವಿವಿಧೆಡೆ ವರ್ಗಾವಣೆ
Cancer ತೀವ್ರಗತಿಯಲ್ಲಿ ವ್ಯಾಪಿಸುತ್ತಿರುವದು ಕಳವಳಕಾರಿ: ರಾಷ್ಟ್ರಪತಿ ದ್ರೌಪದಿ ಮುರ್ಮು
ಎಸ್.ಎಂ.ಕೃಷ್ಣ ಸಂಸ್ಮರಣಾ ವೇದಿಕೆಯಿಂದ ಪಂಚನಮನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.