ರಾಜ್ಯದಲ್ಲಿ ಅಭಿವೃದ್ಧಿ ಕಾರ್ಯ ಆಗುತ್ತಿಲ್ಲ; ಶಾಸಕ ಎಲ್.ಎನ್.ನಾರಾಯಣಸ್ವಾಮಿ
ರಾಜ್ಯಾದ್ಯಂತ ಜೆಡಿಎಸ್ ಪಕ್ಷ ಅಧಿಕಾರಕ್ಕೆ ಬಂದರೆ ನೀರಾವರಿ ಯೋಜನೆ ಜಾರಿಗೆ ತರಲಾಗುತ್ತದೆ
Team Udayavani, May 12, 2022, 5:34 PM IST
ದೇವನಹಳ್ಳಿ: ಈಗಿನ ಸರ್ಕಾರ ಧರ್ಮಾಧಾರಿತವಾಗಿ ರಾಜಕಾರಣ ಮಾಡುತ್ತಿದೆ. ಸರ್ಕಾರದ ಉದ್ದೇಶ ಅಭಿವೃದ್ಧಿಯ ಮಂತ್ರವಾಗಿರಬೇಕು. ಆದರೆ, ಬಿಜೆಪಿ ಸರ್ಕಾರ ಧರ್ಮಾಧಾರಿತ ರಾಜಕಾರಣ ಮಾಡಿ ಮತದಾರರನ್ನು ದಿಕ್ಕು ತಪ್ಪಿಸುತ್ತಿದ್ದಾರೆ. ರಾಜ್ಯದಲ್ಲಿ ಯಾವುದೇ ಅಭಿವೃದ್ಧಿ ಕಾರ್ಯ ಆಗುತ್ತಿಲ್ಲ. ಎಂದು ಶಾಸಕ ಎಲ್.ಎನ್.ನಾರಾಯಣಸ್ವಾಮಿ ತಿಳಿಸಿದರು.
ತಾಲೂಕಿನ ಕಾರಹಳ್ಳಿ ಗ್ರಾಪಂ ವ್ಯಾಪ್ತಿಯ ಮೀಸಗಾನಹಳ್ಳಿ ಗ್ರಾಮದಲ್ಲಿ ಕಾಂಕ್ರೀಟ್ ರಸ್ತೆ ಕಾಮಗಾರಿ ವೀಕ್ಷಣೆ ಹಾಗೂ ಗ್ರಾಪಂ ಶೇ. 25ರ ಅನುದಾನದಲ್ಲಿ ಎಸ್‌ಸಿ, ಎಸ್‌ಟಿ ಫಲಾನುಭವಿಗಳಿಗೆ ಹಮ್ಮಿಕೊಂಡಿದ್ದ ಫ್ಯಾನ್ ವಿತರಣಾ ಕಾರ್ಯಕ್ರಮದಲ್ಲಿ ಮಾತನಾಡಿ, ಮೀಸಗಾನಹಳ್ಳಿ ಗ್ರಾಮಕ್ಕೆ ಬಸ್ ಸೌಕರ್ಯದ ಬಗ್ಗೆ ಮನವಿ ಮಾಡಿದ್ದು, ಈಗಾಗಲೇ ಬಿಎಂಟಿಸಿ ಅಧಿಕಾರಿಗಳಿಗೆ ಪತ್ರ ಬರೆದಿದ್ದೇವೆ.
ಜಿಲ್ಲಾಧಿಕಾರಿ ಕಚೇರಿಯ ಚಪ್ಪರದಕಲ್ಲು ಮಾರ್ಗವಾಗಿ ಕೊಯಿರ, ಮಾಯಸಂದ್ರ, ಮೀಸಗಾನಹಳ್ಳಿ, ಕಾರಹಳ್ಳಿ ಕ್ರಾಸ್‌ನಿಂದ ದೇವನಹಳ್ಳಿವರೆಗೆ ಮಾರ್ಗ ವಿಸ್ತರಿಸಲು ಮನವಿ ಮಾಡಲಾಗಿದೆ. ಗ್ರಾಮಸ್ಥರು ಹೆಚ್ಚಿನ ಸಂಖ್ಯೆಯಲ್ಲಿ ಬಸ್‌ಗಳಿಗೆ ಹತ್ತಬೇಕು. ಬಸ್‌ಗಳು ಖಾಲಿ ಹೋದರೆ ಉಪಯೋಗ ಆಗುವುದಿಲ್ಲ ಎಂದರು.
ನಾಳೆ ಜನತಾ ಜಲಧಾರೆ ಸಮಾರೋಪ:
ನೆಲಮಂಗಲದಲ್ಲಿ ಮೇ 13ರಲ್ಲಿ ಜನತಾ ಜಲಧಾರೆ ಸಮಾರೋಪ ಸಮಾರಂಭವಿದ್ದು, ಹಳ್ಳಿಗಳಿಗೆ ಬಸ್ ಕಳುಹಿಸಲಾಗುತ್ತಿದೆ. ಹೆಚ್ಚಿನ ಸಂಖ್ಯೆಯಲ್ಲಿ ಜನ ಬರಬೇಕು. 2023ರಲ್ಲಿ ಜೆಡಿಎಸ್ ಪಕ್ಷ ಅಧಿಕಾರಕ್ಕೆ ಬರಬೇಕು ಎಂದು ಹೇಳಿದರು.
ಜೆಡಿಎಸ್ ಜಿಲ್ಲಾಧ್ಯಕ್ಷ ಬಿ.ಮುನೇಗೌಡ ಮಾತನಾಡಿ, ತಾಲೂಕಿನಲ್ಲಿ ಶಾಸಕರು ಉತ್ತಮವಾಗಿ ಅಭಿವೃದ್ಧಿ ಕಾರ್ಯ ಮಾಡುತ್ತಿದ್ದಾರೆ. ಜನತಾ ಜಲಧಾರೆ ರಥದ ಮೂಲಕ ಇಡೀ ರಾಜ್ಯಾದ್ಯಂತ ಜೆಡಿಎಸ್ ಪಕ್ಷ ಅಧಿಕಾರಕ್ಕೆ ಬಂದರೆ ನೀರಾವರಿ ಯೋಜನೆ ಜಾರಿಗೆ ತರಲಾಗುತ್ತದೆ ಎಂದರು.
ಹೆಚ್ಚಿನ ಅನುದಾನ: ತಾಲೂಕು ಜೆಡಿಎಸ್ ಅಧ್ಯಕ್ಷ ಆರ್. ಮುನೇಗೌಡ ಮಾತನಾಡಿ, ಮೀಸಗಾನಹಳ್ಳಿ ಗ್ರಾಮಕ್ಕೆ 55 ಲಕ್ಷ ರೂ.ಗಳನ್ನು ಒಂದೇ ಗ್ರಾಮಕ್ಕೆ ನೀಡಿದ್ದಾರೆ. ಈ ಹಿಂದೆ ಈ ಗ್ರಾಮಗಳಿಗೆ 10 ಲಕ್ಷ ರೂ. ಬಂದರೆ ಹೆಚ್ಚು ಆಗುತ್ತಿತ್ತು. ನಾರಾಯಣಸ್ವಾಮಿ ಶಾಸಕರಾದ ಮೇಲೆ ಹೆಚ್ಚಿನ ಅನುದಾನ ತರುತ್ತಿದ್ದಾರೆ. 400 ಕೋಟಿ ರೂ.ಗೂ ಹೆಚ್ಚು ಅನುದಾನವನ್ನು ತಾಲೂಕಿಗೆ ತಂದು ಅಭಿವೃದ್ಧಿಪಡಿಸಿದ್ದಾರೆ. ಪ್ರತಿ ಗ್ರಾಮದಲ್ಲೂ ಶಾಸಕರು ಕಾಂಕ್ರೀಟ್ ರಸ್ತೆ ಹಾಕಿಸಿದ್ದಾರೆ ಎಂದರು.
ಕಾಂಕ್ರೀಟ್ ರಸ್ತೆ ನಿರ್ಮಾಣ: ಕಾರಹಳ್ಳಿ ಗ್ರಾಪಂ ಅಧ್ಯಕ್ಷ ಚಂದ್ರಿಕಾ ಮಾತನಾಡಿ, ಕಾರಹಳ್ಳಿ ಗ್ರಾಪಂ ವ್ಯಾಪ್ತಿಯಲ್ಲಿ ಅಭಿವೃದ್ಧಿ ಕಾರ್ಯಗಳಿಗೆ ಹೆಚ್ಚಿನ ಒತ್ತನ್ನು ಕೊಡಲಾಗಿದೆ. ಶಾಸಕರು ಕಾರಹಳ್ಳಿ ಗ್ರಾಪಂ ವ್ಯಾಪ್ತಿಯ ಪ್ರತಿಯೊಂದು ಗ್ರಾಮಕ್ಕೂ 50 ಲಕ್ಷ ರೂ.ವರೆಗೆ ಕಾಂಕ್ರೀಟ್ ರಸ್ತೆಗಳ ನಿರ್ಮಾಣಕ್ಕೆ ಆದ್ಯತೆ ನೀಡಿದ್ದಾರೆ.
ಗ್ರಾಪಂ ಶೇ.25ರ ಅನುದಾನದಲ್ಲಿ ಎಸ್‌ಸಿ, ಎಸ್‌ಟಿ ಫಲಾನುಭವಿಗಳಿಗೆ ಫ್ಯಾನ್ ನೀಡಲಾಗುತ್ತದೆ ಎಂದರು. ಪಿಕಾರ್ಡ್ ಬ್ಯಾಂಕ್ ಅಧ್ಯಕ್ಷ ಪಟಾಲಪ್ಪ, ಗ್ರಾಪಂ ಸದಸ್ಯ ಚಂದ್ರಶೇಖರ್, ತಾಲೂಕು ಸೊಸೈಟಿ ನಿರ್ದೇಶಕ ಯಂಬ್ರಹಳ್ಳಿ ರವಿ ಮಾತನಾಡಿದರು. ಗ್ರಾಪಂ ಉಪಾಧ್ಯಕ್ಷೆ ಶಾಂತಮ್ಮ, ಗ್ರಾಪಂ ಸದಸ್ಯೆ ಮಮತಾ, ಕೇಶವಮೂರ್ತಿ, ಪಿಡಿಒ ಕವಿತಾ, ಗ್ರಾಪಂ ಮಾಜಿ ಸದಸ್ಯ ಶಂಕರ್, ವಿಎಸ್‌ಎಸ್‌ಎನ್ ಅಧ್ಯಕ್ಷ ಮಂಜುನಾಥ್, ಮುಖಂಡ ರಬ್ಬನಹಳ್ಳಿ ಪ್ರಭಾಕರ್, ಬೈರೇಗೌಡ, ಟಿ.ಆಂಜಿನಪ್ಪ, ರಾಜಣ್ಣ, ನಾರಾಯಣಸ್ವಾಮಿ, ತಿಮ್ಮಯ್ಯ, ಮಾರೇಗೌಡ, ಮುನಿಕೆಂಪಣ್ಣ ಹಾಗೂ ಮತ್ತಿತರರು ಇದ್ದರು.
ಗ್ರಾಮಗಳ ಅಭಿವೃದ್ಧಿಗೆ ಹೆಚ್ಚಿನ ಒತ್ತು: ಶಾಸಕ ಗ್ರಾಮಗಳು ಸರ್ವತೋಮುಖ ಅಭಿವೃದ್ಧಿ ಹೊಂದಬೇಕು. ಪ್ರತಿ ಗ್ರಾಮಕ್ಕೂ 50 ಲಕ್ಷದಿಂದ ಕೋಟಿ ರೂ. ವರೆಗೆ ಕಾಂಕ್ರೀಟ್ ರಸ್ತೆ ನಿರ್ಮಾಣ ಮಾಡಲಾಗಿದೆ. ಮೈತ್ರಿ ಸರ್ಕಾರದಲ್ಲಿ ಮುಖ್ಯಮಂತ್ರಿಯಾಗಿದ್ದ ಕುಮಾರಸ್ವಾಮಿ ಅವರಿಂದ ವಿಶೇಷ ಅನುದಾನವನ್ನು ತಾಲೂಕಿಗೆ ತಂದು ಗ್ರಾಮಗಳ ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡಲಾಯಿತು. ರಾಜಕೀಯದಲ್ಲಿ ಕೆಲವು ವ್ಯತ್ಯಾಸ ಗಳಿಂದ ಸರ್ಕಾರ ಪತನವಾಯಿತು ಎಂದು ಶಾಸಕ ಎಲ್.ಎನ್.ನಾರಾಯಣಸ್ವಾಮಿ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.