ರೆಸಾರ್ಟ್ ರಾಜಕಾರಣದಿಂದ ಕ್ಷೇತ್ರದ ಅಭಿವೃದ್ಧಿ ಕುಂಠಿತ
Team Udayavani, Jul 19, 2019, 10:57 AM IST
ಬೆಂ.ಗ್ರಾಮಾಂತರ ಜಿಲ್ಲೆ ಜಿಲ್ಲಾಡಳಿತ ಭವನ.
ದೇವನಹಳ್ಳಿ: ಅಧಿಕಾರದ ದಾಹದಿಂದ ಜನಪ್ರತಿನಿಧಿಗಳು, ರೆಸಾರ್ಟ್ ರಾಜಕಾರಣದಲ್ಲಿ ತೊಡಗುತ್ತಿದ್ದಾರೆ. ಜನರ ಸಮಸ್ಯೆಗಳನ್ನು ಕೇಳುವ ವರಿಲ್ಲ. ಗ್ರಾಮೀಣ ಭಾಗದ ಜನರು ಮಳೆಯಿಲ್ಲದೆ ಬರಗಾಲದ ಭೀತಿಯಲ್ಲಿದ್ದಾರೆ. ಆದರೂ ಜನಪ್ರತಿನಿಧಿಗಳು ಇತ್ತ ಗಮನ ಹರಿಸುತ್ತಿಲ್ಲ ಎಂದು ಜನರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕ್ಷೇತ್ರದಲ್ಲೇ ಇದ್ದರೂ ಬಾರದ ಶಾಸಕರು: ಬೆಂಗ ಳೂರು ಗ್ರಾಮಾಂತರ ಜಿಲ್ಲೆಯಲ್ಲಿ 4 ವಿಧಾನಸಭೆ ಕ್ಷೇತ್ರಗಳಿದ್ದು, 2 ಜೆಡಿಎಸ್ ಮತ್ತು 2 ಕಾಂಗ್ರೆಸ್ ಶಾಸಕರು ಆಯ್ಕೆಯಾಗಿದ್ದಾರೆ ದೇವನಹಳ್ಳಿ ಮತ್ತು ನೆಲಮಂಗಲ ಶಾಸಕರು, ತಾಲೂಕಿನ ಪ್ರಸ್ಟೀಜ್ ಗಾಲ್ಫ್ ರೆಸಾರ್ಟ್‌ನಲ್ಲಿ ಇದ್ದಾರೆ. ಆದರೂ ಶಾಸಕ ನಾರಾಯಣ ಸ್ವಾಮಿ ಹಾಗೂ ದೊಡ್ಡಬಳ್ಳಾಪುರ ಶಾಸಕ ರೆಸಾರ್ಟ್ ಬಿಟ್ಟು ಹೊರಬರುತ್ತಿಲ್ಲ. ಹೊಸ ಕೋಟೆ ಶಾಸಕರು ರಾಜೀನಾಮೆ ನೀಡಿ, ಮುಂಬೈ ರೆಸಾರ್ಟ್ ನಲ್ಲಿದ್ದಾರೆ. ಇದು ಜನರ ಅಸಮಾಧಾನಕ್ಕೆ ಕಾರಣವಾಗಿದೆ.
ಜನರ ಸಮಸ್ಯೆ ಕೇಳುವವರಿಲ್ಲ: ಮುಂಗಾರು ಮಳೆ ಕೊರತೆಯಿಂದಾಗಿ ಬೆಳೆಗಳು ಕಮರುತ್ತಿವೆ. ಇಂತಹ ಸಂದರ್ಭದಲ್ಲಿ ರೈತರು, ಜನಸಾಮಾನ್ಯರಿಗೆ ಧೈರ್ಯ ಹೇಳಬೇಕಾದ ಜನ ಪ್ರತಿನಿಧಿಗಳು, ರೆಸಾ ರ್ಟ್‌ನಲ್ಲಿ ಮೋಜು ಮಸ್ತಿಯಲ್ಲಿ ತೊಡಗಿರುವುದು ಬೇಸರದ ಸಂಗತಿ. ಈಗಾಗಲೇ ಹಲವಾರು ಗ್ರಾಮಗಳು ಬರಗಾಲದಿಂದ ತತ್ತರಿಸಿವೆ. ಇಂತಹ ಸಂದರ್ಭದಲ್ಲೂ ಸಚಿವರು, ಶಾಸಕರು, ಭೇಟಿ ನೀಡಿ ಜನರ ಸಮಸ್ಯೆಗಳ ಪರಿಹಾರಕ್ಕೆ ಮುಂದಾಗ ಬೇಕಿತ್ತು. ಆದರೆ ಜನಪ್ರತಿನಿಧಿಗಳ ನಿರ್ಲಕ್ಷ್ಯದ ನಡೆಗೆ ಜನರಿಂದ ಅಸಮಾಧಾನ ವ್ಯಕ್ತವಾಗಿದೆ.
ರೆಸಾರ್ಟ್‌ಗಳಿಗೆ ಬಿಗಿ ಪೊಲೀಸ್ ಬಂದೋಬಸ್ತ್ ಇರುವುದರಿಂದ ಜನಸಾಮಾನ್ಯರಿಗೆ ಪ್ರವೇಶವಿಲ್ಲ ದಂತಾಗಿದೆ. ಮಳೆಯ ಕೊರತೆಯಿಂದ ಎಲ್ಲೆಡೆ ಬರಪರಿಸ್ಥಿತಿ ನಿರ್ಮಾಣವಾಗಿದೆ. ಕುಡಿಯುವ ನೀರು, ಜಾನುವಾರುಗಳಿಗೆ ಮೇವು ಇನ್ನಿತರೆ ಮೂಲ ಸೌಕರ್ಯಗಳ ಕೊರತೆ ಎದುರಾಗಿದೆ. ಜನರ ಸಮಸ್ಯೆಗಳನ್ನು ಪರಿಹರಿಸುವಲ್ಲಿ ಶಾಸಕರು ಕೂಡಲೇ ಕಾರ್ಯಪ್ರವೃತ್ತರಾಗಬೇಕು ಎಂದು ಕ್ಷೇತ್ರದ ಮತದಾರರು ಒತ್ತಾಯಿಸಿದ್ದಾರೆ.
ರಾಜ್ಯದಲ್ಲಿ ಭೀಕರ ಬರಗಾಲ ಆವರಿಸಿದೆ. ಮುಂಗಾರು ಮಳೆ ಕೊರತೆಯಿಂದ ಸಕಾಲಕ್ಕೆ ಬೆಳೆ ಇಲ್ಲದೆ ರೈತರು ಕಂಗಾಲಾಗಿದ್ದಾರೆ. ಇಂತಹ ಸಂಕಷ್ಟದ ಸ್ಥಿತಿಯಲ್ಲಿ ಸಚಿವರು, ಶಾಸಕರು ರಾಜ್ಯದ ಜನರ ಹಿತ ಕಾಪಾಡದೇ, ಅಧಿಕಾರದ ದುರಾಸೆಗಾಗಿ ಸ್ವಾರ್ಥ ರಾಜಕಾರಣ ಮಾಡುತ್ತಿರುವುದು ನಾಚಿಕೆ ಗೇಡಿನ ಸಂಗತಿಯಾಗಿದೆ ಎಂದು ತಾಲೂಕು ಸಂಘದ ಪ್ರಧಾನ ಕಾರ್ಯದರ್ಶಿ ಬಿದಲೂರು ರಮೇಶ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
● ಎಸ್ ಮಹೇಶ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Surat; ವಂಚಿಸಿ ಸಂಗ್ರಹಿಸಿಟ್ಟಿದ್ದ 6 ಲಕ್ಷ ಮೌಲ್ಯದ ಒಣಮೆಣಸಿನಕಾಯಿ ಪತ್ತೆ
Subrahmanya; ಅನ್ಯಕೋಮಿನ ವಿದ್ಯಾರ್ಥಿನಿಗೆ ಮೆಸೇಜ್: ಗುಂಪಿನಿಂದ ಯುವಕನಿಗೆ ಥಳಿತ
Kundapura; ನಿಯಂತ್ರಣ ತಪ್ಪಿ ಗದ್ದೆಗೆ ಉರುಳಿದ ಬೈಕ್: ಸವಾರ ದುರ್ಮರ*ಣ
J&K:ಪಾಕ್ ಮೂಲದ ಎಲ್‌ಇಟಿ ಉನ್ನತ ಕಮಾಂಡರ್ ನನ್ನ ಹೊಡೆದುರುಳಿಸಿದ ಸೇನೆ
Pushpa2: ಅಲ್ಲು ಅರ್ಜುನ್ ‘ಪುಷ್ಪ-2’ ಐಟಂ ಹಾಡಿಗೆ ಹಜ್ಜೆ ಹಾಕಲಿದ್ದಾರೆ ಈ ಇಬ್ಬರು ನಟಿಯರು?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.