ದೌರ್ಜನ್ಯ ಪ್ರಕರಣ ಶೀಘ್ರ ಇತ್ಯರ್ಥಗೊಳಿಸಿ; 24ಗಂಟೆಯಲ್ಲಿ ಕೇಸ್‌ ದಾಖಲಿಸಿ

ಫ‌ಲಾನುಭವಿಗಳ ಆಯ್ಕೆಗೆ ನಿಗದಿತ ಮಾನದಂಡಗಳನ್ನು ಅನುಸರಿಸಬೇಕು

Team Udayavani, Oct 7, 2022, 1:22 PM IST

ದೌರ್ಜನ್ಯ ಪ್ರಕರಣ ಶೀಘ್ರ ಇತ್ಯರ್ಥಗೊಳಿಸಿ; 24ಗಂಟೆಯಲ್ಲಿ ಕೇಸ್‌ ದಾಖಲಿಸಿ

ದೇವನಹಳ್ಳಿ: ಪ.ಜಾತಿ, ಪಂಗಡಗಳ ಮೇಲೆ ದೌರ್ಜನ್ಯ ಪ್ರಕರಣಗಳು ನಡೆದ 24 ಗಂಟೆಗಳಲ್ಲಿ ಪ್ರಕರಣ ದಾಖಲು ಮಾಡುವುದರೊಂದಿಗೆ, ಪ್ರಕರಣದ ಸ್ಥಳಕ್ಕೆ ಅಧಿಕಾರಿಗಳು ಭೇಟಿ ನೀಡಿ, ಕ್ರಮ ಕೈಗೊಂಡು ಪರಿಹಾರ ಒದಗಿಸುವ ಮೂಲಕ ಶೀಘ್ರ ಇತ್ಯರ್ಥಗೊಳಿಸಬೇಕು ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಆರ್‌.ಲತಾ ತಿಳಿಸಿದರು.

ತಾಲೂಕಿನ ಬೀರಸಂದ್ರ ಗ್ರಾಮದ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ನಡೆದ ಜಿಲ್ಲಾಮಟ್ಟದ ಜಾಗೃತಿ ಮತ್ತು ಉಸ್ತುವಾರಿ ಸಮಿತಿ 3ನೇ ತ್ತೈಮಾಸಿಕ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ದೌರ್ಜನ್ಯ ತಡೆ ಕಾಯ್ದೆಯಡಿಯಲ್ಲಿ ಪ್ರಕರಣ ದಾಖಲಾದ ಕೂಡಲೇ ಪ್ರಥಮ ವರ್ತಮಾನ ವರದಿಯನ್ನು ಹಾಗೂ ಚಾರ್ಜ್‌ಶೀಟ್‌ ಸಲ್ಲಿಸಲು ಬಾಕಿ ಇರುವ ಪ್ರಕರಣಗಳಿಗೆ ಚಾರ್ಜ್‌ಶೀಟ್‌ ವರದಿಯನ್ನು ಜಿಲ್ಲಾಡಳಿತಕ್ಕೆ ಹಾಗೂ ಜಿಲ್ಲಾ, ತಾಲೂಕು ಸಮಾಜ ಕಲ್ಯಾಣ ಇಲಾಖೆಗೆ ಸಲ್ಲಿಸಲು ಕ್ರಮವಹಿಸುವಂತೆ ಪೊಲೀಸ್‌ ಅಧಿಕಾರಿಗಳಿಗೆ ಸೂಚಿಸಿದರು.

ಅರ್ಹ ಫ‌ಲಾನುಭವಿಗಳಿಗೆ ಸೌಲಭ್ಯ ತಲುಪಿಸಿ: ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಉಪಯೋಜನೆ ಕಾರ್ಯಕ್ರಮಗಳ ಅಡಿಯಲ್ಲಿ ಅರ್ಹ ಫ‌ಲಾನುಭವಿಗಳನ್ನು ಗುರುತಿಸಿ, ಸೌಲಭ್ಯಗಳನ್ನು ತಲುಪಿಸಬೇಕು ಎಂದು ಹೇಳಿದರಲ್ಲದೆ, ಫ‌ಲಾನುಭವಿಗಳಿಗೆ ವಿವಿಧ ಯೋಜನೆಗಳನ್ನು ತಲುಪಿಸುವ ಮುನ್ನ, ಫ‌ಲಾನುಭವಿಗಳ ಆಯ್ಕೆಗೆ ನಿಗದಿತ ಮಾನದಂಡಗಳನ್ನು ಅನುಸರಿಸಬೇಕು ಎಂದರು.

ಫ‌ಲಾನುಭವಿಗಳಿಗೆ ಹಕ್ಕುಪತ್ರ ವಿತರಿಸಿ: ಡಾ. ಬಿ. ಆರ್‌.ಅಂಬೇಡ್ಕರ್‌ ಅಭಿವೃದ್ಧಿ ನಿಗಮದ ವತಿಯಿಂದ ನೀಡಲಾಗುತ್ತಿರುವ ಸಾಲ-ಸೌಲಭ್ಯಗಳನ್ನು ಜರೂರಾಗಿ ಮಂಜೂರು ಮಾಡಬೇಕು. ಹಕ್ಕುಪತ್ರ ವಿತರಣೆ ಬಾಕಿ ಇರುವ ಫ‌ಲಾನುಭವಿಗಳಿಗೆ ನಿಯಮಾನುಸಾರ ಹಕ್ಕುಪತ್ರಗಳನ್ನು ವಿತರಿಸಲು ಕ್ರಮವಹಿಸಬೇಕು ಎಂದು ಅಧಿಕಾರಿಗಳಿಗೆ ತಿಳಿಸಿದರು.

ಅಧಿಕಾರಿಗಳಿಗೆ ನೋಟಿಸ್‌ ನೀಡಿ: ಸಾರ್ವಜನಿಕರು ಭೇಟಿ ನೀಡುವ ಎಲ್ಲಾ ಸರ್ಕಾರಿ ಕಚೇರಿಗಳಲ್ಲಿ ಹಾಗೂ ಜಿಲ್ಲೆಯ ಎಲ್ಲಾ ತಹಶಿಲ್ದಾರ್‌ ಕಚೇರಿಗಳಲ್ಲಿ ಶೌಚಾಲಯ ಮತ್ತು ಶುದ್ಧ ಕುಡಿಯುವ ನೀರಿನ ಘಟಕ ಸ್ಥಾಪಿಸುವಂತೆ ಸೂಚಿಸಿರಲ್ಲದೆ, ಪೂರ್ವಾನುಮತಿ ಪಡೆಯದೇ ಸಭೆಗೆ ಗೈರಾದ
ಅಧಿಕಾರಿಗಳಿಗೆ ನೋಟಿಸ್‌ ನೀಡುವಂತೆ ಸಮಾಜ ಕಲ್ಯಾಣಾಧಿಕಾರಿಗೆ ತಿಳಿಸಿದರು. ಅಪರ ಜಿಲ್ಲಾಧಿಕಾರಿ ವಿಜಯಾ ಈ.ರವಿಕುಮಾರ್‌, ಸಮಾಜಕಲ್ಯಾಣ ಇಲಾಖೆಯ ಉಪನಿರ್ದೇಶಕ ಕೃಷ್ಣಪ್ಪ, ಡಿವೈಎಸ್‌ಪಿ ನಾಗರಾಜ್‌, ಸೇರಿದಂತೆ ಎಲ್ಲಾ ತಾಲೂಕುಗಳ ತಹಶೀಲ್ದಾರ್‌ಗಳು, ಡಿವೈಎಸ್ಪಿ, ಸಂಬಂಧಿಸಿದ ಇಲಾಖೆಗಳ ಜಿಲ್ಲಾಮಟ್ಟದ ಅಧಿಕಾರಿಗಳು, ವಿವಿಧ ಸಂಘಟನೆಗಳ ಮುಖ್ಯಸ್ಥರು, ಸದಸ್ಯರು ಹಾಗೂ ಕಾರ್ಯಕರ್ತರು ಇದ್ದರು.

ಕಠಿಣ ಕಾನೂನು ಕ್ರಮ ಜರುಗಿಸಿ:ಡೀಸಿ
ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ವಿರುದ್ಧದ ದೌರ್ಜನ್ಯ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಿ, ತಪ್ಪಿತಸ್ಥರ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಬೇಕು. ತಾಲೂಕುಗಳಲ್ಲಿ ನಿಗದಿತ ಸಮಯಕ್ಕೆ ನಿಯಮಿತವಾಗಿ ಜಾಗೃತಿ ಹಾಗೂ ಉಸ್ತುವಾರಿ ಸಮಿತಿಯ ಸಭೆಗಳನ್ನು ನಡೆಸಬೇಕು. ಸಭೆಗಳನ್ನು ನಡೆಸುವುದರಿಂದ ಹಲವಾರು ದೌರ್ಜನ್ಯ ದಂತಹ ಸಮಸ್ಯೆಗಳನ್ನು ತಳಮಟ್ಟದಲ್ಲಿಯೇ ಪರಿಹರಿಸಬಹುದುದಾಗಿದೆ ಎಂದು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಆರ್‌.ಲತಾ ಸಲಹೆ ನೀಡಿದರು.

ಟಾಪ್ ನ್ಯೂಸ್

Minister Priyank Kharge stays away from Jayadeva Hospital inauguration ceremony

Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ

Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!

Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!

Stories: ಹಾಡಿನಂಥ ಕಾಡುವಂಥ ಕಥೆಗಳು

Stories: ಹಾಡಿನಂಥ ಕಾಡುವಂಥ ಕಥೆಗಳು

Pushpa-2: ಸಂಕ್ರಾಂತಿಗೆ ಓಟಿಟಿಗೆ ಬರುತ್ತಾ ʼಪುಷ್ಪ-2ʼ?: ಸ್ಪಷ್ಟನೆ ನೀಡಿದ ನಿರ್ಮಾಣ ಸಂಸ್ಥೆ

Pushpa-2: ಸಂಕ್ರಾಂತಿಗೆ ಓಟಿಟಿಗೆ ಬರುತ್ತಾ ʼಪುಷ್ಪ-2ʼ?: ಸ್ಪಷ್ಟನೆ ನೀಡಿದ ನಿರ್ಮಾಣ ಸಂಸ್ಥೆ

Bengaluru: ಚಿನ್ನದಂಗಡಿಯಲ್ಲಿ 3 ಕೆಜಿ ಚಿನ್ನ ದೋಚಿದ ಮಹಿಳೆ

Bengaluru: ಚಿನ್ನದಂಗಡಿಯಲ್ಲಿ 3 ಕೆಜಿ ಚಿನ್ನ ದೋಚಿದ ಮಹಿಳೆ

Expensive wedding: ಭಾರತದ ಅದ್ಧೂರಿ ಮದುವೆ ಮೇಲೆ ಈಗ ಐಟಿ ಕಣ್ಣು!

Expensive wedding: ಭಾರತದ ಅದ್ಧೂರಿ ಮದುವೆ ಮೇಲೆ ಈಗ ಐಟಿ ಕಣ್ಣು!

T20 Asia Cup: ಬಾಂಗ್ಲಾ ವಿರುದ್ದ ಅಂಡರ್‌ 19 ವನಿತಾ ಏಷ್ಯಾಕಪ್‌ ಚಾಂಪಿಯನ್‌ ಆದ ಭಾರತ

T20 Asia Cup: ಬಾಂಗ್ಲಾ ವಿರುದ್ದ ಅಂಡರ್‌ 19 ವನಿತಾ ಏಷ್ಯಾಕಪ್‌ ಚಾಂಪಿಯನ್‌ ಆದ ಭಾರತ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Nelamangala: ಐಷಾರಾಮಿ ಕಾರಿನ ಮೇಲೆ ಬಿದ್ದ ಕಂಟೈನರ್… ಒಂದೇ ಕುಟುಂಬದ 6 ಮಂದಿ ಸಾವು

Nelamangala: ಐಷಾರಾಮಿ ಕಾರಿನ ಮೇಲೆ ಬಿದ್ದ ಕಂಟೈನರ್… ಒಂದೇ ಕುಟುಂಬದ 6 ಮಂದಿ ಸಾ*ವು

4

Crime: ರೌಡಿಶೀಟರ್‌ ಕೊಲೆ ಯತ್ನ; ಆರೋಪಿಗೆ ಗುಂಡೇಟು

Doddaballapur: ಎರಡೂ ಬಸ್‌ ನಿಲ್ದಾಣಕ್ಕೆ ಬೇಕಿದೆ ಕಾಯಕಲ್ಪ!

Doddaballapur: ಎರಡೂ ಬಸ್‌ ನಿಲ್ದಾಣಕ್ಕೆ ಬೇಕಿದೆ ಕಾಯಕಲ್ಪ!

11

Lack of Bus stand: ಹೊಸಕೋಟೆ; ಬಸ್‌ ನಿಲ್ದಾಣವಿಲ್ಲದೆ ಪರದಾಟ!

Leopard: ನೆಲಮಂಗಲ ಸಮೀಪ ಚಿರತೆ ಸೆರೆ: ನರಭಕ್ಷಕ ಇದೇನಾ? ವರದಿ ನಿರೀಕ್ಷೆ

Leopard: ನೆಲಮಂಗಲ ಸಮೀಪ ಚಿರತೆ ಸೆರೆ: ನರಭಕ್ಷಕ ಇದೇನಾ? ವರದಿ ನಿರೀಕ್ಷೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Minister Priyank Kharge stays away from Jayadeva Hospital inauguration ceremony

Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ

Kalaburagi; ಜಾಹೀರಾತು, ಫಲಕದಲ್ಲಿ ಹೆಸರಿಲ್ಲ: ಶಾಸಕ ಅಲ್ಲಮಪ್ರಭು ಬೆಂಬಲಿಗರಿಂದ ಪ್ರತಿಭಟನೆ

Kalaburagi; ಜಾಹೀರಾತು, ಫಲಕದಲ್ಲಿ ಹೆಸರಿಲ್ಲ: ಶಾಸಕ ಅಲ್ಲಮಪ್ರಭು ಬೆಂಬಲಿಗರಿಂದ ಪ್ರತಿಭಟನೆ

Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!

Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!

Siddaramaiah

Kalaburagi: ವರದಿ ನಂತರ ತೊಗರಿ ಹಾನಿಗೆ ಪರಿಹಾರ ನಿರ್ಧಾರ: ಸಿಎಂ ಸಿದ್ದರಾಮಯ್ಯ

ಕೊಡುವುದರಿಂದ ಕೊರತೆಯಾಗದು!

ಕೊಡುವುದರಿಂದ ಕೊರತೆಯಾಗದು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.