ಬಡವರು, ರೈತರಿಗೆ ಹಕ್ಕುಪತ್ರ ವಿತರಣೆ
ನನೆಗುದಿಗೆ ಬಿದ್ದಿದ್ದ ಪ್ರಕರಣ ಇತ್ಯರ್ಥ | ಶಾಸಕ ನಾರಾಯಣಸ್ವಾಮಿಯಿಂದ ಹಕ್ಕುಪತ್ರ ಹಂಚಿಕೆ
Team Udayavani, Jul 26, 2019, 3:10 PM IST
ದೇವನಹಳ್ಳಿ: ತಾಲೂಕಿನಲ್ಲಿ ನನೆಗುದಿಗೆ ಬಿದ್ದದ್ದ ಸಾಗುವಳಿ ಹಕ್ಕು ಪತ್ರ ವಿತರಣೆ ಪ್ರಕರಣಕ್ಕೆ ಪರಿಹಾರ ಕಂಡುಕೊಳ್ಳಲಾಗಿದೆ. ತಾಲೂಕಿನ ಬಡವರು ಹಾಗೂ ಸರ್ಕಾರಿ ಜಮೀನಿನಲ್ಲಿ ವ್ಯವಸಾಯ ಮಾಡಿಕೊಂಡಿದ್ದ ರೈತರಿಗೆ ಸಾಗುವಳಿ ಹಕ್ಕುಪತ್ರ ನೀಡುವ ಮೂಲಕ ಶಾಶ್ವತ ಪರಿಹಾರ ನೀಡಲಾಗಿದೆ ಎಂದು ಶಾಸಕ ಎಲ್.ಎನ್.ನಾರಾಯಣಸ್ವಾಮಿ ಹರ್ಷ ವ್ಯಕ್ತಪಡಿಸಿದರು.
ನಗರದ ಮಿನಿವಿಧಾನಸೌಧ ಸಭಾಂಗಣದಲ್ಲಿ ತಾಲೂಕು ಆಡಳಿತ ವತಿಯಿಂದ ಸಾಗುವಳಿ ಚೀಟಿ ಮತ್ತು 94ಸಿಯಲ್ಲಿ ಹಕ್ಕುಪತ್ರ ವಿತರಿಸುವ ಕಾರ್ಯಕ್ರಮದಲ್ಲಿ ಮಾತನಾಡಿದರು.
ಶಾಶ್ವತ ಪರಿಹಾರ: ಹಲವು ವರ್ಷಗಳಿಂದ ಬಾಕಿ ಉಳಿದಿರುವ 35 ಸಾಗುವಳಿ ಹಕ್ಕುಪತ್ರ ಹಾಗೂ ಮನೆಗಳಲ್ಲಿ ವಾಸ ಮಾಡಿಕೊಂಡು ಇದ್ದ 50 ಫಲಾನುಭವಿಗಳಿಗೆ 94ಸಿ ಯಲ್ಲಿ ಹಕ್ಕುಪತ್ರ ನೀಡಲಾಗಿದೆ. 1300 ಜನರಿಗೆ 94ಸಿ ಅಡಿಯಲ್ಲಿ ಹಕ್ಕುಪತ್ರ ಸಿದ್ಧಪಡಿಸಲಾಗಿದೆ. ಇಷ್ಟು ಜನರಿಗೂ ಶಾಶ್ವತ ಪರಿಹಾರ ಸಿಗುವಂತೆ ಮಾಡಲಾಗಿದೆ. ಮುಖ್ಯಮಂತ್ರಿ ಕುಮಾರ ಸ್ವಾಮಿ ಸರ್ಕಾರದಲ್ಲಿ ಬಹಳಷ್ಟು ಅಭಿವೃದ್ಧಿ ಕಾರ್ಯಗಳು ಆಗಿವೆ. ಅದರಲ್ಲೂ ಮಾಜಿ ಸಿಎಂ ಕುಮಾರಸ್ವಾಮಿ ನುಡಿದಂತೆ ನಡೆದಿದ್ದಾರೆ. ಇನ್ನು 8-10 ತಿಂಗಳು ಸರ್ಕಾರ ಮುಂದುವರೆದಿದ್ದರೆ ಮಾದರಿ ಮುಖ್ಯಮಂತ್ರಿ ಕುಮಾರಸ್ವಾಮಿ ಆಗುತ್ತಿದ್ದರು. ಯಾವುದೇ ಕಾರಣಕ್ಕೂ ಒಂದು ಇಂಚು ಜಮೀನನ್ನು ಮಾರಾಟ ಮಾಡಬೇಡಿ. ಮಾರಾಟ ಮಾಡಿಕೊಂಡವರ ಸ್ಥಿತಿ ಯಾವ ರೀತಿ ಇದೆ ಎಂಬುವುದು ನನಗೆ ತಿಳಿದಿದೆ ಎಂದು ಹೇಳಿದರು.
ಉಳಿದವರಿಗೆ ಶೀಘ್ರ ಹಕ್ಕುಪತ್ರ: ಶಾಸಕನಾಗಿ 14 ತಿಂಗಳು ಆಗಿದೆ. 170 ಕೋಟಿ ಅನುದಾನವನ್ನು 2 ತಿಂಗಳಿನಲ್ಲಿ ಮಂಜೂರು ಮಾಡಿಸಿಕೊಂಡು ಬಂದಿದ್ದೇನೆ. ಮುಖ್ಯ ಮಂತ್ರಿ ಪರಿಹಾರ ನಿಧಿಯಲ್ಲಿ ವಿಧಾನ ಮಂಡಲ ಅಧಿವೇಶನದಲ್ಲಿ ಮುಖ್ಯಮಂತ್ರಿ ಕುಮಾರಸ್ವಾಮಿ 120 ಕೋಟಿ ಮಂಜೂರು ಮಾಡಿದ್ದೇನೆ ಎಂದು ಹೇಳಿದ್ದಾರೆ. ಅದರಂತೆ ತಾಲೂಕಿನಲ್ಲಿ ಹೆಚ್ಚಿನ ಮುಖ್ಯಮಂತ್ರಿ ಪರಿಹಾರ ನಿಧಿ ತಂದಿದ್ದೇನೆ. ತಾಲೂಕು ಕಚೇರಿಗೆ ಜನ ಅಲೆದಾಡದಂತೆ ತಕ್ಷಣ ಕೆಲಸಗಳು ಆಗುವಂತೆ ಆಗ ಬೇಕು. ಪಾರದರ್ಶಕವಾಗಿ ಸಾಗುವಳಿ ಹಕ್ಕುಪತ್ರವನ್ನು ನೀಡುತ್ತಿದ್ದೇವೆ. ಇದರಿಂದ ಬಡ ಜನರಿಗೆ ಹೆಚ್ಚಿನ ಅನುಕೂಲವಾಗಿದೆ ಎಂದು ಹೇಳಿದರು.
ಸಮಗ್ರ ಅಭಿವೃದ್ಧಿಯ ಗುರಿ: ನನ್ನ ಅವಧಿಯಲ್ಲಿ ಮಾಡಿರುವ ಕೆಲಸಗಳು ನನಗೆ ತೃಪ್ತಿ ತಂದಿದೆ. ನನಗೆ ಯಾವುದೇ ಆಸೆ ಆಮಿಷಗಳಿಲ್ಲ ತಾಲೂಕಿನ ಸರ್ವತೋಮುಖ ಅಭಿವೃದ್ದಿಯೇ ನನ್ನ ಗುರಿಯಾಗಿದೆ. ಯಾವುದೇ ಅಪಪ್ರಚಾರಗಳಿಗೆ ಕಿವಿಕೊಡಬೇಡಿ ತಾಲೂಕಿನ ಜನ ಶಾಂತಿ ನೆಮ್ಮದಿಯಿಂದ ಬಾಳಬೇಕು. ಯಾವುದೇ ಗ್ರಾಮದಲ್ಲಿ ಯಾವುದೇ ಅಹಿತಕರ ಘಟನೆ ಜರುಗದಂತೆ ನೋಡಿಕೊಳ್ಳಬೇಕು. ನಿಮ್ಮ ಸಮಸ್ಯೆ ಇದ್ದರೆ ನೇರವಾಗಿ ನನ್ನ ಬಳಿ ಬನ್ನಿ ಬಗೆಹರಿಸಿಕೊಡಲಾಗುತ್ತದೆ. 40 ಕಿ.ಮೀ.ಗಳ ರಸ್ತೆಯನ್ನು ಮಂಜೂರು ಮಾಡಿಸಿಕೊಂಡು ಬಂದಿದ್ದೇನೆ ಎಂದರು.
ತಹಶೀಲ್ದಾರ್ ಕೇಶವಮೂರ್ತಿ, ಗ್ರೇಡ್-2 ತಹಶೀಲ್ದಾರ್ ಅನಿಲ್ ಕುಮಾರ್, ಆರ್.ಐ. ಚಂದ್ರ ಶೇಖರಯ್ಯ, ಪುರಸಭೆ ಸದಸ್ಯ ಎಸ್. ನಾಗೇಶ್, ಜೆಡಿಎಸ್ ಕಾರ್ಯಾಧ್ಯಕ್ಷ ಆರ್.ಮುನೇಗೌಡ, ಕುಂದಾಣ ಹೋಬಳಿ ಜೆಡಿಎಸ್ ಅಧ್ಯಕ್ಷ ಚಂದ್ರೇಗೌಡ, ತಾಪಂ ಸದಸ್ಯ ಕಾರಹಳ್ಳಿ ಶ್ರೀನಿವಾಸ್, ಮನಗೊಂಡಹಳ್ಳಿ ಜಗದೀಶ್, ಹಾಪ್‌ಕಾಮ್ಸ್ ನಿರ್ದೇಶಕ ಹುರುಳುಗುರ್ಕಿ ಶ್ರೀನಿವಾಸ್, ವಿಶ್ವನಾಥಪುರ ಗ್ರಾಪಂ ಅಧ್ಯಕ್ಷ ರಾಮ ಮೂರ್ತಿ, ಬೇಕರಿ ಮಂಜುನಾಥ್, ಕೋರಮಂಗಲ ವೀರಪ್ಪ, ಕಗ್ಗಲಹಳ್ಳಿ ಗುರಪ್ಪ, ಸಿಆರ್ ಪಟ್ಣ ಹೋಬಳಿ ಅಧ್ಯಕ್ಷ ಮುನಿರಾಜು, ರೆಡ್ಡಿಹಳ್ಳಿ ಮುನಿರಾಜು, ಬಿಜ್ಜವಾರ ಆನಂದ್, ಕಾರಹಳ್ಳಿ ಮುನಿಕೃಷ್ಣಪ್ಪ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.