16 ಮತ್ತು 17ರಂದು ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ
Team Udayavani, Mar 4, 2020, 5:44 PM IST
ದೊಡ್ಡಬಳ್ಳಾಪುರ : ಬೆಂಗಳೂರು ಗ್ರಾಮಾಂತರ ಜಿಲ್ಲಾ 22ನೇ ಕನ್ನಡ ಸಾಹಿತ್ಯ ಸಮ್ಮೇಳನ ನಗರದ ಬಸವ ಭವನದಲ್ಲಿ ಮಾ.16 ಮತ್ತು 17ರಂದು ನಡೆಯಲಿದ್ದು, ಸಕಲ ಸಿದ್ಧತೆ ಕೈಗೊಳ್ಳಲಾಗುತ್ತಿದೆ ಎಂದು ಕನ್ನಡ ಸಾಹಿತ್ಯ ಪರಿಷತ್ ತಾಲೂಕು ಅಧ್ಯಕ್ಷೆ ಪ್ರಮೀಳಾಮಹದೇವ್ ತಿಳಿಸಿದರು.
ನಗರದ ಪ್ರವಾಸಿ ಮಂದಿರದಲ್ಲಿ ನಡೆದ ಪತ್ರಿಕಾಗೊಷ್ಠಿಯಲ್ಲಿ ಅವರು ಮಾತನಾಡಿದರು. ಎರಡು ದಿನಗಳ ಕಾಲ ನಡೆಯುವ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರನ್ನಾಗಿ ಹಿರಿಯ ಕನ್ನಡಪರ ಹೋರಾಟಗಾರ,ನಗರಸಭೆ ಮಾಜಿ ಅಧ್ಯಕ್ಷ ತ.ನ.ಪ್ರಭುದೇವ್ ಅವರನ್ನು ಆಯ್ಕೆ ಮಾಡಲಾಗಿದೆ.
ಮಾ.16ರಂದು ತಹಶೀಲ್ದಾರ್ ಟಿ.ಎಸ್.ಶಿವರಾಜ್ ದ್ವಜಾರೋಹಣ ನಡೆಸುವ ಮೂಲಕ ಕಾರ್ಯಾಕ್ರಮಕ್ಕೆ ಚಾಲನೆ ನೀಡಲಿದ್ದಾರೆ.ನಗರದ ನೆಲದಾಂಜನೇಯ ದೇವಾಲಯದಿಂದ ಪ್ರಮುಖ ಬೀದಿಗಳಲ್ಲಿ ಅಧ್ಯಕ್ಷರ ಮೆರವಣಿಗೆ ನಡೆಯಲಿದ್ದು,ಬಸವ ಭವನದಲ್ಲಿ ನಡೆಯುವ ವೇದಿಕೆ ಕಾರ್ಯಕ್ರಮವನ್ನು ಜಿಲ್ಲಾ ಉಸ್ತುವಾರಿ ಸಚಿವ ಆರ್. ಆಶೋಕ್ ಉದ್ಘಾಟಿಸಲಿದ್ದಾರೆ ಎಂದು ತಿಳಿಸಿದರು.
ಇದೇ ವೇಳೆ ನಿವೃತ್ತ ಪ್ರಾಧ್ಯಾಪಕ ಎಂ.ಜಿ.ಚಂದ್ರಶೇಖರಯ್ಯ ಅಧ್ಯಕ್ಷತೆಯಲ್ಲಿ ನಾಡು,ನುಡಿ, ಸಂಸ್ಕೃತಿ ಕುರಿತಾದ ವಿಚಾರಗೋಷ್ಠಿ ನಡೆಯಲಿದೆ. ಮಾಜಿ ಸಚಿವೆ ರಾಣಿ ಸತೀಶ್ ಅಧ್ಯಕ್ಷತೆಯಲ್ಲಿ ಮಹಿಳಾಗೋಷ್ಠಿ ನಡೆಯಲಿದೆ.ಸಂಜೆ ಸಾಂಸ್ಕೃತಿ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ.
ಸಮ್ಮೇಳನದ ಎರಡನೇ ದಿನದಂದು ಶಾಶ್ವತ ನೀರಾವರಿ ಹೋರಾಟ ಸಮಿತಿ ಜಿಲ್ಲಾ ಮುಖಂಡರಾದ ಸುಲೋಚನಮ್ಮವೆಂಕಟರೆಡ್ಡಿ ಅಧ್ಯಕ್ಷತೆಯಲ್ಲಿ ಕೃಷಿ,ನೀರಾವರಿ,ನೇಕಾರಿಕೆ ಕುರಿತಂತೆ ವಿಚಾರಗೋಷ್ಠಿ ನಡೆಯಲಿದೆ. ನಂತರ ಸಮ್ಮೇಳನದ ಅಧ್ಯಕ್ಷ ತ.ನ.ಪ್ರಭುದೇವ್ ಅವರೊಂದಿಗೆ ಸಂವಾದ ಕಾರ್ಯಕ್ರಮ ನಡೆಯಲಿದ್ದು, ಪ್ರೊ. ಚಂದ್ರಪ್ಪ ಅಧ್ಯಕ್ಷತೆಯಲ್ಲಿ ನಡೆಯುವ ಕವಿಗೋಷ್ಠಿಯಲ್ಲಿ ಸ್ವಿಡ್ಜರ್ ಲ್ಯಾಂಡ್,ಕೀನ್ಯ ದೇಶದ ಪ್ರತಿನಿಧಿಗಳು ಭಾಗವಹಿಸಲಿದ್ದಾರೆ. ಸಮಾರೋಪ ಸಮಾರಂಭದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಸಲ್ಲಿಸಿರುವ ಸುಮಾರು 40 ಮಂದಿಯನ್ನು ಸನ್ಮಾನಿಸಲಾಗುತ್ತಿದ್ದು,ಸಾಹಿತಿ ವಿ.ನಾಗೇಂದ್ರ ಪ್ರಸಾದ್ ಅಧ್ಯಕ್ಷತೆಯಲ್ಲಿ ಸಮಾರೋಪ ಸಮಾರಂಭ ನಡೆಯಲಿದೆ.ಎರಡು ದಿನಗಳ ಸಮ್ಮೇಳನದಲ್ಲಿ ಚಿತ್ರ ನಟರು,ಸಾಹಿತಿಗಳು,ಕವಿಗಳು,ವಿಚಾರವಾದಿಗಳು ಭಾಗವಹಿಸುತ್ತಿದ್ದು ಸಾಂಸ್ಕೃತಿಕ ಕಾರ್ಯಕ್ರಮ,ಪುಸ್ತಕ ಮಳಿಗೆ,ಸ್ತ್ರೀ ಶಕ್ತಿ ಗುಂಪುಗಳು ತಯಾರಿಸಿರುವ ಕರಕುಶಲ ವಸ್ತು ಪ್ರದರ್ಶನಕ್ಕೆ ವೇದಿಕೆ ಕಲ್ಪಿಸಲಾಗಿದೆ ಎಂದರು.
ಪತ್ರಿಕಾಗೋಷ್ಠಿಯಲ್ಲಿ ತಾಲೂಕು ಪಂಚಾಯಿತಿ ಅಧ್ಯಕ್ಷ ಡಿ.ಸಿ.ಶಶಿಧರ್,ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಗೌರವ ಕಾರ್ಯದರ್ಶಿ ವಿ.ಸಿ.ಜ್ಯೋತಿಕುಮಾರ್, ಕೋಶಾಧ್ಯಕ್ಷೆ ವಿ.ನಿರ್ಮಲ, ಕಾರ್ಯಾಧ್ಯಕ್ಷ ತರಿದಾಳ್ ಶ್ರೀನಿವಾಸ್, ಮಾಜಿ ಅಧ್ಯಕ್ಷ ಖಲೀಲ್ ಉಲ್ಲಾ ಖಾನ್,ಡಾ.ರಾಜ್‌ಕುಮಾರ್ ಅಭಿಮಾನಿಗಳ ಸಂಘದ ಅಧ್ಯಕ್ಷ ಸು.ನರಸಿಂಹಮೂರ್ತಿ,ಕರವೇ ಮುಖಂಡರಾದ ರಾಜಘಟ್ಟರವಿ, ಎಂ.ಮುನೇಗೌಡ,ಎನ್.ಹನುಮಂತರೆಡ್ಡಿ,ಕನ್ನಡ ಜಾಗೃತ ಪರಿಷತ್ ಅಧ್ಯಕ್ಷ ಡಿ.ವಿ.ಅಶ್ವತ್ಥಪ್ಪ, ಕಸಾಪ ಪದಾಧಿಕಾರಿಗಳಾದ ವತ್ಸಲ, ಗಿರಿಜಾ,ಮೀನಮ್ಮ,ಲಕ್ಷ್ಮೀ,ಶೋಭಾ ಮತ್ತಿತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Seema Haider; 4 ಮಕ್ಕಳೊಂದಿಗೆ ಭಾರತಕ್ಕೆ ಬಂದಿದ್ದ ಸೀಮಾ ಈಗ ಗರ್ಭಿಣಿ!!
Shimoga; ನಿತ್ಯ ಸುದ್ದಿಯಲ್ಲಿರಬೇಕೆಂದು ಸಿ.ಟಿ ರವಿ ʼಆʼ ಹೇಳಿಕೆ ನೀಡಿದ್ದಾರೆ: ಆಯನೂರು
Tragedy: ಆನೆ ತುಳಿದು ಮಾವುತನ ಸಹಾಯಕ ಮೃತ್ಯು… ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ
Drama ಬಿಟ್ಟು ಅಂಬೇಡ್ಕರ್ ಅವರಿಗೆ ನಿರಂತರ ಅವಮಾನ ಮಾಡಿದ್ದಕ್ಕೆ ಕಾಂಗ್ರೆಸ್ ಕ್ಷಮೆ ಕೇಳಲಿ
You Tuber: ನೀಲಿ ಚಿತ್ರತಾರೆ ಆಗಲು ಪಿಎಚ್ ಡಿ ಕಲಿಕೆಯನ್ನೇ ತೊರೆದ ಖ್ಯಾತ ಯೂಟ್ಯೂಬರ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.