ಎಚ್1 ಎನ್1 ಬಗ್ಗೆ ಭಯ ಬೇಡ
Team Udayavani, Nov 15, 2018, 12:38 PM IST
ದೇವನಹಳ್ಳಿ: ಖಾಸಗಿ ಹಾಗೂ ಸರ್ಕಾರಿ ಆಸ್ಪತ್ರೆಗಳಲ್ಲಿ ವೈದ್ಯರಿಗೆ ಎಚ್1 ಎನ್1 ಬಗ್ಗೆ ಜಾಗೃತಿ ಮೂಡಿಸುತ್ತಿದ್ದು ಜ್ವರದ ಲಕ್ಷಣ ಕಂಡು ಬಂದಲ್ಲಿ ಕೂಡಲೇ ವೈದ್ಯರನ್ನು ಭೇಟಿ ಮಾಡಿ ಸೂಕ್ತ ಚಿಕಿತ್ಸೆ ಪಡೆಯಬೇಕು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಜಿಲ್ಲಾ ಆರೋಗ್ಯಾಧಿಕಾರಿ ಯೋಗೇಶ್‌ಗೌಡ ತಿಳಿಸಿದರು.
ಪ್ರಸನ್ನಹಳ್ಳಿ ರಸ್ತೆಯ ಆಕಾಶ್ ಮೆಡಿಕಲ್ ಕಾಲೇಜಿನ ಸಭಾಂಗಣದಲ್ಲಿ ಜಿಪಂ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ನಡೆದ ಎಚ್1 ಎನ್1 ಜಾಗೃತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಸ್ವತ್ಛತೆ ಕಾಪಾಡಿ: ಎಚ್1 ಎನ್1 ಬಗ್ಗೆ ಭಯ ಪಡುವ ಅವಶ್ಯಕತೆ ಇಲ್ಲ. ಸ್ವತ್ಛತೆ ಕಾಪಾಡಿ ನೀರಿನ ಸೋರಿಕೆ ಬಗ್ಗೆ ಎಚ್ಚರ ವಹಿಸಬೇಕು. ಗ್ರಾಪಂ ವ್ಯಾಪ್ತಿಯಲ್ಲಿ ಎಚ್1 ಎನ್1 ಜ್ವರದ ಅರಿವಿನ ಬಗ್ಗೆ ಮನೆ ಮನೆಗೆ ಕರ ಪತ್ರ ತಲುಪಿಸಬೇಕು ಎಂದರು.
ಜಿಪಂ ಉಪಾಧ್ಯಕ್ಷೆ ಅನಂತಕುಮಾರಿ, ಎಚ್1 ಎನ್1 ಬಗ್ಗೆ ಗ್ರಾಮ ಮಟ್ಟದಲ್ಲಿ ಜಾಗೃತಿ ಕಾರ್ಯಕ್ರಮ ಮಾಡಬೇಕು.
ಆರೋಗ್ಯವಂತ ಸಮಾಜ ನಿರ್ಮಾಣ ಮಾಡುವುದಕ್ಕೆ ಪ್ರತಿ ಮನೆ ಅಕ್ಕ ಪಕ್ಕ ಸ್ವತ್ಛತೆಗೆ ಆದ್ಯತೆ ನೀಡಬೇಕು. ಸ್ವತ್ಛತೆ ಇಲ್ಲದಿದ್ದರೆ ಸಾಂಕ್ರಾಮಿಕ ರೋಗಗಳು ಬರಲಿವೆ. ಅದಕ್ಕಾಗಿ ಗ್ರಾಮ ಮಟ್ಟದಲ್ಲಿ ಅರಿವು ಮೂಡಿಸುವ ಕಾರ್ಯವಾಗಬೇಕೆಂದು ಹೇಳಿದರು.
ಹೆಚ್ಚಿನ ವಸೂಲಿಗೆ ದೂರು ಕೊಡಿ: ಎಚ್1 ಎನ್1 ಸಾಮಾನ್ಯ ಜ್ವರವಾಗಿದ್ದು ಗುಣ ಪಡಿಸಬಹುದಾಗಿದೆ. ಇದರಿಂದ ಗಾಬರಿಯಾಗುವ ಅವಶ್ಯಕತೆ ಇಲ್ಲ. ಎಚ್1 ಎನ್1 ಸೋಂಕಿನ ಪರೀಕ್ಷೆಗೆ 2500 ರೂ., ಗಿಂತ ಹೆಚ್ಚಿಗೆ ಹಣ ವಸೂಲಿ ಮಾಡದಂತೆ ಸರ್ಕಾರ ಅದೇಶ ನೀಡಿದೆ. ಒಂದು ವೇಳೆ ರೋಗಿಗಳಿಂದ ಹೆಚ್ಚಿನ ಹಣ ವಸೂಲಿ ಮಾಡಿರುವುದು ಕಂಡುಬಂದಲ್ಲಿ ಅಂತಹವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದರು.
ಈ ವೇಳೆ ಜಿಲ್ಲಾ ಮಲೇರಿಯಾ ರೋಗ ನಿಯಂತ್ರಣಾಧಿಕಾರಿ ಡಾ.ಧರ್ಮೇಂದ್ರ, ತಾಲೂಕು ಆರೋಗ್ಯಾಧಿಕಾರಿ ಡಾ.ಸಂಜಯ್, ತಾಲೂಕು ಆರೋಗ್ಯ ಶಿಕ್ಷಣಾಧಿಕಾರಿ ರೇವಣ್ಣ, ಆಕಾಶ್ ಮೆಡಿಕಲ್ ಕಾಲೇಜಿನ ನಿರ್ದೇಶಕ ಡಾ.ವೀರಣ್ಣ ಇದ್ದರು.
ಸಾಮಾನ್ಯ ವೈರಸ್ ಜ್ವರ ಎಚ್1 ಎನ್1 ಬಗ್ಗೆ ಭಯ ಬೇಡ. ಸಾಮಾನ್ಯ ವೈರಸ್ ಜ್ವರವಾಗಿದ್ದು ನಿರ್ದಿಷ್ಟ ಮತ್ತು ಸೂಕ್ತ ಚಿಕಿತ್ಸೆಯಿಂದ ರೋಗಿಗಳು ಸಂಪೂರ್ಣವಾಗಿ ಗುಣಮುಖರಾಗ ಬಹುದು. ತೀವ್ರ ಜ್ವರ, ಅತಿಯಾದ ಭೇದಿ, ವಾಂತಿ , ಅತಿಯಾದ ಮೈ ಕೈ ನೋವು, ಕೆಮ್ಮು, ಹಳದಿ ಕಫ, ನೆಗಡಿ, ಗಂಟಲು ಕೆರೆತ, ಉಸಿರಾಟದ ತೊಂದರೆ ಲಕ್ಷಣ. ಈ ಲಕ್ಷಣ ಕಂಡುಬಂದಲ್ಲಿ ಸರ್ಕಾರಿ ಆಸ್ಪತ್ರೆ ಯಲ್ಲಿ ಸೂಕ್ತ ಚಿಕಿತ್ಸೆ ಕೊಡಿಸಬೇಕು. ಕೆಮ್ಮುವಾಗ, ಸೀನುವಾಗ ಬಾಯಿ ಹಾಗೂ ಮೂಗನ್ನು ಕರವಸ್ತ್ರದಿಂದ ಮುಚ್ಚಿಕೊಳ್ಳ ಬೇಕು. ಮೂಗು, ಕಣ್ಣು,ಬಾಯಿ ಮುಟ್ಟಿ ಕೊಳ್ಳುವ ಮೊದಲು , ನಂತರ ಕೈಗಳನ್ನು ಸಾಬೂನಿನೊಂದಿಗೆ, ನೀರಿನೊಂದಿಗೆ ಚೆನ್ನಾಗಿ ತೊಳೆಯಬೇಕು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಜಿಲ್ಲಾ ಆರೋಗ್ಯಾಧಿಕಾರಿ ಯೋಗೇಶ್‌ಗೌಡ ಮಾಹಿತಿ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Surat; ವಂಚಿಸಿ ಸಂಗ್ರಹಿಸಿಟ್ಟಿದ್ದ 6 ಲಕ್ಷ ಮೌಲ್ಯದ ಒಣಮೆಣಸಿನಕಾಯಿ ಪತ್ತೆ
Subrahmanya; ಅನ್ಯಕೋಮಿನ ವಿದ್ಯಾರ್ಥಿನಿಗೆ ಮೆಸೇಜ್: ಗುಂಪಿನಿಂದ ಯುವಕನಿಗೆ ಥಳಿತ
Kundapura; ನಿಯಂತ್ರಣ ತಪ್ಪಿ ಗದ್ದೆಗೆ ಉರುಳಿದ ಬೈಕ್: ಸವಾರ ದುರ್ಮರ*ಣ
J&K:ಪಾಕ್ ಮೂಲದ ಎಲ್‌ಇಟಿ ಉನ್ನತ ಕಮಾಂಡರ್ ನನ್ನ ಹೊಡೆದುರುಳಿಸಿದ ಸೇನೆ
Pushpa2: ಅಲ್ಲು ಅರ್ಜುನ್ ‘ಪುಷ್ಪ-2’ ಐಟಂ ಹಾಡಿಗೆ ಹಜ್ಜೆ ಹಾಕಲಿದ್ದಾರೆ ಈ ಇಬ್ಬರು ನಟಿಯರು?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.