ಕೋವಿಡ್ ಬಂದರೆ ಹೆದರಬೇಕಿಲ್ಲ: ಮಂಜುನಾಥ್
Team Udayavani, Jul 26, 2020, 7:48 AM IST
ವಿಜಯಪುರ: ಕೋವಿಡ್ ಪಾಸಿಟಿವ್ ಬಂದರೆ ಅಂಜ ಬೇಕಿಲ್ಲ. ಆತ್ಮಸ್ಥೈರ್ಯವಿದ್ದರೆ ಕೋವಿಡ್ ಕಾಯಿಲೆ ಗುಣವಾದಂತೆ ಎಂಬ ಧೈರ್ಯವಿರಲಿ ಎಂದು ತಾಪಂ ಸದಸ್ಯಮಂಜುನಾಥ್ ತಿಳಿಸಿದರು.
ಚನ್ನರಾಯಪಟ್ಟಣ ಹೋಬಳಿ ದೇವನಾಯಕನ ಹಳ್ಳಿಯಲ್ಲಿ ಕೋವಿಡ್ ಪಾಸಿಟಿವ್ ಬಂದ ವ್ಯಕ್ತಿಯ ಕುಟುಂಬಕ್ಕೆ ಅಗತ್ಯವಿರುವ ಪಡಿತರ ಧಾನ್ಯ ವಿತರಿಸಿ ಮಾತನಾಡಿದರು. ಕೋವಿಡ್ ಪಾಸಿಟಿವ್ ಬಂದ ವ್ಯಕ್ತಿಯನ್ನು ಯಾರೂ ಕೀಳಾಗಿ ನೋಡುವುದಾಗಲಿ, ಅಥವಾ ಅವರ ಮನೆಯವರ ಬಗ್ಗೆ ಭಯಭೀತರಾಗುವುದು ಬೇಡ. ಕೋವಿಡ್ ಗುಣಮುಖವಾದಗಷ್ಟು ದೊಡ್ಡ ಕಾಯಿಲೆಯಲ್ಲ. ಗ್ರಾಮೀಣ ಭಾಗದಲ್ಲೂ ಜನ ಆರೋಗ್ಯವಂತರಾಗಿದ್ದಾರೆ. ಆದಷ್ಟು ತಿಳಿವಳಿಕೆ ಉಳ್ಳವರಾಗಿದ್ದಾರೆ. ಮನೆಯಿಂದ ಹೊರಬಂದಾಗ ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು. ಅಂಗಡಿ ಮುಂಗಟ್ಟುಗಳಲ್ಲಿ ವ್ಯವಹರಿಸುವಾಗ ಸಾಮಾಜಿಕ ಅಂತರ ಕಾಯ್ದುಕೊಳ್ಳುವ ಮೂಲಕ ಕೋವಿಡ್ ಸೋಂಕು ಹರಡದಂತೆ ಮುಂಜಾಗ್ರತೆ ವಹಿಸಬಹುದು ಎಂದು ತಿಳಿಸಿದರು.
ಗ್ರಾಪಂ ಸದಸ್ಯ ನಾಗರಾಜ್, ಗ್ರಾಮದಲ್ಲಿ ಕೋವಿಡ್ ಪಾಸಿಟಿವ್ ಬಂದ ವ್ಯಕ್ತಿ ಗುಣಮುಖರಾಗಿ ವಾಪಸ್ ಬಂದಿದ್ದು, ಯಾರಿಗೂ ಯಾವುದೇ ಸಮಸ್ಯೆ ಇಲ್ಲ. ಗ್ರಾಮ ಸ್ಥರು ಕೊರೊನಾ ಬಗ್ಗೆ ತಪ್ಪು ತಿಳಿವಳಿಕೆ, ಭಯ ಬಿಟ್ಟು ಕಡ್ಡಾಯ ನಿಯಮ ಪಾಲನೆ ಮಾಡಿ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Kumble: ಕುಂಬಳೆ ಪೇಟೆಯಲ್ಲಿ ವಿದ್ಯಾರ್ಥಿಗಳ ಹೊಡೆದಾಟ
Road mishap: ರಿಕ್ಷಾಗೆ ಕಾರು ಢಿಕ್ಕಿ; ನಾಲ್ವರಿಗೆ ಗಾಯ
Sagara: ಹತ್ತು ಎಕರೆ ಜಾಗದಲ್ಲಿ ಆಶ್ರಯ ಲೇ ಔಟ್ ನಿರ್ಮಿಸಿ ಬಡವರಿಗೆ ಹಂಚಿಕೆ: ಶಾಸಕ ಬೇಳೂರು
Mangaluru;ಅಕ್ರಮ ಮರಳುಗಾರಿಕೆ ಅಡ್ಡೆಗೆ ಗಣಿ ಇಲಾಖೆ ದಾಳಿ: 5 ದೋಣಿ ವಶಕ್ಕೆ
Udupi; ಸ್ವಯಂ ರಕ್ಷಣೆಗಾಗಿ ಕರಾಟೆ ಕಲೆಯ ಅಭ್ಯಾಸ ಇಂದಿನ ಅಗತ್ಯತೆ: ಪುತ್ತಿಗೆ ಶ್ರೀ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.