ಮತದಾನದಿಂದ ವಂಚಿತರಾಗಬೇಡಿ
Team Udayavani, Apr 10, 2019, 3:00 AM IST
ಆನೇಕಲ್: ಮತದಾನ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮಹತ್ವಪೂರ್ಣ ಅವಕಾಶವಾಗಿದ್ದು, ಪ್ರತಿಯೊಬ್ಬರೂ ಕಡ್ಡಾಯವಾಗಿ ಮತದಾನ ಮಾಡಬೇಕು. ಯಾರು ಕೂಡ ಮತದಾನದಿಂದ ವಂಚಿತರಾಗಬಾರದೆಂದು ಬೆಂಗಳೂರು ನಗರ ಜಿಪಂ ಉಪಕಾರ್ಯದರ್ಶಿ ಡಾ.ಸಿ.ಸಿದ್ಧರಾಮಯ್ಯ ಹೇಳಿದರು.
ತಾಲೂಕಿನ ಹೆಬ್ಬಗೋಡಿಯ ಎಸ್‌ಎಫ್ಎಸ್ ಕಾಲೇಜಿನಲ್ಲಿ ಪದವಿ ವಿದ್ಯಾರ್ಥಿಗಳಿಗೆ ತಾಲೂಕು ಸ್ವೀಪ್ ಸಮಿತಿ ಹಾಗೂ ಪೊಲೀಸ್ ಇಲಾಖೆ ಹಮ್ಮಿಕೊಂಡಿದ್ದ ಮತದಾನ ಜಾಗೃತಿ ಅಭಿಯಾನದಲ್ಲಿ ಇವಿಎಂ ಮತ್ತು ವಿವಿ ಪ್ಯಾಟ್ ಪ್ರಾತ್ಯಕ್ಷಿಕೆ ಹಾಗೂ ಅಣಕು ಮತದಾನಕ್ಕೆ ಚಾಲನೆ ನೀಡಿ ಮಾತನಾಡಿದರು.
ಬಲಿಷ್ಠ ಭಾರತ ನಿರ್ಮಿಸಿ: ಲೋಕಸಭಾ ಚುನಾವಣೆಗೆ ಸಂಬಂಧಿಸಿ ಸಾರ್ವಜನಿಕರು, ವಿದ್ಯಾರ್ಥಿಗಳು, ಕಾರ್ಮಿಕರಲ್ಲಿ ಮತದಾನದ ಬಗ್ಗೆ ಅರಿವು ಮೂಡಿಸುವ ನಿಟ್ಟಿನಲ್ಲಿ ಕಾರ್ಯಕ್ರಮ ಆಯೋಜಿಸಲಾಗಿದೆ.
ಚುನಾವಣೆಯಲ್ಲಿ ವಿದ್ಯಾರ್ಥಿಗಳು ಹಾಗೂ ಅವರ ಕುಟುಂಬದವರು ತಪ್ಪದೇ ಮತದಾನ ಮಾಡುವ ಮೂಲಕ ಯೋಗ್ಯ ವ್ಯಕ್ತಿಯನ್ನು ಆಯ್ಕೆ ಮಾಡಿಕೊಳ್ಳಬೇಕು. ರಜೆ ಇದೆ ಎಂದು ಪ್ರವಾಸ ಕೈಗೊಳ್ಳುವುದನ್ನು ಬಿಟ್ಟು ನಿಮ್ಮ ಜವಾಬ್ದಾರಿಯನ್ನು ಅರಿತು ಮತದಾನ ಮಾಡಿ, ಬಲಿಷ್ಠ ಭಾರತ ನಿರ್ಮಾಣಕ್ಕೆ ಆದ್ಯತೆ ನೀಡಬೇಕೆಂದು ಹೇಳಿದರು.
ಚುನಾವಣೆ ಹಬ್ಬದಂತೆ ಆಚರಿಸಿ: ಬೆಂಗಳೂರು ಗ್ರಾಮಾಂತರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಾಮ್ ನಿವಾಸ್ ಸೆಪಟ್ ಮಾತನಾಡಿ, ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮತದಾನ ಪ್ರಮುಖ ಅಂಶವಾಗಿದ್ದು, ನಿಮ್ಮ ನಾಯಕನ ಆಯ್ಕೆ ನಿಮ್ಮ ಕೈಯಲ್ಲಿದೆ.
ಪ್ರತಿಯೊಬ್ಬ ವಿದ್ಯಾರ್ಥಿ ಮತದಾರರಿಗೆ ಮತದಾನದ ಮಹತ್ವವನ್ನು ತಿಳಿಸಿಕೊಡುವ ಮೂಲಕ ಚುನಾವಣೆಯ ದಿನ ಮತ ಚಲಾಯಿಸಬೇಕು. ಪ್ರಪಂಚದಲ್ಲೇ ನಮ್ಮ ಚುನಾವಣೆ ವ್ಯವಸ್ಥೆ ಅತ್ಯುತ್ತಮವಾಗಿದೆ. ಚುನಾವಣೆಯನ್ನು ಪ್ರಜಾಪ್ರಭುತ್ವದ ಹಬ್ಬವನ್ನಾಗಿ ಆಚರಿಸಬೇಕೆಂದು ಹೇಳಿದರು.
ಇದೇ ವೇಳೆ ಲೋಕಸಭಾ ಚುನಾವಣೆಯಲ್ಲಿ ಕಡ್ಡಾಯವಾಗಿ ಮತದಾನ ಮಾಡುತ್ತೇನೆಂದು ಸಹಿ ಸಂಗ್ರಹ ಅಭಿಯಾನ ನಡೆಯಿತು. ಅಧಿಕಾರಿಗಳು, ವಿದ್ಯಾರ್ಥಿಗಳು, ಸಾರ್ವಜನಿಕರು, ಮಾಧ್ಯಮ ಪ್ರತಿನಿಧಿಗಳು ಭಾಗವಹಿಸಿದ್ದರು.
ಸಮಾರಂಭದಲ್ಲಿ ಆನೇಕಲ್ ಉಪ ವಿಭಾಗದ ಡಿವೈಎಸ್‌ಪಿ ನಂಜುಂಡೇಗೌಡ, ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಟಿ.ಕೆ.ರಮೇಶ್, ಹೆಬ್ಬಗೋಡಿ ಇನ್ಸ್‌ಪೆಕ್ಟರ್ ಜಗದೀಶ್, ಸಿಐಇಡಿಎಸ್, ಗಮನ(ಹ್ಯೂಮನ್ಸ್ ಕಲೆಕ್ಟಿವ್)ಪ್ರತಿನಿಧಿ ಮಮತಾ, ತಾಲೂಕು ಸಂಯೋಜಕ ಕೆ.ಚಂದ್ರಶೇಖರ್, ನಾಗರಾಜು, ಕಾಲೇಜು ಪ್ರಾಂಶುಪಾಲರು, ಎಸ್‌ಸಿಸಿ ವಿದ್ಯಾರ್ಥಿಗಳು, ವಿವಿ ಪ್ಯಾಟ್ ಯಂತ್ರಗಳ ಮುಖ್ಯ ತರಬೇತುದಾರರು ಮುಂತಾದವರು ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Nelamangala: ಸಾಕು ನಾಯಿ ಸತ್ತಿದ್ದಕ್ಕೆ ಮಾಲಕ ಆತ್ಮಹ*ತ್ಯೆ
Doddaballapur: ಹೊಲದಲ್ಲಿ ಹೂ ಬಿಡಿಸುತ್ತಿದ್ದ ಮಹಿಳೆಗೆ ಕಾರು ಡಿಕ್ಕಿ: ಸಾವು
Road Mishap: ಬೈಕ್ ವ್ಹೀಲಿಂಗ್ ಮಾಡುವಾಗ ಕ್ಯಾಂಟರ್‌ಗೆ ಡಿಕ್ಕಿ; ಇಬ್ಬರು ಸಾವು
Tragic: ಮದುವೆ ಹರಕೆ ಹೊತ್ತು ಘಾಟಿ ದೇಗುಲಕ್ಕೆ ಬಂದಿದ್ದ ಯುವತಿ ಸಾವು
Ayodhya ರಾಮನ ದರ್ಶನ ಪಡೆದಿದ್ದ “ಬಸಪ್ಪ” ಈಗ ಶಬರಿಮಲೆಗೆ ಪ್ರಯಾಣ!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.