ಗ್ರಾಮವಾಸ್ತವ್ಯದಲ್ಲಿ ಜನರೊಂದಿರೊಂದಿಗೆ ಬೆರೆತ ಸಚಿವ
Team Udayavani, Feb 22, 2021, 12:00 PM IST
ದೊಡ್ಡಬಳ್ಳಾಪುರ: ತಾಲೂಕಿನ ಹೊಸಹಳ್ಳಿಯಲ್ಲಿ ನಡೆದ “ಜಿಲ್ಲಾಧಿಕಾರಿಗಳ ನಡೆ, ಹಳ್ಳಿಗಳ ಕಡೆ’ ಎಂಬ ವಿನೂತನ ಕಾರ್ಯಕ್ರಮ ಯಶಸ್ವಿಯಾಗಿದ್ದು, ಜಿಲ್ಲಾಧಿಕಾರಿ, ಅಪರ ಜಿಲ್ಲಾಧಿಕಾರಿ, ಉಪ ವಿಭಾಗಾಧಿಕಾರಿ, ತಹಶೀಲ್ದಾರ್, ಕಂದಾಯ ನಿರೀಕ್ಷಕರು ಹಾಗೂ ಗ್ರಾಮ ಲೆಕ್ಕಾಧಿಕಾರಿಗಳ ಪರಿಶ್ರಮದಿಂದ ಪಿಂಚಣಿ, ಪೋಡಿ, ಆಧಾರ್ ಕಾರ್ಡ್, ಪಡಿತರ ಚೀಟಿ, ಸ್ಮಶಾನದ ಒತ್ತುವರಿ ತೆರವು, ಅಂಗವಿಕಲರಿಗೆ ವಿವಿಧ ಸೌಲಭ್ಯ ಸ್ಥಳದಲ್ಲಿಯೇ ನೀಡಲಾಗಿದೆ ಎಂದು ಕಂದಾಯ ಸಚಿವ ಆರ್. ಅಶೋಕ್ ತಿಳಿಸಿದರು.
ತಾಲೂಕಿನ ಸಾಸಲು ಹೋಬಳಿಯ ಹೊಸಹಳ್ಳಿಯಲ್ಲಿ ದಲಿತ ಕಾಲೋನಿಯ ಬೀದಿಗಳಲ್ಲಿ ಸಂಚರಿಸಿ, ಹೊಸಹಳ್ಳಿ ಗ್ರಾಮಸ್ಥರೊಂದಿಗೆ ಸಭೆ ನಡೆಸಿ, ಅಹವಾಲು ಸ್ವೀಕರಿಸಿ ನಂತರ ಗ್ರಾಮಸ್ಥರಾದ ವೆಂಕಟಲಕ್ಷ್ಮಮ್ಮ ಅವರ ಮನೆಯ ಆವರಣದಲ್ಲಿ ನಡೆದ ಸಭೆಯಲ್ಲಿ ಅವರು ಮಾತನಾಡಿದರು.
ಸರ್ಕಾರ ಜನಪರ: ಕೇಂದ್ರ ಹಾಗೂ ರಾಜ್ಯ ಸರ್ಕಾರ ಜನಪರವಾಗಿದ್ದು, ಬಡವರ ಮನೆ ಬಾಗಿಲಿಗೆ ಆಡಳಿತ ಯಂತ್ರವನ್ನು ತರುವ ಮೂಲಕ ಅವರ ಸಮಸ್ಯೆಗಳಿಗೆ ಸ್ಥಳದಲ್ಲೇ ಪರಿಹಾರ ಒದಗಿಸಲಾಗಿದೆ. ಪಿಂಚಣಿ ಸಮಸ್ಯೆ ಸ್ಥಳದಲ್ಲೇ ಬಗೆಹರಿಸಲಾಗಿದ್ದು, ಆಶ್ರಯಮನೆ ಯೋಜನೆಯಡಿ ಅರ್ಹರಿಗೆ ಜಾಗ ನೀಡಲು ಸೂಚಿಸಲಾಗಿದೆ. ಮುಂದಿನ ದಿನಗಳಲ್ಲಿ ಯಾರೊಬ್ಬರೂ ಅರ್ಜಿ ಹಿಡಿದು ತಾಲೂಕು ಹಾಗೂ ಜಿಲ್ಲಾಧಿಕಾರಿ ಕಚೇರಿ ಬಳಿ ಅಲೆಯಬಾರದು. ಬದಲಿಗೆ, ಅಧಿಕಾರಿಗಳೇ ಜನರ ಮನೆ ಬಾಗಿಲಿಗೆ ಸೌಲಭ್ಯ ತಲುಪಿಸುವ ಕೆಲಸ ಮಾಡಬೇಕು ಎಂದರು.
ಶಾಸಕ ಟಿ. ವೆಂಕಟರಮಣಯ್ಯ, ಬೆಂಗಳೂರು ಪ್ರಾದೇಶಿಕ ಆಯುಕ್ತ ನವೀನ್ ರಾಜ್ ಸಿಂಗ್, ಜಿಲ್ಲಾಧಿಕಾರಿ ಕೆ. ಶ್ರೀನಿವಾಸ್, ಅಪರ ಜಿಲ್ಲಾಧಿಕಾರಿ ಡಾ.ಜಗದೀಶ್.ಕೆ.ನಾಯಕ, ಉಪ ವಿಭಾಗಾಧಿಕಾರಿ ಅರುಳ್‌ಕುಮಾರ್, ಡಿವೈಎಸ್ಪಿ ರಂಗಪ್ಪ, ತಹಸೀಲ್ದಾರ್‌ಶಿವರಾಜ್, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕಇಲಾಖೆ ಉಪ ನಿರ್ದೇಶಕ ಎನ್.ಎಸ್.ಮಹೇಶ್, ಸರ್ಕಲ್ ಇನ್ಸ್‌ಪೆಕ್ಟರ್ ನವೀನ್ ಕುಮಾರ್ ಉಪಸ್ಥಿತರಿದ್ದರು.
ರಾಗಿ ರೊಟ್ಟಿ, ಹುಚ್ಚೆಳ್ಳು ಚಟ್ನಿ ಸವಿದ ಸಚಿವ :
ಕಾರ್ಯಕ್ರಮ ಆರಂಭವಾದಾಗಿನಿಂದ ಅಂತ್ಯದವರೆಗೂ ದೊಡ್ಡಬಳ್ಳಾಪುರ ಕ್ಷೇತ್ರದ ಶಾಸಕ ಟಿ.ವೆಂಕಟರಮಣಯ್ಯ ಅವರು ಜೊತೆಯಲ್ಲಿ ಇದ್ದು ಕಾರ್ಯಕ್ರಮದ ಯಶಸ್ಸಿಗೆ ಸಹಕಾರ ನೀಡಿದ್ದು, ಸ್ಥಳೀಯ ಜನರ ಸಮಸ್ಯೆಗೆ ಸ್ಪಂದಿಸುವ ಕಾರ್ಯ ಮಾಡಿದ್ದಾರೆ. ಹೊಸಹಳ್ಳಿ ಗ್ರಾಮಕ್ಕೆ ಸಚಿವರು ಬಂದಿ ಳಿ ದಂದಿ ನಿಂದ ಇಲ್ಲಿಯವರೆಗೂ ಗ್ರಾಮಸ್ಥರು ಮನೆ ಮಗನಂತೆ ನೋಡಿಕೊಂಡಿದ್ದಾರೆ ಎಂದು ಸಚಿವರು ಸ್ಮರಿಸಿದರು. ಸಚಿವರು ಬೆಳಗಿನ ಜಾವ ಗುಂಡುಮ ಕೆರೆ ಏರಿ ವಾಯು ವಿಹಾರ ಮುಗಿಸಿ ಬಂದು, ಹೊಸಹಳ್ಳಿ ಕಾಲೋನಿಯ ವೆಂಕಟ ಲಕ್ಷ್ಮಮ್ಮ ಎಂಬುವರ ಮನೆಯಲ್ಲಿ ರಾಗಿ ರೊಟ್ಟಿ, ಹುಚ್ಚೆಳ್ಳು ಚಟ್ನಿ, ಉಪ್ಪಿಟ್ಟು ಸೇವಿಸಿ, ತುಂಬಾ ರುಚಿಕರವಾಗಿತ್ತು. ಯಾವುದೇ ಹೈಟೆಕ್ ಹೋಟೆಲ್‌ನಲ್ಲಿಯೂ ಇಂತಹ ರುಚಿಕರವಾದ ಉಪಹಾರ ಸಿಗದು ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.