ಬೆಳಗ್ಗೆ ಘೋಷಿಸಿದ್ದ ಚುನಾವಣೆ ವೇಳಾಪಟ್ಟಿ ಸಂಜೆ ವೇಳೆಗೆ ವಾಪಸ್‌


Team Udayavani, Mar 30, 2021, 3:45 PM IST

ಬೆಳಗ್ಗೆ ಘೋಷಿಸಿದ್ದ ಚುನಾವಣೆ ವೇಳಾಪಟ್ಟಿ ಸಂಜೆ ವೇಳೆಗೆ ವಾಪಸ್‌

ದೊಡ್ಡಬಳ್ಳಾಪುರ: ನಗರಸಭೆಗೆ ಏ.27 ರಂದು ಚುನಾವಣೆ ನಡೆಸಲು, ವೇಳಾ ಪಟ್ಟಿ ಪ್ರಕಟಿಸಿದ ಚುನಾವಣಾ ಆಯೋಗ, ಸಂಜೆ ವೇಳೆಗೆ ತಾಂತ್ರಿಕ ಕಾರಣ ನೀಡಿ ಹಿಂದಕ್ಕೆ ಪಡೆದು ಆದೇಶ ಹೊರಡಿಸಿದೆ. ನಗರಸಭೆಯ ಸದಸ್ಯರ ಅಧಿಕಾರ ಮುಕ್ತಾಯವಾಗಿ ಇದೇ ಮಾ.12ಕ್ಕೆ ಎರಡು ವರ್ಷಗಳಾಗಿವೆ.

ಸೋಮವಾರ ಮಧ್ಯಾಹ್ನದ ವೇಳೆಗೆ ನಗರಸಭೆ ಸದಸ್ಯರ ಆಯ್ಕೆಗೆ ಏ.27 ರಂದು ಮತದಾನ ನಡೆಸಲು ರಾಜ್ಯ ಚುನಾವಣಾ ಆಯೋಗ ವೇಳಾಪಟ್ಟಿಯನ್ನುಪ್ರಕಟಿಸಿತ್ತು. ಆದರೆ, ಸಂಜೆ, ತಾಂತ್ರಿಕ ಕಾರಣಗಳಿಂದಾಗಿ ಚುನಾವಣೆಗೆ ಹೊರಡಿಸಿರುವ ವೇಳಾಪಟ್ಟಿಯನ್ನು ಮುಂದಿನ ಆದೇಶದವರೆಗೆ ಹಿಂಪಡೆಯಲಾಗಿದ್ದು,ಪರಿಷ್ಕೃತ ವೇಳಾ ಪಟ್ಟಿಯನ್ನು ಪ್ರಕಟಿಸಲಾಗುವುದು ಎಂದು ಆಯೋಗ ಪ್ರಕಟಣೆ ಹೊರಡಿಸಿದೆ.

ನಗರಸಭೆಯ ವಾರ್ಡ್‌ ಮೀಸಲಾತಿ, ಗಡಿ ವಿಂಗಡಣೆ ಸರಿ ಇಲ್ಲ ಎಂದು ಪ್ರಶ್ನಿಸಿ ಹಲವು ಮಂದಿಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿದ್ದರು. ಈ ಅರ್ಜಿ ವಿಚಾರಣೆಯಿಂದಾಗಿಯೇ ನಗರಸಭೆ ಸದಸ್ಯರಅಧಿಕಾರ ಮುಕ್ತಾಯವಾಗಿ ಎರಡು ವರ್ಷಕಳೆದಿದ್ದರೂ ಚುನಾವಣೆ ದಿನಾಂಕ ಪ್ರಕಟವಾಗಿರಲಿಲ್ಲ.ಕೋರ್ಟ್‌ ಸೂಚನೆಯಂತೆ ಎರಡು ತಿಂಗಳ ಹಿಂದೆಯಷ್ಟೇ ರಾಜ್ಯ ಚುನಾವಣೆ ಆಯೋಗಮೀಸಲಾತಿ ಕರಡು ಪಟ್ಟಿ ಪ್ರಕಟಿಸಿ ಸಾರ್ವಜನಿಕರಿಂದ ಆಕ್ಷೇಪಣೆ ಆಹ್ವಾನಿಸಿತ್ತು. ಹಲವು ಮಂದಿ ಮೀಸಲಾತಿಕರಡುಪಟ್ಟಿಗೆ ಆಕ್ಷೇಪಣೆಗಳನ್ನು ಜಿಲ್ಲಾಧಿಕಾರಿಗೆ ಸಲ್ಲಿಸಿದ್ದರು.

ವಾರ್ಡ್‌ಗಳ ಗಡಿ ವಿಂಗಡಣೆ ಕುರಿತ ಅರ್ಜಿ ಇನ್ನೂ ವಿಚಾರಣೆ ಹಂತದಲ್ಲೇ ಇದೆ. ಸಾರ್ವಜನಿಕರ ಆಕ್ಷೇಪಣೆನಂತರ ಮೀಸಲಾತಿ ಪಟ್ಟಿಯನ್ನು ಅಧಿಕೃವಾಗಿಪ್ರಕಟಿಸಿಲ್ಲ. ಆದರೆ, ಚುನಾವಣಾ ವೇಳಾಪಟ್ಟಿಯನ್ನು ದಿಢೀರ್‌ ಪ್ರಕಟಿಸಿರುವುದಕ್ಕೆ ಹಲವು ಮಂದಿರಾಜಕೀಯ ಪಕ್ಷಗಳ ಮುಖಂಡರು ಆಕ್ಷೇಪವ್ಯಕ್ತಪಡಿಸಿದ್ದರು. ಈ ಕುರಿತಂತೆ ಮತ್ತೆ ಕೋರ್ಟ್‌ ಮೊರೆ ಹೋಗುವುದಾಗಿಯೂ ತಿಳಿಸಿದ್ದರು.

ನಗರಸಭೆ ಚುನಾವಣಾ ವೇಳಾಪಟ್ಟಿ ಪ್ರಕಟವಾಗುತ್ತಿದ್ದಂತೆ ಹಲವು ಮಂದಿ ಆಕಾಂಕ್ಷಿಗಳಲ್ಲಿಸಂತಸ ಮೂಡಿಸಿತ್ತು. ಮೀಸಲಾತಿ ಸರಿ ಇಲ್ಲ ಎಂದು ಆಕ್ಷೇಪಣೆ ಸಲ್ಲಿದ್ದ ಆಕಾಂಕ್ಷಿಗಳಿಗೆ ನಿರಾಸೆಯಾಗಿತ್ತು.ಆದರೆ, ಸಂಜೆ ಚುನಾವಣಾ ವೇಳಾಪಟ್ಟಿಯನ್ನು ರಾಜ್ಯಆಯೋಗ ಹಿಂದಕ್ಕೆ ಪಡೆಯುತ್ತಿದ್ದಂತೆ ಮತ್ತೆ ಆಕಾಂಕ್ಷಿಗಳಲ್ಲಿ ಗೊಂದಲ ಅರಂಭವಾಗಿದೆ.ವೇಳಾಪಟ್ಟಿಯನ್ನು ಹಿಂದಕ್ಕೆ ಪಡೆಯಲು ತಾಂತ್ರಿಕಕಾರಣ ಎಂದಷ್ಟೇ ಆದೇಶ ಪತ್ರದಲ್ಲಿ ತಿಳಿಸಲಾಗಿದೆ.ಆದರೆ, ನಿಖರವಾದ ಕಾರಣ ಕುರಿತು ಸ್ಪಷ್ಟ ಉತ್ತರ ದೊರಕಿಲ್ಲ.

ಟಾಪ್ ನ್ಯೂಸ್

1-modi

BJP; ಅಭಿವೃದ್ಧಿ, ಉತ್ತಮ ಆಡಳಿತ ಗೆದ್ದೇ ಗೆಲ್ಲುತ್ತದೆ: ಜಯಕ್ಕೆ ಪ್ರಧಾನಿ ಬಣ್ಣನೆ

Exam 2

SSLC ಪರೀಕ್ಷೆ ನೋಂದಣಿ: ನ.30ರವರೆಗೆ ಅವಧಿ ವಿಸ್ತರಣೆ

R Ashok (2)

R. Ashok; ಪಾಪ, ನಿಖಿಲ್‌ ಅದೃಷ್ಟವೇ ಸರಿಯಿಲ್ಲ…

1-dkkk

HDK ಕ್ಷೇತ್ರ ಬಿಟ್ಟು ಹೋಗಿದ್ದಕ್ಕೆ ಜನ ಕೊಟ್ಟ ತೀರ್ಪು: ಡಿಕೆಶಿ ಟಾಂಗ್‌

NITK-Padavi-pradana

Surathkal: ಎಐಯಿಂದ ಉದ್ಯೋಗ, ನಂಬಿಕೆಗೆ ಕುತ್ತು: ಪ್ರೊ| ಗೋವಿಂದನ್‌ ರಂಗರಾಜನ್‌

Nalin-Kateel

Result: ಮಹಾರಾಷ್ಟ್ರದಲ್ಲಿ ಎನ್‌ಡಿಎಗೆ ಜಯಭೇರಿ; ಮೋದಿ ನಾಯಕತ್ವಕ್ಕೆ ಮನ್ನಣೆ: ನಳಿನ್‌

Padmaraj–JPoojary

Mangaluru: ಗೊಂದಲ ಮೂಡಿಸುವ ಬಿಜೆಪಿಗೆ ತಕ್ಕ ಪಾಠ: ಕೆಪಿಸಿಸಿ ಪ್ರ.ಕಾರ್ಯದರ್ಶಿ ಪದ್ಮರಾಜ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Anekal: ರೌಡಿಶೀಟರ್‌ ಮೇಲೆ ಮಾರಕಾಸ್ತ್ರಗಳಿಂದ ದಾಳಿ

Anekal: ರೌಡಿಶೀಟರ್‌ ಮೇಲೆ ಮಾರಕಾಸ್ತ್ರಗಳಿಂದ ದಾಳಿ

nelamangala

Leopard Attack: ನೆಲಮಂಗಲ ಸಮೀಪ ಚಿರತೆ ದಾಳಿಗೆ ರೈತ ಮಹಿಳೆ ಬಲಿ

Stray dogs: ಅಂ.ರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬೀದಿ ನಾಯಿಗಳ ಹಾವಳಿ

Stray dogs: ಅಂ.ರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬೀದಿ ನಾಯಿಗಳ ಹಾವಳಿ

Tragic: ಮರದ ಕಾರ್ಖಾನೆಯಲ್ಲಿ ಆಕಸ್ಮಿಕ ಬೆಂಕಿ; ಕಾರ್ಮಿಕ ಸಜೀವ ದಹನ

Tragic: ಮರದ ಕಾರ್ಖಾನೆಯಲ್ಲಿ ಆಕಸ್ಮಿಕ ಬೆಂಕಿ; ಕಾರ್ಮಿಕ ಸಜೀವ ದಹನ

Market: ಬೆಲೆ ಕುಸಿತ; ಬೂದು ಕುಂಬಳ ಬೀದಿಪಾಲು!

Market: ಬೆಲೆ ಕುಸಿತ; ಬೂದು ಕುಂಬಳ ಬೀದಿಪಾಲು!

MUST WATCH

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

ಹೊಸ ಸೇರ್ಪಡೆ

1-modi

BJP; ಅಭಿವೃದ್ಧಿ, ಉತ್ತಮ ಆಡಳಿತ ಗೆದ್ದೇ ಗೆಲ್ಲುತ್ತದೆ: ಜಯಕ್ಕೆ ಪ್ರಧಾನಿ ಬಣ್ಣನೆ

Exam 2

SSLC ಪರೀಕ್ಷೆ ನೋಂದಣಿ: ನ.30ರವರೆಗೆ ಅವಧಿ ವಿಸ್ತರಣೆ

R Ashok (2)

R. Ashok; ಪಾಪ, ನಿಖಿಲ್‌ ಅದೃಷ್ಟವೇ ಸರಿಯಿಲ್ಲ…

1-dkkk

HDK ಕ್ಷೇತ್ರ ಬಿಟ್ಟು ಹೋಗಿದ್ದಕ್ಕೆ ಜನ ಕೊಟ್ಟ ತೀರ್ಪು: ಡಿಕೆಶಿ ಟಾಂಗ್‌

Chinnaswamy Stadium: ಚಿನ್ನಸ್ವಾಮಿ ಸ್ಟಾಂಡ್‌ಗಳಿಗೆ ದಿಗ್ಗಜರ ಹೆಸರು

Chinnaswamy Stadium: ಚಿನ್ನಸ್ವಾಮಿ ಸ್ಟಾಂಡ್‌ಗಳಿಗೆ ದಿಗ್ಗಜರ ಹೆಸರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.