ನಗರಸಭೆ ಕಟ್ಟಡಕ್ಕೆ 4ನೇ ಬಾರಿ ಉದ್ಘಾಟನೆ ಭಾಗ್ಯ


Team Udayavani, Apr 25, 2022, 1:24 PM IST

Untitled-1

ದೊಡ್ಡಬಳ್ಳಾಪುರ: ನಗರಸಭೆ ನೂತನ ಕಟ್ಟಡಕ್ಕೆ ನಾಲ್ಕನೇ ಬಾರಿ ಉದ್ಘಾಟನೆಗೆ ಏ.26ರಂದು ಸಮಯ ನಿಗದಿ ಪಡಿಸಲಾಗಿದೆ.

ನಗರ ಸಭೆ ನೂತನ ಕಾರ್ಯಾಲಯದ ಕಟ್ಟಡವನ್ನು ಏಪ್ರಿಲ್‌ 26ರ ಬೆಳಗ್ಗೆ 11ಗಂಟೆಗೆ ಪೌರಾಡಳಿತ ಸಚಿವ ಎನ್‌.ನಾಗರಾಜ್‌ ಉದ್ಘಾಟಿಸಲಿದ್ದಾರೆ ಎಂದು ನಗರಸಭೆ ಪ್ರಕಟಣೆ ತಿಳಿಸಿದೆ. ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿದ ನಗರಸಭೆ, ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಸಕ ಟಿ.ವೆಂಕಟರಮಣಯ್ಯ ವಹಿಸಲಿದ್ದಾರೆ.

ಉದ್ಘಾಟನಾ ಸಮಾರಂಭದಲ್ಲಿ ಆರೋಗ್ಯ ಡಾ.ಕೆ.ಸುಧಾಕರ್‌, ಸಂಸದ ಬಿ.ಎನ್‌.ಬಚ್ಚೇಗೌಡ, ವಿಧಾನ ಪರಿಷತ್‌ ಸದಸ್ಯ ಪುಟ್ಟಣ್ಣ, ಅ.ದೇವೇಗೌಡ, ಎಸ್‌.ರವಿ, ನಗರಸಭೆ ಅಧ್ಯಕ್ಷೆ ಸುಧಾರಾಣಿಲಕ್ಷ್ಮೀನಾರಾಯಣ್, ಉಪಾಧ್ಯಕ್ಷೆ ಫರ್ಹಾನತಾಜ್‌, ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ದಿಬ್ಬೂರು ಜಯಣ್ಣ, ಟಿಎಪಿಎಂಸಿಎಸ್‌ ಅಧ್ಯಕ್ಷ ಅಂಜನಗೌಡ ಸೇರಿ ಪೌರಾಡಳಿತ ಇಲಾಖೆ ಹಿರಿಯ ಅಧಿಕಾರಿಗಳು ಭಾಗವಹಿಸಲಿದ್ದಾರೆ ಎಂದು ತಿಳಿಸಿದೆ.

6.70 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾಗಿರುವ ನಗರಸಭೆ ನೂತನ ಕಾರ್ಯಾಲಯ ಕಟ್ಟಡದಲ್ಲಿ ಸಭಾಂಗಣ, ಅಧ್ಯಕ್ಷರು, ಉಪಾ ಧ್ಯಕ್ಷರು, ಪೌರಾಯುಕ್ತರ ಕಚೇರಿ ಸೇರಿ ನಗರಸಭೆ ಎಲ್ಲ ವಿಭಾಗಗಳಿಗೂ ಪ್ರತ್ಯೇಕ ಕೊಠಡಿಗಳು ಹಾಗೂ ಆನ್‌ಲೈನ್‌ ಸೌಲಭ್ಯ ಕಲ್ಪಿಸಲಾಗಿದೆ. ಸಾರ್ವಜನಿಕರಿಗೆ ಒಂದೇ ಸೂರಿನಡಿ ನಗರಸಭೆ ಎಲ್ಲ ವಿಭಾಗದ ಸೌಲಭ್ಯ ದೊರೆಯುವಂತೆ ಮಾಡಲಾಗಿದೆ.

ಪೌರಕಾರ್ಮಿಕರಿಂದ ಉದ್ಘಾಟನೆ: ಈಗಾಗಲೇ ಮಾ.16ರಂದು ನೂತನ ಕಟ್ಟಡಕ್ಕೆ ಉದ್ಘಾಟನೆ ಕಾರ್ಯಕ್ರಮ ಆಯೋಜಿಸಿ, ಸಂಜೆಯ ವರೆಗೂ ಕಾದು ಬೇಸತ್ತ ಶಾಸಕ ಟಿ.ವೆಂಕಟರಮಣಯ್ಯ ನೇತೃತ್ವದಲ್ಲಿ ಕಾಂಗ್ರೆಸ್‌ ಸದಸ್ಯರು ಪೌರಕಾರ್ಮಿಕನ ಕೈಯಲ್ಲಿ ಕಟ್ಟಡವನ್ನು ಉದ್ಘಾ ಟಿಸಿದ್ದರು. ನಗರಸಭೆ ಕಚೇರಿ ಉದ್ಘಾಟನೆಗೆ ಜಿಲ್ಲಾ ಉಸ್ತುವಾರಿ ಸಚಿವ ಡಾ.ಕೆ.ಸುಧಾಕರ್‌, ಪೌರಾಡಳಿತ ಸಚಿವ ಎಂಟಿಬಿ ನಾಗರಾಜ್‌ ಬೆಳಗ್ಗೆ 11 ಗಂಟೆಗೆ ಆಗಮಿಸಬೇಕಿತ್ತು. ಆದರೆ, ಕೊನೆ ಗಳಿಗೆಯಲ್ಲಿ ಸಮಯ ಮಾತ್ರ ಬದಲಾವಣೆ ಮಾಡುವ ಮೂಲಕ ಸಂಜೆ 4 ಗಂಟೆಗೆ ಸಚಿ ವರು ಬರುವುದಾಗಿ ಹೇಳಿದರು.

ಶಾಸಕ ಟಿ.ವೆಂಕಟರಮಣಯ್ಯ ನಿಗದಿತ ಸಮಯಕ್ಕೆ ಬಂದು ಹಿಂದಿರುಗಿದರು.

ಕಚೇರಿ ಮುಂದೆ ಪ್ರತಿಭಟನೆ: ಮತ್ತೆ ಸಂಜೆ 4 ಗಂಟೆ ಸಮಯಕ್ಕೆ ವಿಧಾನ ಪರಿಷತ್‌ ಸದಸ್ಯ ಎಸ್‌.ರವಿ, ಕಾಂಗ್ರೆಸ್‌ ಪಕ್ಷದ ನಗರಸಭಾ ಸದಸ್ಯರು ಹಾಗೂ ಸಾರ್ವಜನಿಕರೊಂದಿಗೆ ಆಗಮಿಸಿ ಮತ್ತೆ ಸಂಜೆ 5 ಗಂಟೆವರೆಗೂ ಕಾದುಕುಳಿತರು ಸಚಿವರು ಬರಲಿಲ್ಲ, ನಗರಸಭೆ ಅಧ್ಯ ಕ್ಷರು, ಉಪಾಧ್ಯಾಕ್ಷರು, ಪೌರಾಯುಕ್ತರು, ಬಿಜೆಪಿ ಹಾಗೂ ಜೆಡಿಎಸ್‌ ನ ಕೆಲ ಸದಸ್ಯರು ಗೈರು ಹಾಜರಾದ್ದರು. ಇದರಿಂದ ಸಿಟ್ಟಿಗೆದ್ದ ಶಾಸಕ ಟಿ.ವೆಂಕಟರಮಣಯ್ಯ ತಮ್ಮ ಬೆಂಬಲಗರೊಂದಿಗೆ ನಗರಸಭೆ ನೂತನ ಕಚೇರಿ ಮುಂದೆಯೇ ಪ್ರತಿಭಟನೆ ನಡೆಸಿ ಸಚಿವರ ಹಾಗೂ ಬಿಜೆಪಿ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿದ್ದರು. ಆದರೆ, ಶಾಸಕ ಟಿ. ವೆಂಕಟರಮಣಯ್ಯ ನಡೆಸಿದ್ದ ಉದ್ಘಾಟನೆ ಕಾರ್ಯಕ್ಕೆ ನಗರಸಭೆಯ ಅಧಿಕಾರ ಹಿಡಿದಿರುವ ಬಿಜೆಪಿ ಹಾಗೂ ಜೆಡಿಎಸ್‌ ಸದಸ್ಯರು ಗೈರಾಗಿ ದ್ದಲ್ಲದೆ, ನೂತನ ಕಟ್ಟಡದಲ್ಲಿ ಕಾರ್ಯಾರಂಭ ಮಾಡದೆ ಹಳೆಯ ಕಟ್ಟಡದಲ್ಲಿಯೇ ಆಡಳಿತ ನಡೆಸುತ್ತಿದ್ದಾರೆ.

ನಗರಸಭೆ ಕಟ್ಟಡ ಉದ್ಘಾಟನಾ ಕಾರ್ಯಕ್ರಮಕ್ಕೆ ಕಾಂಗ್ರೆಸ್‌ ಬಹಿಷ್ಕಾರ : ನಾಲ್ಕನೇ ಬಾರಿಗೆ ನಿಗದಿಯಾಗಿರುವ ನಗರಸಭೆ ನೂತನ ಕಟ್ಟಡದ ಉದ್ಘಾಟನೆ ಕಾರ್ಯಕ್ರಮಕ್ಕೆ ಶಾಸಕ ಟಿ.ವೆಂಕಟರಮಣಯ್ಯ ನೇತೃತ್ವದಲ್ಲಿ ಕಾಂಗ್ರೆಸ್‌ ಸದಸ್ಯರು ಹಾಗೂ ಮುಖಂಡರು ಬಹಿಷ್ಕರಿಸಲಿದ್ದಾರೆ. ಈ ಕುರಿತು ಶಾಸಕ ಟಿ.ವೆಂಕಟರಮಣಯ್ಯ ಮಾತನಾಡಿ, ಮಾ.16ರಂದು ಆಯೋಜಿಸಿದ್ದ ಉದ್ಘಾಟನೆ ಕಾರ್ಯಕ್ರಮದಲ್ಲಿ ಸಂಜೆ 6 ಗಂಟೆಯವರೆಗೂ ಕಾದು ಕುಳಿತರೂ, ಸಚಿವರು ಬರದೇ ಬೇಜವಾಬ್ದಾರಿ ತೋರಿದ್ದರು. ಇದರಿಂದ ಬೇಸತ್ತು ಪೌರಕಾರ್ಮಿಕನ ಕೈಯಲ್ಲಿ ನೂತನ ಕಟ್ಟಡದ ಉದ್ಘಾಟನೆ ಮಾಡಲಾಗಿದೆ. ಮತ್ತೂಮ್ಮೆ ನೂತನ ಕಟ್ಟಡ ಉದ್ಘಾಟನೆ ಮಾಡಿಸುವುದು ನಗರದ ಜನರ ಆರೋಗ್ಯ ಕಾಪಾಡಲು ಶ್ರಮಿಸುತ್ತಿರುವ ಪೌರಕಾರ್ಮಿಕರಿಗೆ ಮಾಡುವ ಅವಮಾನವಾಗುತ್ತದೆ. ಪದೇ ಪದೆ ಉದ್ಘಾಟನಾ ಕಾರ್ಯಕ್ರಮಗಳಿಗೆ ಜನರ ತೆರಿಗೆ ಹಣ ವ್ಯರ್ಥಮಾಡುವುದು ತರವಲ್ಲ. ಈ ಕಾರ್ಯಕ್ರಮದ ಹೊರತಾಗಿ ಬೇರೆ ಕಾರ್ಯಕ್ರಮಕ್ಕೆ ತಾವು ಹಾಜರಾಗುತ್ತೇವೆ. ಆದರೆ, ಏಪ್ರಿಲ್‌ 26ರಂದು ನಡೆಯುವ ನಗರಸಭೆ ನೂತನ ಕಟ್ಟಡ ಉದ್ಘಾಟನೆ ಕಾರ್ಯಕ್ರಮವನ್ನು ಕಾಂಗ್ರೆಸ್‌ ಸದಸ್ಯರು ಹಾಗೂ ಮುಖಂಡರಿಂದ ಬಹಿಷ್ಕರಿಸಲಾಗುತ್ತಿದೆ ಎಂದು ತಿಳಿಸಿದ್ದಾರೆ.

ಟಾಪ್ ನ್ಯೂಸ್

Raj-Thackrey

Election: ರಾಜ್‌ ಠಾಕ್ರೆ ಎಂಎನ್‌ಎಸ್‌ ಶೂನ್ಯ ಸಾಧನೆ: ಚಿಹ್ನೆ, ಮಾನ್ಯತೆ ನಷ್ಟದ ಭೀತಿ!

Delhi-School

Air Quality: ದಿಲ್ಲಿಯಲ್ಲಿ ಭೌತಿಕ ತರಗತಿ ಪುನಾರಂಭದ ಬಗ್ಗೆ ಗಮನ ಹರಿಸಿ: ಸುಪ್ರೀಂ ಕೋರ್ಟ್‌

President-Murmu

Indian Constitution: ಸಂವಿಧಾನ ಅಂಗೀಕರಿಸಿ 75 ವರ್ಷ: ಸದನದಲ್ಲಿಂದು ರಾಷ್ಟ್ರಪತಿ ಭಾಷಣ

supreme-Court

Judgement: ಸಂವಿಧಾನ ಪೀಠಿಕೆಯ ಜಾತ್ಯತೀತ ಪದ ಪ್ರಶ್ನಿಸಿದ್ದ ಅರ್ಜಿ ಸುಪ್ರೀಂನಿಂದ ವಜಾ

Karthi

EVM Issue: ಮತಯಂತ್ರ ತಿರುಚಿದ್ದು ಸಾಬೀತಿಗೆ ನನ್ನ ಬಳಿ ಪುರಾವೆಗಳಿಲ್ಲ: ಕಾರ್ತಿ ಚಿದಂಬರಂ

Arvind Limbavali: “ಲ್ಯಾಂಡ್‌ ಜೆಹಾದ್‌’ಗೆ ಸಿದ್ದು ಸರಕಾರದ ಬೆಂಬಲ

Arvind Limbavali: “ಲ್ಯಾಂಡ್‌ ಜೆಹಾದ್‌’ಗೆ ಸಿದ್ದು ಸರಕಾರದ ಬೆಂಬಲ

ಪರಿಸ್ಥಿತಿ ಆಧರಿಸಿ ರಾಜಕೀಯ ನಡೆ: ಸಿ.ಎಂ. ಇಬ್ರಾಹಿಂ

ಪರಿಸ್ಥಿತಿ ಆಧರಿಸಿ ರಾಜಕೀಯ ನಡೆ: ಸಿ.ಎಂ. ಇಬ್ರಾಹಿಂ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Anekal: ರೌಡಿಶೀಟರ್‌ ಮೇಲೆ ಮಾರಕಾಸ್ತ್ರಗಳಿಂದ ದಾಳಿ

Anekal: ರೌಡಿಶೀಟರ್‌ ಮೇಲೆ ಮಾರಕಾಸ್ತ್ರಗಳಿಂದ ದಾಳಿ

nelamangala

Leopard Attack: ನೆಲಮಂಗಲ ಸಮೀಪ ಚಿರತೆ ದಾಳಿಗೆ ರೈತ ಮಹಿಳೆ ಬಲಿ

Stray dogs: ಅಂ.ರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬೀದಿ ನಾಯಿಗಳ ಹಾವಳಿ

Stray dogs: ಅಂ.ರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬೀದಿ ನಾಯಿಗಳ ಹಾವಳಿ

Tragic: ಮರದ ಕಾರ್ಖಾನೆಯಲ್ಲಿ ಆಕಸ್ಮಿಕ ಬೆಂಕಿ; ಕಾರ್ಮಿಕ ಸಜೀವ ದಹನ

Tragic: ಮರದ ಕಾರ್ಖಾನೆಯಲ್ಲಿ ಆಕಸ್ಮಿಕ ಬೆಂಕಿ; ಕಾರ್ಮಿಕ ಸಜೀವ ದಹನ

Market: ಬೆಲೆ ಕುಸಿತ; ಬೂದು ಕುಂಬಳ ಬೀದಿಪಾಲು!

Market: ಬೆಲೆ ಕುಸಿತ; ಬೂದು ಕುಂಬಳ ಬೀದಿಪಾಲು!

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

Raj-Thackrey

Election: ರಾಜ್‌ ಠಾಕ್ರೆ ಎಂಎನ್‌ಎಸ್‌ ಶೂನ್ಯ ಸಾಧನೆ: ಚಿಹ್ನೆ, ಮಾನ್ಯತೆ ನಷ್ಟದ ಭೀತಿ!

Delhi-School

Air Quality: ದಿಲ್ಲಿಯಲ್ಲಿ ಭೌತಿಕ ತರಗತಿ ಪುನಾರಂಭದ ಬಗ್ಗೆ ಗಮನ ಹರಿಸಿ: ಸುಪ್ರೀಂ ಕೋರ್ಟ್‌

President-Murmu

Indian Constitution: ಸಂವಿಧಾನ ಅಂಗೀಕರಿಸಿ 75 ವರ್ಷ: ಸದನದಲ್ಲಿಂದು ರಾಷ್ಟ್ರಪತಿ ಭಾಷಣ

supreme-Court

Judgement: ಸಂವಿಧಾನ ಪೀಠಿಕೆಯ ಜಾತ್ಯತೀತ ಪದ ಪ್ರಶ್ನಿಸಿದ್ದ ಅರ್ಜಿ ಸುಪ್ರೀಂನಿಂದ ವಜಾ

Karthi

EVM Issue: ಮತಯಂತ್ರ ತಿರುಚಿದ್ದು ಸಾಬೀತಿಗೆ ನನ್ನ ಬಳಿ ಪುರಾವೆಗಳಿಲ್ಲ: ಕಾರ್ತಿ ಚಿದಂಬರಂ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.