Drought study: ಜಿಲ್ಲೆಯಲ್ಲಿ ಕೇಂದ್ರದಿಂದ ಬರ ಅಧ್ಯಯನ
Team Udayavani, Oct 9, 2023, 2:20 PM IST
ದೇವನಹಳ್ಳಿ: ಬರ ಪರಿಸ್ಥಿತಿಯನ್ನು ಅಧ್ಯಯನ ಮಾಡಲು ಕೇಂದ್ರ ಬರ ಅಧ್ಯಯನ ತಂಡ ಜಿಲ್ಲೆಗೆ ಆಗಮಿಸಿತ್ತು. ಜಿಲ್ಲೆಯ ನಾಲ್ಕು ತಾಲೂಕುಗಳಲ್ಲೂ ತಂಡ ಹೊಲಗಳಿಗೆ ಮತ್ತು ವಿವಿಧ ಕಡೆಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿತು.
ಮಳೆ ಕೊರತೆಯಿಂದ ರಾಜ್ಯ ಸರ್ಕಾರ ಜಿಲ್ಲೆ ನಾಲ್ಕು ತಾಲೂಕುಗಳನ್ನು ಬರಪೀಡಿತ ಪ್ರದೇಶವೆಂದು ಘೋಷಿಸಿದೆ. ಈ ನಿಟ್ಟಿನಲ್ಲಿ ಬೆಂ. ಗ್ರಾಮಾಂತರ ಜಿಲ್ಲೆಗೆ ಆಗಮಿಸಿದ್ದ ಕೇಂದ್ರ ಬರ ಅಧ್ಯಯನ ತಂಡವು ಜಿಲ್ಲೆಯಲ್ಲಿ ಕೆಲವು ಆಯ್ದ ಗ್ರಾಮಗಳಿಗೆ ಮಾತ್ರ ಭೇಟಿ ನೀಡಿರುವುದು ರೈತರ ಆಕ್ರೋಶಕ್ಕೆ ಕಾರಣವಾಗಿದೆ. ನಿರ್ದಿಷ್ಟ ಮತ್ತು ನೈಜ ವರದಿಯನ್ನು ಕೇಂದ್ರ ಸರ್ಕಾರಕ್ಕೆ ನೀಡಿ ಹೆಚ್ಚಿನ ಪರಿಹಾರವನ್ನು ನೀಡುವಂತಾಗಬೇಕು. ಅನ್ನದಾತರು ಸಾಕಷ್ಟು ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ ಎಂದು ರೈತರು ಮನವಿ ಮಾಡಿದ್ದಾರೆ.
ಜಿಲ್ಲೆಯಲ್ಲಿ ಅತಿ ಹೆಚ್ಚು ರೈತರು ರಾಗಿ ಬೆಳೆ ಮೇಲೆ ಅವಲಂಬಿತರಾಗಿದ್ದಾರೆ. ರಾಗಿ ಬೆಳೆಯೇ ರೈತರ ಜೀವನಾಡಿಯಾಗಿದೆ. ರಾಗಿ ಪ್ರಮುಖ ಬೆಳೆಯಾಗಿದೆ. ಮಳೆ ಇಲ್ಲದೆ ರಾಗಿ ಬೆಳೆಗಳು ಸಂಪೂರ್ಣ ಒಣಗಿ ಹೋಗಿದ್ದು. ಕೇಂದ್ರ ಹಾಗೂ ರಾಜ್ಯ ಸರ್ಕಾರಗಳದ್ದು, ಈ ಭಾಗದ ರೈತರ ನಷ್ಟವನ್ನು ತುಂಬಿ ಕೊಡುವ ಕೆಲಸ ಮಾಡಬೇಕು ಎಂದು ರೈತರು ಒತ್ತಾಯಿಸಿದ್ದಾರೆ.
ಜಿಲ್ಲೆಯಲ್ಲಿ 49559. 57 ಹೆಕ್ಟರ್ ಬೆಳೆ ಹಾನಿ. ತಾಲೂಕಿನ ಬೀರಸಂದ್ರದ ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿ ಜಿಲ್ಲಾಧಿಕಾರಿಗಳು ಹಾಗೂ ಸಂಬಂಧಿಸಿದ ಇಲಾಖೆಯ ಅಧಿಕಾರಿಗಳೊಂದಿಗೆ ಚರ್ಚಿಸಿದ ಬಳಿಕ ಬರಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ವಿಶ್ವನಾಥಪುರ ರಾಗಿ ಬೆಳೆ ಹಾನಿ, ಬ್ಯಾಡರಹಳ್ಳಿ ಗ್ರಾಮದಲ್ಲಿ ಹಾಗೂ ತಾಲೂಕಿನ ಅವತಿ ಗ್ರಾಮದಲ್ಲಿ ರಾಗಿ ಬೆಳೆಗಳನ್ನು ತಂಡ ವೀಕ್ಷಿಸಿತು. ದೊಡ್ಡಬಳ್ಳಾಪುರ ತಾಲೂಕಿನ ಒಬ್ಬದೇನಹಳ್ಳಿ, ಕೋಳೂರು, ಹೊನ್ನ ಘಾಟ ಗ್ರಾಮಗಳಲ್ಲಿ ರಾಗಿ ನವಣೆ ಮುಸುಕಿನ ಜೋಳ ಬೆಳೆ ಹಾನಿ ಪರೀಕ್ಷಿಸಿತು. ನೆಲಮಂಗಲ ತಾಲೂಕಿನ ಸೀರಗಾನಹಳ್ಳಿ ಹಾಗೂ ಕುಲುವೇನಹಳ್ಳಿ ಗ್ರಾಮಗಳಿಗೆ ಕೇಂದ್ರ ಬರ ತಂಡ ಭೇಟಿ ನೀಡಿತು. ಹೊಸಕೋಟೆ ತಾಲೂಕಿನ ಯನಗುಂಟೆ ಗ್ರಾಮದಲ್ಲಿ ಕೇಂದ್ರ ಬರ ಅಧ್ಯಯನ ತಂಡ ಪರಿಶೀಲನೆ ನಡೆಸಿತು. ಕೇಂದ್ರ ಜಲ ಆಯೋಗದ ನಿರ್ದೇಶಕರಾದ ಅಶೋಕ್ ಕುಮಾರ್, ಎಂಎನ್‌ಸಿಎಫ್ಸಿಯ ಉಪ ನಿರ್ದೇಶಕ ಕರಣ್ ಚೌದರಿ, ಆಹಾರ ಇಲಾಖೆ ಕಾರ್ಯದರ್ಶಿ ಸಂಗೀತ್ ಕುಮಾರ್, ರಾಜ್ಯ ಪ್ರಕೃತಿ ವಿಕೋಪ ನಿರ್ವಹಣಾ ಕೇಂದ್ರ ಹಿರಿಯ ಸಲಹೆಗಾರ ಡಾ. ಜಿಎಸ್ ಶ್ರೀನಿವಾಸ್ ರೆಡ್ಡಿ ತಂಡದಲ್ಲಿದ್ದರು.
ಜಿಲ್ಲಾಧಿಕಾರಿ ಡಾ.ಎನ್ ಶಿವಶಂಕರ್ ಮಾತನಾಡಿ ಜಿಲ್ಲೆಯಲ್ಲಿ ರಾಗಿ ಬಿತ್ತನೆ ಮಾಡಲಾಗಿದೆ ಕುಂಠಿತವಾಗಿದೆ. ಎಂದು ಹೇಳಿದರು.
ವಿಶ್ವನಾಥಪುರದಲ್ಲಿ ರೈತರು ಅಂತರ್ಜಲ ಕುಸಿತ, ಕೊಳವೆ ಬಾವಿ ಪರಿಸ್ಥಿತಿ ವಿವರಿಸಿದರು. ತಂಡದ ಮುಖ್ಯಸ್ಥರು ಹಾಗೂ ಸದಸ್ಯರು ಬೆಳೆಹಾನಿ, ಬೆಳೆವಿಮೆ ಪಾವತಿ, ಬೀಜ-ಗೊಬ್ಬರ, ಕೃಷಿ ಕೂಲಿಕಾರರ ಖರ್ಚು-ವೆಚ್ಚಗಳ ಬಗ್ಗೆ ಸ್ವತಃ ರೈತರಿಂದಲೇ ಮಾಹಿತಿಯನ್ನು ಪಡೆದುಕೊಂಡರು. ಸಾಮಾಜಿಕ ಅರಣ್ಯ ವಲಯದ ಉಪ ಅರಣ್ಯ ಸಂರಕ್ಷಣಾಧಿಕಾರಿ ಸರಿನಾ, ಅಪರ ಜಿಲ್ಲಾಧಿಕಾರಿ ಅಮರೇಶ್.ಎಚ್, ಡಿವೈಎಸ್ಪಿ ರವಿ, ಉಪವಿಭಾಗಾಧಿಕಾರಿ ಶ್ರೀನಿವಾಸ, ಜಿಪಂ ಉಪ ಕಾರ್ಯದರ್ಶಿ ಟಿ.ಕೆ.ರಮೇಶ್, ಕೃಷಿ ಇಲಾಖೆ ಜಂಟಿ ನಿರ್ದೇಶಕಿ ಲಲಿತ ರೆಡ್ಡಿ, ಉಪ ನಿರ್ದೇಶಕಿ ವಿನುತಾ, ತೊಟಗಾರಿಕೆ ಉಪ ನಿರ್ದೇಶಕ ಗುಣವಂತ, ರೇಷ್ಮೆ ಇಲಾಖೆ ಉಪ ನಿರ್ದೇಶಕ ಪ್ರಭಾಕರ್ , ತಹಶೀಲ್ದಾರ್ ಶಿವರಾಜ್, ತಾಪಂ ಇಒ ಶ್ರೀನಾಥ್‌ಗೌಡ, ತಾಲೂಕು ಕೃಷಿ ಸಹಾಯಕ ನಿರ್ದೇಶಕಿ ಸುಶೀಲಮ್ಮ, ತಾಲೂಕು ತೋಟಗಾರಿಕೆ ಹಿರಿಯ ಸಹಾಯಕ ನಿರ್ದೇಶಕ ಮಲ್ಲಿಕಾರ್ಜುನ ಬಾಬು ಇತರರಿದ್ದರು.
ಜಿಲ್ಲೆಯಲ್ಲಿ 49559 ಹೆಕ್ಟೇರ್ ಬೆಳೆಹಾನಿ: ಜಿಲ್ಲೆಯಲ್ಲಿ ಮಳೆಕೊರತೆಯಿಂದ 49559.57 ಹೆಕ್ಟೇರ್ ಬೆಳೆಹಾನಿಯಾಗಿದೆ. ಈ ಕುರಿತು ಸಮಗ್ರ ಮಾಹಿತಿ ಹಾಗೂ ಛಾಯಾಚಿತ್ರಗಳ ಮೂಲಕ ಪ್ರಾತ್ಯಕ್ಷಿಕೆ ನೀಡಲಾಗಿದೆ. ವಾಸ್ತವದಲ್ಲಿ ಕೃಷಿ ಹಾಗೂ ತೋಟಗಾರಿಕೆ ಸೇರಿದಂತೆ ಅಪಾರ ಬೆಳೆಹಾನಿಯಾಗಿದೆ. ಆದರೆ ಎನ್‌ಡಿಆರ್‌ಎಫ್ ಮಾರ್ಗಸೂಚಿ ಪ್ರಕಾರ 85 ಕೋಟಿ ಆಗಲಿದೆ. ಈ ಕುರಿತು ಈಗಾಗಲೇ ಕೇಂದ್ರ ಸರ್ಕಾರಕ್ಕೆ ಮನವಿ ಪತ್ರ ಸಲ್ಲಿಸಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಶಿವಶಂಕರ್ ತಿಳಿಸಿದರು. ರಾಗಿ 46003.44 ಹೆಕ್ಟೇರ್, ಮುಸುಕಿನ ಜೋಳ 3477.68 ಹೆಕ್ಟೇರ್, ತೊಗರಿ 68.95 ಹೆಕ್ಟೇರ್, ನೆಲಗಡಲೆ 9.50 ಹೆಕ್ಟೇರ್ ಸೇರಿದಂತೆ ಒಟ್ಟು 49559.57 ಹೆಕ್ಟೇರ್ ಪ್ರದೇಶದಲ್ಲಿ ವಿವಿಧ ಬಗೆಯ ಬೆಳೆಗಳು ಹಾನಿಯಾಗಿರುತ್ತವೆ ಎಂದು ತಿಳಿಸಿದರು.
ಮಳೆ ಇಲ್ಲದೆ ಸಾಕಷ್ಟು ಸಮಸ್ಯೆಗಳನ್ನು ಎದುರಿಸುತ್ತಿದ್ದೇವೆ. ಕೊಳವೆ ಬಾವಿ ಬತ್ತಿ ಹೋಗಿದೆ. ರಾಗಿ ಬೆಳೆಯುತ್ತಿದ್ದೇವೆ. ರಾಗಿಗೆ ಬೀಜ ಬಿತ್ತನೆ ರಸಗೊಬ್ಬರ ಸೇರಿದಂತೆ ಒಂದು ಎಕರೆಗೆ 30,000 ರೂ. – 40,000 ರೂ. ಖರ್ಚು ಮಾಡಲಾಗಿದೆ. ಮಳೆ ಕೈಕೊಟ್ಟಿರುವುದರಿಂದ ಸಾಕಷ್ಟು ಸಂಕಷ್ಟ ಎದುರಾಗಿದೆ. ಸರ್ಕಾರ ಸ್ಪಂದಿಸಬೇಕು. -ಪ್ರಕಾಶ್, ಅವತಿ ಗ್ರಾಮದ ರೈತ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Mandya: ಕನ್ನಡ ಹಬ್ಬಕ್ಕೆ ಏಳು ಲಕ್ಷಕ್ಕೂ ಅಧಿಕ ಜನರ ಭೇಟಿ
Kannada Sahitya Sammelana: ವಿದೇಶದಲ್ಲೂ ಸಮ್ಮೇಳನ ನಡೆಯಲಿ: ಹಕ್ಕೊತ್ತಾಯ
National Badminton: ರೋಣಕ್ ಚೌಹಾಣ್ ಸೆಮಿಗೆ
Champions Trophy: ದುಬಾೖಯಲ್ಲಿ ಭಾರತದ ಪಂದ್ಯಗಳು: ನಾಕೌಟ್ ಹಂತಕ್ಕೇರಿದರೆ?
H.D. Kumaraswamy: 15,000 ಕೋಟಿ ರೂ. ವೆಚ್ಚದಲ್ಲಿ ಭದ್ರಾವತಿ ಕಬ್ಬಿಣ ಕಾರ್ಖಾನೆಗೆ ಮರುಜೀವ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.