ಇ-ಹೊಸೂರಲ್ಲಿ ಮೂಲ ಸೌಲಭ್ಯ ಮರೀಚಿಕೆ; ಸೌಲಭ್ಯಗಳಿಲ್ಲದೆ ಗ್ರಾಮಸ್ಥರು ಪರದಾಟ

ಇ-ಹೊಸೂರು ಗ್ರಾಮಕ್ಕೆ ತಾವು ಶಾಸಕರಾದ ಮೇಲೆ 50 ಲಕ್ಷ ರೂ.ಗಳ ಕಾಂಕ್ರಿಟ್‌ ರಸ್ತೆ ಕಾಮಗಾರಿ ಮಾಡಿಸಲಾಗಿದೆ.

Team Udayavani, Jun 14, 2022, 12:55 PM IST

ಇ-ಹೊಸೂರಲ್ಲಿ ಮೂಲ ಸೌಲಭ್ಯ ಮರೀಚಿಕೆ; ಸೌಲಭ್ಯಗಳಿಲ್ಲದೆ ಗ್ರಾಮಸ್ಥರು ಪರದಾಟ

ದೇವನಹಳ್ಳಿ: ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಗ್ರಾಮಗಳ ಅಭಿವೃದ್ಧಿ ಮತ್ತು ಮೂಲಭೂತ ಸೌಲಭ್ಯಗಳಿಗೆ ಕೋಟ್ಯಂತರ ರೂ. ವ್ಯಯ ಮಾಡುತ್ತಿದ್ದರೂ, ತಾಲೂಕಿನ ಇ-ಹೊಸೂರು ಗ್ರಾಮದಲ್ಲಿ ಮೂಲಭೂತ ಸೌಲಭ್ಯ ಮರೀಚಿಕೆಯಾಗಿರುವುದಕ್ಕೆ ಸಾಕ್ಷಿಯಾಗಿದೆ. ಮಾತಿಗೆ ಮುಂಚೆ ಜನಪ್ರತಿನಿಧಿಗಳು, ಅಧಿಕಾರಿಗಳು ಆ ಗ್ರಾಮಕ್ಕೆ ಇಷ್ಟು ಲಕ್ಷ, ಇಷ್ಟು ಕೋಟಿ ಎಂದು ಹೇಳುತ್ತಾರೆ. ಆದರೆ, ಗ್ರಾಮಗಳು ಎಲ್ಲಿ ಅಭಿವೃದ್ಧಿಯಾಗುತ್ತಿವೆ.

ಕೇವಲ ಕಾಗದ ಪತ್ರಗಳಲ್ಲಿ ಮೂಲಭೂತ ಸೌಲಭ್ಯಕ್ಕೆ ಇಷ್ಟು ಅನುದಾನ ನೀಡಿದ್ದೇವೆ ಎಂದು ಹೇಳಿದರೆ ಸಾಲ  ದು, ಗ್ರಾಮಗಳಲ್ಲಿ ಮೊದಲು ಮೂಲಭೂತ ಸೌಕರ್ಯ ಕಲ್ಪಿಸಿ, ಜನಪ್ರತಿನಿಧಿಗಳು, ಅಧಿಕಾರಿಗಳು ಮಾತನಾಡ  ಬೇಕು ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಜನಪ್ರತಿನಿಧಿಗಳು, ಅಧಿಕಾರಿಗಳ ನಿರ್ಲಕ್ಷ್ಯ: ಸ್ವಾತಂತ್ರ್ಯ ಬಂದು 75 ವರ್ಷ ಕಳೆದರೂ ಗ್ರಾಮದ ಅಭಿವೃದ್ಧಿ ಕನಸಾಗಿಯೇ ಉಳಿದಿದೆ. ಗ್ರಾಮದಲ್ಲಿ ಶುದ್ಧ ಕುಡಿಯುವ ನೀರಿನ ಸೌಲಭ್ಯವಿಲ್ಲ. ಜನಪ್ರತಿನಿಧಿಗಳು, ಅಧಿಕಾರಿಗಳ ನಿರ್ಲಕ್ಷ್ಯದಿಂದ ಅಭಿವೃದ್ಧಿ ಹೆಸರೇ ಇಲ್ಲ. ಬಸ್‌ ಸೌಕರ್ಯವಿಲ್ಲದೆ ಗ್ರಾಮಸ್ಥರ ಪರದಾಟ ತಪ್ಪಿಲ್ಲ. ಮಹಾತ್ಮಾ ಗಾಂಧೀಜಿ ಅವರ ಗ್ರಾಮಗಳು ಅಭಿವೃದ್ದಿ ಹೊಂದಬೇಕು. ಗ್ರಾಮಗಳ ಅಭಿವೃದ್ಧಿಯೇ ಮೂಲಮಂತ್ರ ವಾಗಬೇಕು ಎನ್ನುವ ಸಂದೇಶವನ್ನು ಅನುಸರಿಸಿ ದ್ದರೆ, ಎಲ್ಲಾ ಗ್ರಾಮಗಳು ಮೂಲಭೂತ ಸೌಕರ್ಯಗಳಿಂದ ವಂಚಿತವಾಗುತ್ತಿರಲಿಲ್ಲ. ನಮ್ಮ ಸಮಸ್ಯೆ ಕೇಳು ವ ವರಿಲ್ಲ. ಅಷ್ಟು ಈ ಗ್ರಾಮ ವಂಚಿತವಾಗಿದೆ ಎಂದು ಗ್ರಾಮಸ್ಥರು ತಮ್ಮ ಅಳಲನ್ನು ತೋಡಿಕೊಳ್ಳುತ್ತಾರೆ.

ಸಮಸ್ಯೆಗೆ ಪರಿಹಾರ ಯಾವಾಗ: ಇ-ಹೊಸೂರು ಗ್ರಾಮದಲ್ಲಿ ಎಲ್ಲಾ ಸೌಕರ್ಯಗಳು ಇದ್ದರೂ, ಜನ ವಸತಿಗೆ ಮುಖ್ಯವಾಗಿ ಬೇಕಾಗಿರುವ ಕುಡಿಯುವ ನೀರು, ಸ್ಮಶಾನ, ಬಸ್‌ ಸೌಲಭ್ಯ ಸೇರಿದಂತೆ ಹಲವು ಸಮಸ್ಯೆಗಳು ಬಗೆಹರಿಯುವುದಾದರೂ ಯಾವಾಗ ಎಂದು ಎದುರು ನೋಡುವ ಪರಿಸ್ಥಿತಿ ನಿರ್ಮಾಣವಾಗಿದೆ.

ಗ್ರಾಮಸ್ಥರ ಆಕ್ರೋಶ: ಹೇಳಿ ಕೇಳಿ ಜಿಲ್ಲಾಡಳಿತ ಭವನಕ್ಕೆ ಸಂಪರ್ಕ ಕಲ್ಪಿಸುವ ರಸ್ತೆಯ ಮಾರ್ಗದಲ್ಲಿ ಬರುವ ಈ ಗ್ರಾಮಕ್ಕೆ ಮೂಲ ಸೌಲಭ್ಯ, ಶುದ್ಧ ಕುಡಿಯುವ ನೀರಿನ ಘಟಕ, ಸ್ಮಶಾನ ಜಾಗ ಸರ್ವೆ ಮತ್ತು ಬೀದಿದೀಪವಾಗಲೀ ಯಾವುದೂ ಕಲ್ಪಿಸಿಲ್ಲ. ರಾತ್ರಿ ವೇಳೆಯಂತೂ ಇಡೀ ಗ್ರಾಮ ಕತ್ತಲಿನಿಂದ ಆವೃತ್ತಗೊಂಡಿರುತ್ತದೆ ಎಂಬುದು ಗ್ರಾಮಸ್ಥರ ಆಕ್ರೋಶಕ್ಕೆ ಕಾರಣವಾಗಿದೆ.

ಸ್ಮಶಾನಕ್ಕೆ ಬೌಂಡ್ರಿ ಫಿಕ್ಸ್‌ ಮಾಡ್ತಿಲ್ಲ: ಸರ್ಕಾರದಿಂದ ಗ್ರಾಮದಲ್ಲಿ ಸ್ಮಶಾನಕ್ಕಾಗಿ ಸರ್ವೆ ನಂ.42ರಲ್ಲಿಯ 39 ಗುಂಟೆ ಜಾಗವನ್ನು ಕಾಯ್ದಿರಿಸಲಾಗಿದೆ. ಆದರೆ, ಪ್ರಭಾವಿಗಳ ಒತ್ತಡದಿಂದ ಬೌಂಡ್ರಿ ಫಿಕ್ಸ್‌ ಮಾಡದೆ ತಾಲೂಕು ತಹಶೀಲ್ದಾರ್‌ ಆಗಲಿ, ಜಾಲಿಗೆ ಗ್ರಾಪಂ ಪಿಡಿಒ ಅಥವಾ ಸ್ಥಳೀಯ ಜನಪ್ರತಿನಿಧಿಗಳಾಗಲೀ ಸಂಪೂ ರ್ಣ ವಾಗಿ ವಿಫ‌ಲರಾಗಿದ್ದಾರೆ. ಸುಮಾರು 100 ವರ್ಷಕ್ಕೂ ಮೇಲ್ಪಟ್ಟು ಗ್ರಾಮದಲ್ಲಿ ಪರಿಶಿಷ್ಟ ಜಾತಿ ಜನಾಂಗದವರು ವಾಸವಾಗಿದ್ದು, ಇದುವರೆಗೂ
ಗ್ರಾಮದಲ್ಲಿ ಮೂಲಭೂತ ಸೌಕರ್ಯಗಳಿಲ್ಲದೆ, ಅಕ್ಕಪಕ್ಕದ ಗ್ರಾಮಗಳ ಮೇಲೆ ಅವಲಂಬಿತರಾಗಿ ಬದುಕು ನಡೆಸುವಂತ ದುಸ್ಥಿತಿ ಎದುರಾಗಿದೆ.

ಹೌದು, ಇಂಥ ಪರಿಸ್ಥಿತಿ ಇರುವುದು ಬೇರೆಲ್ಲೂ ಅಲ್ಲ, ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಹೊಂದಿರುವ ದೇವನಹಳ್ಳಿ ತಾಲೂಕಿನ ಐವಿಸಿ ರಸ್ತೆ ಸಂಪರ್ಕದ ಇ-ಹೊಸೂರು ಗ್ರಾಮಸ್ಥರ ಸಮಸ್ಯೆಯಾಗಿದೆ. ಸ್ವಾತಂತ್ರ್ಯ ಬಂದು 74 ವರ್ಷ ಕಳೆದರೂ ಗ್ರಾಮಕ್ಕೆ ಶುದ್ಧ ಕುಡಿ ಯುವ ನೀರಿನ ಭಾಗ್ಯವಿಲ್ಲದಿರುವುದು ದೌರ್ಭಾಗ್ಯವಾಗಿದೆ.

ಕುಡಿಯುವ ನೀರಿಗೂ ಪರದಾಟ: ಬೋರ್‌ವೆಲ್‌ ನೀರು ಕುಡಿಯಲು ಯೋಗ್ಯವಿಲ್ಲದ ಕಾರಣದಿಂದ ಗ್ರಾಮಸ್ಥರು ಶುದ್ಧ ಕುಡಿಯುವ ನೀರಿಗಾಗಿ ಅಕ್ಕಪಕ್ಕದ ದೂರದ ಗ್ರಾಮಗಳಿಗೆ ಹೋಗಿ, ಅಲ್ಲಿನ ಶುದ್ಧ ಕುಡಿಯುವ ನೀರಿನ ಘಟಕದಿಂದ ಕುಡಿಯುವ ನೀರು ತಂದು ಉಪಯೋಗಿಸುತ್ತಿದ್ದು, ಬೋರ್‌ವೆಲ್‌ ನೀರನ್ನು ಇತರೆ ಬಳಕೆಗೆ ಬಳಸಿಕೊಳ್ಳಲಾಗುತ್ತಿದೆ. ಈ ಗ್ರಾಮದಲ್ಲಿ ಕುಡಿಯುವ ನೀರಿಗೂ ಪರದಾಟ ತಪ್ಪಿಲ್ಲ. ಬಸ್‌ ಸೌಕರ್ಯವಿಲ್ಲದೆ ಗ್ರಾಮದ ಸುಮಾರು ಕಿ.ಮೀ. ನಡೆದುಕೊಂಡೇ ಹೋಗುವ ಪರಿಸ್ಥಿತಿ ಇದೆ ಎಂದು ಗ್ರಾಮಸ್ಥರು ತಮ್ಮ ಅಳಲನ್ನು ತೋಡಿಕೊಂಡಿದ್ದಾರೆ.

ಇ-ಹೊಸೂರು ಗ್ರಾಮಕ್ಕೆ ತಾವು ಶಾಸಕರಾದ ಮೇಲೆ 50 ಲಕ್ಷ ರೂ.ಗಳ ಕಾಂಕ್ರಿಟ್‌ ರಸ್ತೆ ಕಾಮಗಾರಿ ಮಾಡಿಸಲಾಗಿದೆ. ಸ್ವಾತಂತ್ರ್ಯ ಬಂದು 75 ವರ್ಷ ಕಳೆದಿದ್ದರೂ ಅಷ್ಟು ಅಭಿವೃದ್ಧಿ ಕೆಲಸಗಳು ಆ ಹಳ್ಳಿಯಲ್ಲಿ ಆಗಿರಲಿಲ್ಲ. ಸ್ಮಶಾನ ಜಾಗ ಮಂಜೂರಾತಿಗೆ ಸಂಬಂಧಪಟ್ಟಂತೆ ಅಧಿಕಾರಿಗಳಿಗೆ ಸೂಚಿಸಿದ್ದೇನೆ. ತಾಲೂಕಿನ 298 ಹಳ್ಳಿಗಳ ಅಭಿವೃದ್ಧಿಗೆ ಸರ್ಕಾರದಿಂದ ಬರುವ ಅನುದಾನಗಳನ್ನು ಹಂಚಿಕೆ ಮಾಡಿ ನೀಡಲಾಗುತ್ತದೆ.
● ಎಲ್‌.ಎನ್‌.ನಾರಾಯಣಸ್ವಾಮಿ, ಶಾಸಕ

ಗ್ರಾಮಗಳ ಅಭಿವೃದ್ಧಿಗೆ ಸರ್ಕಾರ ಕೋಟ್ಯಂತರ ರೂ. ಖರ್ಚು ಮಾಡುತ್ತಿದ್ದರೂ, ಇ-ಹೊಸೂರು ಗ್ರಾಮದಲ್ಲಿ ಮೂಲಭೂತ ಸೌಲಭ್ಯ ಕೊರತೆ ಎದ್ದು ಕಾಣುತ್ತಿದೆ. ಇನ್ನಾದರೂ ಸರ್ಕಾರಗಳು ಗ್ರಾಮಗಳ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ ನೀಡಬೇಕು.
● ನಾರಾಯಣಸ್ವಾಮಿ, ವಕೀಲ

ವಿಮಾನ ನಿಲ್ದಾಣ ಹೊಂದಿರುವ ತಾಲೂಕಿನಲ್ಲಿ ಇಂದಿಗೂ ಗ್ರಾಮಗಳು ಅಭಿವೃದ್ಧಿ ಕಾಣದೆ ಮೂಲೆಗುಂಪಾಗಿವೆ. ಶತಮಾನ ಕಳೆದರೂ ಈ ಗ್ರಾಮದಲ್ಲಿನ ಜನರು ಸೌಕರ್ಯದಿಂದ ವಂಚಿತರಾಗಿದ್ದಾರೆ. ಮುಖ್ಯವಾಗಿ ಗ್ರಾಮದಲ್ಲಿ ಕುಡಿಯುವ ನೀರು, ಬಸ್‌ ಸೌಲಭ್ಯ, ಸ್ಮಶಾನ, ಹೈಮಾಸ್ಕ್ ಲೈಟ್‌ ಅಳವಡಿಕೆ ಮಾಡುವ ಅವಶ್ಯವಿದೆ. ಕೂಡಲೇ ಅಧಿಕಾರಿಗಳು, ಜನಪ್ರತಿನಿಧಿಗಳು ಗ್ರಾಮಕ್ಕೆ ಭೇಟಿ ನೀಡಿ, ಇಲ್ಲಿನ ಸಮಸ್ಯೆಗಳನ್ನು ಪರಿಹರಿಸಬೇಕು.
● ಮುರಳಿ, ಇ-ಹೊಸೂರು

ಸ್ಮಶಾನ ಜಾಗಕ್ಕೆ ಸಂಬಂಧಿಸಿದಂತೆ, ಕುಂದಾಣ ನಾಡ ಕಚೇರಿಯಿಂದ ಬಂದಿರುವ ಶಿಫಾರಸ್ಸಿನ ಪತ್ರವನ್ನು ಪರಿಶೀಲಿಸಿ, ಕೂಡಲೇ ಜಿಲ್ಲಾಧಿಕಾರಿಗಳ ಗಮನಕ್ಕೆ ತಂದು ಮುಂದಿನ ಕ್ರಮವನ್ನು ಕೈಗೊಳ್ಳಲಾಗುವುದು.
● ತೇಜಸ್‌ ಕುಮಾರ್‌, ಉಪವಿಭಾಗಾಧಿಕಾರಿ

●ಎಸ್‌.ಮಹೇಶ್‌

ಟಾಪ್ ನ್ಯೂಸ್

Turkey: ಟೇಕ್‌ ಆಫ್‌ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು

Turkey: ಟೇಕ್‌ ಆಫ್‌ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು

87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!

87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!

ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ

ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ

Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ

Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ

9

Mumbai: ಕಾರು ಢಿಕ್ಕಿ; ರಸ್ತೆ ಬದಿ ಆಡುತ್ತಿದ್ದ 4ರ ಬಾಲಕ ಸ್ಥಳದಲ್ಲೇ ಮೃ*ತ್ಯು

CT Ravi; ಚಿಕ್ಕಮಗಳೂರಿಗೆ ಬಂದ ಕೂಡಲೇ ಟೆಂಪಲ್‌ ರನ್ ಆರಂಭಿಸಿದ ಸಿ.ಟಿ.ರವಿ

CT Ravi; ಚಿಕ್ಕಮಗಳೂರಿಗೆ ಬಂದ ಕೂಡಲೇ ಟೆಂಪಲ್‌ ರನ್ ಆರಂಭಿಸಿದ ಸಿ.ಟಿ.ರವಿ

Minister Priyank Kharge stays away from Jayadeva Hospital inauguration ceremony

Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Nelamangala: ಐಷಾರಾಮಿ ಕಾರಿನ ಮೇಲೆ ಬಿದ್ದ ಕಂಟೈನರ್… ಒಂದೇ ಕುಟುಂಬದ 6 ಮಂದಿ ಸಾವು

Nelamangala: ಐಷಾರಾಮಿ ಕಾರಿನ ಮೇಲೆ ಬಿದ್ದ ಕಂಟೈನರ್… ಒಂದೇ ಕುಟುಂಬದ 6 ಮಂದಿ ಸಾ*ವು

4

Crime: ರೌಡಿಶೀಟರ್‌ ಕೊಲೆ ಯತ್ನ; ಆರೋಪಿಗೆ ಗುಂಡೇಟು

Doddaballapur: ಎರಡೂ ಬಸ್‌ ನಿಲ್ದಾಣಕ್ಕೆ ಬೇಕಿದೆ ಕಾಯಕಲ್ಪ!

Doddaballapur: ಎರಡೂ ಬಸ್‌ ನಿಲ್ದಾಣಕ್ಕೆ ಬೇಕಿದೆ ಕಾಯಕಲ್ಪ!

11

Lack of Bus stand: ಹೊಸಕೋಟೆ; ಬಸ್‌ ನಿಲ್ದಾಣವಿಲ್ಲದೆ ಪರದಾಟ!

Leopard: ನೆಲಮಂಗಲ ಸಮೀಪ ಚಿರತೆ ಸೆರೆ: ನರಭಕ್ಷಕ ಇದೇನಾ? ವರದಿ ನಿರೀಕ್ಷೆ

Leopard: ನೆಲಮಂಗಲ ಸಮೀಪ ಚಿರತೆ ಸೆರೆ: ನರಭಕ್ಷಕ ಇದೇನಾ? ವರದಿ ನಿರೀಕ್ಷೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Turkey: ಟೇಕ್‌ ಆಫ್‌ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು

Turkey: ಟೇಕ್‌ ಆಫ್‌ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು

87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!

87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!

6

Mangaluru: ಕ್ರಿಸ್ಮಸ್‌ ಸಂಭ್ರಮ; ‘ಮಿನುಗು ತಾರೆ’ಗಳ ಮೆರುಗು

5

Health: ಶೀಘ್ರ ಕ್ಯಾನ್ಸರ್‌ ಪತ್ತೆ, ಶಸ್ತ್ರಚಿಕಿತ್ಸೆ ತಿಳಿವಳಿಕೆ ಯಾಕೆ ಮುಖ್ಯ?

ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ

ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.