![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Apr 9, 2020, 2:34 PM IST
ದೊಡ್ಡಬಳ್ಳಾಪುರ: ಕೋವಿಡ್ 19 ಲಾಕ್‌ಡೌನ್‌ನಿಂದ ಮನೆಯಲ್ಲೆ ಎಸ್‌ಎಸ್‌ಎಲ್‌ಸಿ ಪರೀಕ್ಷೆಗೆ ಸಿದ್ಧಗೊಳ್ಳುತ್ತಿರುವ ವಿದ್ಯಾರ್ಥಿಗಳನ್ನು ಶಿಕ್ಷಕರು ಮೊಬೈಲ್ ಮೂಲಕ ಸಂಪರ್ಕ ಹೊಂದಿದ್ದಾರೆ. ದೂರ ಸಂಪರ್ಕ ಶಿಕ್ಷಣ ಚಿಂತನೆಯುಳ್ಳ ಪ್ರಯೋಗವನ್ನು ನಗರದ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲೆ ವಿಭಾಗದ ಶಿಕ್ಷಕರು ಪ್ರಾರಂಭಿಸಿದ್ದಾರೆ.
ವಿದ್ಯಾರ್ಥಿಗಳ ಪೋಷಕರ ಮೊಬೈಲ್ ನಂಬರ್‌ಗಳನ್ನು ಸಂಗ್ರಹಿಸಿ, ಶಿಕ್ಷಕರು ವಾಟ್ಸ್‌ಆ್ಯಪ್ ಗ್ರೂಪ್ ಮಾಡಿಕೊಂಡಿದ್ದಾರೆ. ಕನ್ನಡ ಮಾಧ್ಯಮ ಮತ್ತು ಇಂಗ್ಲಿಷ್ ಮಾಧ್ಯಮ ವಿದ್ಯಾರ್ಥಿಗಳಾಗಿ ಪ್ರತ್ಯೇಕವಾಗಿ ಎರಡು ಗುಂಪು ಮಾಡಿದ್ದಾರೆ. ವಿದ್ಯಾರ್ಥಿಗಳಿಗೆ ವಿಶೇಷ ಮಾರ್ಗದರ್ಶನಕ್ಕಾಗಿ ಪ್ರತೇಕ ವೇಳಾಪಟ್ಟಿಯನ್ನು ಸಿದ್ಧಪಡಿಸಿಕೊಂಡಿದ್ದಾರೆ. ಶಿಕ್ಷಕರು ಪ್ರತಿ ವಿಷಯವಾರು ಪ್ರಶ್ನೆ ಸಿದ್ಧಪಡಿಸಿ ವಿದ್ಯಾರ್ಥಿಗಳಿಗೆ ವಾಟ್ಸ್‌ಆ್ಯಪ್ ಗ್ರೂಪ್‌ನಲ್ಲಿ ಕಳುಹಿಸುತ್ತಾರೆ. ವಿದ್ಯಾರ್ಥಿಗಳು ಈ ಪ್ರಶ್ನೆಗಳಿಗೆ ಮನೆಯಲ್ಲಿ ಉತ್ತರ ಸಿದ್ಧಪಡಿಸುತ್ತಾರೆ. ಮಾದರಿ ಪ್ರಶ್ನೆಪತ್ರಿಕೆಗಳು, ಮಾದರಿ ಉತ್ತರಗಳು, ಚಿತ್ರಗಳು, ಭೂಪಟ ನಕ್ಷೆ ಮುಂತಾದ ಪರೀಕ್ಷೆಗೆ ಅಗತ್ಯವಿರುವ ವಿಷಯಗಳನ್ನು ಶಿಕ್ಷಕರು ವಿದ್ಯಾರ್ಥಿಗಳಿಗೆ ಮೊಬೈಲ್ ಮೂಲಕ ತಿಳಿಸುತ್ತಿದ್ದಾರೆ.
ಒಂದು ದಿನಕ್ಕೆ ಎರಡು ವಿಷಯಗಳ ಮಾಹಿತಿ ಮತ್ತು ಮಾರ್ಗದರ್ಶನ ನೀಡಲಾಗುತ್ತಿದೆ. ವಿದ್ಯಾರ್ಥಿಗಳು ಆ ಪ್ರಶ್ನೆಗಳಿಗೆ ಉತ್ತರ ಬರೆದು ಮಧ್ಯಾಹ್ನ ವೇಳೆಗೆ ಕಳುಹಿಸುತ್ತಾರೆ. ಮಧ್ಯಾಹ್ನ ನಂತರ ಒಬ್ಬ ಶಿಕ್ಷಕರು ಮತ್ತೂಂದು ವಿಷಯದ ಪ್ರಶ್ನೆ ಕಳುಹಿಸುತ್ತಾರೆ. ಸ್ಮಾರ್ಟ್ ಫೋನ್ ಹೊಂದಿಲ್ಲದ ಮತ್ತು ವಾಟ್ಸ್‌ಆ್ಯಪ್ ಹೊಂದಿಲ್ಲದ ಪೋಷಕರ ಮೊಬೈಲ್‌ಗೆ ಈ ಪದ್ಧತಿಯಿಂದ ಅನುಕೂಲವಿಲ್ಲ. ಇಂತಹ ವಿದ್ಯಾರ್ಥಿಗಳು ತಮ್ಮ ಸಹಪಾಠಿಗಳೊಂದಿಗೆ ಮೊಬೈಲ್ ಮೂಲಕ ಮಾತನಾಡಿ, ಪ್ರಶ್ನೆ ಬರೆದುಕೊಂಡು ಉತ್ತರ ಬರೆಯುತ್ತಿದ್ದಾರೆ ಎಂದು ಸರಕಾರಿ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲೆ ವಿಭಾಗದ ಉಪಪ್ರಾಂಶುಪಾಲ ಆರ್.ಮಹಾದೇವ್ ಮಾಹಿತಿ ನೀಡಿದ್ದಾರೆ.
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
You seem to have an Ad Blocker on.
To continue reading, please turn it off or whitelist Udayavani.