ರೈತರ, ಕಾರ್ಮಿಕರ ಸಮಸ್ಯೆ ಪರಿಹಾರಕ್ಕೆ ಒತ್ತು

ಸಂಖ್ಯೆ 6 ಎಂಬುವುದು ಲಕ್ಷ್ಮೀಯ ಸಂಕೇತವಾಗಿದೆ

Team Udayavani, Jul 11, 2022, 5:43 PM IST

ರೈತರ, ಕಾರ್ಮಿಕರ ಸಮಸ್ಯೆ ಪರಿಹಾರಕ್ಕೆ ಒತ್ತು

ದೇವನಹಳ್ಳಿ: ರೈತರು ಮತ್ತು ಕಾರ್ಮಿಕರು ದೇಶದ ಬೆನ್ನೆಲುಬು. ರೈತರು ನಾಡಿಗೆ ಅನ್ನ ನೀಡುವ ಅನ್ನದಾತರು. ಕಾರ್ಮಿಕರು ಒಂದು ದಿವಸ ಕೆಲಸ ಬಿಟ್ಟರೆ ಪ್ರಪಂಚವೇ ಇಲ್ಲದಂತಾಗುತ್ತದೆ. ರೈತರ, ಕಾರ್ಮಿಕರ ಸಮಸ್ಯೆ ಪರಿಹಾರಕ್ಕೆ ನಮ್ಮ ವೇದಿಕೆ ಹೆಚ್ಚಿನ ಒತ್ತನ್ನು ನೀಡಲಾಗುವುದು ಎಂದು ಅಖೀಲ ಕರ್ನಾಟಕ ರೈತರು ಮತ್ತು ಕಾರ್ಮಿಕ ಹಿತರಕ್ಷಣೆ ವೇದಿಕೆ ಸಂಸ್ಥಾಪಕ ರಾಜ್ಯಾಧ್ಯಕ್ಷ ಎಚ್‌.ಡಿ. ವೆಂಕಟೇಶ್‌ ತಿಳಿಸಿದರು.

ಪಟ್ಟಣದ ಪ್ರವಾಸಿ ಮಂದಿರದಲ್ಲಿ ಅಖೀಲ ಕರ್ನಾಟಕ ರೈತರು ಮತ್ತು ಕಾರ್ಮಿಕ ಹಿತರಕ್ಷಣೆ ವೇದಿಕೆ ವತಿಯಿಂದ ಏರ್ಪಡಿಸಿದ್ದ ರಾಜ್ಯಮಟ್ಟದ ಪದಾಧಿಕಾರಿಗಳ ನೇಮಕ ಸಭೆಯಲ್ಲಿ ಮಾತನಾಡಿದ ಅವರು, ದೂರು ಮತ್ತು ಹಣ ಮಾಡುವ ಉದ್ದೇಶ ಹೊಂದಿದವರನ್ನು ಸಂಘದಿಂದ ನೇರವಾಗಿ ಕೈಬಿಡಲಾಗುತ್ತದೆ. ಪ್ರಾಮಾಣಿಕವಾಗಿ ಜನರ ಸಮಸ್ಯೆಗಳಿಗೆ ಸ್ಪಂದಿಸಿ, ಸದಾ ಸಮಾಜ ಸೇವೆಯಲ್ಲಿ ತೊಡಗಿಸಿಕೊಳ್ಳಬೇಕು. ಯಾವುದೇ ಆಸೆ, ಆಮಿಷಗಳು ಸಂಘಕ್ಕೆ ಅವಕಾಶವಿಲ್ಲ. ಎಲ್ಲರೂ ಒಗ್ಗೂಡಿ ಕೆಲಸ ಮಾಡಿದರೆ ಯಶಸ್ಸು ಕಾಣಲು ಸಾಧ್ಯ ಎಂದರು.

ಸಂಘಟನೆಯಲ್ಲಿರುವ ಪ್ರತಿಯೊಬ್ಬರಿಗೂ ಗ್ರೂಪ್‌ ಮಾಡಿಕೊಳ್ಳಲಾಗುತ್ತದೆ. ಸ್ಕ್ಯಾನಿಂಗ್‌ ಸೌಲಭ್ಯದ ಮೂಲಕ ಸಂಘಕ್ಕೆ ಇಂತಿಷ್ಟು ಹಣವನ್ನು ಕ್ರೂಢೀಕರಿಸಿ, ಸಂಘದ ದೇಯೋದ್ದೇಶಗಳಿಗೆ ಖರ್ಚು ವೆಚ್ಚ ಭರಿಸಲು ಸಹಕಾರಿಯಾಗುತ್ತದೆ. ಯಾವುದೇ ಸಂಘಟನೆ ಬಲಿಷ್ಠವಾಗಿ ಬೆಳೆಯಬೇಕಾದರೆ ಸಮಯ ಪಾಲನೆ ಅತೀ ಮು ಖ್ಯವಾಗಿರುತ್ತದೆ. ಸಂಘಟನೆಯನ್ನು ವಿಸ್ತರಿಸಿಕೊಂಡು ಹೋಗುವ ಜವಾಬ್ದಾರಿಯನ್ನು ನಮ್ಮ ಸಂಘಟನೆಯಿಂದ 6 ಸ್ಥಂಭಗಳ ಆಧಾರದಲ್ಲಿ ಮಾಡಲಾಗಿದೆ. ಸಂಖ್ಯೆ 6 ಎಂಬುವುದು ಲಕ್ಷ್ಮೀಯ ಸಂಕೇತವಾಗಿದೆ ಎಂದರು.

ಸಂಘಟನೆಗೆ ಪ್ರತಿಯೊಬ್ಬರೂ ಕೈಜೋಡಿಸಿ: ಸಂಘಟನೆಯಲ್ಲಿ 6 ಪ್ರಮುಖ ರೈತರ, ಕಾರ್ಮಿಕರ, ಕಲಾವಿದರ, ಯೋಗ, ಕ್ರೀಡೆ ಮತ್ತು ಮಹಿಳಾ ಸಬಲೀಕರಣ ಸೇರಿದಂತೆ ಪರಿಣಿತರಾಗಿರುವ ಮುಖಂಡರನ್ನು ರಾಜ್ಯಮಟ್ಟದಲ್ಲಿ ವಿವಿಧ ಜವಾಬ್ದಾರಿಗಳನ್ನು ಕೊಟ್ಟು ಸಂಘಟಿತರನ್ನಾಗಿಸಲಾಗಿದೆ. ಮುಂದಿನ ದಿನಗಳಲ್ಲಿ ಸಂಘವನ್ನು ಉತ್ತಮ ರೀತಿಯಲ್ಲಿ ಬೆಳೆಸುವ ನಿಟ್ಟಿನಲ್ಲಿ ಪ್ರತಿಯೊಬ್ಬರೂ ಕೈಜೋಡಿಸಬೇಕು ಎಂದರು.

ನೂತನ ರಾಜ್ಯಾಧ್ಯಕ್ಷ ಟಿ.ಎಂ. ಸಹದೇಶ್‌ ಮಾತನಾಡಿ, ಕಷ್ಟದಲ್ಲಿ ಇರುವವರಿಗೆ ಸಹಯವನ್ನು ಮಾಡಬೇಕು. ರೈತರಿಗೆ ಕೃಷಿ ಇಲಾಖೆ, ತೋಟಗಾರಿಕೆ ಇಲಾಖೆ, ರೇಷ್ಮೆ ಇಲಾಖೆ, ಇತರೆ ಇಲಾಖೆಗಳಿಂದ ಬರುವ ಸೌಲಭ್ಯ ತಲುಪಿಸಬೇಕು. ಕಾರ್ಮಿಕ ಇಲಾಖೆಯಿಂದ ಕಾರ್ಮಿಕರಿಗೆ ಸಾಕಷ್ಟು. ಯೋಜನೆಗಳಿದ್ದು, ಕಾರ್ಮಿಕರು ಸದುಪ ಯೋಗಪಡಿಸಿಕೊಳ್ಳಬೇಕು ಎಂದರು.

ನೇಮಕಾತಿ ಪತ್ರ ವಿತರಣೆ: ಅಖಿಲ ಕರ್ನಾಟಕ ರೈತರು ಮತ್ತು ಕಾರ್ಮಿಕ ಹಿತರಕ್ಷಣೆ ವೇದಿಕೆ ಸಂಘಟನೆಯ ನೂತನ ಪದಾಧಿಕಾರಿಗಳಿಗೆ ಸಂಸ್ಥಾಪಕ ಅಧ್ಯಕ್ಷ ಎಚ್‌. ಡಿ. ವೆಂಕಟೇಶ್‌ ನೇತೃತ್ವದಲ್ಲಿ ನೇಮಕಾತಿ ಪತ್ರ ವಿತರಿ ಸಲಾಯಿತು. ರಾಜ್ಯ ಗೌರವಾಧ್ಯಕ್ಷ ಟಿ. ಎಂ.ಸಹದೇಶ್‌, ಪ್ರಧಾನ ಕಾರ್ಯದರ್ಶಿ ಡಿ. ಅನಿಲ್‌ ಕುಮಾರ್‌, ಕಾರ್ಮಿಕ ಮತ್ತು ಕೂಲಿಕಾರ್ಮಿಕರ ಅಧ್ಯಕ್ಷ ಅನಿಲ್‌ ಕುಮಾರ್‌, ರೈತ ಸಂಘಟನೆ ಅಧ್ಯಕ್ಷ ಶಿವಕುಮಾರ್‌, ಆಟೋ ಚಾಲಕರ ಘಟಕದ ಅಧ್ಯಕ್ಷ ಎಂ. ನಾರಾಯಣ ಸ್ವಾಮಿ, ವಿದ್ಯಾರ್ಥಿ ಮತ್ತು ಕ್ರೀಡಾ ಘಟಕದ ಅಧ್ಯಕ್ಷ ಹರಿನಾರಾಯಣ, ಮಹಿಳಾ ಅಧ್ಯಕ್ಷೆ ಎಸ್‌.ಜಯಂತಿ, ಕಲಾವಿದರ ಘಟಕದ ಅಧ್ಯಕ್ಷ ಎಲ್‌. ಮಂಜುನಾಥ್‌, ಪದಾಧಿಕಾರಿ ಶ್ರೀಕಾಂತ್‌, ಮಂಜುನಾಥ್‌, ಮೇಘನಾ ಹಾಗೂ ಮತ್ತಿತರರು ಇದ್ದರು.

ಟಾಪ್ ನ್ಯೂಸ್

Kuwait-PM

Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್‌ನ ಅತ್ಯುನ್ನತ ಗೌರವ ಪ್ರದಾನ

police crime

Delhi; ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕಾರ್ಯಾಚರಣೆ: 175 ಮಂದಿ ಪತ್ತೆ

Agumbe Ghat: ಟ್ರಾಫಿಕ್ ಜಾಮ್, ವಾಹನ ಸವಾರರ ಪರದಾಟ..!

Agumbe Ghat: ಟ್ರಾಫಿಕ್ ಜಾಮ್, ವಾಹನ ಸವಾರರ ಪರದಾಟ..!

mohan bhagwat

Mohan Bhagwat; ತಿಳುವಳಿಕೆಯ ಕೊರತೆಯಿಂದ ಧರ್ಮದ ಹೆಸರಿನಲ್ಲಿ ಶೋಷಣೆ

Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು

Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು

Allu Arjun: ನಟ ಅಲ್ಲು ಅರ್ಜುನ್‌ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ

Allu Arjun: ನಟ ಅಲ್ಲು ಅರ್ಜುನ್‌ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ

Turkey: ಟೇಕ್‌ ಆಫ್‌ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು

Turkey: ಟೇಕ್‌ ಆಫ್‌ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Nelamangala: ಐಷಾರಾಮಿ ಕಾರಿನ ಮೇಲೆ ಬಿದ್ದ ಕಂಟೈನರ್… ಒಂದೇ ಕುಟುಂಬದ 6 ಮಂದಿ ಸಾವು

Nelamangala: ಐಷಾರಾಮಿ ಕಾರಿನ ಮೇಲೆ ಬಿದ್ದ ಕಂಟೈನರ್… ಒಂದೇ ಕುಟುಂಬದ 6 ಮಂದಿ ಸಾ*ವು

4

Crime: ರೌಡಿಶೀಟರ್‌ ಕೊಲೆ ಯತ್ನ; ಆರೋಪಿಗೆ ಗುಂಡೇಟು

Doddaballapur: ಎರಡೂ ಬಸ್‌ ನಿಲ್ದಾಣಕ್ಕೆ ಬೇಕಿದೆ ಕಾಯಕಲ್ಪ!

Doddaballapur: ಎರಡೂ ಬಸ್‌ ನಿಲ್ದಾಣಕ್ಕೆ ಬೇಕಿದೆ ಕಾಯಕಲ್ಪ!

11

Lack of Bus stand: ಹೊಸಕೋಟೆ; ಬಸ್‌ ನಿಲ್ದಾಣವಿಲ್ಲದೆ ಪರದಾಟ!

Leopard: ನೆಲಮಂಗಲ ಸಮೀಪ ಚಿರತೆ ಸೆರೆ: ನರಭಕ್ಷಕ ಇದೇನಾ? ವರದಿ ನಿರೀಕ್ಷೆ

Leopard: ನೆಲಮಂಗಲ ಸಮೀಪ ಚಿರತೆ ಸೆರೆ: ನರಭಕ್ಷಕ ಇದೇನಾ? ವರದಿ ನಿರೀಕ್ಷೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Gundlupete ಬಂಡೀಪುರ: ಗಂಡಾನೆ ಕಳೇಬರ ಪತ್ತೆ

Gundlupete ಬಂಡೀಪುರ: ಗಂಡಾನೆ ಕಳೇಬರ ಪತ್ತೆ

Kuwait-PM

Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್‌ನ ಅತ್ಯುನ್ನತ ಗೌರವ ಪ್ರದಾನ

police crime

Delhi; ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕಾರ್ಯಾಚರಣೆ: 175 ಮಂದಿ ಪತ್ತೆ

Agumbe Ghat: ಟ್ರಾಫಿಕ್ ಜಾಮ್, ವಾಹನ ಸವಾರರ ಪರದಾಟ..!

Agumbe Ghat: ಟ್ರಾಫಿಕ್ ಜಾಮ್, ವಾಹನ ಸವಾರರ ಪರದಾಟ..!

mohan bhagwat

Mohan Bhagwat; ತಿಳುವಳಿಕೆಯ ಕೊರತೆಯಿಂದ ಧರ್ಮದ ಹೆಸರಿನಲ್ಲಿ ಶೋಷಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.