ಪ್ರತಿಯೊಬ್ಬರಿಗೂ ಕಾನೂನಿನ ಅರಿವು ಅಗತ್ಯ

Team Udayavani, Dec 21, 2019, 3:42 PM IST

br-tdy-1

ದೊಡ್ಡಬಳ್ಳಾಪುರ : ಜನರಲ್ಲಿ ಕಾನೂನು ಅರಿವಿನ ಕೊರತೆ ಯಿಂದಾಗಿ ಅಹಿತಕರ ಘಟನೆಗಳು ನಡೆಯುತ್ತಿದ್ದು, ಹೀಗಾಗಿ ಪ್ರತಿ ಯೊಬ್ಬರೂ ಕಾನೂನು ಬಗ್ಗೆ ಅರಿಯುವ ಅನಿವಾರ್ಯವಿದ್ದು, ಕಾನೂನು ಸೇವೆಗಳ ಪ್ರಾಧಿಕಾರದಿಂದ ಜನಸಾಮಾನ್ಯರಿಗೆ ಕಾನೂನು ಅರಿವು ಮೂಡಿ ಸಲಾಗುತ್ತಿದೆ ಎಂದು 4ನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾ ಲಯದ ನ್ಯಾಯಾಧೀಶರಾದ ಸಿ.ಚಂದ್ರಶೇಖರ್‌ ತಿಳಿಸಿದರು.

ನ್ಯಾಯಾಲಯದ ಆವರಣದಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ,ತಾಲೂಕು ಕಾನೂನು ಸೇವೆಗಳ ಸಮಿತಿ, ದೊಡ್ಡಬಳ್ಳಾಪುರ ತಾಲೂಕು ವಕೀಲರ ಸಂಘ, ತಾಲೂಕು ಆಡಳಿತ, ಶಿಕ್ಷಣ ಇಲಾಖೆ ಸಹಯೋಗದಲ್ಲಿ ಡಿ.20ರಿಂದ 23ರವರೆಗೆ ಹಮ್ಮಿಕೊಂಡಿರುವ ಕಾನೂನು ಸಾಕ್ಷರತಾ ರಥದ ಮೂಲಕ ಕಾನೂನು ಅರಿವು ನೆರವು ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.

ನಿತ್ಯ ಜೀವನದಲ್ಲಿ ಕಾನೂನನ್ನು ಪಾಲಿಸಿದರೆ ನೆಮ್ಮದಿ ಕಾಣಬಹುದು. ಕಾನೂನಿನ ಅರಿವಿಲ್ಲ ಎಂದ ಮಾತ್ರಕ್ಕೆ ಶಿಕ್ಷೆಯಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ.ಪ್ರತಿಯೊಬ್ಬರು ಕಾನೂನು ಅರಿಯುವುದರ ಜತೆಗೆ ಪಾಲನೆಗೆ ಮುಂದಾಗಬೇಕು. ಇದರಲ್ಲಿ ಸಮಾಜದ ಶಾಂತಿ, ನೆಮ್ಮದಿ ಬದುಕು ಅಡಗಿದೆ ಜನರಲ್ಲಿ ಕಾನೂನು ಅರಿವಿನ ಕೊರತೆಯಿಂದಾಗಿ ಅಹಿತಕರ ಘಟನೆಗಳು ನಡೆಯುತ್ತಿದ್ದು, ಅನೇಕರು ಶಿಕ್ಷೆಗೆ ಗುರಿಯಾಗುತ್ತಿದ್ದಾರೆ.

ಹೀಗಾಗಿ ಪ್ರತಿಯೊಬ್ಬರೂ ಕಾನೂನು ಬಗ್ಗೆ ಅರಿಯುವ ಅನಿವಾರ್ಯವಿದೆ. ಇಂದು ಅನೇಕ ವ್ಯಾಜ್ಯಗಳು ಕೋರ್ಟ್‌ ಮೆಟ್ಟಿಲೇರುತ್ತಿವೆ. ಜನರಲ್ಲಿ ಕಾನೂನು ಅರಿವಿನ ಕೊರತೆಯೇ ಇದಕ್ಕೆ ಮುಖ್ಯ ಕಾರಣವಾಗಿದ್ದು , ಶಾಲಾ ಕಾಲೇಜುಗಳಲ್ಲಿ ಹಾಗೂ ಗ್ರಾಮ ಪಂಚಾಯಿತಿಗಳಲ್ಲಿ ಕಾನೂನು ಅರಿವು ನೆರವು ಕಾರ್ಯಕ್ರಮ ರೂಪಿಸಲಾಗಿದೆ. ಬಾಲ ಕಾರ್ಮಿಕ  ವಿರೋ— ಕಾಯ್ದೆ, ಮೋಟಾರು ವಾಹನ ಕಾಯ್ದೆ , ಸ್ತ್ರೀ ಬ್ರೂಣ ಹತ್ಯೆ,ಹಿರಿಯ ನಾಗರಿಕರ ಹಿತರಕ್ಷಣಾ ಕಾಯ್ದೆ, ಭೂಸೂದಾರಣಾ ಕಾಯ್ದೆ ಮೊದಲಾದ ವಿವಿಧ ವಿಚಾರಗಳಿಗೆ ಸಂಬಂಧಪಟ್ಟಂತೆ ಇರುವ ಕಾನೂನುಗಳ ಕುರಿತು ಸಂಪನ್ಮೂಲ ವ್ಯಕ್ತಿಗಳು ತಿಳಿಸಲಿದ್ದಾರೆ. ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದರು.

ಉಪವಿಭಾಗಾಧಿಕಾರಿ ಸಿ.ಮಂಜುನಾಥ್‌ ಮಾತ ನಾಡಿ, ಈ ದೇಶದ ಕಾನೂನುಗಳನ್ನು ನಾವು ಪರಿಪಾಲನೆ ಮಾಡಲೇಬೇಕು. ಇಲ್ಲದಿದ್ದರೆ ನಮ್ಮ ಹಕ್ಕುಗಳಿಂದ ವಂಚಿತರಾಗಬೇಕಾಗುತ್ತದೆ. ಕಾನೂನು ನಮ್ಮ ವಿರುದ್ಧವಾಗಿ ಅಲ್ಲ ನಮ್ಮ ರಕ್ಷಣೆಗಾಗಿಯೇ ಇವೆ. ತಪ್ಪಿತಸ್ಥರಿಗೆ ಶಿಕ್ಷೆಕೂಡ ಕಾನೂನಿನಿಂದ ಸಾಧ್ಯವಾಗುತ್ತದೆ. ಇದರ ಮುಂದೆ ಎಲ್ಲರೂ ಸಮಾನರು.

ಸಾರ್ವಜನಿಕರಿಗೆ ಕಾನೂನು ಅರಿವು ಮೂಡಿಸುವ ಸಲುವಾಗಿ ಸರ್ವರಿಗೂ ಸಮಬಾಳು, ಸರ್ವರಿಗೂ ಸಮನ್ಯಾಯವೆಂಬ ಘೋಷವಾಕ್ಯದೊಂದಿಗೆ ಗ್ರಾಮೀಣರಿಗೂ ಅರಿವು ಮೂಡಿಸುವ ಹಾಗೂ ನೊಂದವರಿಗೆ ಕಾನೂನು ಆಸರೆ ಇದೆ ಎಂಬ ಉದ್ದೇಶ ದಿಂದ ಈ ಕಾನೂನು ಅರಿವು ನೆರವು ಕಾರ್ಯಕ್ರಮ ಹಮ್ಮಿ ಕೊಂಡಿರುವುದು ಅರ್ಥಪೂರ್ಣವಾಗಿದೆ ಎಂದರು.

ಈ ಸಂದರ್ಭದಲ್ಲಿ ಹಿರಿಯ ಸಿವಿಲ್‌ ನ್ಯಾಯಾಧೀಶರಾದ ಎಂ.ಬಿ.ಕುಲಕರ್ಣಿ, ಪ್ರಧಾನ ಸಿವಿಲ್‌ ನ್ಯಾಯಾಧೀಶರಾದ ಸಂದೀಪ್‌ಎ.ನಾಯಕ್‌, ಅಪರ ಸಿವಿಲ್‌ ನ್ಯಾಯಾಲಯದ ನ್ಯಾಯಾಧೀಶರಾದ

ಮಮತ ಶಿವಪೂಜಿ, ದೊಡ್ಡಬಳ್ಳಾಪುರ ತಾಲೂಕು ವಕೀಲರ ಸಂಘದ ಅಧ್ಯಕ್ಷ ರಾ.ಬೈರೇಗೌಡ, ತಹಶೀàಲ್ದಾರ್‌ ಟಿ.ಎಸ್‌.ಶಿವರಾಜ್‌, ಸಹಾಯಕ ಸರ್ಕಾರಿ ಅಭಿಯೋಜಕ ಸಿ.ಜೆ.ಸುಬ್ರಮಣ್ಯ ಹಾಜರಿದ್ದರು.

ಟಾಪ್ ನ್ಯೂಸ್

Hunsur: ಹೊಸ ವರ್ಷಾಚರಣೆ: ಕೇಕ್‌ ತಿಂದ 45ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ

Hunsur: ಹೊಸ ವರ್ಷಾಚರಣೆ: ಕೇಕ್‌ ತಿಂದ 45ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ

“ನಿಮ್ಹಾನ್ಸ್‌ ನಡೆ ದೇಶದಲ್ಲೇ ಮುಂಚೂಣಿಯದು’: ರಾಷ್ಟ್ರಪತಿ ದ್ರೌಪದಿ ಮುರ್ಮು

“ನಿಮ್ಹಾನ್ಸ್‌ ನಡೆ ದೇಶದಲ್ಲೇ ಮುಂಚೂಣಿಯದು’: ರಾಷ್ಟ್ರಪತಿ ದ್ರೌಪದಿ ಮುರ್ಮು

ಪತ್ನಿ ಜತೆ ಸಂಬಂಧ ಮುರಿದಿದ್ದ ಸೈಬರ್‌ ಟ್ರಕ್‌ ಸ್ಫೋ*ಟದ ವ್ಯಕ್ತಿ!

ಪತ್ನಿ ಜತೆ ಸಂಬಂಧ ಮುರಿದಿದ್ದ ಸೈಬರ್‌ ಟ್ರಕ್‌ ಸ್ಫೋ*ಟದ ವ್ಯಕ್ತಿ!

Formula E race corruption case: ಜ.6ರಂದು ಕೆಟಿಆರ್‌ ವಿಚಾರಣೆ

Formula E race corruption case: ಜ.6ರಂದು ಕೆಟಿಆರ್‌ ವಿಚಾರಣೆ

Bangladesh ಸುಧಾರಿಸುವವರೆಗೂ ಪ್ರಾರ್ಥನೆ ನಿಲ್ಲದು: ಇಸ್ಕಾನ್‌

Bangladesh ಸುಧಾರಿಸುವವರೆಗೂ ಪ್ರಾರ್ಥನೆ ನಿಲ್ಲದು: ಇಸ್ಕಾನ್‌

ಸನಾತನ ಅರ್ಥ ತಿಳಿಯದೆ ತಪ್ಪು ದಾರಿಗೆ ಸಮಾಜ: ಧನಕರ್‌

ಸನಾತನ ಅರ್ಥ ತಿಳಿಯದೆ ತಪ್ಪು ದಾರಿಗೆ ಸಮಾಜ: ಧನಕರ್‌

Arvind Kejriwal: ಕೇಂದ್ರ ಸರಕಾರ‌ ದಿಲ್ಲಿಯಲ್ಲಿ ಏನೂ ಮಾಡಿಲ್ಲ

Arvind Kejriwal: ಕೇಂದ್ರ ಸರಕಾರ‌ ದಿಲ್ಲಿಯಲ್ಲಿ ಏನೂ ಮಾಡಿಲ್ಲ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Nelamangala: ಸಾಕು ನಾಯಿ ಸತ್ತಿದ್ದಕ್ಕೆ ಮಾಲಕ ಆತ್ಮಹ*ತ್ಯೆ

Nelamangala: ಸಾಕು ನಾಯಿ ಸತ್ತಿದ್ದಕ್ಕೆ ಮಾಲಕ ಆತ್ಮಹ*ತ್ಯೆ

Doddaballapur: ಹೊಲದಲ್ಲಿ ಹೂ ಬಿಡಿಸುತ್ತಿದ್ದ ಮಹಿಳೆಗೆ ಕಾರು ಡಿಕ್ಕಿ: ಸಾವು

Doddaballapur: ಹೊಲದಲ್ಲಿ ಹೂ ಬಿಡಿಸುತ್ತಿದ್ದ ಮಹಿಳೆಗೆ ಕಾರು ಡಿಕ್ಕಿ: ಸಾವು

Road Mishap: ಬೈಕ್‌ ವ್ಹೀಲಿಂಗ್‌ ಮಾಡುವಾಗ ಕ್ಯಾಂಟರ್‌ಗೆ ಡಿಕ್ಕಿ; ಇಬ್ಬರು ಸಾವು

Road Mishap: ಬೈಕ್‌ ವ್ಹೀಲಿಂಗ್‌ ಮಾಡುವಾಗ ಕ್ಯಾಂಟರ್‌ಗೆ ಡಿಕ್ಕಿ; ಇಬ್ಬರು ಸಾವು

Tragic: ಮದುವೆ ಹರಕೆ ಹೊತ್ತು ಘಾಟಿ ದೇಗುಲಕ್ಕೆ ಬಂದಿದ್ದ ಯುವತಿ ಸಾವು

Tragic: ಮದುವೆ ಹರಕೆ ಹೊತ್ತು ಘಾಟಿ ದೇಗುಲಕ್ಕೆ ಬಂದಿದ್ದ ಯುವತಿ ಸಾವು

2-

Ayodhya ರಾಮನ ದರ್ಶನ ಪಡೆದಿದ್ದ “ಬಸಪ್ಪ” ಈಗ ಶಬರಿಮಲೆಗೆ ಪ್ರಯಾಣ!

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Hunsur: ಹೊಸ ವರ್ಷಾಚರಣೆ: ಕೇಕ್‌ ತಿಂದ 45ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ

Hunsur: ಹೊಸ ವರ್ಷಾಚರಣೆ: ಕೇಕ್‌ ತಿಂದ 45ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ

“ನಿಮ್ಹಾನ್ಸ್‌ ನಡೆ ದೇಶದಲ್ಲೇ ಮುಂಚೂಣಿಯದು’: ರಾಷ್ಟ್ರಪತಿ ದ್ರೌಪದಿ ಮುರ್ಮು

“ನಿಮ್ಹಾನ್ಸ್‌ ನಡೆ ದೇಶದಲ್ಲೇ ಮುಂಚೂಣಿಯದು’: ರಾಷ್ಟ್ರಪತಿ ದ್ರೌಪದಿ ಮುರ್ಮು

puttige-2

Udupi; ಗೀತಾರ್ಥ ಚಿಂತನೆ 145: ವೇದಪ್ರಾಮಾಣ್ಯದ ಚರ್ಚೆ

crime

Kasaragod: ಘರ್ಷಣೆಯಿಂದ ಮೂವರಿಗೆ ಗಾಯ

1-weewq

Baindur: ಬಟ್ಟೆ ವ್ಯಾಪಾರಿ ನಾಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.