ಅಬಕಾರಿ ದಾಳಿ: ಅಕ್ರಮ ಮದ್ಯ ವಶ

Team Udayavani, Mar 18, 2019, 7:15 AM IST

abakaari.jpg

ದೇವನಹಳ್ಳಿ: ಲೋಕಸಭಾ ಚುನಾವಣೆ ನೀತಿ ಸಂಹಿತೆ ಹಿನ್ನೆಲೆಯಲ್ಲಿ ಜಿಲ್ಲೆಯ ವಿವಿಧ ಕಡೆಗಳಲ್ಲಿ ದಾಳಿ ನಡೆಸಿದ ಅಬಕಾರಿ ಅಧಿಕಾರಿಗಳು ಅಕ್ರಮ ಮದ್ಯವನ್ನು  ವಶಪಡಿಸಿಕೊಂಡು, ಹಲವರನ್ನು ಬಂಧಿಸಿದ್ದಾರೆ.  

ಬೆಂಗಳೂರು ಗ್ರಾಮಾಂತರ ಜಿಲ್ಲಾ ಅಬಕಾರಿ ಉಪ ಆಯುಕ್ತ ರವೀಂದ್ರ ಮಾರ್ಗದರ್ಶನದಲ್ಲಿ ಅಬಕಾರಿ ಉಪಅಧೀಕ್ಷಕ‌ ಅವರ ನೇತೃತ್ವದಲ್ಲಿ ಬಾರ್‌ ಮತ್ತು ರೆಸ್ಟೋರಂಟ್‌ಗಳ ಮೇಲೆ ದಾಳಿ ನಡೆಸಿದ ಅಧಿಕಾರಿಗಳು, ಅಕ್ರಮ ಮದ್ಯ ಜಪ್ತಿ ಮಾಡಿಕೊಂಡಿದ್ದಾರೆ. ದೂರುಗಳು ಬಂದ ಕೂಡಲೇ ಅಧಿಕಾರಿಗಳು ದಾಳಿ ನಡೆಸಿ ಅಕ್ರಮ ಮದ್ಯವನ್ನು ವಶಕ್ಕೆ ಪಡೆಯುತ್ತಿದ್ದಾರೆ.

ನ್ಯಾಯಸಮ್ಮತ ಚುನಾವಣೆಗೆ ಸಿದ್ಧತೆ: ಜಿಲ್ಲಾಧಿಕಾರಿ ಕರೀಗೌಡ ಮಾತನಾಡಿ, ಅಬಕಾರಿ ಇಲಾಖೆ ತಂಡಗಳನ್ನು ರಚಿಸಿ ವಿವಿಧ ಕಡೆಗಳಲ್ಲಿ ಅಕ್ರಮ ಮದ್ಯ ಮಾರಾಟದ ವಾಹನಗಳನ್ನು ವಶಕ್ಕೆ ಪಡೆಯಲಾಗುತ್ತಿದೆ. ನ್ಯಾಯಸಮ್ಮತ ಚುನಾವಣೆ ನಡೆಯಲು ಎಲ್ಲಾ ರೀತಿಯ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ. ಅಬಕಾರಿ ಅಕ್ರಮ ದೂರಿನ ಬಗ್ಗೆ ಟೋಲ್‌ ಫ್ರೀ ದೂರವಾಣಿ ಸಂಖ್ಯೆಯನ್ನು ಸಹ ನೀಡಲಾಗಿದೆ ಎಂದರು.  

40 ಜನರ ಬಂಧನ: ಲೋಕಸಭಾ ಚುನಾವಣೆ 2019 ರ ಮಾದರಿ ನೀತಿ ಸಂಹಿತೆ ಜಾರಿ ಆದಗಿನಿಂದ ಇಲ್ಲಿಯವರೆಗೆ ಬೆಂಗಳೂರು ಗ್ರಾಮಾಂತರ ಜಿಲ್ಲಾ ವ್ಯಾಪ್ತಿಯಲ್ಲಿ 126 ದಾಳಿಗಳನ್ನು ನಡೆಸಿ 58 ಪ್ರಕರಣಗಳನ್ನು ದಾಖಲಿಸಿ 5,456 ಲೀ. ಮಧ್ಯ, 820 ಬಿಯರ್‌ ಹಾಗೂ 3 ದ್ವಿಚಕ್ರ ವಾಹನಗಳನ್ನು ಜಪ್ತಿ ಮಾಡಿಕೊಂಡು, 40 ಜನರನ್ನು ಬಂಧಿಸಲಾಗಿದೆ.

ಅಲ್ಲದೇ, ಅವರಿಂದ 52,500 ರೂ. ದಂಡ ವಸೂಲಿ ಮಾಡಲಾಗಿದೆ. 9 ಜನರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ವಶಪಡಿಸಿಕೊಂಡ ಮಧ್ಯ ಮತ್ತು ವಾಹನಗಳ ಮೌಲ್ಯ 17,67,483 ರೂ. ಎಂದು ಗ್ರಾಮಾಂತರ ಜಿಲ್ಲಾ ಅಬಕಾರಿ ಉಪ ಆಯುಕ್ತ ರವೀಂದ್ರ ತಿಳಿಸಿದರು.  

ದೊಡ್ಡಬಳ್ಳಾಪುರ ಟೌನ್‌ನಲ್ಲಿ 16.830 ಲೀ. ಅಕ್ರಮ ಮಧ್ಯ ಜಪ್ತಿ ಮಾಡಿಕೊಂಡು, ಒಂದು ಬೈಕ್‌ ಅನ್ನು ವಶಕ್ಕೆ ಪಡೆಯಲಾಗಿದೆ. ಆರೋಪಿ ಮುನೇಗೌಡ ಎಂಬಾತನನ್ನು ಬಂಧಿಸಿ, ಆತನ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ದೇವನಹಳ್ಳಿ ತಾಲೂಕಿನ ಮಿಸ್ಟ್‌ ಫ್ಯಾಕ್ಟರಿ ರೆಸ್ಟೋರಂಟ್‌ ಮೇಲೆ ದಾಳಿ ನಡೆಸಿ 3.425 ಲೀ. ಅಕ್ರಮ ಮದ್ಯ ಹಾಗೂ ಬಿಯರ್‌ ವಶಕ್ಕೆ ಪಡೆಯಲಾಗಿದೆ.

ಆರೋಪಿ ಸೂರಜ್‌ನನ್ನು ಬಂಧಿಸಿ, ಪ್ರಕರಣ ದಾಖಲಿಸಲಾಗಿದೆ. ಹೊಸಕೋಟೆ ತಾಲೂಕಿನ ಕನರಸನಹಳ್ಳಿ ರಸ್ತೆಯಲ್ಲಿ ಗಸ್ತು ಸಮಯದಲ್ಲಿ 5.220 ಅಕ್ರಮ ಮದ್ಯ ಜಪ್ತಿ ಮಾಡಿ, ಟಿವಿಎಸ್‌ ನ್ಪೋಟ್ಸ್‌ ವಾಹನವನ್ನು ವಶಕ್ಕೆ ಪಡೆದು, ಆರೋಪಿ ಗಂಗಪ್ಪನನ್ನು ಬಂಧಿಸಲಾಗಿದೆ.

ಹೊಸಕೋಟೆ ತಾಲೂಕಿನ ಪಿಳ್ಳಗುಂಪು ಗ್ರಾಮದ ರತ್ನಮ್ಮ ಎಂಬುವರ ಮನೆಯಲ್ಲಿ ಅಬಕಾರಿ ಆಯುಕ್ತ ರವೀಂದ್ರ ಮಾರ್ಗದರ್ಶನದಲ್ಲಿ ಉಪಅಧೀಕ್ಷಕ‌ ಕೆ.ಎಂ.ತಮ್ಮಣ್ಣ ನೇತೃತ್ವದಲ್ಲಿ ದಾಳಿ ನಡೆಸಿ 185 ಲೀ. ಮದ್ಯ ಹಾಗೂ 39 ಲೀ. ಬಿಯರ್‌ ವಶಕ್ಕೆ ಪಡೆದು, ಆರೋಪಿ ರತ್ನಮ್ಮ ಬಂಧಿಸಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದರು.

ಟಾಪ್ ನ್ಯೂಸ್

Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ

Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ

Elephant

Belthangady: ಚಾರ್ಮಾಡಿ: ಪರ್ಲಾಣಿಯಲ್ಲಿ ಕಾಡಾನೆ

K-H-Muniyappa

BPL ಕಾರ್ಡು ರದ್ದಾಗಲ್ಲ: ಮುನಿಯಪ್ಪ

Jhansi hospital: ಹಲವು ಮಕ್ಕಳ ರಕ್ಷಿಸಿದವನ ಅವಳಿ ಮಕ್ಕಳು ಬೆಂಕಿಗಾಹುತಿ

Jhansi hospital: ಹಲವು ಮಕ್ಕಳ ರಕ್ಷಿಸಿದವನ ಅವಳಿ ಮಕ್ಕಳು ಬೆಂಕಿಗಾಹುತಿ

NCB ನಿರಂತರ ಕಾರ್ಯಾಚರಣೆ: ಡ್ರಗ್ಸ್‌ ಜಾಲ ಮುರಿಯಲು ಆಪರೇಷನ್‌ ಸಾಗರ ಮಂಥನ

NCB ನಿರಂತರ ಕಾರ್ಯಾಚರಣೆ: ಡ್ರಗ್ಸ್‌ ಜಾಲ ಮುರಿಯಲು ಆಪರೇಷನ್‌ ಸಾಗರ ಮಂಥನ

1-aaaaaaa

Karkala: ಕಾಂಗ್ರೆಸ್ ನಾಯಕ ಡಿ. ಅರ್.‌ರಾಜು ನಿಧನ

Israel; ಪ್ರಧಾನಿ ನಿವಾಸಕ್ಕೆ ಬಾಂಬ್‌ ದಾಳಿ: 3 ಮಂದಿ ಸೆರೆ

Israel; ಪ್ರಧಾನಿ ನಿವಾಸಕ್ಕೆ ಬಾಂಬ್‌ ದಾಳಿ: 3 ಮಂದಿ ಸೆರೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Stray dogs: ಅಂ.ರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬೀದಿ ನಾಯಿಗಳ ಹಾವಳಿ

Stray dogs: ಅಂ.ರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬೀದಿ ನಾಯಿಗಳ ಹಾವಳಿ

Tragic: ಮರದ ಕಾರ್ಖಾನೆಯಲ್ಲಿ ಆಕಸ್ಮಿಕ ಬೆಂಕಿ; ಕಾರ್ಮಿಕ ಸಜೀವ ದಹನ

Tragic: ಮರದ ಕಾರ್ಖಾನೆಯಲ್ಲಿ ಆಕಸ್ಮಿಕ ಬೆಂಕಿ; ಕಾರ್ಮಿಕ ಸಜೀವ ದಹನ

Market: ಬೆಲೆ ಕುಸಿತ; ಬೂದು ಕುಂಬಳ ಬೀದಿಪಾಲು!

Market: ಬೆಲೆ ಕುಸಿತ; ಬೂದು ಕುಂಬಳ ಬೀದಿಪಾಲು!

Crime: ಪಂಚೆ ಧರಿಸು ಎಂದಿದ್ದಕ್ಕೆ ಅಪ್ಪನನ್ನೇ ಕೊಂದ ಮಗ!

Crime: ಪಂಚೆ ಧರಿಸು ಎಂದಿದ್ದಕ್ಕೆ ಅಪ್ಪನನ್ನೇ ಕೊಂದ ಮಗ!

9-bng

Channapatna: ಸಾಲಕ್ಕೆ ಹೆದರಿ ದಂಪತಿ ನೇಣಿಗೆ ಶರಣು

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ

Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ

1-chuii

ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಚಿತ್ತೂರು ಪ್ರಭಾಕರ ಆಚಾರ್ಯರಿಗೆ ಗೌರವಾರ್ಪಣೆ

Elephant

Belthangady: ಚಾರ್ಮಾಡಿ: ಪರ್ಲಾಣಿಯಲ್ಲಿ ಕಾಡಾನೆ

K-H-Muniyappa

BPL ಕಾರ್ಡು ರದ್ದಾಗಲ್ಲ: ಮುನಿಯಪ್ಪ

Jhansi hospital: ಹಲವು ಮಕ್ಕಳ ರಕ್ಷಿಸಿದವನ ಅವಳಿ ಮಕ್ಕಳು ಬೆಂಕಿಗಾಹುತಿ

Jhansi hospital: ಹಲವು ಮಕ್ಕಳ ರಕ್ಷಿಸಿದವನ ಅವಳಿ ಮಕ್ಕಳು ಬೆಂಕಿಗಾಹುತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.