ಜಿಲ್ಲೆಯ ರೈತರ ಸಂಕಷ್ಟಗಳಿಗೆ ಸ್ಪಂದಿಸುವ ಕೆಲಸ
Team Udayavani, May 21, 2023, 2:17 PM IST
ದೇವನಹಳ್ಳಿ: ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ರೈತರ ಸಂಕಷ್ಟಗಳಿಗೆ ಸ್ಪಂದಿಸುವ ಕೆಲಸವನ್ನು ಮಾಡಲಾಗುವುದು. ಈಗಿನ ಕಾಂಗ್ರೆಸ್ ಸರ್ಕಾರ ರೈತರಿಗೆ ಬೆಂಬಲ ಬೆಲೆ ಘೋಷಣೆ ಮಾಡಿ ಸಂಕಷ್ಟ ಗಳಿಂದ ದೂರ ಮಾಡಬೇಕು ಎಂದು ವಿಶ್ವಚೇತನ ನಾಯಕ ಎಂ.ಡಿ.ನಂಜುಂಡಸ್ವಾಮಿ ಸ್ಥಾಪಿತ ಕರ್ನಾಟಕ ರಾಜ್ಯ ರೈತ ಸಂಘ ಹಾಗು ಹಸಿರುಸೇನೆ ಜಿಲ್ಲಾ ಗೌರವ ಅಧ್ಯಕ್ಷ ವಿನೋಧ್ಕುಮಾರ್‌ಗೌಡ ಬಿ.ಕೆ ತಿಳಿಸಿದರು.
ಪಟ್ಟಣದ ಪ್ರವಾಸಿ ಮಂದಿರದಲ್ಲಿ ವಿಶ್ವಚೇತನ ನಾಯಕ ಎಂ.ಡಿ.ನಂಜುಂಡಸ್ವಾಮಿ ಸ್ಥಾಪಿತ ಕರ್ನಾ ಟಕ ರಾಜ್ಯ ರೈತ ಸಂಘ ಹಾಗು ಹಸಿರುಸೇನೆ ವತಿ ಯಿಂದ ಹಮ್ಮಿಕೊಂಡಿದ್ದ ಪದಾಧಿಕಾರಿಗಳ ಸಭೆ ಯಲ್ಲಿ ಮಾತನಾಡಿ, ರೈತರು ಸಾಲಸೋಲ ಮಾಡಿ ಬೆಳೆಗಳನ್ನು ಬೆಳೆದರೂ ಸಹ ಅವರು ಹಾಕಿದ ಹಣ ಅವರ ಕೈಸೇರುತ್ತಿಲ್ಲ. ಅದಕ್ಕಾಗಿ ಸಿದ್ದ ರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ರೈತರನ್ನು ಮೇಲೆತ್ತಲು ರೈತರಿಗೆ ತಾವು ಬೆಳೆದ ಎಲ್ಲಾ ಬೆಳೆಗೆ ಬೆಂಬಲ ಬೆಲೆ ಘೋಷಿಸಬೇಕು. ಅವರು ನೀಡಿರುವ ಗ್ಯಾರಂಟಿ ಕಾರ್ಡ್‌ನಲ್ಲಿನ ಎಲ್ಲ ಅಂಶಗಳನ್ನು ಜಾರಿಗೆ ತರ ಬೇಕು. ರೈತರ ಪಂಪ್‌ಸೆಟ್‌ಗಳಿಗೆ ಉಚಿತ ವಿದ್ಯುತ್ ನೀಡುವಂತಾಗಬೇಕು. ರೈತ ಸಂಘದ ಅಭಿವೃದ್ಧಿಗೆ ಹೆಚ್ಚಿನ ಒತ್ತನ್ನು ಕೊಡಲಾಗುವುದು. ರೈತರಿಗೆ ಅನ್ಯಾಯ ಆದಾಗಿ ಜಿಲ್ಲೆಯಾದ್ಯಂತ ಹೋರಾಟ ಗಳನ್ನು ಮಾಡಿ ನ್ಯಾಯ ಒದಗಿಸುವ ಕೆಲಸವನ್ನು ಹಳ್ಳಿಯಿಂದ ಹಿಡಿದು ದೆಹಲಿವರೆಗೆ ಹೋರಾಟ ಮಾಡುತ್ತೇವೆ. ರೈತ ಸಂಘವನ್ನು ಪ್ರತಿ ಹಳ್ಳಿಯಲ್ಲಿ ಸಂಘಟಿಸುತ್ತೇವೆ. ರೈತರಿಗೆ ಎಲ್ಲೇ ಅನ್ಯಾಯವಾದರೂ ಅವರ ಪರವಾಗಿ ಹೋರಾಟ ನಡೆಸುತ್ತೇವೆ ಎಂದು ಹೇಳಿದರು.
ರೈತ ಸಂಘದ ಉಪಾಧ್ಯಕ್ಷ ನಾರಾಯಣಸ್ವಾಮಿ (ನಾಣಿ) ಮಾತನಾಡಿ, ರೈತಸಂಘದ ರಾಜ್ಯಾ ಧ್ಯಕ್ಷರನ್ನು ಕರೆಸಿ ನೂತನ ಜಿಲ್ಲಾಧ್ಯಕ್ಷರನ್ನು ನೇಮಕ ಮಾಡಿಸಲಾಗುವುದು. ಅಧ್ಯಕ್ಷರಾಗಿದ್ದ ಬೂವನಹಳ್ಳಿ ವೆಂಕಟೇಶ್ ನಿಧನರಾಗಿದ್ದರು. ಅವರ ಜಾಗಕ್ಕೆ ಹೊಸ ಜಿಲ್ಲಾಧ್ಯಕ್ಷರನ್ನು ನೇಮಕ ಮಾಡಿಕೊಳ್ಳಬೇಕು. ಪೂರ್ವಭಾವಿ ಸಭೆಯಲ್ಲಿ ಯಾರನ್ನು ಅಧ್ಯಕ್ಷರನ್ನಾಗಿ ಮಾಡಬೇಕು ಎಂಬುವುದು ತೀರ್ಮಾನಿಸಿದ್ದೇವೆ ಎಂದು ಹೇಳಿದರು.
ಈ ವೇಳೆಯಲ್ಲಿ ತಾಲೂಕು ಅಧ್ಯಕ್ಷ ಜಯ ಶಂಕರ್, ಉಪಾಧ್ಯಕ್ಷ ಗಯಾಜ್ ಪಾಷಾ, ತಾಲೂಕು ಪ್ರಧಾನ ಕಾರ್ಯದರ್ಶಿ ನಜಿ‚àರ್ ಅಹಮದ್, ತಾ. ಗೌರವಾಧ್ಯಕ್ಷ ನಾರಾಯಣಸ್ವಾಮಿ, ವಿಜಯಪುರ ಹೋಬಳಿ ಅಧ್ಯಕ್ಷ ಶ್ರೀನಾಥ್, ಮುಖಂಡರಾದ ಎ.ಎನ್.ರವಿ, ಚಿಕ್ಕಗೊಲ್ಲಹಳ್ಳಿ ರಾಮಾಂಜಿನಪ್ಪ, ಪೋಲನಹಳ್ಳಿ ನಾಗರಾಜ್ ಮತ್ತಿತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Health: ಶೀಘ್ರ ಕ್ಯಾನ್ಸರ್ ಪತ್ತೆ, ಶಸ್ತ್ರಚಿಕಿತ್ಸೆ ತಿಳಿವಳಿಕೆ ಯಾಕೆ ಮುಖ್ಯ?
ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ
Harapanahalli: ಪ್ರತಿಷ್ಠೆಯ ಕಣವಾದ ಬಿ90 ಸೊಸೈಟಿ ಚುನಾವಣೆ
Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ
Hysteroscopy: ಸಂತಾನಹೀನತೆಯ ಪತ್ತೆ ಮತ್ತು ಚಿಕಿತ್ಸೆಗೆ ಒಂದು ಅತ್ಯವಶ್ಯಕ ಕಾರ್ಯವಿಧಾನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.