“ರಸಗೊಬ್ಬರ ಬಳಕೆ ಬಗ್ಗೆ ರೈತರಿಗೆ ಸಮಗ್ರ ಮಾಹಿತಿ ಅಗತ್ಯ”


Team Udayavani, Dec 24, 2017, 1:40 PM IST

blore-g-2.jpg

ಹೊಸಕೋಟೆ: ರೈತರಿಗೆ ರಸಗೊಬ್ಬರದ ಬಳಕೆ ಬಗ್ಗೆ ಸಮಗ್ರವಾದ ಮಾಹಿತಿ ನೀಡುವಂತಹ ಕಾರ್ಯಾಗಾರ ಏರ್ಪಡಿಸುವುದು ಅಗತ್ಯವಾಗಿದೆ ಎಂದು ಟಿಎಪಿಸಿಎಂಎಸ್‌ ಉಪಾಧ್ಯಕ್ಷ ಬಿ.ಎನ್‌. ಗೋಪಾಲಗೌಡ ಹೇಳಿದರು.ಪಟ್ಟಣದ ಟಿಎಪಿಸಿಎಂಎಸ್‌ ಆವರಣದಲ್ಲಿ ಸಂಘದ ಸಂಭಾಗಣದಲ್ಲಿ ಜೈ ಕಿಸಾನ್‌ ಮತ್ತು ಮಂಗಳ ಸಂಸ್ಥೆಗಳ ಬೆಳ್ಳಿ ಮಹೋತ್ಸವದ ಅಂಗವಾಗಿ ಏರ್ಪಡಿಸಿದ್ದ ರೈತರ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. 

1,658 ರೈತರು ಆತ್ಯಹತ್ಯೆ: ಮಣ್ಣಿನ ಫ‌ಲವತ್ತತೆ ಕಾಪಾಡಿಕೊಳ್ಳಲು ಸಾವಯವ ಗೊಬ್ಬರ ಬಳಸುವ ಅಗತ್ಯತೆಯಿದ್ದು ಇಳುವರಿ ಹೆಚ್ಚಾಗಿ ಪಡೆಯಲು ರೈತರು ರಸಗೊಬ್ಬರಗಳನ್ನೆ ಅವಲಂಬಿಸಿದ್ದಾರೆ. ಇದು ಆರೋಗ್ಯದ ಮೇಲೂ ದುಷ್ಪರಿಣಾಮ ಬೀರುತ್ತಿದೆ. ಕೃಷಿ ಸಚಿವರೇ ಹೇಳುವಂತೆ ರಾಜ್ಯ ದಲ್ಲಿ ಕಳೆದ ನಾಲ್ಕೂವರೆ ವರ್ಷಗಳಲ್ಲಿ 1,658 ರೈತರು ಆತ್ಯಹತ್ಯೆ ಮಾಡಿಕೊಂಡಿದ್ದರೂ ಸರ್ಕಾರ ರೈತರ ಹಿತ ಕಾಪಾಡುವಲ್ಲಿ ವಿಫ‌ಲವಾಗಿದೆ. ಸರ್ಕಾರದ ನಿರ್ಲಕ್ಷ್ಯ ಧೋರಣೆಯಿಂದ ಕಂಗಾಲಾಗಿರುವ ರೈತರು ಬೆಳೆದ ಉತ್ಪನ್ನಗಳಿಗೆ ಸೂಕ್ತ ಬೆಲೆ ಸಿಗದೆ ತೀವ್ರ ಸಂಕಷ್ಟಕ್ಕೆ ಒಳಗಾಗುತ್ತಿದ್ದಾರೆ. ಲಾಭ ದಾಯಕ ವಲ್ಲದ ಕೃಷಿಯಿಂದ ಯುವಕರು ವಿಮುಖರಾಗುತ್ತಿದ್ದು ಪರ್ಯಾಯ ಉದ್ಯೋಗ ಕೈಗೊಳ್ಳುತ್ತಿದ್ದಾರೆ. ರಾಷ್ಟ್ರವು ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬಿಯಾಗಲು ಪ್ರೋತ್ಸಾಹಿಸುವ ಯೋಜ ನೆಗಳನ್ನು ಜಾರಿಗೊಳಿಸಬೇಕು ಎಂದು ಕಿವಿ ಮಾತು ಹೇಳಿದರು.

ಸಂಘದ ನಿರ್ದೇಶಕ ಸಿ.ಮುನಿ ಯಪ್ಪಮಾತನಾಡಿ, ರೈತರಿಗೆ ವೈಜ್ಞಾನಿಕ ಪದ್ಧತಿ ಅಳವಡಿಸಿಕೊಳ್ಳುವ ಬಗ್ಗೆ ಕ್ಷೇತ್ರೋತ್ಸವ ಏರ್ಪಡಿಸು ವುದು ಹೆಚ್ಚು ಸೂಕ್ತವಾಗಲಿದೆ ಎಂದರು. ರಸಗೊಬ್ಬರ ತಯಾರಿಕಾ ಸಂಸ್ಥೆ ಜಂಟಿ ಪ್ರಧಾನ ವ್ಯವಸ್ಥಾಪಕ ಬಿ.ಟಿ.ಸುದರ್ಶನ್‌ ಮಾತನಾಡಿ, ಸಂಸ್ಥೆ ಉತ್ಕೃಷ್ಟವಾದ ಗುಣಮಟ್ಟ ಹೊಂದಿರುವ ಉತ್ಪನ್ನಗಳ ಮೇಲೆ ರೈತರು ವಿಶ್ವಾಸ ವ್ಯಕ್ತಪಡಿಸಿದ್ದು ಅನ್ಯೋನ್ಯ ಸಂಬಂಧ ಹೊಂದಿದೆ ಎಂದರು. 

ರೈತರು ಎಚ್ಚರ ವಹಿಸಿ: ಮಾರುಕಟ್ಟೆ ವಿಭಾಗದ ಮುಖ್ಯ ನಿರ್ವಾಹಕ ಷಣ್ಮುಖಪ್ಪ ಮಾತನಾಡಿ, ಸಂಸ್ಥೆಯು ಕೇವಲ ರಸಗೊಬ್ಬರ, ಸರಬರಾಜು ಮಾರಾಟಕ್ಕೆ ಮಾತ್ರ ಸೀಮಿತಗೊಳ್ಳದೇ ಕೃಷಿ ತಜ್ಞರು, ವಿಜ್ಞಾನಿಗಳೊಂದಿಗೆ ರೈತರ ಸಂವಾದಕ್ಕೆ ಅವಕಾಶ ಕಲ್ಪಿಸಲಾಗುತ್ತಿದೆ. ವ್ಯವಸಾಯ ಅಭಿವೃದ್ಧಿ ಪ್ರಯೋಗಾಲಯ, ಸಂಶೋಧನಾ ಕೇಂದ್ರ ಹೊಂದಿದೆ. ಇತ್ತೀಚೆಗೆ ಕೆಲವು ಖಾಸಗಿ ಸಂಸ್ಥೆಗಳು ಕಳಪೆ ಗುಣಮಟ್ಟದ ಸಾವಯವ ಗೊಬ್ಬರ ಸರಬರಾಜು ಮಾಡುವ ಮೂಲಕ ರೈತರನ್ನು ವಂಚಿಸುತ್ತಿರುವುದು ಕಂಡುಬಂದಿದ್ದು ರೈತರು ಎಚ್ಚರವಹಿಸಬೇಕು ಎಂದರು.

ಪ್ರಯೋಗಾಲಯದ ಮುಖ್ಯಸ್ಥ ಮರಿಲಿಂಗಯ್ಯ, ಸಂಸ್ಥೆಯು ನಡೆಸಿರುವ 28 ಸಾವಿರ ಮಣ್ಣಿನ ಪರೀಕ್ಷೆಗಳಲ್ಲಿ ಶೇ.0.5ರಷ್ಟು
ಪ್ರಮಾಣದ ಸಾವಯವ ಇಂಗಾಲ ಪತ್ತೆಯಾಗಿದ್ದು ಆತಂಕಕಾರಿ ಬೆಳವಣಿಗೆಯಾಗಿದೆ. ಈಗಲಾದರೂ ರೈತರು ಎಚ್ಚೆತ್ತು ಸಂರಕ್ಷಣೆಯಲ್ಲಿ ತೊಡಗಬೇಕಾಗಿದೆ. ಸಂಸ್ಥೆಯ ಬೆಳ್ಳಿ ಹಬ್ಬದ ಆಚರಣೆ ಸಂದರ್ಭದಲ್ಲಿ ರೈತರಿಗೆ ಉಚಿತ ಮಣ್ಣಿನ ಪರೀಕ್ಷೆ ನಡೆಸಲಾಗುತ್ತಿದೆ. ರಿಯಾಯಿತಿ ದರದಲ್ಲಿ ನೀರು, ಎಲೆ ಪರೀಕ್ಷೆ ಮಾಡಲಾಗುವುದು. ರೈತರಿಗಾಗಿ 1800 1212 333 ಸಂಖ್ಯೆ ಸಹಾಯವಾಣಿ ಪ್ರಾರಂಭಿಸಿದ್ದು ಉಚಿತ ಮೊಬೈಲ್‌ ಆ್ಯಪ್‌ ಸಿದ್ಧಪಡಿಸಿದ್ದು ಅಗತ್ಯ ಮಾಹಿತಿ ಪಡೆಯ ಬಹುದಾಗಿದೆ ಎಂದರು.

ಟಿಎಪಿಸಿಎಂಎಸ್‌ ಅಧ್ಯಕ್ಷ ಟಿ.ಸೊಣ್ಣಪ್ಪ, ನಿರ್ದೇಶಕ ನಾರಾಯಣಪ್ಪ, ಕಾರ್ಯದರ್ಶಿ ಶ್ರೀನಿವಾಸಪ್ಪ, ತಾಲೂಕು ಕೃಷಿ ಸಹಾಯಕ ನಿರ್ದೇಶಕ ಶಂಕರಮೂರ್ತಿ, ರಸಗೊಬ್ಬರ ತಯಾರಿಕಾ ಸಂಸ್ಥೆ ಅಧಿಕಾರಿಗಳಾದ ನದೀಮ್‌, ಸಿದ್ದರಾಮರೆಡ್ಡಿ, ರುದ್ರಪ್ಪ, ನಾಗೇಶ್‌, ನಾಗರಾಜ್‌ ಉತ್ತಂಗಿ ಇನ್ನಿತರರು ಭಾಗವಹಿಸಿದ್ದರು. ಇದೇ ಸಂದರ್ಭದಲ್ಲಿ ಉಚಿತ ಮಣ್ಣಿನ ಪರೀಕ್ಷೆ ಕಾರ್ಡ್‌ಗಳನ್ನು ವಿತರಿಸಲಾಯಿತು.

ಟಾಪ್ ನ್ಯೂಸ್

Belagavi: ಸಿ.ಟಿ. ರವಿಯನ್ನು ಹೆಗಲ ಮೇಲೆ‌ ಹೊತ್ತುಕೊಂಡು ಜೀಪ್ ಗೆ ಹಾಕಿದ ಪೊಲೀಸರು

Belagavi: ಸಿ.ಟಿ. ರವಿಯನ್ನು ಹೆಗಲ ಮೇಲೆ‌ ಹೊತ್ತುಕೊಂಡು ಜೀಪ್ ಗೆ ಹಾಕಿದ ಪೊಲೀಸರು

1-ullala

Mangaluru; ನೇತ್ರಾವತಿ ಸೇತುವೆ ದುರಸ್ತಿ ಆರಂಭ: ಸಂಚಾರ ಸಲಹೆ ನೀಡಿದ ಪೊಲೀಸರು

1-aaammm

Jammu and Kashmir; ಉಗ್ರವಾದ ಪರಿಸರ ವ್ಯವಸ್ಥೆ ಬಹುತೇಕ ಕೊನೆಗೊಂಡಿದೆ: ಶಾ

1-lok-sabha

BJP vs Congress; ಸಂಸತ್ತಿನಲ್ಲಿ ಕೋಲಾಹಲ: ಪೊಲೀಸರಿಗೆ ದೂರು,ಕಾಂಗ್ರೆಸ್ ಪ್ರತಿದೂರು

CT Ravi

Laxmi Hebbalkar; ಅವಾಚ್ಯ ಪದ ಬಳಕೆ ಕೇಸ್: ಸಿ.ಟಿ.ರವಿ ಬಂಧನ

Gadaga: ನೀರಿನ ಟ್ಯಾಂಕರ್ ಹರಿದು 2 ವರ್ಷದ ಮಗು ಸಾವು

Gadaga: ನೀರಿನ ಟ್ಯಾಂಕರ್ ಹರಿದು 2 ವರ್ಷದ ಮಗು ಸಾವು

dhankar (2)

Jagdeep Dhankhar; ರಾಜ್ಯಸಭಾ ಸಭಾಪತಿ ವಿರುದ್ದದ ಪ್ರತಿಪಕ್ಷಗಳ ಅವಿಶ್ವಾಸ ನಿರ್ಣಯ ತಿರಸ್ಕೃತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

4

Crime: ರೌಡಿಶೀಟರ್‌ ಕೊಲೆ ಯತ್ನ; ಆರೋಪಿಗೆ ಗುಂಡೇಟು

Doddaballapur: ಎರಡೂ ಬಸ್‌ ನಿಲ್ದಾಣಕ್ಕೆ ಬೇಕಿದೆ ಕಾಯಕಲ್ಪ!

Doddaballapur: ಎರಡೂ ಬಸ್‌ ನಿಲ್ದಾಣಕ್ಕೆ ಬೇಕಿದೆ ಕಾಯಕಲ್ಪ!

11

Lack of Bus stand: ಹೊಸಕೋಟೆ; ಬಸ್‌ ನಿಲ್ದಾಣವಿಲ್ಲದೆ ಪರದಾಟ!

Leopard: ನೆಲಮಂಗಲ ಸಮೀಪ ಚಿರತೆ ಸೆರೆ: ನರಭಕ್ಷಕ ಇದೇನಾ? ವರದಿ ನಿರೀಕ್ಷೆ

Leopard: ನೆಲಮಂಗಲ ಸಮೀಪ ಚಿರತೆ ಸೆರೆ: ನರಭಕ್ಷಕ ಇದೇನಾ? ವರದಿ ನಿರೀಕ್ಷೆ

Anekal: ರೌಡಿಶೀಟರ್‌ ಮೇಲೆ ಮಾರಕಾಸ್ತ್ರಗಳಿಂದ ದಾಳಿ

Anekal: ರೌಡಿಶೀಟರ್‌ ಮೇಲೆ ಮಾರಕಾಸ್ತ್ರಗಳಿಂದ ದಾಳಿ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

de

Padubidri: ಕೆಎಸ್‌ಆರ್‌ಟಿಸಿ ಬಸ್ಸು ಢಿಕ್ಕಿ; ಪಾದಚಾರಿ ಸಾವು

Belagavi: ಸಿ.ಟಿ. ರವಿಯನ್ನು ಹೆಗಲ ಮೇಲೆ‌ ಹೊತ್ತುಕೊಂಡು ಜೀಪ್ ಗೆ ಹಾಕಿದ ಪೊಲೀಸರು

Belagavi: ಸಿ.ಟಿ. ರವಿಯನ್ನು ಹೆಗಲ ಮೇಲೆ‌ ಹೊತ್ತುಕೊಂಡು ಜೀಪ್ ಗೆ ಹಾಕಿದ ಪೊಲೀಸರು

11

Surathkal: ಅಡುಗೆ ಅನಿಲ ಸೋರಿಕೆ ಪ್ರಕರಣ; ಸುಧಾರಿಸದ ಗಾಯಾಳುಗಳ ಆರೋಗ್ಯ

1-ullala

Mangaluru; ನೇತ್ರಾವತಿ ಸೇತುವೆ ದುರಸ್ತಿ ಆರಂಭ: ಸಂಚಾರ ಸಲಹೆ ನೀಡಿದ ಪೊಲೀಸರು

accident

Kundapura: ಕಾರು ಢಿಕ್ಕಿ; ಸ್ಕೂಟರ್‌ ಸವಾರನಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.