ಕೆಐಎಡಿಬಿ ವಿರುದ್ಧ ಕಾನೂನು ಹೋರಾಟಕ್ಕೆ ಸಿದ್ದರಾದ ರೈತರು


Team Udayavani, Apr 24, 2022, 1:09 PM IST

Untitled-1

ನೆಲಮಂಗಲ: ರೈತರ ಭೂಮಿಯನ್ನು ಕಸಿದು ಕೊಂಡು ಅಧಿಕಾರಿಗಳ ಇಚ್ಛೆಯಂತೆ ಎಕರೆಗೆ 90 ಲಕ್ಷ ನಿಗದಿ ಮಾಡಿ ಭೂ ಮಾಲೀಕರಿಗೆ ಅನ್ಯಾಯ ಮಾಡುತ್ತಿದ್ದಾರೆ. ರೈತರ ಭೂಮಿಯ ದರ ಮರು ನಿಗಧಿಯಾಗಬೇಕು ಎಂದು ಭೂಮಿ ಕಳೆದುಕೊಳ್ಳುತ್ತಿರುವ ರೈತರು ಕೆಐಎಡಿಬಿ ವಿರುದ್ಧ ನ್ಯಾಯಾಲಯದ ಮೆಟ್ಟಿಲು ಏರಲು ಸಿದ್ಧರಾಗಿದ್ದಾರೆ.

ತಾಲೂಕಿನ ತ್ಯಾಮಗೊಂಡ್ಲು ಹೋಬಳಿ ಓಬಳಾಪುರ ಕೈಗಾರಿಕಾ ಪ್ರದೇಶ ಎಂದು ಗುರುತಿಸಿ ಸುತ್ತಲಿನ ಐದಾರು ಹಳ್ಳಿಗಳ 879 ಎಕರೆ ಭೂಮಿ ಸ್ವಾಧೀನಪಡಿಸಿಕೊಳ್ಳಲು ರೈತರಿಗೆ ನೋಟಿಸ್‌ ನೀಡಲಾಗುತ್ತಿದೆ. ಇದರ ವಿರುದ್ಧ ಈಗಾಗಲೇ ನಾಲ್ಕು ಬಾರಿ ರೈತರು ರಸ್ತೆ ತಡೆದು ಗ್ರಾಮದಲ್ಲಿ ದರ ಮರು ನಿಗದಿ ಮಾಡುವಂತೆ ಪ್ರತಿಭಟಿಸಿದ್ದರು. ಅಧಿಕಾರಿಗಳು ಯಾವುದೇ ರೀತಿಯಲ್ಲಿಯೂ ಪ್ರತಿಕ್ರಿಯಿಸಿಲ್ಲ. ಇಂದಿನ ನಮ್ಮ ಭೂಮಿಗೆ ಸರ್ಕಾರಿ ಬೆಲೆ ಅಡಿಯಲ್ಲಿ 1.40 ಕೋಟಿ ರೂ. ಹಣವನ್ನು ನೀಡಬೇಕಾಗು ತ್ತದೆ. ಆದ್ದರಿಂದ, ಸೂಕ್ತ ಬೆಲೆ ನಿಗದಿ ಮಾಡಬೇಕು. ಇಲ್ಲವಾದಲ್ಲಿ ನಾವು ಕೋರ್ಟ್‌ ಮೊರೆ ಹೋಗುತ್ತೇವೆ ಎಂದು ಗ್ರಾಮಸ್ಥರು ಓಬಳಾಪುರ ಗ್ರಾಮದ ಗಂಗಸಂದ್ರಮ್ಮ ದೇವಾಲಯ ಆವರಣದಲ್ಲಿ ನಡೆದ ಸಭೆಯಲ್ಲಿ ಕಟ್ಟುನಿಟ್ಟಾಗಿ ನಿರ್ಧರಿಸಿದ್ದಾರೆ.

ಗ್ರಾಮಸ್ಥರ ಆರೋಪ: ಓಬಳಾಪುರ ಗ್ರಾಮ ದಲ್ಲಿ ಹಾದು ಹೋಗಿರುವ ರಾಷ್ಟ್ರೀಯ ಹೆದ್ದಾರಿ 207ರ ರಸ್ತೆ ಅಗಲೀಕರಣಕ್ಕೆ ಭೂ ಸ್ವಾಧೀನ ಪಡಿಸಿಕೊಂಡಿದ್ದು, ಎಕರೆಗೆ ಉಪನೋಂದಣಿ ಇಲಾಖೆಯ ಸರ್ಕಾರಿ ಬೆಲೆಯಲ್ಲಿ ನೀಡಿದ್ದಾರೆ. ಅಡಕೆ, ತೆಂಗು ಮರಗಳಿಗೆ 8000 ದಿಂದ 18000 ಸಾವಿರ ರೂ.ವರೆಗೂ ಪರಿಹಾರ ನೀಡಿದ್ದಾರೆ. ಆದರೆ, ಕೆಐಎಡಿಬಿಯವರು ಹಣ ಮಾಡಲು ರೈತರ ಭೂಮಿಯನ್ನು ಕೊಳ್ಳೆ ಹೊಡೆಯುತ್ತಿದ್ದಾರೆ ಎಂದು ಗ್ರಾಮಸ್ಥರು ಆರೋಪಿಸಿದರು.

ಶಾಸಕರ ವಿರುದ್ಧ ಅಸಮಾಧಾನ: ನೆಲ ಮಂಗಲ ಶಾಸಕ ಡಾ.ಕೆ.ಶ್ರೀನಿವಾಸಮೂರ್ತಿ ಸ್ವಗ್ರಾಮದಲ್ಲೇ 500 ಎಕರೆ ಭೂಮಿ ಕಳೆದುಕೊಳ್ಳುತ್ತಿರುವ ರೈತರ ಪರವಾಗಿ ನಿಂತು ಪರಿಹಾರ ಕೊಡಿಸಲು ವಿಫಲರಾಗಿದ್ದಾರೆ. ಗ್ರಾಮದಲ್ಲಿ ಈ ಸಂಬಂಧವಾಗಿ ನಡೆಯುವ ಯಾವುದೇ ಸಭೆಗಳಿಗೆ ಬರುವುದಿಲ್ಲ. ಅಧಿಕಾರಿಗಳ ಜೊತೆಯಲ್ಲಿ ಚರ್ಚಿಸುತ್ತಿಲ್ಲ. ಸದನದಲ್ಲಿ ಈ ವಿಚಾರವಾಗಿ ಪ್ರಶ್ನೆ ಮಾಡುತ್ತೇನೆ ಎಂದವರು ಎಲ್ಲಿ ಹೋದರು. ಇವರಿಂದ ಗ್ರಾಮಕ್ಕೆ ಯಾವುದೇ ಅನುಕೂಲಗಳಿಲ್ಲ ಎಂದು ರೈತರು ಅಸಮಾಧಾನ ವ್ಯಕ್ತಪಡಿಸಿದರು.

ಕಾನೂನು ಹೋರಾಟದ ಎಚ್ಚರಿಕೆ: ಓಬಳಾಪುರ ಗ್ರಾಮದ ಮುಖಂಡ ವಕೀಲ ಹನುಮಂತೇಗೌಡ ಮಾತನಾಡಿ, ನಮ್ಮ ಗ್ರಾಮದಲ್ಲಿ ಅಡಕೆ, ತೆಂಗು ಮಾವು ಮತ್ತು ಕೋಳಿ ಸಾಕಾಣಿಕೆಯಿಂದ ಜೀವನ ನಡೆಸುತ್ತಿರುವ ರೈತರು ಸಾಕಷ್ಟು ಮಂದಿ ಇದ್ದಾರೆ. ಭೂಸ್ವಾಧೀನ ವಿರೋಧಿಸಿ ಆಕ್ಷೇಪಣೆ ಸಲ್ಲಿಸಿದರೂ, ಯಾವುದೇ ಪ್ರಯೋಜನ ಆಗಿಲ್ಲ. ನಮ್ಮ ಭೂಮಿಗೆ ಸೂಕ್ತವಾದ ಬೆಲೆ ನೀಡಬೇಕು. ಇಲ್ಲವಾದ್ದಲ್ಲಿ ನ್ಯಾಯಾಲಯದ ಮೊರೆ ಹೋಗಿ ಕಾನೂನು ಹೋರಾಟ ಮಾಡಬೇಕಾಗುತ್ತದೆ ಎಂದು ಎಚ್ಚರಿಸಿದ್ದಾರೆ.

ಗ್ರಾಮದ ಮುಖಂಡ ವಿಜಯಣ್ಣ ಕಾರಾಳಪ್ಪ, ಶಂಕರಪ್ಪ, ಹನುಮಂತರಾಜು, ಮಹಿಮಣ್ಣ, ಟಿಎಪಿಎಂಸಿ ಅದ್ಯಕ್ಷ ಗುರುಪ್ರಕಾಶ್‌, ಗ್ರಾಪಂ ಸದಸ್ಯ ಶ್ರೀಧರ್‌, ಸೋಮಶೇಖರ್‌, ಬಾಬು, ರಂಗನಾಥ್‌ ಹಾಗೂ ಗ್ರಾಮಸ್ಥರು ಇದ್ದರು.

ಟಾಪ್ ನ್ಯೂಸ್

Kharajola

Gurantee Burden: ಗ್ಯಾರಂಟಿ ಕೊಟ್ಟು, ಇನ್ನೊಂದೆಡೆ ಬೆಲೆ ಹೆಚ್ಚಿಸಿ ಬರೆ: ಸಂಸದ ಕಾರಜೋಳ

MB-Patil-Minister

Dinner Politics: ಮುಖ್ಯಮಂತ್ರಿ ಊಟಕ್ಕೆ ಹೋದ್ರೆ ತಪ್ಪೇನಿದೆ?: ಸಚಿವ ಎಂ.ಬಿ.ಪಾಟೀಲ್‌

Nagamangala-Police

Assault: ನಾಗಮಂಗಲದಲ್ಲಿ ಎಎಸ್‌ಐಯ ಹಿಡಿದು ಎಳೆದಾಡಿ, ಹಲ್ಲೆ ಮಾಡಿದ ಆರೋಪಿ!

DALAI-LAMA

ಬೈಲುಕುಪ್ಪೆಗೆ ಟಿಬೇಟಿಯನ್ನರ 14ನೇ ಧರ್ಮಗುರು ದಲೈಲಾಮಾ ಆಗಮನ

Raghvendra-Hitnal

Congress Gurantee: ಗ್ಯಾರಂಟಿಯಿಂದ ಅಭಿವೃದ್ಧಿ ಕುಂಠಿತ: ಕಾಂಗ್ರೆಸ್‌ ಶಾಸಕ

Kolara-RSS

Kolara: ಹೈಕೋರ್ಟ್‌ ಅನುಮತಿ ಬಳಿಕ ಬಿಗಿ ಭದ್ರತೆಯಲ್ಲಿ ಆರೆಸ್ಸೆಸ್‌ ಪಥಸಂಚಲನ

DVG-CM

Caste Census: ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಜಾತಿ ಗಣತಿ ವರದಿ ಮಂಡನೆ: ಸಿಎಂ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

13-ghati-1

Doddaballapura: ಘಾಟಿ ಕ್ಷೇತ್ರದಲ್ಲಿ ಶ್ರೀ ಸುಬ್ರಹ್ಮಣ್ಯಸ್ವಾಮಿ ಬ್ರಹ್ಮ ರಥೋತ್ಸವ

Nelamangala: ಸಾಕು ನಾಯಿ ಸತ್ತಿದ್ದಕ್ಕೆ ಮಾಲಕ ಆತ್ಮಹ*ತ್ಯೆ

Nelamangala: ಸಾಕು ನಾಯಿ ಸತ್ತಿದ್ದಕ್ಕೆ ಮಾಲಕ ಆತ್ಮಹ*ತ್ಯೆ

Doddaballapur: ಹೊಲದಲ್ಲಿ ಹೂ ಬಿಡಿಸುತ್ತಿದ್ದ ಮಹಿಳೆಗೆ ಕಾರು ಡಿಕ್ಕಿ: ಸಾವು

Doddaballapur: ಹೊಲದಲ್ಲಿ ಹೂ ಬಿಡಿಸುತ್ತಿದ್ದ ಮಹಿಳೆಗೆ ಕಾರು ಡಿಕ್ಕಿ: ಸಾವು

Road Mishap: ಬೈಕ್‌ ವ್ಹೀಲಿಂಗ್‌ ಮಾಡುವಾಗ ಕ್ಯಾಂಟರ್‌ಗೆ ಡಿಕ್ಕಿ; ಇಬ್ಬರು ಸಾವು

Road Mishap: ಬೈಕ್‌ ವ್ಹೀಲಿಂಗ್‌ ಮಾಡುವಾಗ ಕ್ಯಾಂಟರ್‌ಗೆ ಡಿಕ್ಕಿ; ಇಬ್ಬರು ಸಾವು

Tragic: ಮದುವೆ ಹರಕೆ ಹೊತ್ತು ಘಾಟಿ ದೇಗುಲಕ್ಕೆ ಬಂದಿದ್ದ ಯುವತಿ ಸಾವು

Tragic: ಮದುವೆ ಹರಕೆ ಹೊತ್ತು ಘಾಟಿ ದೇಗುಲಕ್ಕೆ ಬಂದಿದ್ದ ಯುವತಿ ಸಾವು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Kharajola

Gurantee Burden: ಗ್ಯಾರಂಟಿ ಕೊಟ್ಟು, ಇನ್ನೊಂದೆಡೆ ಬೆಲೆ ಹೆಚ್ಚಿಸಿ ಬರೆ: ಸಂಸದ ಕಾರಜೋಳ

MB-Patil-Minister

Dinner Politics: ಮುಖ್ಯಮಂತ್ರಿ ಊಟಕ್ಕೆ ಹೋದ್ರೆ ತಪ್ಪೇನಿದೆ?: ಸಚಿವ ಎಂ.ಬಿ.ಪಾಟೀಲ್‌

Nagamangala-Police

Assault: ನಾಗಮಂಗಲದಲ್ಲಿ ಎಎಸ್‌ಐಯ ಹಿಡಿದು ಎಳೆದಾಡಿ, ಹಲ್ಲೆ ಮಾಡಿದ ಆರೋಪಿ!

DALAI-LAMA

ಬೈಲುಕುಪ್ಪೆಗೆ ಟಿಬೇಟಿಯನ್ನರ 14ನೇ ಧರ್ಮಗುರು ದಲೈಲಾಮಾ ಆಗಮನ

Raghvendra-Hitnal

Congress Gurantee: ಗ್ಯಾರಂಟಿಯಿಂದ ಅಭಿವೃದ್ಧಿ ಕುಂಠಿತ: ಕಾಂಗ್ರೆಸ್‌ ಶಾಸಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.