ಶುದ್ಧ ನೀರಿಗಾಗಿ ಆಗ್ರಹಿಸಿ ಉಪವಾಸ ಸತ್ಯಾಗ್ರಹ

Team Udayavani, Jun 25, 2023, 3:18 PM IST

ಶುದ್ಧ ನೀರಿಗಾಗಿ ಆಗ್ರಹಿಸಿ ಉಪವಾಸ ಸತ್ಯಾಗ್ರಹ

ದೊಡ್ಡಬಳ್ಳಾಪುರ: ತಾಲೂಕಿನ ದೊಡ್ಡತುಮಕೂರು ಹಾಗೂ ಮಜರಾಹೊಸಹಳ್ಳಿ ಗ್ರಾಮ ಪಂಚಾಯಿ ತಿಗಳ ಕೆರೆ ನೀರಿನಿಂದ ಹಿಡಿದು ಶುದ್ಧ ಕುಡಿಯುವ ನೀರು ಸಹ ಕಲುಷಿತಗೊಂಡಿದ್ದು, ಗ್ರಾಮಕ್ಕೆ ಶುದ್ಧ ನೀರಿಗಾಗಿ ಸರಬರಾಜು ಮಾಡುತ್ತಿದ್ದ ನೀರಿನ ಟ್ಯಾಂಕರ್‌ಗಳನ್ನು ಸಹ ನಿಲ್ಲಿಸಲಾಗಿದೆ.

ಈ ಹಿನ್ನಲೆಯಲ್ಲಿ ಗ್ರಾಮಗಳಲ್ಲಿನ ಶುದ್ಧ ಕುಡಿಯುವ ನೀರಿನ ಘಟಕಗಳಿಗೆ ಜಕ್ಕಲಮಡಗು ಜಲಾಶಯದಿಂದ ನೀರು ಸರಬರಾಜು ಮಾಡುವಂತೆ ಆಗ್ರಹಿಸಿ, ಅರ್ಕಾವತಿ ನದಿ ಪಾತ್ರದ ಕೆರೆಗಳ ಸಂರಕ್ಷಣಾ ವೇದಿಕೆ ವತಿಯಿಂದ ತಾಲೂಕು ಕಚೇರಿ ಮುಂದೆ ರಾತ್ರಿ ಹಗಲು ನಿರಂತರವಾಗಿ ನಡೆಸು ತ್ತಿರುವ ಆಮರಣಾಂತರ ಉಪವಾಸ ಸತ್ಯಾಗ್ರಹ ಎರಡನೇ ದಿನಕ್ಕೆ ಕಾಲಿಟ್ಟಿದೆ. ಉಪವಾಸ ಸತ್ಯಾಗ್ರಾಹ ನಡೆಸುತ್ತಿರುವವರನ್ನು ಯಾರೊಬ್ಬ ಅಧಿಕಾರಿಗಳು ಹಾಗೂ ಜನ ಪ್ರತಿನಿಧಿಗಳು ಭೇಟಿ ಮಾಡಿ ಸಮಸ್ಯೆಯನ್ನು ಕೇಳಲು ಬಂದಿಲ್ಲ. ಹೀಗಾಗಿ, ನಮ್ಮೂರಿಗೆ ಶುದ್ಧ ಕುಡಿಯುವ ನೀರು ಸರಬರಾಜು ಮಾಡುವವರೆಗೂ ಉಪವಾಸ ಸತ್ಯಾಗ್ರಹವನ್ನು ನಿಲ್ಲಿಸುವುದಿಲ್ಲ ಎಂದು ವೇದಿಕೆಯ ಸಂಚಾಲಕರು ತಿಳಿಸಿದ್ದಾರೆ.

ಕುಡಿಯುವ ನೀರಿಗೂ ಪರದಾಟ: ಉಪವಾಸ ಸತ್ಯಾ ಗ್ರಹದಲ್ಲಿ ಭಾಗವಹಿಸಿರುವ ಜಿಂಕೆಬಚ್ಚಹಳ್ಳಿ ಗ್ರಾಮದ ಸತೀಶ್‌, ದೊಡ್ಡತುಮಕೂರು ಗ್ರಾಮದ ವಸಂತಕುಮಾರ್‌ ಮಾಹಿತಿ ನೀಡಿ, ನಮ್ಮೂರಿನ ಕೆರೆಗಳು ಕಲುಷಿತವಾಗಿರುವುದೇ ನಗರಸಭೆ ವ್ಯಾ ಪ್ತಿಯಿಂದ ಬರುತ್ತಿರುವ ಒಳಚರಂಡಿ ನೀರು, ಬಾಶೇಟ್ಟಿಹಳ್ಳಿ ಕೈಗಾರಿಕಾ ಪ್ರದೇಶ ಹಾಗೂ ಪಟ್ಟಣ ಪಂಚಾಯಿತಿ ವ್ಯಾಪ್ತಿಯಿಂದ ಬರುತ್ತಿರುವ ಒಳಚರಂಡಿ ನೀರಿನಿಂದ. ಕೆರೆಯ ನೀರು ಕಲುಷಿತವಾದ ನಂತರ ಮಜರಾಹೊಸಹಳ್ಳಿ, ದೊಡ್ಡತುಮಕೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗ್ರಾಮ ಗ ‌ಳಲ್ಲಿನ ಅಂತರ್ಜಲ ಕಲುಷಿತವಾಗಿ ಕುಡಿಯುವ ನೀರಿಗೂ ಪರದಾಡುವಂತಹ ಸ್ಥಿತಿ ನಿರ್ಮಾಣವಾಗಿದೆ ಎಂದರು.

ಸತ್ಯಾಗ್ರಹ ಹಿಂದಕ್ಕೆ ಪಡೆಯುವ ಪ್ರಶ್ನೆಯೇ ಇಲ್ಲ: ಗ್ರಾಮಗಳಲ್ಲಿನ ಶುದ್ಧ ಕುಡಿಯುವ ನೀರಿನ ಘಟಕಗಳಲ್ಲಿ ಬರುವ ನೀರು ಸಹ ಕುಡಿಯಲು ಯೋಗ್ಯವಾಗಿಲ್ಲ ಎಂದು ಪ್ರಯೋಗಾಲಯದ ವರದಿಯೇ ತಿಳಿಸಿದೆ. ಹಾಗಾಗಿಯೇ ರಾಜ್ಯ ವಿಧಾನ ಸಭಾ ಚುನಾವಣ ಸಂದರ್ಭದಲ್ಲಿ ಮತದಾನ ಮಾಡದೇ ಇರಲು ಬಹಿಷ್ಕಾರ ಮಾಡಿದ್ದೇವೆ. ಆದರೆ, ಚುನಾವಣಾ ಅಧಿಕಾರಿಗಳು ನೀಡಿದ ಭರವಸೆ ಹಾಗೂ ಗ್ರಾಮಗಳಲ್ಲಿನ ನೀರಿನ ಘಟಕಗಳಿಗೆ ಜಕ್ಕಲಮೊಡಗು ಜಲಾಶಯದಿಂದ ಬರುವ ನೀರನ್ನು ಟ್ಯಾಂಕರ್‌ಗಳ ಮೂಲಕ ಸರಬರಾಜು ಮಾಡಲು ಪ್ರಾರಂಭಿಸಿದ್ದರಿಂದ ಮತದಾನ ಮಾಡಿದ್ದೇವೆ. ಆದರೆ, ಅಧಿಕಾರಿಗಳು ನೀಡಿದ್ದ ಭರವಸೆ ಚುನಾವಣೆ ಮುಕ್ತಾಯವಾದ ನಂತರ ಸುಳ್ಳಾಗಿದೆ. ಟ್ಯಾಂಕರ್‌ಗಳ ಮೂಲಕ ಸರಬರಾಜು ಮಾಡುತ್ತಿದ್ದ ಕುಡಿಯುವ ನೀರನ್ನು ನಿಲ್ಲಿಸಿದ್ದಾರೆ. ನಮ್ಮ ಗ್ರಾಮಗಳಿಗೆ ಶಾಶ್ವತವಾಗಿ ಕುಡಿಯುವ ನೀರಿನ ಸೌಲಭ್ಯ ಕಲ್ಪಿಸುವವರೆಗೂ ಸತ್ಯಾಗ್ರಹವನ್ನು ಹಿಂದಕ್ಕೆ ಪಡೆಯುವ ಪ್ರಶ್ನೆಯೇ ಇಲ್ಲ ಎಂದರು.

ಪ್ರತಿ ಮನೆಯಿಂದಲೂ ಭಾಗಿ: ಸೋಮವಾರದಿಂದ ಉಪವಾಸ ಸತ್ಯಾಗ್ರಾಹದಲ್ಲಿ ಪ್ರತಿ ಮನೆಯಿಂದಲೂ ಒಬ್ಬರಂತೆ ಭಾಗವಹಿಸಲಿದ್ದಾರೆ. ಕುಡಿಯುವ ನೀರಿನ ಸಮಸ್ಯೆಗೆ ಒಳಗಾಗಿರುವ ಎರಡೂ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಲ್ಲ ಗ್ರಾಮಗಳಲ್ಲೂ ಭಾನುವಾರ ಸಭೆಗಳು ನಡೆಯಲಿವೆ. ಪ್ರತಿ ಮನೆಯಿಂದಲು ಒಬ್ಬರು ಸತ್ಯಾಗ್ರಹದಲ್ಲಿ ಭಾಗವಹಿಸಲಿದ್ದಾರೆ ಎಂದು ತಿಳಿಸಿದ್ದಾರೆ.

ಟಾಪ್ ನ್ಯೂಸ್

Gold Scam; ಪವಿತ್ರಾ ಸ್ನೇಹಿತೆ ಜತೆಗೆ ಕಾಣಿಸಿಕೊಂಡ ಚಿನ್ನ ವಂಚನೆ ಕೇಸ್‌ ಆರೋಪಿ ಶ್ವೇತಾ

Gold Scam; ಪವಿತ್ರಾ ಸ್ನೇಹಿತೆ ಜತೆಗೆ ಕಾಣಿಸಿಕೊಂಡ ಚಿನ್ನ ವಂಚನೆ ಕೇಸ್‌ ಆರೋಪಿ ಶ್ವೇತಾ

Video: ತನ್ನ ಮನೆಯ ಮುಂದೆಯೇ ಚಾಟಿಯಿಂದ ಹೊಡೆದುಕೊಂಡ ಕೆ.ಅಣ್ಣಾಮಲೈ…

Video: ತನ್ನ ಮನೆಯ ಮುಂದೆಯೇ ತನ್ನನ್ನು ಚಾಟಿಯಿಂದ ಹೊಡೆದುಕೊಂಡ ಅಣ್ಣಾಮಲೈ…

Madhya Pradesh Education Minister’s substitute statement sparks political storm

Substitutes: ರಾಜಕೀಯ ಬಿರುಗಾಳಿ ಎಬ್ಬಿಸಿದ ಮಧ್ಯಪ್ರದೇಶ ಶಿಕ್ಷಣ ಸಚಿವರ ಬದಲಿ ಹೇಳಿಕೆ

ಆನಂದಪುರ: ಬೆಳ್ಳಂಬೆಳಗ್ಗೆ ತೋಟಕ್ಕೆ ಕಾಡಾನೆಗಳ ಲಗ್ಗೆ… ಗ್ರಾಮಸ್ಥರಲ್ಲಿ ಆತಂಕ

ಆನಂದಪುರ: ಬೆಳ್ಳಂಬೆಳಗ್ಗೆ ತೋಟಕ್ಕೆ ಕಾಡಾನೆಗಳ ಲಗ್ಗೆ… ಗ್ರಾಮಸ್ಥರಲ್ಲಿ ಆತಂಕ

ಕೋಳಿ ಅಂಕಕ್ಕೆ ಪೊಲೀಸ್‌ ದಾಳಿ: ಗುರಿಕಾರರಿಂದ ವ್ಯಾಘ್ರ ಚಾಮುಂಡಿ ದೈವಕ್ಕೆ ಮೊರೆ

ಕೋಳಿ ಅಂಕಕ್ಕೆ ಪೊಲೀಸ್‌ ದಾಳಿ: ಗುರಿಕಾರರಿಂದ ವ್ಯಾಘ್ರ ಚಾಮುಂಡಿ ದೈವಕ್ಕೆ ಮೊರೆ

National Mourning: Postponement of Mangaluru Beach Festival

National Mourning: ಮಂಗಳೂರಿನ ಬೀಚ್‌ ಉತ್ಸವ ಮುಂದೂಡಿಕೆ

Clown Kohli: ವಿರಾಟ್‌ ಕೊಹ್ಲಿಗೆ ಅವಮಾನ ಮಾಡಿದ ಆಸೀಸ್‌ ಮಾಧ್ಯಮಗಳು!

Clown Kohli: ವಿರಾಟ್‌ ಕೊಹ್ಲಿಗೆ ಅವಮಾನ ಮಾಡಿದ ಆಸೀಸ್‌ ಮಾಧ್ಯಮಗಳು!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Tragic: ಮದುವೆ ಹರಕೆ ಹೊತ್ತು ಘಾಟಿ ದೇಗುಲಕ್ಕೆ ಬಂದಿದ್ದ ಯುವತಿ ಸಾವು

Tragic: ಮದುವೆ ಹರಕೆ ಹೊತ್ತು ಘಾಟಿ ದೇಗುಲಕ್ಕೆ ಬಂದಿದ್ದ ಯುವತಿ ಸಾವು

2-

Ayodhya ರಾಮನ ದರ್ಶನ ಪಡೆದಿದ್ದ “ಬಸಪ್ಪ” ಈಗ ಶಬರಿಮಲೆಗೆ ಪ್ರಯಾಣ!

Nelamangala: ಐಷಾರಾಮಿ ಕಾರಿನ ಮೇಲೆ ಬಿದ್ದ ಕಂಟೈನರ್… ಒಂದೇ ಕುಟುಂಬದ 6 ಮಂದಿ ಸಾವು

Nelamangala: ಐಷಾರಾಮಿ ಕಾರಿನ ಮೇಲೆ ಬಿದ್ದ ಕಂಟೈನರ್… ಒಂದೇ ಕುಟುಂಬದ 6 ಮಂದಿ ಸಾ*ವು

4

Crime: ರೌಡಿಶೀಟರ್‌ ಕೊಲೆ ಯತ್ನ; ಆರೋಪಿಗೆ ಗುಂಡೇಟು

Doddaballapur: ಎರಡೂ ಬಸ್‌ ನಿಲ್ದಾಣಕ್ಕೆ ಬೇಕಿದೆ ಕಾಯಕಲ್ಪ!

Doddaballapur: ಎರಡೂ ಬಸ್‌ ನಿಲ್ದಾಣಕ್ಕೆ ಬೇಕಿದೆ ಕಾಯಕಲ್ಪ!

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Gold Scam; ಪವಿತ್ರಾ ಸ್ನೇಹಿತೆ ಜತೆಗೆ ಕಾಣಿಸಿಕೊಂಡ ಚಿನ್ನ ವಂಚನೆ ಕೇಸ್‌ ಆರೋಪಿ ಶ್ವೇತಾ

Gold Scam; ಪವಿತ್ರಾ ಸ್ನೇಹಿತೆ ಜತೆಗೆ ಕಾಣಿಸಿಕೊಂಡ ಚಿನ್ನ ವಂಚನೆ ಕೇಸ್‌ ಆರೋಪಿ ಶ್ವೇತಾ

Video: ತನ್ನ ಮನೆಯ ಮುಂದೆಯೇ ಚಾಟಿಯಿಂದ ಹೊಡೆದುಕೊಂಡ ಕೆ.ಅಣ್ಣಾಮಲೈ…

Video: ತನ್ನ ಮನೆಯ ಮುಂದೆಯೇ ತನ್ನನ್ನು ಚಾಟಿಯಿಂದ ಹೊಡೆದುಕೊಂಡ ಅಣ್ಣಾಮಲೈ…

Madhya Pradesh Education Minister’s substitute statement sparks political storm

Substitutes: ರಾಜಕೀಯ ಬಿರುಗಾಳಿ ಎಬ್ಬಿಸಿದ ಮಧ್ಯಪ್ರದೇಶ ಶಿಕ್ಷಣ ಸಚಿವರ ಬದಲಿ ಹೇಳಿಕೆ

Ex PM:ಪ್ರಚಾರದಿಂದ ದೂರ- ದೇಶ ಕಂಡ ಸರಳ, ಸಜ್ಜನಿಕೆಯ ಮೊದಲ ಆರ್ಥಿಕ ತಜ್ಞ ಪ್ರಧಾನಿ

Ex PM:ಪ್ರಚಾರದಿಂದ ದೂರ- ದೇಶ ಕಂಡ ಸರಳ, ಸಜ್ಜನಿಕೆಯ ಮೊದಲ ಆರ್ಥಿಕ ತಜ್ಞ ಪ್ರಧಾನಿ

ಆನಂದಪುರ: ಬೆಳ್ಳಂಬೆಳಗ್ಗೆ ತೋಟಕ್ಕೆ ಕಾಡಾನೆಗಳ ಲಗ್ಗೆ… ಗ್ರಾಮಸ್ಥರಲ್ಲಿ ಆತಂಕ

ಆನಂದಪುರ: ಬೆಳ್ಳಂಬೆಳಗ್ಗೆ ತೋಟಕ್ಕೆ ಕಾಡಾನೆಗಳ ಲಗ್ಗೆ… ಗ್ರಾಮಸ್ಥರಲ್ಲಿ ಆತಂಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.