“ಸಾವಿನ ನಂತರ ನೇತ್ರದಾನ ಮಾಡಿ ದೃಷ್ಟಿ ನೀಡಿ’


Team Udayavani, Oct 14, 2017, 12:39 PM IST

blore-r-5.jpg

ದೊಡ್ಡಬಳ್ಳಾಪುರ: ಕಣ್ಣಿನ ಬಗ್ಗೆ ಅರಿವು ಮೂಡಿಸಿಕೊಳ್ಳುವುದರೊಂದಿಗೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡರೆ ಅಂಧತ್ವ ಸರಿಪಡಿಸಿಕೊಳ್ಳಬಹುದಾಗಿದೆ. ಸತ್ತ ನಂತರ ನೇತ್ರದಾನ ಮಾಡಿದರೆ ಇನ್ನೊಬ್ಬರಿಗೆ ದೃಷ್ಟಿ ನೀಡಬಹುದಾಗಿದೆ ಎಂದು ಗ್ರಾಮೀಣ ಅಭ್ಯುದಯ ಸಂಸ್ಥೆ ಕಾರ್ಯದರ್ಶಿ ಅಮಲಿನಾಯ್ಕ ತಿಳಿಸಿದರು. ನಗರದ ಗ್ರಾಮೀಣ ಅಭ್ಯುದಯ ಸಂಸ್ಥೆ, ಎಸ್ಸಿಎಲ್‌ಆರ್‌ ಕಂಪನಿ, ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ ದೇವರಾಜ್‌ ಅರಸ್‌ ಕಾಲೇಜು ಸಹಯೋಗದೊಂದಿಗೆ ವಿಶ್ವ ದೃಷ್ಟಿ ದಿನಾಚರಣೆ ಅಂಗವಾಗಿ ಬಸವ ಭವನದಿಂದ ಭಗತ್‌ಸಿಂಗ್‌ ಕ್ರೀಡಾಂಗಣ ದವರೆಗೆ ನಡೆದ ಅಂಧ ನಡಿಗೆ ಜಾಥಾದಲ್ಲಿ ಅವರು ಮಾತನಾಡಿದರು.

ಸಾವಿನ ನಂತರ ಕಣ್ಣುಗಳನ್ನು ದಾನ ಮಾಡಿ: ಗ್ರಾಮಾಂತರ ಭಾಗಗಳಲ್ಲಿ ಹಳೆ ಪದ್ಧತಿಗಳಿಗೆ ಕಟ್ಟುಬಿದ್ದು, ಕಣ್ಣುಗಳನ್ನು ಮಣ್ಣು ಮಾಡುತ್ತಿದ್ದಾರೆ. ಆ ರೀತಿ ಸತ್ತ ವ್ಯಕ್ತಿಯೊಂದಿಗೆ ಕಣ್ಣುಗಳನ್ನು ಸಮಾಧಿ ಮಾಡಿಬಿಟ್ಟರೆ ಅದು ನಿರುಪಯುಕ್ತ. ಅಂಥ ಸನ್ನಿವೇಶದಲ್ಲಿರುವ ಜನರಿಗೆ ನೇತ್ರದಾನದ ಮಹತ್ವ ತಿಳಿಸಬೇಕು. ಆ ಮೂಲಕ ನಮ್ಮ ನಡುವೆ ಬದುಕುತ್ತಿರುವ ಇಬ್ಬರು ವ್ಯಕ್ತಿಗಳಿಗೆ ದೃಷ್ಟಿ ನೀಡಬಹುದು. ಕಣ್ಣಿನ ಬಗ್ಗೆ ಜಾಗೃತಿ ಮೂಡಿಸಲು ವಿಶ್ವದ್ಯಾಂತ ವಿಶ್ವ ದೃಷ್ಟಿ ದಿನ ಆಚರಿಸಲಾಗುತ್ತಿದ್ದು, ಇದರ ಉದ್ದೇಶ ಜನರಲ್ಲಿ ಅಂಧತ್ವದ ಬಗ್ಗೆ ಮತ್ತು ಕಣ್ಣಿನ ನ್ಯೂನ್ಯತೆಯ ಬಗ್ಗೆ ಅರಿವು ಮೂಡಿಸುವುದಾಗಿದೆ. ಇದರಿಂದ ಶೇಕಡ 80 ರಷ್ಟು ಅಂಧತ್ವ ತಡೆಗಟ್ಟಬಹುದು ಅಥವಾ ಸರಿಪಡಿಸಬಹುದು. ಮನುಷ್ಯನು ಸತ್ತಮೇಲೆ ಅವರ ಕಣ್ಣುಗಳನ್ನು ದಾನಮಾಡುವ ಮುಖಾಂತರ ಇಬ್ಬರಿಗೆ ದೃಷ್ಟಿ ನೀಡಬಹುದು ಎಂದು ತಿಳಿಸಿದರು.

ಸಾಧನೆಗೆ ಯಾವುದೂ ಅಡ್ಡಿ ಬರಲ್ಲ: ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಪ್ರಾಂಶುಪಾಲ ರಾಜಣ್ಣ ಮಾತನಾಡಿ, ಪ್ರಪಂಚದಲ್ಲಿ ಅನೇಕ ಜನರು ವಿವಿಧ ಕೊರತೆಗಳಿಂದ ಜೀವನ ಸಾಗಿಸುತ್ತಿದ್ದಾರೆ.  ಮನುಷ್ಯರಲ್ಲಿ ಸಾಕಷ್ಟು ನ್ಯೂನತೆಗಳಿರುತ್ತವೆ. ಆದರೆ ಅವನ್ನೆಲ್ಲಾ ಮೆಟ್ಟಿಲುಗಳನ್ನಾಗಿ ಸ್ವೀಕರಿಸಿ ಸಾಧಕರಾಗಬೇಕಾಗಿದೆ. ನಮಗೆ ಇರುವ ಕೊರತೆಗಳ ಬಗ್ಗೆ ಆಲೋಚನೆ ಮಾಡುತ್ತಾ ಜೀವನ ವ್ಯರ್ಥ ಮಾಡಿಕೊಳ್ಳದೇ ದೇವರು ನೀಡಿರುವ ವಿಚಾರಗಳನ್ನು ಗಣನೆಗೆ ತೆಗೆದುಕೊಳ್ಳಬೇಕು. ಆ ಮೂಲಕ ಸಕಾರಾತ್ಮಕ ಚಿಂತನೆಗಳಿಗೆ ಮಹತ್ವ ನೀಡಬೇಕು. ಸಾಧನೆಗೆ ಯಾವುದೂ ಅಡ್ಡಿ ಬರುವುದಿಲ್ಲ ಎನ್ನುವುದನ್ನು ಅನೇಕ ಅಂಧರು ನಿರೂಪಿಸಿದ್ದಾರೆ ಎಂದರು.

ಕಾರ್ಯಕ್ರಮದಲ್ಲಿ ಎಸ್ಸಿಎಲ್‌ಆರ್‌ ಸಂಸ್ಥೆ ವಿತರಣಾ ವ್ಯವಸ್ಥಾಪಕ ಮುರುಳೀಕೃಷ್ಣ, ದೇವರಾಜ್‌ ಅರಸ್‌ ವ್ಯವಹಾರ ನಿರ್ವಹಣಾ ಕಾಲೇಜಿನ ಪ್ರಾಂಶುಪಾಲ ರವಿಕಿರಣ್‌, ಎಸ್ಸಿಎಲ್‌ಆರ್‌ ಉತ್ಪಾದನಾ ವ್ಯವಸ್ಥಾಪಕ ಹಿರೆನ್‌ ಮಲ್ಪೆ, ಕಾನೂನು ವ್ಯವಸ್ಥಾಪಕಿ ಪ್ರಿಯಾ, ಗ್ರಾಮೀಣ ಅಭ್ಯುದಯ ಸಂಸ್ಥೆ ಕಾರ್ಯಕಾರಿ ನಿರ್ದೇಶಕ ಕೃಷ್ಣಾ ನಾಯಕ್‌, ಬಸವರಾಜು, ಸೋಮಶೇಖರ್‌, ಮೋಹನ್‌, ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಎನ್‌ ಎಸ್‌ಎಸ್‌ ಅಧಿಕಾರಿ ಜಿ.ಶ್ರೀನಿವಾಸ್‌, ಡಾ.ಪ್ರಕಾಶ್‌, ಅಮರನಾರಾಯಣ ಸ್ವಾಮಿ, ಸದಾಶಿವ ರಾಮಚಂದ್ರ ಗೌಡ, ಶ್ರೀರಾಮ ಆಸ್ಪತ್ರೆ ನಿರ್ದೇಶಕ ಡಾ.ಎಚ್‌.ಜಿ.ವಿಜಯ ಕುಮಾರ್‌, ಕಾಲೇಜು ವಿದ್ಯಾರ್ಥಿಗಳು
ಭಾಗವಹಿಸಿದ್ದರು.

ಟಾಪ್ ನ್ಯೂಸ್

adani (2)

Adani; 2,200 ಕೋಟಿ ರೂ. ಲಂಚ: ಅಮೆರಿಕ ಸಮನ್ಸ್‌

BBK11: ದುಡ್ಡು ಕದ್ದ ಚೈತ್ರಾನಿಗೆ ಕಿಚ್ಚನ ಶಹಬ್ಬಾಸ್ – ಪಂಚಾಯ್ತಿಯಲ್ಲಿ ಏನೆಲ್ಲ ಆಯಿತು

BBK11: ದುಡ್ಡು ಕದ್ದ ಚೈತ್ರಾನಿಗೆ ಕಿಚ್ಚನ ಶಹಬ್ಬಾಸ್ – ಪಂಚಾಯ್ತಿಯಲ್ಲಿ ಏನೆಲ್ಲ ಆಯಿತು

yathnal

Setback BJP: ಜನರಿಂದ ವಿಜಯೇಂದ್ರ ನಾಯಕತ್ವ ತಿರಸ್ಕಾರ, ರಾಜೀನಾಮೆ ನೀಡಲಿ: ಶಾಸಕ ಯತ್ನಾಳ್‌

bjp-congress

Assembly bypolls; 14 ರಾಜ್ಯಗಳ 48 ಸ್ಥಾನಗಳ ಗೆಲುವಿನ ವಿವರ ಇಲ್ಲಿದೆ: ಎನ್‌ಡಿಎ ಮೇಲುಗೈ

BJP FLAG

Maharashtra ರಾಜ್ಯಸಭೆ ಬಹುಮತದತ್ತ ಬಿಜೆಪಿ ಚಿತ್ತ

kolahara-TV

By Election: ಮೂರು ಕ್ಷೇತ್ರದಲ್ಲೂ ಬಿಜೆಪಿ ಸೋತಿದ್ದಕ್ಕೆ ಟಿವಿಯನ್ನೇ ಒಡೆದು ಹಾಕಿದ ಮುಖಂಡ!

8

Basavaraj Bommai: ಹಣದ ಹೊಳೆಹರಿಸಿ ಕಾಂಗ್ರೆಸ್‌ ಗೆಲುವು: ಬೊಮ್ಮಾಯಿ ಆರೋಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Anekal: ರೌಡಿಶೀಟರ್‌ ಮೇಲೆ ಮಾರಕಾಸ್ತ್ರಗಳಿಂದ ದಾಳಿ

Anekal: ರೌಡಿಶೀಟರ್‌ ಮೇಲೆ ಮಾರಕಾಸ್ತ್ರಗಳಿಂದ ದಾಳಿ

nelamangala

Leopard Attack: ನೆಲಮಂಗಲ ಸಮೀಪ ಚಿರತೆ ದಾಳಿಗೆ ರೈತ ಮಹಿಳೆ ಬಲಿ

Stray dogs: ಅಂ.ರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬೀದಿ ನಾಯಿಗಳ ಹಾವಳಿ

Stray dogs: ಅಂ.ರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬೀದಿ ನಾಯಿಗಳ ಹಾವಳಿ

Tragic: ಮರದ ಕಾರ್ಖಾನೆಯಲ್ಲಿ ಆಕಸ್ಮಿಕ ಬೆಂಕಿ; ಕಾರ್ಮಿಕ ಸಜೀವ ದಹನ

Tragic: ಮರದ ಕಾರ್ಖಾನೆಯಲ್ಲಿ ಆಕಸ್ಮಿಕ ಬೆಂಕಿ; ಕಾರ್ಮಿಕ ಸಜೀವ ದಹನ

Market: ಬೆಲೆ ಕುಸಿತ; ಬೂದು ಕುಂಬಳ ಬೀದಿಪಾಲು!

Market: ಬೆಲೆ ಕುಸಿತ; ಬೂದು ಕುಂಬಳ ಬೀದಿಪಾಲು!

MUST WATCH

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

ಹೊಸ ಸೇರ್ಪಡೆ

adani (2)

Adani; 2,200 ಕೋಟಿ ರೂ. ಲಂಚ: ಅಮೆರಿಕ ಸಮನ್ಸ್‌

Modi-Tour

Tour: ಮೂರು ದೇಶ ಪ್ರವಾಸ: ಪ್ರಧಾನಿ ಮೋದಿ 31 ದ್ವಿಪಕ್ಷೀಯ ಸಭೆಗಳು!

BBK11: ದುಡ್ಡು ಕದ್ದ ಚೈತ್ರಾನಿಗೆ ಕಿಚ್ಚನ ಶಹಬ್ಬಾಸ್ – ಪಂಚಾಯ್ತಿಯಲ್ಲಿ ಏನೆಲ್ಲ ಆಯಿತು

BBK11: ದುಡ್ಡು ಕದ್ದ ಚೈತ್ರಾನಿಗೆ ಕಿಚ್ಚನ ಶಹಬ್ಬಾಸ್ – ಪಂಚಾಯ್ತಿಯಲ್ಲಿ ಏನೆಲ್ಲ ಆಯಿತು

Syed Mushtaq Ali Trophy T20: ಕರ್ನಾಟಕಕ್ಕೆ 6 ರನ್‌ಗಳ ಸೋಲು

Syed Mushtaq Ali Trophy T20: ಕರ್ನಾಟಕಕ್ಕೆ 6 ರನ್‌ಗಳ ಸೋಲು

ICC Champions Trophy: ನ.26ಕ್ಕೆ ಐಸಿಸಿ ತುರ್ತು ಸಭೆ?

ICC Champions Trophy: ನ.26ಕ್ಕೆ ಐಸಿಸಿ ತುರ್ತು ಸಭೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.