ಗುಡಿ ಕೈಗಾರಿಕೆಗೆ ಹೆಚ್ಚಿನ ಆದ್ಯತೆ ನೀಡಿ: ಮಾಜಿ ಶಾಸಕ
ಮುಂದಿನ ದಿನಗಳಲ್ಲಿ 3ನೇ ಅಂತಸ್ತಿನ ಕಟ್ಟಡ ನಿರ್ಮಾಣಕ್ಕೆ ಆದ್ಯತೆ ನೀಡಬೇಕು
Team Udayavani, Sep 23, 2022, 6:14 PM IST
ದೇವನಹಳ್ಳಿ: ರೈತರ ಬದುಕು ಹಸನಾಗಲು ಸಹಕಾರ ಸಂಘಗಳ ಪಾತ್ರ ಅತಿ ಮುಖ್ಯವಾಗಿದೆ. ಗ್ರಾಮೀಣ ಪ್ರದೇಶದ ರೈತರಿಗೆ ಹೆಚ್ಚು ಸಾಲ ನೀಡುವುದರಿಂದ ಆರ್ಥಿಕವಾಗಿ ಸದೃಢರಾಗಲು ಸಹಕಾರಿ ಆಗಿದೆ ಎಂದು ಮಾಜಿ ಶಾಸಕ ಮುನಿನರಸಿಂಹಯ್ಯ ತಿಳಿಸಿದರು.
ಪಟ್ಟಣದ ನಗರೇಶ್ವರ ಕಲ್ಯಾಣ ಮಂದಿರದಲ್ಲಿ ತಾಲೂಕು ಗ್ರಾಮೋದ್ಯೋಗ ಕಸಬುದಾರರ ಕೈಗಾರಿಕ ವಿವಿಧೋದ್ದೇಶ ಸಹಕಾರ ಸಂಘ ವತಿಯಿಂದ ಹಮ್ಮಿಕೊಂಡಿದ್ದ 2021-22ನೇ ಸಾಲಿನ ಸರ್ವಸದಸ್ಯರ ವಾರ್ಷಿಕ ಸಭೆಯನ್ನು ಉದ್ಘಾಟಿಸಿ ಮಾತನಾಡಿದ ಅವರು, ಸಹಕಾರ ತತ್ವದ ಅಡಿಯಲ್ಲಿ ಸಹಕಾರ ಸಂಘಗಳು ಕಾರ್ಯನಿರ್ವಹಿಸುತ್ತಿದೆ. ಗ್ರಾಮೀಣ ಪ್ರದೇಶದ ಜನರಿಗೆ ಸಹಕಾರ ಸಂಘಗಳ ಮೂಲಕ ನಾನಾ ರೀತಿಯಲ್ಲಿ ಸಾಲ ಸೌಲಭ್ಯ ನೀಡುತ್ತಿದೆ. ಸಹಕಾರ ಸಂಘಗಳು ಗುಡಿ ಕೈಗಾರಿಗೆಗಳಿಗೆ ಹೆಚ್ಚಿನ ಆದ್ಯತೆ ನೀಡಬೇಕು ಎಂದರು.
ತಾಲೂಕು ಖಾದಿ ಬೋರ್ಡ್‌ಗೆ ತನ್ನದೇ ಆದ ಇತಿಹಾಸ ಇದೆ. ಕನಿಷ್ಟ 2 ಕೋಟಿ ರೂ. ಸಾಲ ಸೌಲಭ್ಯ ನೀಡಬೇಕು. ಪ್ರತಿ ಹಳ್ಳಿಯಲ್ಲೂ ಸ್ವಂತ ಉದ್ಯೋಗ ಕಲ್ಪಿಸುವ ನಿಟ್ಟಿನಲ್ಲಿ ಗ್ರಾಮೀಣ ಪ್ರದೇಶಗಳಲ್ಲೇ ಸಣ್ಣ ಕೈಗಾರಿಕೆ ಮಾಡಿ ಅನುಕೂಲ ಕಲ್ಪಿಸಬೇಕು. ಸಹಕಾರ ಸಂಘಗಳು ಬಲಿಷ್ಠವಾಗಿರಬೇಕು. ಸಹಕಾರ ಸಂಘಗಳು ಹೆಚ್ಚಿನ ಅಭಿವೃದ್ಧಿ ಸಾಧಿಸುವಂತೆ ಆಗಬೇಕು. ಗುಡಿ ಕೈಗಾರಿಕೆಗಳಿಗೆ ಉತ್ತೇಜನ ನೀಡಿದರೆ ಸಾಕಷ್ಟು ಮಹಿಳೆಯರು ಹಾಗೂ ಸಾರ್ವಜನಿಕರು
ಷೇರುದಾರರಾಗಿ ಬರುತ್ತಾರೆ ಎಂದರು.
ಕಟ್ಟಡ ನಿರ್ಮಾಣಕ್ಕೆ ಆದ್ಯತೆ: ಜಿಪಂ ಮಾಜಿ ಸದಸ್ಯ ಲಕ್ಷ್ಮೀನಾರಾಯಣಪ್ಪ ಮಾತನಾಡಿ, ಗುಡಿ ಕೈಗಾರಿಕೆ ಮತ್ತು ಕೈಗಾರಿಕೆ ಮಾಡುವವರಿಗೆ ಕೌಶಲ್ಯ ಮತ್ತು ತರಬೇತಿ ಶಿಬಿರ ಮಾಡಿದರೆ ಅನುಕೂಲ ಆಗುತ್ತದೆ. ಖಾದಿ ವಸ್ತುಗಳ ಮಾರಾಟ ಸಹ ಆಗಬೇಕು. ಮುಂದಿನ ದಿನಗಳಲ್ಲಿ 3ನೇ ಅಂತಸ್ತಿನ ಕಟ್ಟಡ ನಿರ್ಮಾಣಕ್ಕೆ ಆದ್ಯತೆ ನೀಡಬೇಕು ಎಂದು ಹೇಳಿದರು.
ವಾಣಿಜ್ಯ ಸಂಕೀರ್ಣ ನಿರ್ಮಾಣ: ತಾಲೂಕು ಗ್ರಾಮೋದ್ಯೋಗ ಕಸಬುದಾರರ ಕೈಗಾರಿಕ ವಿವಿಧೋದ್ದೇಶ ಸಹಕಾರ ಸಂಘದ ಅಧ್ಯಕ್ಷ ಮುನಿರಾಜು ಮಾತನಾಡಿ, ಖಾದಿ ಭಂಡಾರ ಮಳಿಗೆಯನ್ನು ನಿರ್ಮಿಸಲಾಗುವುದು. ತಾಲೂಕು ಗ್ರಾಮೋದ್ಯೋಗ ಕಸಬುದಾರರ ಕೈಗಾರಿಕೆ ಸಹಕಾರ ಸಂಘದಿಂದ ಬರುವ ಸೌಲಭ್ಯಗಳನ್ನು ಸದಸ್ಯರಿಗೆ ತಲುಪಿಸುವ ಕೆಲಸ ಮಾಡಲಾಗುವುದು. ಸಂಘದಿಂದ ದೊರೆಯುವ ಸೌಲಭ್ಯಗಳನ್ನು ಅರ್ಹ ಫಲಾನುಭವಿಗಳಿಗೆ ತಲುಪಿಸುವ ನಿಟ್ಟಿನಲ್ಲಿ ಕಾರ್ಯಕ್ರಮ ರೂಪಿಸಲಾಗುತ್ತದೆ. ಈಗಾಗಲೇ ವಾಣಿಜ್ಯ ಸಂಕೀರ್ಣ ನಿರ್ಮಾಣ ಆಗಿವೆ ಎಂದು ಹೇಳಿದರು.
ಮಾಜಿ ಶಾಸಕ ಕೆ.ವೆಂಕಟಸ್ವಾಮಿ, ಮಾಜಿ ಜಿಪಂ ಅಧ್ಯಕ್ಷ ಬಿ.ರಾಜಣ್ಣ, ಮಾಜಿ ಸದಸ್ಯ ಕೆ.ಸಿ. ಮಂಜುನಾಥ್, ಕೆಪಿಸಿಸಿ ಹಿಂದುಳಿದ ವರ್ಗದ ಉಪಾಧ್ಯಕ್ಷ ಸಿ.ಜಗನ್ನಾಥ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪ್ರಸನ್ನಕುಮಾರ್, ಬ್ಲಾಕ್ ಕಾಂಗ್ರೆಸ್ ಮಾಜಿ ಅಧ್ಯಕ್ಷ ಮುನಿರಾಜು, ಜಿಲ್ಲಾ ಕೃಷಿಕಸಮಾಜದ ಅಧ್ಯಕ್ಷ ಎಸ್.ಆರ್.ರವಿಕುಮಾರ್, ತಾಲೂಕು ಕೃಷಿಕ ಸಮಾಜದ ಅಧ್ಯಕ್ಷ ಕೆ. ಶ್ರೀನಿವಾಸ್ ಗೌಡ, ಕೆಪಿಸಿಸಿ ಸದಸ್ಯ ಎ.ಚಿನ್ನಪ್ಪ, ಅಣ್ಣೇಶ್ವರ ಗ್ರಾಪಂ ಮಾಜಿ ಅಧ್ಯಕ್ಷ ಎ.ಚಂದ್ರಶೇಖರ್, ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಕೆ.ಆರ್.ನಾಗೇಶ್, ಸಂಘದ ಕಾರ್ಯದರ್ಶಿ ಎಚ್.ಎನ್. ಶ್ರೀನಿವಾಸ್ ಮೂರ್ತಿ, ಸಂಘದ ಉಪಾಧ್ಯಕ್ಷೆ ನಾಗಮಣಿ ಬೈರೇಗೌಡ, ನಿರ್ದೇಶಕ ಎಸ್. ನಾಗೇಗೌಡ, ಪಟಾಲಪ್ಪ, ಲಕ್ಷ್ಮಣ್‌ಮೂರ್ತಿ, ಆರ್. ಜಯ ರಾಮ್,ಬಿ.ಎಂ. ನಾರಾಯಣಸ್ವಾಮಿ, ಸೈಫುಲ್ಲಾ, ನಾರಾಯಣ ಸ್ವಾಮಿ, ಮಂಜುಳಾ, ಸುನಂದಮ್ಮ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.