ಬ್ಯಾಂಕ್ ಖಾತೆ ಹೊಂದಿದ್ದರೆ ಮಾತ್ರ ಸರ್ಕಾರದ ಸೌಲಭ್ಯ
Team Udayavani, Aug 9, 2019, 2:29 PM IST
ಹೊಸಕೋಟೆ: ಸಮಾಜದ ಎಲ್ಲಾ ವರ್ಗದ ಜನರೂ ಸಹ ಬ್ಯಾಂಕ್‌ಗಳಲ್ಲಿ ಖಾತೆ ಹೊಂದಿದಲ್ಲಿ ಮಾತ್ರ ಸರ್ಕಾರದ ಸೌಲಭ್ಯಗಳನ್ನು ಪಡೆಯಲು ಸಾಧ್ಯವಾಗ ಲಿದೆ ಎಂದು ತಹಶೀಲ್ದಾರ್ ಕೆ. ರಮೇಶ್ ಹೇಳಿದರು.
ನಗರದ ಶ್ರೀಕಂಠೇಶ್ವರ ಕಲ್ಯಾಣ ಮಂಟಪದಲ್ಲಿ ಬೆಂಗಳೂರಿನ ಕರ್ನಾಟಕ ಕಿರು ಹಣಕಾಸು ಸಂಸ್ಥೆಗಳ ಒಕ್ಕೂಟ, ಉಜ್ಜೀವನ್ ಬ್ಯಾಂಕ್ ವತಿಯಿಂದ ಏರ್ಪಡಿಸಿದ್ದ ಹಣಕಾಸು ವ್ಯವಹಾರದ ತಿಳಿವಳಿಕೆ ಸಭೆಯಲ್ಲಿ ಮಾತನಾಡಿದರು.
ಶೂನ್ಯ ಠೇವಣಿಯ ಜನಧನ ಖಾತೆ: ಅಡುಗೆ ಅನಿಲಕ್ಕೆ ನೀಡುವ ಸಹಾಯಧನ ಒಳಗೊಂಡಂತೆ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆಯಡಿ ನೀಡುವ ಹಣ ಸಹ ಫಲಾನುಭವಿಗಳ ಬ್ಯಾಂಕ್ ಖಾತೆಗೆ ವರ್ಗಾಯಿಸ ಬೇಕಾಗಿದೆ. ಈ ಉದ್ದೇಶ ಕ್ಕಾಗಿಯೇ ಬ್ಯಾಂಕ್‌ಗಳಲ್ಲಿ ಶೂನ್ಯ ಠೇವಣಿಯ ಜನ್‌ಧನ್ ಖಾತೆ ತೆರೆಯಲು ಅವಕಾಶ ಕಲ್ಪಿಸ ಲಾಗಿದೆ. ಇದರಿಂದ ದುರುಪ ಯೋಗ ತಡೆಗಟ್ಟಲು ಸಾಧ್ಯವಾಗಿ ಯೋಜನೆಗಳು ಸಹ ಸಾರ್ಥಕ ಗೊಳ್ಳಲಿವೆ. ರಾಷ್ಟ್ರದ ಆರ್ಥಿಕ ಚಟುವಟಿಕೆಗಳಲ್ಲಿ ಎಲ್ಲರೂ ಸಕ್ರಿಯವಾಗಿ ಪಾಲ್ಗೊಳ್ಳುವ ದಿಶೆಯಲ್ಲಿ ಜನಜಾಗೃತಿ ಮೂಡಿಸುವಲ್ಲಿ ಇಂತಹ ಕಾರ್ಯಕ್ರಮಗಳು ಸಹಕಾರಿಯಾಗಿವೆ. ತಾಲೂಕು ಕೇಂದ್ರಗಳಲ್ಲಷ್ಟೇ ಅಲ್ಲದೆ ಹೋಬಳಿ ಹಂತದಲ್ಲೂ ಹಮ್ಮಿಕೊಳ್ಳುವುದು ಹೆಚ್ಚು ಪರಿಣಾಮಕಾರಿ ಯಾಗಲಿದೆ ಎಂದರು.
ಬ್ಯಾಂಕ್ ಖಾತೆ ಹೊಂದಿ ಸರ್ಕಾರದ ಸೌಲಭ್ಯ ಪಡೆಯಿರಿ: ಲೀಡ್ ಬ್ಯಾಂಕಿನ ಜಿಲ್ಲಾ ವ್ಯವಸ್ಥಾಪಕ ಮಧು ಸೂದನ್ ಮಾತನಾಡಿ, ಹಣಕಾಸು ವ್ಯವಹಾರ ಮಾಡುವ ಪ್ರತಿಯೊಬ್ಬರೂ ಬ್ಯಾಂಕ್‌ನಲ್ಲಿ ಖಾತೆ ಹೊಂದುವ ಮೂಲಕ ಸರ್ಕಾರದ ಅಂಗೀಕಾರ ದೊಂದಿಗೆ ಸಾಲ ಸೌಲಭ್ಯಗಳನ್ನು ಸಹ ಪಡೆಯಲು ಸಾಧ್ಯವಾಗಲಿದೆ. ಸಣ್ಣ ವ್ಯಾಪಾರಿಗಳನ್ನು ಸ್ವಾವಲಂಬಿ ಗಳನ್ನಾಗಿಸುವ ಪ್ರಮುಖ ಉದ್ದೇಶದಿಂದ ಜಾರಿಗೊ ಳಿಸಿರುವ ಯೋಜನೆಯಡಿ ಒಕ್ಕೂಟವು ಇತರೆ ಸಂಸ್ಥೆಗಳ ಸಹಯೋಗದಲ್ಲಿ ಗ್ರಾಹಕರಿಗೆ ಸಂಸ್ಥೆಯು ಸಾಲ ಸೌಲಭ್ಯ ನೀಡಿರುವುದಲ್ಲದೆ 20 ಸಾವಿರಕ್ಕೂ ಹೆಚ್ಚು ಯುವಕರು ಉದ್ಯೋಗ ಪಡೆದಿದ್ದಾರೆೆ ಎಂದರು.
ಕರ್ನಾಟಕ ಕಿರು ಹಣಕಾಸು ಸಂಸ್ಥೆಗಳ ಒಕ್ಕೂಟದ ಅಧ್ಯಕ್ಷ ವಿ.ಎನ್.ಹೆಗ್ಡೆ, ತರಬೇತುದಾರ ನಾರಾಯಣ ಸ್ವಾಮಿ, ಭಾರತೀಯ ಸ್ಟೇಟ್ ಬ್ಯಾಂಕಿನ ವ್ಯವಸ್ಥಾಪಕ ಸುರೇಶ್ ಬೆಳ್ಳುಬ್ಬಿ ಮತ್ತಿತರರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gas cylinder leakage: ಮನೆ ಛಿದ್ರ ಛಿದ್ರ, ಇಬ್ಬರಿಗೆ ಗಾಯ
Doddaballapura: ಘಾಟಿ ಕ್ಷೇತ್ರದಲ್ಲಿ ಶ್ರೀ ಸುಬ್ರಹ್ಮಣ್ಯಸ್ವಾಮಿ ಬ್ರಹ್ಮ ರಥೋತ್ಸವ
Nelamangala: ಸಾಕು ನಾಯಿ ಸತ್ತಿದ್ದಕ್ಕೆ ಮಾಲಕ ಆತ್ಮಹ*ತ್ಯೆ
Doddaballapur: ಹೊಲದಲ್ಲಿ ಹೂ ಬಿಡಿಸುತ್ತಿದ್ದ ಮಹಿಳೆಗೆ ಕಾರು ಡಿಕ್ಕಿ: ಸಾವು
Road Mishap: ಬೈಕ್ ವ್ಹೀಲಿಂಗ್ ಮಾಡುವಾಗ ಕ್ಯಾಂಟರ್‌ಗೆ ಡಿಕ್ಕಿ; ಇಬ್ಬರು ಸಾವು
MUST WATCH
ಹೊಸ ಸೇರ್ಪಡೆ
ನಕ್ಸಲರನ್ನು ಅಮಿತ್ ಶಾ ಸ್ವಾಗತಿಸಿದಾಗ ಏಕೆ ಬೆಚ್ಚಿ ಬಿದ್ದಿಲ್ಲ?: ಸಿಎಂ ತಿರುಗೇಟು
Naxal Package: “ಮೊದಲೇ ಪ್ಯಾಕೇಜ್ ನೀಡಿದ್ದರೆ ವಿಕ್ರಂಗೌಡ ಪ್ರಾಣ ಉಳಿಯುತ್ತಿತ್ತು’: ಸಹೋದರ
Belagavi: ಜೀವಂತ ವ್ಯಕ್ತಿ ಹೆಸರಿನಲ್ಲಿ ಮರಣ ಪ್ರಮಾಣ ಪತ್ರ ನೀಡಿದ ಅಧಿಕಾರಿಗಳು!
Udupi: ಗೀತಾರ್ಥ ಚಿಂತನೆ-150: ತಣ್ತೀನಿಶ್ಚಯ ಬಳಿಕವೇ ಧ್ಯಾನ
Mangaluru; ಹಳೆ ನಾಣ್ಯ ಖರೀದಿ ಹೆಸರಲ್ಲಿ 58 ಲಕ್ಷ ರೂ. ವಂಚನೆ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.