ರೈತನ ಆತ್ಮಹತ್ಯೆಗೆ ಸರ್ಕಾರವೇ ನೇರ ಹೊಣೆ: ರೈತರ ಆರೋಪ

ಜಮೀನಿಗೆ ನೋಟಿಸ್‌ ನೀಡಿದ್ದರಿಂದ ಆತಂಕಗೊಂಡು ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ

Team Udayavani, Apr 22, 2022, 5:48 PM IST

ರೈತನ ಆತ್ಮಹತ್ಯೆಗೆ ಸರ್ಕಾರವೇ ನೇರ ಹೊಣೆ: ರೈತರ ಆರೋಪ

ದೊಡ್ಡಬಳ್ಳಾಪುರ: ತಾಲೂಕಿನ ಕೊನಘಟ್ಟ ಗ್ರಾಮದ ರೈತ ಹನುಮಂತಗೌಡ ಆತ್ಮಹತ್ಯೆಗೆ ಸರ್ಕಾರವೇ ಕಾರಣವಾಗಿದ್ದು, ಆತ್ಮಹತ್ಯೆ ಮಾಡಿಕೊಂಡ ರೈತನಿಗೆ ಪರಿಹಾರ ನೀಡಬೇಕು. ಯಾವುದೇ ಕಾರಣಕ್ಕೆ ಬಲವಂತದ ಭೂಸ್ವಾಧೀನ ಮಾಡಿಕೊಳ್ಳ ಬಾರದು ಎಂದು ಆಗ್ರಹಿಸಿ ರೈತರು ಪ್ರತಿಭಟನೆ ನಡೆಸಿದರು.

ಈ ವೇಳೆ ಮಾತನಾಡಿದ ಪ್ರತಿಭಟನಾಕಾರರು, ತಾಲೂಕಿನ ಆದಿನಾರಾಯಣ ಹೊಸಹಳ್ಳಿ, ಕೊಡಿಹಳ್ಳಿ ಕೊನಘಟ್ಟ ಗ್ರಾಮದ 1,034 ಎಕರೆ ಕೃಷಿ ಜಮೀನಲ್ಲಿ ಕೈಗಾರಿಕಾ ವಲಯಕ್ಕಾಗಿ ಭೂಸ್ವಾಧೀನ ಮಾಡಲು ಸರ್ಕಾರ ಮುಂದಾಗಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ಧಿ ಮಂಡಳಿ (ಕೆಐಎಡಿಪಿ) ಕೊನಘಟ್ಟದ ಗ್ರಾಮದ ಹನುಮಂತಗೌಡರವರಿಗೆ ಭೂಸ್ವಾಧೀನ ಮಾಡುವ ವಿಚಾರಕ್ಕೆ ಸಂಬಂಧಿಸಿದಂತೆ ನೋಟಿಸ್‌ ನೀಡಿತ್ತು.

ನೋಟಿಸ್‌ ಬಂದ ಒಂದು ವಾರದಿಂದ ಮಾನಸಿಕ ನೆಮ್ಮದಿ ಕಳೆದುಕೊಂಡಿದ್ದ ಹನುಮಂತಗೌಡ, ತನ್ನ ಎರಡು ಎಕರೆ 20 ಗುಂಟೆ ಜಮೀನು ಉಳಿಸಿಕೊಳ್ಳಲು ಜನಪ್ರತಿನಿಧಿ ಭೇಟಿ ಮಾಡಿ ನೋವು ತೊಡಿಕೊಂಡಿದ್ದರು. ಆದರೆ ಯಾವುದೇ ಪ್ರಯೋಜನವಾಗಿಲ್ಲ ಎಂದು ದೂರಿದರು.

ಸಾಮೂಹಿಕ ಆತ್ಮಹತ್ಯೆ ಎಚ್ಚರಿಕೆ: ಇಲ್ಲಿನ ರೈತರು ಫಲವತ್ತಾದ ಕೃಷಿ ಭೂಮಿಯಲ್ಲಿ ವಿವಿಧ ಬೆಳೆ ಬೆಳೆಯುತ್ತಿದ್ದಾರೆ. ಪೂರ್ವಜರ ಸಮಾಧಿ ಹೊಲದಲ್ಲಿಯೇ ಇವೆ. ಲಕ್ಷಾಂತರ ರೂಪಾಯಿ ಖರ್ಚು ಮಾಡಿ ಹೊಲಗಳಲ್ಲಿ ಮನೆ ಕಟ್ಟಿದ್ದಾರೆ. ಈಗ ಏಕಾಏಕಿ ಜಮೀನು ಸ್ವಾಧೀನಕ್ಕೆ ಮುಂದಾ ಗಿರುವುದು ಸರಿಯಲ್ಲ. ಸರ್ಕಾರ ಬಲವಂತವಾಗಿ ಭೂಸ್ವಾಧೀನ ಮಾಡಿದರೆ ಸಾಮೂಹಿಕ ಆತ್ಮಹತ್ಯೆ ಮಾಡಿಕೊಳ್ಳಬೇಕಾಗುತ್ತದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಕರವೇ ಪ್ರವೀಣ್‌ ಶೆಟ್ಟಿ ಬಣದ ರಾಜ್ಯ ಪ್ರಧಾನ ಕಾರ್ಯದರ್ಶಿ ರಾಜಘಟ್ಟ ರವಿ ಮಾತನಾಡಿ, ರೈತ ಹನುಮಂತಗೌಡ ಆತ್ಮಹತ್ಯೆಗೆ ಸರ್ಕಾರವೇ ನೇರ ಕಾರಣ. ತಾಲೂಕಿನ ಕೈಗಾರಿಕಾ ಪ್ರದೇಶದಲ್ಲಿ ಈಗಾಗಲೇ ರೈತರಿಂದ ವಶಪಡಿಸಿಕೊಂಡಿರುವ ಜಮೀನಲ್ಲಿ ಕೈಗಾರಿಕೆಗಳು ಸ್ಥಾಪನೆಯಾಗದೆ ಪಾಳು ಬಿದ್ದಿವೆ. ಈಗ ಹೊಸದಾಗಿ ಕೈಗಾರಿಕಾ ಸ್ಥಾಪನೆಗಾಗಿ ಭೂಸ್ವಾಧೀನಕ್ಕಾಗಿ ಸರ್ಕಾರ ಮುಂದಾಗಿದೆ. ಅಂಗೈ ಅಗಲದ ಜಮೀನು ಇಟ್ಟುಕೊಂಡು ಕೃಷಿ ಮಾಡಿಕೊಂಡು ಬದುಕು ಕಟ್ಟಿಕೊಂಡಿದ್ದ ರೈತರನ್ನು ಸರ್ಕಾರ ಬೀದಿಪಾಲು ಮಾಡುತ್ತಿದೆ ಎಂದರು.

ಸರ್ಕಾರಕ್ಕೆ ವರದಿ ಸಲ್ಲಿಸುವೆ: ಸ್ಥಳಕ್ಕೆ ಭೇಟಿ ನೀಡಿದ ತಹಶೀಲ್ದಾರ್‌ ಮೋಹನ ಕುಮಾರಿ ಮಾತನಾಡಿ, ಭೂಸ್ವಾಧೀನದ ಕಾರಣಕ್ಕಾಗಿ ರೈತ ಹನುಮಂತಗೌಡ ಆತ್ಮಹತ್ಯೆ ಮಾಡಿಕೊಂಡಿರುವುದು ಮೇಲ್ನೋಟಕ್ಕೆ ಕಂಡು ಬಂದಿದ್ದು, ಇದನ್ನು ವಿಶೇಷ ಪ್ರಕರಣವೆಂದು ಪರಿಗಣಿಸಿ, ಮೃತ ರೈತನಿಗೆ ಪರಿಹಾರ ನೀಡುವಂತೆ ಸರ್ಕಾರಕ್ಕೆ ವರದಿ ನೀಡುವುದಾಗಿ ತಿಳಿಸಿದರು.

ಭೂಸ್ವಾಧೀನ ಆತಂಕ: ರೈತ ಆತ್ಮಹತ್ಯೆ
ದೊಡ್ಡಬಳ್ಳಾಪುರ: ಕೈಗಾರಿಕಾ ಪ್ರದೇಶ ಅಭಿವೃದ್ಧಿ ಮಂಡಳಿಯಿಂದ ಕೈಗಾರಿಕಾ ಪ್ರದೇಶಕ್ಕೆ ಭೂ ಸ್ವಾಧೀನ ಮಾಡಿಕೊಳ್ಳಲು ನೋಟಿಸ್‌ ಬಂದ ಹಿನ್ನೆಲೆ, ಆತಂಕಕ್ಕೆ ಒಳಗಾದ ರೈತ ಆತ್ಮಹತ್ಯೆಗೆ ಶರಣಾಗಿರುವ ಘಟನೆ ತಾಲೂಕು ಕೊನಘಟ್ಟ ಗ್ರಾಮದಲ್ಲಿ ನಡೆದಿದೆ. ಮೃತ ರೈತ ಹನುಮಂತೇಗೌಡ(65) ಹೊಲದಲ್ಲಿರುವ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿ ಕೊಂಡಿದ್ದಾನೆ. ಈತನಿಗೆ ಮಡದಿ ಮತ್ತು ನಾಲ್ಕು ಮಕ್ಕಳಿದ್ದಾರೆ. ಕೊನಘಟ್ಟದಲ್ಲಿ 2.5 ಎಕರೆ ಜಮೀನನ್ನು ಹೊಂದಿದ್ದ ಹನು ಮಂತೇಗೌಡನಿಗೆ, ಕೈಗಾರಿಕಾ ಪ್ರದೇಶ ನಿರ್ಮಾಣ ಪ್ರಕ್ರಿಯೆಗೆ ಸ್ವಾಧೀನಪಡಿಸಿ ಕೊಳ್ಳಲು ಅಷ್ಟು ಜಮೀನಿಗೆ ನೋಟಿಸ್‌ ನೀಡಿದ್ದರಿಂದ ಆತಂಕಗೊಂಡು ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ. ಗ್ರಾಮಾಂತರ ಠಾಣೆ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಟಾಪ್ ನ್ಯೂಸ್

ಬಳ್ಳಾರಿಯಲ್ಲೇ ಏಕೆ 88ನೇ ಕನ್ನಡ ಸಾಹಿತ್ಯ ಸಮ್ಮೇಳನ?

ಬಳ್ಳಾರಿಯಲ್ಲೇ ಏಕೆ 88ನೇ ಕನ್ನಡ ಸಾಹಿತ್ಯ ಸಮ್ಮೇಳನ?

1-sambhal

Sambhal; ದೇಗುಲ ಬಳಿಕ 150 ವರ್ಷ ಹಳೆ ಬಾವಿ ಪತ್ತೆ

ರಾಜ್ಯದ ಅರಣ್ಯ ವಿಸ್ತರಣೆ, ಸಂರಕ್ಷಣೆಗೆ ವೇಗ ಸಿಗಲಿ

ರಾಜ್ಯದ ಅರಣ್ಯ ವಿಸ್ತರಣೆ, ಸಂರಕ್ಷಣೆಗೆ ವೇಗ ಸಿಗಲಿ

Mulki-kambla

Mulki: ಕಂಬಳದಿಂದ ಕೃಷಿ, ಧಾರ್ಮಿಕ ನಂಬಿಕೆ ವೃದ್ಧಿ: ನ್ಯಾ. ಎನ್‌. ಸಂತೋಷ್‌ ಹೆಗ್ಡೆ

udupi-Bar-Asso

Udupi: ಸುಪ್ರೀಂ, ಹೈಕೋರ್ಟ್‌ಗಳ ತೀರ್ಪು ಆನ್‌ಲೈನ್‌ನಲ್ಲಿ ಲಭ್ಯ: ನ್ಯಾ.ಸೂರಜ್‌

Udupi: ಯುವ ಗೀತೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ಕಾರ್ಯಾಗಾರ

Udupi: ಯುವ ಗೀತೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ಕಾರ್ಯಾಗಾರ

SASTHANA-TOLL

Kota: ಸಾಸ್ತಾನ ಟೋಲ್‌: ಡಿ.30ರ ತನಕ ಯಥಾಸ್ಥಿತಿ ಮುಂದುವರಿಕೆಗೆ ಸೂಚನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Nelamangala: ಐಷಾರಾಮಿ ಕಾರಿನ ಮೇಲೆ ಬಿದ್ದ ಕಂಟೈನರ್… ಒಂದೇ ಕುಟುಂಬದ 6 ಮಂದಿ ಸಾವು

Nelamangala: ಐಷಾರಾಮಿ ಕಾರಿನ ಮೇಲೆ ಬಿದ್ದ ಕಂಟೈನರ್… ಒಂದೇ ಕುಟುಂಬದ 6 ಮಂದಿ ಸಾ*ವು

4

Crime: ರೌಡಿಶೀಟರ್‌ ಕೊಲೆ ಯತ್ನ; ಆರೋಪಿಗೆ ಗುಂಡೇಟು

Doddaballapur: ಎರಡೂ ಬಸ್‌ ನಿಲ್ದಾಣಕ್ಕೆ ಬೇಕಿದೆ ಕಾಯಕಲ್ಪ!

Doddaballapur: ಎರಡೂ ಬಸ್‌ ನಿಲ್ದಾಣಕ್ಕೆ ಬೇಕಿದೆ ಕಾಯಕಲ್ಪ!

11

Lack of Bus stand: ಹೊಸಕೋಟೆ; ಬಸ್‌ ನಿಲ್ದಾಣವಿಲ್ಲದೆ ಪರದಾಟ!

Leopard: ನೆಲಮಂಗಲ ಸಮೀಪ ಚಿರತೆ ಸೆರೆ: ನರಭಕ್ಷಕ ಇದೇನಾ? ವರದಿ ನಿರೀಕ್ಷೆ

Leopard: ನೆಲಮಂಗಲ ಸಮೀಪ ಚಿರತೆ ಸೆರೆ: ನರಭಕ್ಷಕ ಇದೇನಾ? ವರದಿ ನಿರೀಕ್ಷೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

ಬಳ್ಳಾರಿಯಲ್ಲೇ ಏಕೆ 88ನೇ ಕನ್ನಡ ಸಾಹಿತ್ಯ ಸಮ್ಮೇಳನ?

ಬಳ್ಳಾರಿಯಲ್ಲೇ ಏಕೆ 88ನೇ ಕನ್ನಡ ಸಾಹಿತ್ಯ ಸಮ್ಮೇಳನ?

1-ru

PF fraud; ಆರೋಪಿ ಕಂಪೆನಿಗಳಿಗೆ ನಾನು ನಿರ್ದೇಶಕನಲ್ಲ: ರಾಬಿನ್‌ ಉತ್ತಪ್ಪ

1-sambhal

Sambhal; ದೇಗುಲ ಬಳಿಕ 150 ವರ್ಷ ಹಳೆ ಬಾವಿ ಪತ್ತೆ

1-reeeee

Vijay Hazare Trophy Cricket: ಇಂದು ಕರ್ನಾಟಕಕ್ಕೆ ಪುದುಚೇರಿ ಎದುರಾಳಿ

ರಾಜ್ಯದ ಅರಣ್ಯ ವಿಸ್ತರಣೆ, ಸಂರಕ್ಷಣೆಗೆ ವೇಗ ಸಿಗಲಿ

ರಾಜ್ಯದ ಅರಣ್ಯ ವಿಸ್ತರಣೆ, ಸಂರಕ್ಷಣೆಗೆ ವೇಗ ಸಿಗಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.