ಶೋಚನೀಯ ಸ್ಥಿತಿಯಲ್ಲಿ ಸರ್ಕಾರಿ ಶಾಲೆಗಳು


Team Udayavani, May 17, 2019, 12:20 PM IST

blore-g-3

ದೊಡ್ಡಬಳ್ಳಾಪುರ: ಪ್ರತಿ ವರ್ಷ ಸರ್ಕಾರಿ ಶಾಲೆಗಳ ದಾಖಲಾತಿ ಕುಸಿಯುತ್ತಿರುವ ಹಿನ್ನೆಲೆಯಲ್ಲಿ ದಾಖಲಾತಿ ಹೆಚ್ಚಳಕ್ಕೆ ಸರ್ಕಾರ ಹಲವಾರು ಕ್ರಮಗಳನ್ನು ಕೈಗೊಳ್ಳುತ್ತಿದೆ. ರಾಜ್ಯ ಸರ್ಕಾರದಿಂದ ಈ ಬಾರಿ ಪೋಷಕರು ಬಯಸುವ ಆಂಗ್ಲ ಮಾಧ್ಯಮ ಶಾಲೆ ಸ್ಥಾಪನೆ, ಆರ್‌ಟಿಇ ಮೇಲೆ ನಿಯಂತ್ರಣದ ಯೋಜನೆಗಳು ಜಾರಿಯಾಗಿದ್ದು, ಎಷ್ಟರ ಮಟ್ಟಿಗೆ ಫಲಪ್ರದವಾಗಲಿವೆ ಎನ್ನುವ ಕಾತರತೆಯ ಶಾಲಾ ದಾಖಲಾತಿ, ಸ್ಥಿತಿಗತಿ ಕುರಿತ ಅವಲೋಕನ ಇಲ್ಲಿದೆ.

ಸರ್ಕಾರಿ ಶಾಲಾ ಸ್ಥಿತಿಗತಿ ದಯನೀಯ: ತಾಲೂಕಿನಲ್ಲಿ ಜೂನ್‌ನಿಂದ ಆರಂಭಗೊಳ್ಳುವ ಶಾಲೆಗಳಿಗೆ ಈಗಾಗಲೇ ಬಹಳಷ್ಟು ಖಾಸಗಿ ಶಾಲೆಗಳಲ್ಲಿ ಶಾಲಾ ದಾಖಲಾತಿಗಳು ಮುಗಿದಿವೆ. ಆದರೆ, ಶಿಕ್ಷಣ ಇಲಾಖೆ ಶಾಲಾ ಮಕ್ಕಳಿಗೆ ದಾಖಲಾತಿ ಆಂದೋಲನ ನಡೆಸಿ, ಸರ್ಕಾರಿ ಶಾಲೆಗಳ ಬಗ್ಗೆ ಪ್ರಚಾರ ಮಾಡುತ್ತಿದ್ದರೂ ಸರ್ಕಾರಿ ಶಾಲೆಗಳಲ್ಲಿ ಮಾತ್ರ ದಾಖಲಾತಿ ಕಡಿಮೆಯಾಗುತ್ತಿವೆ. ಆ ಶಾಲೆಯಲ್ಲಿ ಇರುವುದೇ ಒಬ್ಬ ವಿದ್ಯಾರ್ಥಿ. ಆ ವಿದ್ಯಾರ್ಥಿ ಗೊಬ್ಬ ಶಿಕ್ಷಕ. ವಿದ್ಯಾರ್ಥಿ ಬರದಿದ್ದರೆ ಶಾಲೆಗೇ ರಜೆ. ಸರ್ಕಾರ ಕಡಿಮೆ ವಿದ್ಯಾರ್ಥಿಗಳಿರುವ ಸರ್ಕಾರಿ ಶಾಲೆಯನ್ನು ಮುಚ್ಚ ಬಾರದೆಂಬ ನಿಯಮ ಮಾಡಿರುವುದರಿಂದ ಆ ಶಾಲೆ ಯನ್ನು ಹೇಗಾದರೂ ಮಾಡಿ ಮುಂದುವರೆ ಸಲೇಬೇಕು. ಆದರೆ, ವಿದ್ಯಾರ್ಥಿಗಳಿಲ್ಲದಿದ್ದರೆ ಹೇಗೆ ಎನ್ನುವುದು ಶಿಕ್ಷಣ ಇಲಾಖೆಗೆ ತಲೆಬಿಸಿ ಯಾಗಿದೆ. ಇದು ಸರ್ಕಾರಿ ಶಾಲೆಗಳ ಸ್ಥಿತಿಗತಿಗೆ ಹಿಡಿದ ಕೈಗನ್ನಡಿಯಾಗಿದೆ.

ವಿದ್ಯಾರ್ಥಿಗಳ ಸಂಖ್ಯೆ ಕುಸಿತ: 2018-19ನೇ ಸಾಲಿನ ದಾಖಲಾತಿ ಅನ್ವಯ ತಾಲೂಕಿನಲ್ಲಿ 10ಕ್ಕಿಂತ ಕಡಿಮೆಯಿರುವ ವಿದ್ಯಾರ್ಥಿಗಳನ್ನು ಹೊಂದಿರುವ 74ಕಿರಿಯ ಪ್ರಾಥಮಿಕ ಶಾಲೆ ಗಳಿವೆ. ತಾಲೂಕಿನ ಪುಟ್ಟಯ್ಯನ ಅಗ್ರಹಾರ ಹಾಗೂ ನಾಯಕರ ಪಾಳ್ಯದ ಕಿರಿಯ ಪ್ರಾಥಮಿಕ ಶಾಲೆಗಳಲ್ಲಿ ಒಬ್ಬೊಬ್ಬರೇ ವಿದ್ಯಾರ್ಥಿಗಳಿರುವುದು ಕಂಡುಬಂದಿದೆ.

ಶಾಲೆಗಳ ದಾಖಲಾತಿಗಳಲ್ಲಿ ಆಂಗ್ಲ ಮಾಧ್ಯಮ ಹಾಗೂ ಕೇಂದ್ರೀಯ ಪಠ್ಯಕ್ರಮ ಗಳಿಗೆ ಪೋಷಕರ ಒಲವು ಹೆಚ್ಚಾಗಿದೆ. ಸರ್ಕಾರಿ ಶಾಲೆಗಳಲ್ಲಿ ದಾಖಲಾತಿ ಕಡಿಮೆ ಆಗುತ್ತಿದೆ. 2017ನೇ ಸಾಲಿನಲ್ಲಿ ಕಿರಿಯ ಪ್ರಾಥಮಿಕ ಶಾಲೆಗಳಲ್ಲಿದ್ದ 9,773 ವಿದ್ಯಾರ್ಥಿ ಗಳ ಸಂಖ್ಯೆ ಕಳೆದ ಸಾಲಿನಲ್ಲಿ 8,916ಕ್ಕೆ ಕುಸಿದಿರುವುದು ಆತಂಕಕಾರಿ ಸಂಗತಿ.

356 ಸರ್ಕಾರಿ ಶಾಲೆ: ದೊಡ್ಡಬಳ್ಳಾಪುರ ತಾಲೂಕಿನಲ್ಲಿ 2018-19ನೇ ಸಾಲಿನಲ್ಲಿ ಒಟ್ಟು 356 ಸರ್ಕಾರಿ ಶಾಲೆಗಳಲ್ಲಿ 212 ಕಿರಿಯ, 128 ಹಿರಿಯ ಪ್ರಾಥಮಿಕ ಹಾಗೂ 16 ಪ್ರೌಢಶಾಲೆಗಳಿವೆ. ಇದರೊಂದಿಗೆ ಅನುದಾ ನಿತ 6ಪ್ರಾಥಮಿಕ ಶಾಲೆ, 13 ಪ್ರೌಢಶಾಲೆ ಗಳಿವೆ. ಅನುದಾನ ರಹಿತ 35 ಪ್ರಾಥಮಿಕ ಶಾಲೆ ಹಾಗೂ 22 ಪ್ರೌಢಶಾಲೆಗಳಿವೆ. ಇದರೊಂದಿಗೆ ಸಿಬಿಎಸ್‌ಸಿ ಪಠ್ಯಕ್ರಮದ 2, ಐಸಿಎಸ್‌ಸಿ 1 ಶಾಲೆಗಳಿವೆ. 2018ನೇ ಸಾಲಿನ ಅಂಕಿ-ಅಂಶದಂತೆ ಕಿರಿಯ ಪ್ರಾಥ ಮಿಕ ಎಲ್ಲಾ ಶಾಲೆಗಳಲ್ಲಿ 28,554 ವಿದ್ಯಾರ್ಥಿ ಗಳು, ಹಿರಿಯ ಪ್ರಾಥಮಿಕ ಶಾಲೆಯಲ್ಲಿ(6ರಿಂದ8) 15,945 ಹಾಗೂ ಪ್ರೌಢಶಾಲೆಗಳಲ್ಲಿ 9,415 ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದು ತಾಲೂಕಿನಲ್ಲಿ 1ರಿಂದ 10ರವರೆಗೆ ಒಟ್ಟು 53,817 ಮಕ್ಕಳು ದಾಖಲಾಗಿದ್ದಾರೆ.

ಸರ್ಕಾರಿ ಹಾಗೂ ಖಾಸಗಿ ಶಾಲೆಯ ಮಕ್ಕಳ ಅಂಕಿ-ಅಂಶಗಳನ್ನು ಗಮನಿಸಿದರೆ ತಾಲೂಕಿನ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಗಳಲ್ಲಿ 8916 ವಿದ್ಯಾರ್ಥಿಗಳು ದಾಖಲಾಗಿದ್ದರೆ, ಅನುದಾನಿತ ಶಾಲೆಗಳಲ್ಲಿ 709 ಹಾಗೂ ಅನುದಾನರಹಿತ ಶಾಲೆಗಳ ಲ್ಲಿಯೇ 18929 ವಿದ್ಯಾರ್ಥಿಗಳು ದಾಖಲಾಗಿದ್ದಾರೆ.

ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗಳಲ್ಲಿ 5,688ವಿದ್ಯಾರ್ಥಿಗಳು ದಾಖಲಾಗಿದ್ದರೆ, ಅನುದಾನಿತ ಶಾಲೆಗಳಲ್ಲಿ 1,145ಹಾಗೂ ಅನುದಾನರಹಿತ ಶಾಲೆ ಗಳಲ್ಲಿಯೇ 9,112 ವಿದ್ಯಾರ್ಥಿಗಳು ದಾಖಲಾಗಿದ್ದಾರೆ. ಅಂದರೆ, ಸರ್ಕಾರಿ ಹಾಗೂ ಅನುದಾನಿತ ಪ್ರಾಥಮಿಕ ಶಾಲೆಗಳಲ್ಲಿ ದಾಖಲಾತಿ ಸರಾಸರಿ ಹೆಚ್ಚಿದ್ದು, ಖಾಸಗಿ ಪ್ರಾಥಮಿಕ ಶಾಲೆಗಳಲ್ಲಿ ವರ್ಷ ದಿಂದ ವರ್ಷಕ್ಕೆ ದಾಖಲಾತಿಗಳ ಸಂಖ್ಯೆ ಹೆಚ್ಚಾಗುತ್ತಲೇ ಇದೆ.

ಆರ್‌ಟಿಇ ಕಾಯಿದೆ ಸಡಿಲ: ಇಷ್ಟು ದಿನಗಳ ಕಾಲ ಕಡ್ಡಾಯ ಶಿಕ್ಷಣ ಹಕ್ಕು ಕಾಯ್ದೆ(ಆರ್‌ಟಿಇ)ಯಿಂದ ಸರ್ಕಾರಿ ಶಾಲೆಗಳಿಗೆ ದಾಖಲಾತಿಗೆ ತೊಡಕಾಗಿತ್ತು. ಸಮೀಪದ ಖಾಸಗಿ ಶಾಲೆಗಳಲ್ಲಿಯೇ ಸೀಟು ಸಿಗುವಾಗ ಸರ್ಕಾರಿ ಶಾಲೆಗಳ ಬಗ್ಗೆ ಪೋಷಕರು ಒಲವು ತೋರಿಸುತ್ತಿರಲಿಲ್ಲ. ಈಗ ಸರ್ಕಾರಿ ಶಾಲೆಗಳು ಆ ಪ್ರದೇಶದಲ್ಲಿದ್ದರೆ ಆರ್‌ಟಿಇ ಅನ್ವಯಿಸುವುದಿಲ್ಲ.

ಆಂಗ್ಲ ಮಾಧ್ಯಮ ಆರಂಭ: ಈ ಹಿಂದಿನ ಸರ್ಕಾರದಲ್ಲಿ ಜಾರಿಯಾಗಿದ್ದಂತೆ ತಾಲೂಕಿನಲ್ಲಿ ಈಗಾಗಲೇ 4ಶಾಲೆಗಳಲ್ಲಿ 6ನೇ ತರಗತಿಯಿಂದ ಆಂಗ್ಲ ಮಾಧ್ಯಮ ನಡೆಯುತ್ತಿದೆ. ಈ ಸಾಲಿನಲ್ಲಿ ಮುಖ್ಯಮಂತ್ರಿ ಕುಮಾರಸ್ವಾಮಿ ಕೈಗೊಂಡ ನಿರ್ಧಾರದ ಹಿನ್ನೆಲೆಯಲ್ಲಿ ರಾಜ್ಯದಲ್ಲಿ 1,000 ಆಂಗ್ಲ ಮಾಧ್ಯಮ ಶಾಲೆಗಳು ಆರಂಭವಾಗಿದ್ದು, ತಾಲೂಕಿನ ದೊಡ್ಡಬೆಳವಂಗಲ, ಕೊನಘಟ್ಟ, ಬಾಶೆಟ್ಟಿಹಳ್ಳಿ, ತೂಬಗೆರೆಯಲ್ಲಿ 1ರಿಂದ 12ನೇ ತರಗತಿ ವರೆಗೆ ಕರ್ನಾಟಕ ಪಬ್ಲಿಕ್‌ ಶಾಲೆಗಳು ಆರಂಭವಾಗಿವೆ.

ಸರ್ಕಾರಿ ಶಾಲೆಗಳ ಉತ್ತಮ ಸಾಧನೆ: ಏಪ್ರಿಲ್ನಲ್ಲಿ ನಡೆದ 2019ನೇ ಸಾಲಿನ ಎಸ್‌ಎಸ್‌ಎಲ್ಸಿಯಲ್ಲಿ ಸರ್ಕಾರಿ ಪ್ರೌಢಶಾಲೆಗಳು ಶೇ.79.31, ಅನುದಾನಿತ ಶಾಲೆಗಳು ಶೇ.73.10, ಅನುದಾನ ರಹಿತ ಶಾಲೆಗಳು ಶೇ.87.48 ಫಲಿತಾಂಶ ಗಳಿಸಿವೆ. ಕೆಲವು ಖಾಸಗಿ ಶಾಲೆಶೇ.65ಕ್ಕಿಂತ ಕಡಿಮೆ ಫಲಿತಾಂಶ ಗಳಿಸಿದ್ದರೆ, ಸರ್ಕಾರಿ ಶಾಲೆಗಳು ಶೇ.90ಕ್ಕೂ ಹೆಚ್ಚು ಫಲಿತಾಂಶ ಗಳಿಸಿವೆ.

ಡಿ.ಶ್ರೀಕಾಂತ್‌

ಟಾಪ್ ನ್ಯೂಸ್

BBK11: ದುಡ್ಡು ಕದ್ದ ಚೈತ್ರಾನಿಗೆ ಕಿಚ್ಚನ ಶಹಬ್ಬಾಸ್ – ಪಂಚಾಯ್ತಿಯಲ್ಲಿ ಏನೆಲ್ಲ ಆಯಿತು

BBK11: ದುಡ್ಡು ಕದ್ದ ಚೈತ್ರಾನಿಗೆ ಕಿಚ್ಚನ ಶಹಬ್ಬಾಸ್ – ಪಂಚಾಯ್ತಿಯಲ್ಲಿ ಏನೆಲ್ಲ ಆಯಿತು

yathnal

Setback BJP: ಜನರಿಂದ ವಿಜಯೇಂದ್ರ ನಾಯಕತ್ವ ತಿರಸ್ಕಾರ, ರಾಜೀನಾಮೆ ನೀಡಲಿ: ಶಾಸಕ ಯತ್ನಾಳ್‌

bjp-congress

Assembly bypolls; 14 ರಾಜ್ಯಗಳ 48 ಸ್ಥಾನಗಳ ಗೆಲುವಿನ ವಿವರ ಇಲ್ಲಿದೆ: ಎನ್‌ಡಿಎ ಮೇಲುಗೈ

BJP FLAG

Maharashtra ; ಕೈ ಯಿಂದ ಲೋಕಸಭಾ ಸ್ಥಾನ ಕಸಿದ ಬಿಜೆಪಿ: ರಾಜ್ಯಸಭೆ ಬಹುಮತದತ್ತ ಚಿತ್ತ

kolahara-TV

By Election: ಮೂರು ಕ್ಷೇತ್ರದಲ್ಲೂ ಬಿಜೆಪಿ ಸೋತಿದ್ದಕ್ಕೆ ಟಿವಿಯನ್ನೇ ಒಡೆದು ಹಾಕಿದ ಮುಖಂಡ!

8

Basavaraj Bommai: ಹಣದ ಹೊಳೆಹರಿಸಿ ಕಾಂಗ್ರೆಸ್‌ ಗೆಲುವು: ಬೊಮ್ಮಾಯಿ ಆರೋಪ

RSS

Maharashtra; ಮಹಾಯುತಿಯ ಮಹಾ ಗೆಲುವಿನಲ್ಲಿ ಆರ್ ಎಸ್ಎಸ್ ದೊಡ್ಡ ಕೊಡುಗೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Anekal: ರೌಡಿಶೀಟರ್‌ ಮೇಲೆ ಮಾರಕಾಸ್ತ್ರಗಳಿಂದ ದಾಳಿ

Anekal: ರೌಡಿಶೀಟರ್‌ ಮೇಲೆ ಮಾರಕಾಸ್ತ್ರಗಳಿಂದ ದಾಳಿ

nelamangala

Leopard Attack: ನೆಲಮಂಗಲ ಸಮೀಪ ಚಿರತೆ ದಾಳಿಗೆ ರೈತ ಮಹಿಳೆ ಬಲಿ

Stray dogs: ಅಂ.ರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬೀದಿ ನಾಯಿಗಳ ಹಾವಳಿ

Stray dogs: ಅಂ.ರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬೀದಿ ನಾಯಿಗಳ ಹಾವಳಿ

Tragic: ಮರದ ಕಾರ್ಖಾನೆಯಲ್ಲಿ ಆಕಸ್ಮಿಕ ಬೆಂಕಿ; ಕಾರ್ಮಿಕ ಸಜೀವ ದಹನ

Tragic: ಮರದ ಕಾರ್ಖಾನೆಯಲ್ಲಿ ಆಕಸ್ಮಿಕ ಬೆಂಕಿ; ಕಾರ್ಮಿಕ ಸಜೀವ ದಹನ

Market: ಬೆಲೆ ಕುಸಿತ; ಬೂದು ಕುಂಬಳ ಬೀದಿಪಾಲು!

Market: ಬೆಲೆ ಕುಸಿತ; ಬೂದು ಕುಂಬಳ ಬೀದಿಪಾಲು!

MUST WATCH

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

ಹೊಸ ಸೇರ್ಪಡೆ

Modi-Tour

Tour: ಮೂರು ದೇಶ ಪ್ರವಾಸ: ಪ್ರಧಾನಿ ಮೋದಿ 31 ದ್ವಿಪಕ್ಷೀಯ ಸಭೆಗಳು!

BBK11: ದುಡ್ಡು ಕದ್ದ ಚೈತ್ರಾನಿಗೆ ಕಿಚ್ಚನ ಶಹಬ್ಬಾಸ್ – ಪಂಚಾಯ್ತಿಯಲ್ಲಿ ಏನೆಲ್ಲ ಆಯಿತು

BBK11: ದುಡ್ಡು ಕದ್ದ ಚೈತ್ರಾನಿಗೆ ಕಿಚ್ಚನ ಶಹಬ್ಬಾಸ್ – ಪಂಚಾಯ್ತಿಯಲ್ಲಿ ಏನೆಲ್ಲ ಆಯಿತು

Syed Mushtaq Ali Trophy T20: ಕರ್ನಾಟಕಕ್ಕೆ 6 ರನ್‌ಗಳ ಸೋಲು

Syed Mushtaq Ali Trophy T20: ಕರ್ನಾಟಕಕ್ಕೆ 6 ರನ್‌ಗಳ ಸೋಲು

ICC Champions Trophy: ನ.26ಕ್ಕೆ ಐಸಿಸಿ ತುರ್ತು ಸಭೆ?

ICC Champions Trophy: ನ.26ಕ್ಕೆ ಐಸಿಸಿ ತುರ್ತು ಸಭೆ?

16

Pro Kabaddi: ಗುಜರಾತ್‌ಗೆ ರೋಚಕ ಜಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.