ಸರ್ಕಾರಿ ಶಾಲೆಗಳತ್ತ ಇಲ್ಲ ಒಲವು


Team Udayavani, May 28, 2023, 2:57 PM IST

ಸರ್ಕಾರಿ ಶಾಲೆಗಳತ್ತ ಇಲ್ಲ ಒಲವು

ದೊಡ್ಡಬಳ್ಳಾಪುರ: ಮೇ 29ರಿಂದ ಸರ್ಕಾರಿ ಶಾಲೆಗಳು ಅಧಿಕೃತವಾಗಿ ಆರಂಭವಾಗುತ್ತಿವೆ. ಪ್ರತಿವರ್ಷ ಸರ್ಕಾರಿ ಶಾಲೆಗಳ ದಾಖಲಾತಿ ಕುಸಿಯುತ್ತಿರುವ ಹಿನ್ನೆಲೆ ಯಲ್ಲಿ ಸರ್ಕಾರಿ ಆಂಗ್ಲ ಮಾಧ್ಯಮಗಳ ಶಾಲೆಗಳ ಆರಂಭ ಮಾಡಿದೆ. ದಾಖಲಾತಿ ಹೆಚ್ಚಳಕ್ಕೆ ಹಲವಾರು ಕ್ರಮಗಳನ್ನು ಕೈಗೊಳ್ಳುತ್ತಿದ್ದು, ಶಾಲೆಗಳ ದಾಖಲಾತಿ, ಸ್ಥಿ ತಿಗತಿಗಳ ಕುರಿತ ಅವಲೋಕನ ಇಲ್ಲಿದೆ.

ತಾಲೂಕಿನ ಶಾಲೆಗಳ ಅಂಕಿ ಅಂಶ: ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಒಟ್ಟು ಪ್ರಾಥಮಿಕ ಮತ್ತು ಪ್ರೌಢ ಶಾಲೆ ಗಳು ಸೇರಿ 435 ಶಾಲೆಗಳಿವೆ. ಒಟ್ಟು 350 ಸರ್ಕಾರಿ ಶಾಲೆಗಳಲ್ಲಿ 208 ಕಿರಿಯ, 125 ಹಿರಿಯ ಪ್ರಾಥಮಿಕ ಹಾಗೂ 17ಪ್ರೌಢಶಾಲೆಗಳಿವೆ. ಇದ ರೊಂದಿಗೆ ಅನು ದಾನಿತವಾಗಿ 6 ಪ್ರಾಥಮಿಕ ಶಾಲೆ, 12 ಪ್ರೌಢ ಶಾಲೆ ಗಳಿವೆ. ಅನುದಾನ ರಹಿತವಾಗಿ 25 ಪ್ರಾಥಮಿಕ ಶಾಲೆ ಹಾಗೂ 37 ಪ್ರೌಢಶಾಲೆಗಳಿವೆ. ಇದರೊಂದಿಗೆ ಸಿಬಿಎಸ್‌ಸಿ ಪಠ್ಯಕ್ರಮದ 4, ಐಸಿಎಸ್‌ಸಿ 1 ಶಾಲೆಗಳಿವೆ. 2022-23ನೇ ಸಾಲಿನಲ್ಲಿ ಸಾಲಿನ ಅಂಕಿ-ಅಂಶದಂತೆ ಕಿರಿಯ ಪ್ರಾಥಮಿಕ ಎಲ್ಲಾ ಶಾಲೆಗಳಲ್ಲಿ 20,913 ವಿದ್ಯಾರ್ಥಿಗಳು, ಹಿರಿಯ ಪ್ರಾಥಮಿಕ ಶಾಲೆಯಲ್ಲಿ (6ರಿಂದ8) 12,153 ಹಾಗೂ ಪ್ರೌಢ ಶಾಲೆಗಳಲ್ಲಿ (9ಮತ್ತು 10) 6.600 ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದು ತಾಲೂಕಿನಲ್ಲಿ 1ರಿಂದ 10ರವರೆಗೆ ಒಟ್ಟು 39,666 ವಿದ್ಯಾರ್ಥಿಗಳು ದಾಖಲಾಗಿದ್ದಾರೆ.

ಸರ್ಕಾರಿ ವಸತಿ ಶಾಲೆಗಳಲ್ಲಿ 606 ವಿದ್ಯಾರ್ಥಿಗಳು ದಾಖಲಾಗಿದ್ದಾರೆ. ಸರ್ಕಾರಿ ಹಾಗೂ ಖಾಸಗಿ ಶಾಲೆಯ ಮಕ್ಕಳ ಅಂಕಿ-ಅಂಶಗಳನ್ನು ಗಮನಿಸಿದರೆ ತಾಲೂಕಿನ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಗಳಲ್ಲಿ 9,387 ವಿದ್ಯಾರ್ಥಿಗಳು ದಾಖಲಾಗಿದ್ದರೆ, ಅನುದಾನಿತ ಶಾಲೆ ಗಳಲ್ಲಿ 732 ಹಾಗೂ ಅನುದಾನರಹಿತ ಶಾಲೆ ಗಳ ಲ್ಲಿಯೇ 10,794 ವಿದ್ಯಾರ್ಥಿಗಳು ದಾಖ ಲಾಗಿದ್ದಾರೆ. ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗಳಲ್ಲಿ 5,296 ವಿದ್ಯಾರ್ಥಿಗಳು ದಾಖಲಾಗಿದ್ದರೆ, ಅನು ದಾನಿತ ಶಾಲೆ ಗಳಲ್ಲಿ 942ಹಾಗೂ ಅನುದಾನರಹಿತ ಶಾಲೆಗಳಲ್ಲಿಯೇ 5915ವಿದ್ಯಾರ್ಥಿಗಳು ದಾಖ ಲಾಗಿದ್ದಾರೆ. ಅಂತೆಯೇ ಪ್ರೌಢಶಾಲೆಗಳಲ್ಲಿ (9ಮತ್ತು 10) ಸರ್ಕಾರಿ ಶಾಲೆಗಳಲ್ಲಿ 2477, ಅನುದಾನಿತ 1410, ಹಾಗೂ ಅನುದಾನ ರಹಿತಶಾಲೆಗಳಲ್ಲಿ 2713 ವಿದ್ಯಾರ್ಥಿಗಳು ದಾಖಲಾಗಿದ್ದಾರೆ.

ಅಂದರೆ, ಸರ್ಕಾರಿ ಹಾಗೂ ಅನುದಾನಿತ ಶಾಲೆ ಗಳಲ್ಲಿ ದಾಖಲಾತಿ ಸರಾಸರಿ 58 ಮಂದಿ ಇದ್ದರೆ ಖಾಸಗಿ ಶಾಲೆಗಳಲ್ಲಿ 330 ವಿದ್ಯಾರ್ಥಿಗಳಿದ್ದಾರೆ. ಆದರೆ ಪ್ರೌಢಶಾಲೆಗಳಲ್ಲಿ ಮಾತ್ರ ಸರ್ಕಾರಿ ಪ್ರೌಢ ಶಾಲೆಗಳಲ್ಲಿ ಹೆಚ್ಚಿನ ದಾಖಲಾತಿಯಾಗಿವೆ. ಖಾಸಗಿ ಪ್ರಾಥಮಿಕ ಶಾಲೆಗಳಲ್ಲಿ ವರ್ಷದಿಂದ ವರ್ಷಕ್ಕೆ ದಾಖಲಾತಿಗಳ ಸಂಖ್ಯೆ ಹೆಚ್ಚಾಗುತ್ತಲೇ ಇದೆ. ತಾಲೂಕಿನಲ್ಲಿ 2022-23ನೇ ಸಾಲಿನ ದಾಖಲಾತಿ ಅನ್ವಯ ತಾಲೂಕಿನಲ್ಲಿ 10ಕ್ಕಿಂತ ಕಡಿಮೆಯಿರುವ ವಿದ್ಯಾರ್ಥಿಗಳನ್ನು ಹೊಂದಿರುವ 62 ಕಿರಿಯ ಪ್ರಾಥಮಿಕ ಶಾಲೆಗಳಿವೆ. ತಾಲೂಕಿನ ಚೆನ್ನಬಸಯ್ಯನ ಪಾಳ್ಯ ಹಾಗೂ ಜ್ಯೋತಿಪುರ ಕಿರಿಯ ಪ್ರಾಥಮಿಕ ಶಾಲೆಗಳಲ್ಲಿ ಇಬ್ಬರೇ ವಿದ್ಯಾರ್ಥಿಗಳಿದ್ದಾರೆ. ಸರ್ಕಾರ ಕಡಿಮೆ ವಿದ್ಯಾರ್ಥಿಗಳಿರುವ ಸರ್ಕಾರಿ ಶಾಲೆಯನ್ನು ಮುಚ್ಚ ಬಾರದೆಂಬ ನಿಯಮ ಮಾಡಿರುವುದರಿಂದ ಆ ಶಾಲೆಯನ್ನು ಹೇಗಾದರೂ ಮಾಡಿ ಮುಂದುವರೆಸಬೇಕು. ಶಾಲೆಗಳ ದಾಖಲಾತಿಗಳಲ್ಲಿ ಆಂಗ್ಲ ಮಾಧ್ಯಮ ಹಾಗೂ ಕೇಂದ್ರೀಯ ಪಠ್ಯಕ್ರಮಗಳಿಗೆ ಪೋಷಕರ ಒಲವು ಹೆಚ್ಚಾಗಿದೆ.

ಖಾಸಗಿ ಶಾಲೆಗಳಲ್ಲಿ ಎಲ್ಲಾ ಇದೆಯಾ?: ಬಹಳಷ್ಟು ಖಾಸಗಿ ಶಾಲೆಗಳಲ್ಲಿ ಈಗಲೂ ಮೈದಾನ ಸೇರಿದಂತೆ ಮೂಲ ಸೌಕರ್ಯಗಳಿಲ್ಲ. ಉತ್ತಮ ಮೈದಾನವಿಲ್ಲ. ಅನು ಭವವಿಲ್ಲದ ಶಿಕ್ಷಕರು ಇದ್ದಾರೆ. ಸೃಜನಶೀಲ ಶಿಕ್ಷಣದ ಕೊರತೆಯೂ ಇದೆ. ಈ ಶಾಲೆಯಲ್ಲಿ ಸರಿಯಾಗಿ ಹೇಳಿಕೊಡಲ್ಲ ಎಂದು 1ರಿಂದ 10 ನೇ ತರಗತಿಗೆ ಬರುವವರೆಗೆ ನಾಲ್ಕೈದು ಶಾಲೆಗಳನ್ನು ಬದಲಿಸುವ ಪೋಷಕರೂ ಇದ್ದಾರೆ. ಇನ್ನು ಎಲ್ಲಾ ಶಿಕ್ಷಣ ಸಾಮಗ್ರಿ ಗಳನ್ನು ಇಲ್ಲಿಯೇ ಕೊಳ್ಳಬೇಕು, ಇಲ್ಲಿಯೇ ಟ್ಯೂಷನ್‌ ಹೇಳಿಸಿಕೊಳ್ಳಬೇಕು ಎನ್ನುತ್ತಾ ಪೋಷಕರನ್ನು ಸುಲಿಗೆ ಮಾಡುವ ಶಾಲೆಗಳು ದಿನೇ ದಿನೇ ಹೆಚ್ಚಾಗುತ್ತಿವೆ. ಶಾಲೆಗೆ ಫಲಿತಾಂಶ ಹೆಚ್ಚು ಬರಬೇಕೆಂದು 10ನೇ ತರಗತಿಗೆ ಮುನ್ನವೇ ವರ್ಗಾವಣೆ ಪತ್ರ ನೀಡಿ ಬೇರೆ ಶಾಲೆಗೆ ಕಳುಹಿಸುವ ಶಾಲೆಗಳಿವೆ ಈ ಬಗ್ಗೆ ಶಿಕ್ಷಣ ಇಲಾಖೆ ಗಮನ ಹರಿಸಬೇಕಿದೆ ಎಂದು ಹಲವಾರು ಪೋಷಕರು ದೂರುತ್ತಾರೆ.

ಸರ್ಕಾರಿ ಆಂಗ್ಲ ಮಾಧ್ಯಮ ಶಾಲೆಗಳು: ತಾಲೂಕಿನ ದೊಡ್ಡಬೆಳವಂಗಲದಲ್ಲಿ ಕರ್ನಾಟಕ ಪಬ್ಲಿಕ್‌ ಶಾಲೆ ಉತ್ತಮವಾಗಿ ಕಾರ್ಯ ನಿರ್ವಹಿಸುತ್ತಿವೆ. ಬಾಶೆಟ್ಟಿಹಳ್ಳಿಯ ಅಜಾಕ್ಸ್‌ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕಳೆದ ಸಾಲಿನಲ್ಲಿ 831 ವಿದ್ಯಾರ್ಥಿಗಳು ದಾಖಲಾಗಿದ್ದು, ಈ ಬಾರಿ ದಾಖಲಾತಿ 1000 ದಾಟಲಿದೆ. ಇದರೊಂದಿಗೆ ತಾಲೂಕಿನ ಹುಲಿಕುಂಟೆ, ಹೊಸಹಳ್ಳಿ, ಮುತ್ಸಂದ್ರ, ಹಾಡೋನಹಳ್ಳಿ, ಆರೂಢಿ, ಸಾಸಲು, ಕನಸವಾಡಿ, ಮುತ್ತೂರು, ರಾಜಘಟ್ಟ, ತೂಬಗೆರೆಗಳಲ್ಲಿ ಆಂಗ್ಲ ಮಾಧ್ಯಮ ಶಾಲೆಗಳಿವೆ.

ಸರ್ಕಾರಿ ಶಾಲೆಗಳ ಉತ್ತಮ ಸಾಧನೆ: ಏಪ್ರಿಲ್‌ ನಲ್ಲಿ ನಡೆದ 2022ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಯಲ್ಲಿ ಸರ್ಕಾರಿ ಪ್ರೌಢಶಾಲೆ ಗಳು ಶೇ.93, ಸರ್ಕಾರಿ ವಸತಿ ಶಾಲೆಗಳು ಶೇ.100 ಫಲಿತಾಂಶ ಗಳಿಸಿ ಉತ್ತಮ ಸಾಧನೆ ಮಾಡಿವೆ.

ಗುಣಾತ್ಮಕ ಶಿಕ್ಷಣಕ್ಕೆ ಒತ್ತು: ಸರ್ಕಾರಿ ಶಾಲೆಗಳಲ್ಲಿ ಮಕ್ಕಳಿಗೆ ನಲಿ ಕಲಿ ಯೋಜನೆ, ಶಿಕ್ಷಕರಿಗೆ ವಿವಿಧ ತರಬೇತಿಗಳನ್ನು ನೀಡ ಲಾಗುತ್ತಿದೆ. ಕಳೆದ ವರ್ಷ ಕಲಿಕಾ ಚೇತರಿಕೆ ವರ್ಷವನ್ನಾಗಿ ಆಚರಿಸ ಲಾಗಿತ್ತು. ಈ ಸಾಲಿನಲ್ಲಿ ಗುಣಾತ್ಮಕ ಶೈಕ್ಷಣಿಕ ವರ್ಷ ವನ್ನಾಗಿ ಆಚರಿಸಲಾಗುತ್ತಿದೆ. ಅನುಭವಿ ಹಾಗೂ ನುರಿತ ಶಿಕ್ಷಕರಿಂದ ಮಕ್ಕಳ ಕಲಿಕೆಗೆ ಹೆಚ್ಚು ಒತ್ತು ನೀಡಲಾಗುತ್ತಿದೆ ಎಂದು ಕ್ಷೇತ್ರ ಸಮನ್ವಯಾ ಧಿಕಾರಿ ಹನುಮಂತಪ್ಪ.ಬಿ.ಹಿಂದಿನ ಮನಿ ತಿಳಿಸಿದ್ದಾರೆ.

ದಾಖಲಾತಿ ಆಂದೋಲನ, ಸರ್ಕಾರದ ಸೌಲಭ್ಯಗಳು: ಸರ್ಕಾರಿ ಶಾಲೆಗಳಲ್ಲಿ ಇರುವ ಸೌಲಭ್ಯಗಳ ಕುರಿತು ಪ್ರಚಾರ ಕೈಗೊಂಡು ಶಾಲೆಗಳಲ್ಲಿ ದಾಖಲಾತಿ ಹೆಚ್ಚಿಸಲು ಕ್ರಮ ಕೈಗೊಳ್ಳಲಾಗುತ್ತಿದೆ. ಎಲ್ಲಾ ಮಕ್ಕಳನ್ನು ಶಾಲಾ ಪ್ರಾರಂಭದ ದಿನದಿಂದಲೇ ಶಾಲೆಗೆ ಹಾಜರಾಗುವಂತೆ ಮಾಡಲು ದಾಖಲಾತಿ ಆಂದೋಲನ ನಡೆಸಲಾಗುತ್ತಿದೆ. ಕೋವಿಡ್‌-19 ನಂತರದಲ್ಲಿ ದಾಖಲಾತಿ ಪ್ರಮಾಣ ಹಚ್ಚಾಗುತ್ತಿವೆ. ಸರ್ಕಾರ ಮಕ್ಕಳಿಗೆ ಉತ್ತಮ ಶಿಕ್ಷಣ ನೀಡಲು ಸಾಕಷ್ಟು ಕ್ರಮ ಗಳನ್ನು ಕೈಗೊಂಡಿದೆ. ವಿವಿಧ ಸರ್ಕಾರಿ ಶಾಲೆಗಳಲ್ಲಿ 27 ಹೆಚ್ಚುವರಿ ಕೊಠಡಿಗಳ ಕಾಮಗಾರಿಗಳು ಆರಂಭ ವಾಗಿವೆ. ಈಗಾಗಲೇ ಸಮವಸ್ತ್ರ ಹಾಗೂ ಪುಸ್ತಕಗಳನ್ನು ವಿತರಿಸಲಾಗಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಆರ್‌. ರಂಗಪ್ಪ ತಿಳಿಸಿದ್ದಾರೆ.

ಸರ್ಕಾರಿ ಶಾಲೆ ಬಗ್ಗೆ ಅಸಡ್ಡೆ ಏಕೆ ?: ಸರ್ಕಾರಿ ಶಾಲೆ ಗಳಿಗೆ ದಾಖಲಾತಿ ಕಡಿಮೆ ಯಾಗಲು ಪೋಷಕರ ಮನಸ್ಥಿತಿ ಒಂದಡೆ ಯಾದರೆ ಗ್ರಾಮೀಣ ಪ್ರದೇಶಗಳಲ್ಲಿ ಮಕ್ಕಳ ಜನಸಾಂದ್ರತೆ ಕಡಿಮೆ ಇರುವುದು ಸಹ ಕಾರಣವಾಗಿದೆ. ನುರಿತ ಶಿಕ್ಷಕರು, ಉಚಿತ ಪಠ್ಯಪುಸ್ತಕ, ಸಮವಸ್ತ್ರ, ಬಿಸಿಯೂಟ, ಹಲವಾರು ವಿದ್ಯಾರ್ಥಿ ವೇತನಗಳು, ಬೈಸಿ ಕಲ್‌ ಮೊದಲಾಗಿ ಉಚಿತ ಶಿಕ್ಷಣ ನೀಡುತ್ತಿರುವ ಸರ್ಕಾರಿ ಶಾಲೆಗಳಿಗೆ ಮಕ್ಕಳನ್ನು ಏಕೆ ಸೇರಿಸುತ್ತಿಲ್ಲ ಎಂದು ಮಧ್ಯಮ ವರ್ಗದವರನ್ನು ಕೇಳಿದರೆ, ಮೊದಲನೆಯದಾಗಿ ಇಂಗ್ಲಿಷ್‌ ಭಾಷೆ ಸರ್ಕಾರಿ ಶಾಲೆಗಳಲ್ಲಿ ಕಲಿಸೋಲ್ಲ. ಮೂಲ ಸೌಕರ್ಯ ಇಲ್ಲ. ಸರ್ಕಾರಿ ಶಾಲೆಗೆ ಕಲಿಸುತ್ತಿದ್ದೇವೆಂದು ಹೇಳಿ ಕೊಳ್ಳುವುದು ಘನತೆಗೆ ಕಡಿಮೆ ಎನ್ನುತ್ತಾರೆ ಪೋಷಕರು.

ಸರ್ಕಾರಿ ಶಾಲೆಗಳು ಬಡವರಿಗಷ್ಟೇ ಸೀಮಿತ ಎಂಬಂತಾಗಿದೆ. ಆದರೆ ಈಗ 1 ಕಿ.ಮೀ ವ್ಯಾಪ್ತಿಯಲ್ಲಿ ಸರ್ಕಾರಿ ಶಾಲೆಗಳಿದ್ದರೆ, ಆರ್‌ಟಿಇ ವ್ಯಾಪ್ತಿಗೆ ಬರು ವುದಿಲ್ಲ ಎನ್ನುವ ತಿದ್ದುಪಡಿಯಿಂದಾಗಿ ಸರ್ಕಾರಿ ಶಾಲೆಗಳಲ್ಲಿ ದಾಖಲಾತಿ ಹೆಚ್ಚಳವಾಗುವ ಸಂಭವವಿದೆ.

ಶಾಲೆಗಳಲ್ಲಿ ಗುಣ ಮಟ್ಟದ ಶಿಕ್ಷಣಕ್ಕೆ ಆದ್ಯತೆ ನೀಡಬೇಕು. ಇದಕ್ಕೆ ಸಮುದಾಯ ಹಾಗೂ ಸರ್ಕಾ ರದ ಇಚ್ಛಾ ಶಕ್ತಿ ಕೊರತೆಯಿದೆ. ರ್ಕಾರಿ ಶಾಲೆಗಳನ್ನು ಉಳಿಸಬೇಕೆನ್ನುವ ಕೂಗಿದೆ. ಆದರೆ ಇದು ಬೆಕ್ಕಿನ ಕೊರಳಿಗೆ ಗಂಟೆ ಕಟ್ಟುವವರಾರು ಎಂಬಂತಾಗಿದೆ. ಸರ್ಕಾರಿ ಶಾಲೆಗಳ ಬಗ್ಗೆ ಹೆಚ್ಚಿನ ಜಾಗೃತಿ ಮೂಡಬೇಕು. ಸರ್ಕಾರಿ ಶಾಲೆಗಳ ಸಬಲೀಕರಣಕ್ಕೆ ಸಮುದಾಯ ಹಾಗೂ ಸರ್ಕಾರ ಮುಂದಾಗಬೇಕು. – ಸಂತೋಷ್‌, ಆರೂಢಿ ಪೋಷಕ

ಟಾಪ್ ನ್ಯೂಸ್

UDP-DC

Udupi: ಇಂದ್ರಾಳಿ ರೈಲ್ವೇ ಮೇಲ್ಸೇತುವೆ: ಜ.10ರಿಂದ ವಾಹನ ಬಳಕೆಗೆ ಮುಕ್ತಗೊಳಿಸಿ: ಡಿಸಿ

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

Council Session: ಪವರ್‌ ಕಾರ್ಪೋರೇಷನ್‌ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ

Council Session: ಪವರ್‌ ಕಾರ್ಪೋರೇಷನ್‌ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ

ಮೂಲಗೇಣಿದಾರರ ಅರ್ಜಿ ತತ್‌ಕ್ಷಣ ಇತ್ಯರ್ಥಗೊಳಿಸಲು ಐವನ್‌ ಮನವಿ

ಮೂಲಗೇಣಿದಾರರ ಅರ್ಜಿ ತತ್‌ಕ್ಷಣ ಇತ್ಯರ್ಥಗೊಳಿಸಲು ಐವನ್‌ ಮನವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

4

Crime: ರೌಡಿಶೀಟರ್‌ ಕೊಲೆ ಯತ್ನ; ಆರೋಪಿಗೆ ಗುಂಡೇಟು

Doddaballapur: ಎರಡೂ ಬಸ್‌ ನಿಲ್ದಾಣಕ್ಕೆ ಬೇಕಿದೆ ಕಾಯಕಲ್ಪ!

Doddaballapur: ಎರಡೂ ಬಸ್‌ ನಿಲ್ದಾಣಕ್ಕೆ ಬೇಕಿದೆ ಕಾಯಕಲ್ಪ!

11

Lack of Bus stand: ಹೊಸಕೋಟೆ; ಬಸ್‌ ನಿಲ್ದಾಣವಿಲ್ಲದೆ ಪರದಾಟ!

Leopard: ನೆಲಮಂಗಲ ಸಮೀಪ ಚಿರತೆ ಸೆರೆ: ನರಭಕ್ಷಕ ಇದೇನಾ? ವರದಿ ನಿರೀಕ್ಷೆ

Leopard: ನೆಲಮಂಗಲ ಸಮೀಪ ಚಿರತೆ ಸೆರೆ: ನರಭಕ್ಷಕ ಇದೇನಾ? ವರದಿ ನಿರೀಕ್ಷೆ

Anekal: ರೌಡಿಶೀಟರ್‌ ಮೇಲೆ ಮಾರಕಾಸ್ತ್ರಗಳಿಂದ ದಾಳಿ

Anekal: ರೌಡಿಶೀಟರ್‌ ಮೇಲೆ ಮಾರಕಾಸ್ತ್ರಗಳಿಂದ ದಾಳಿ

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

Suside-Boy

PaduBidri: ಬಸ್‌ ಢಿಕ್ಕಿ: ಪಾದಚಾರಿ ಸಾವು

Kallabatti

Bantwala: ಪಂಜಿಕಲ್ಲು: ಅಕ್ರಮ ಕಳ್ಳಬಟ್ಟಿ ಅಡ್ಡೆಗೆ ದಾಳಿ

money

Mangaluru: ಹಣ ದ್ವಿಗುಣ ಆಮಿಷ: 3.70 ಲ.ರೂ. ವಂಚನೆ

Arrest

Mangaluru: ಹೊಸ ವರ್ಷ ಪಾರ್ಟಿಗೆ ಡ್ರಗ್ಸ್‌: ಮೂವರ ಬಂಧನ

UDP-DC

Udupi: ಇಂದ್ರಾಳಿ ರೈಲ್ವೇ ಮೇಲ್ಸೇತುವೆ: ಜ.10ರಿಂದ ವಾಹನ ಬಳಕೆಗೆ ಮುಕ್ತಗೊಳಿಸಿ: ಡಿಸಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.