Gruha Lakshmi Scheme: ಗೃಹಲಕ್ಷ್ಮೀ ಯೋಜನೆ ಯಶಸ್ವಿಗೆ ಸಿದ್ಧತೆ ಕೈಗೊಳ್ಳಿ
Team Udayavani, Aug 17, 2023, 11:46 AM IST
ದೇವನಹಳ್ಳಿ : ಗೃಹಲಕ್ಷ್ಮೀ ಯೋಜನೆ 27 ರಂದು ರಾಜ್ಯಾದ್ಯಂತ ಏಕಕಾಲದಲ್ಲಿ ಎಲ್ಲ ನಗರ ಸ್ಥಳೀಯ ಸಂಸ್ಥೆಗಳು, ಪ್ರತಿ ಗ್ರಾಪಂ ವ್ಯಾಪ್ತಿಯಲ್ಲಿ ಅನುಷ್ಠಾನಗೊಳಿಸಲಾಗುತ್ತಿದ್ದು ಜಿಲ್ಲೆಯಲ್ಲಿ ಗೃಹಲಕ್ಷ್ಮೀ ಯೋಜನೆ ಕಾರ್ಯಕ್ರಮ ಯಶಸ್ವಿಗೊಳಿಸಲು ಅಗತ್ಯ ಸಿದ್ಧತೆ ಕೈಗೊಳ್ಳಿ ಎಂದು ಜಿಲ್ಲಾಧಿಕಾರಿ ಡಾ. ಶಿವಶಂಕರ ಎನ್ ಅಧಿಕಾರಿಗಳಿಗೆ ಸೂಚಿಸಿದರು.
ತಾಲೂಕಿನ ಬೀರಸಂದ್ರ ಗ್ರಾಮದ ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಗೃಹಲಕ್ಷ್ಮೀ ಯೋಜನೆ ಅನುಷ್ಠಾನ ಕುರಿತಾಗಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಗೃಹಲಕ್ಷ್ಮೀ ಯೋಜನೆಯಡಿ ನೋಂದಣಿಯಾದ ಫಲಾನುಭವಿಗಳಿಗೆ ನೇರ ನಗದು ಸೌಲಭ್ಯ ಫಲಾನುಭವಿಗಳ ಖಾತೆಗಳಿಗೆ ವರ್ಗಾವಣೆ ಮಾಡುವ ನಿಟ್ಟಿನಲ್ಲಿ ಆ.27 ರಂದು ಏಕಕಾಲದಲ್ಲಿ ಪ್ರತಿ ಗ್ರಾಪಂನಲ್ಲಿ ಹಾಗೂ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಗೃಹಲಕ್ಷ್ಮೀ ಯೋಜನೆ ಕಾರ್ಯಕ್ರಮವನ್ನು ಅನುಷ್ಠಾನ ಗೊಳಿಸಲಾಗುತ್ತಿದೆ. ಈ ಕಾರ್ಯಕ್ರಮವನ್ನು ಜಿಲ್ಲೆಯಾದ್ಯಂತ ಯಶಸ್ವಿಯಾಗಿ ನಡೆಸಲು ಕಾರ್ಯಕ್ರಮದ ಮೇಲ್ವಿಚಾರಣೆಗಾಗಿ ತಾಲೂಕು ಹಾಗೂ ಜಿಲ್ಲಾ ಮಟ್ಟದ ನೋಡಲ್ ಅಧಿಕಾರಿಗಳನ್ನು ನೇಮಿಸಲಾಗಿದ್ದು, ಅಧಿಕಾರಿಗಳು ಜವಾಬ್ದಾರಿಯಿಂದ ಕೆಲಸ ಮಾಡಬೇಕು.
ಸಿದ್ಧತೆ ಹೇಗೆ: ಗೃಹಲಕ್ಷ್ಮೀ ಯೋಜನೆ ಕಾರ್ಯಕ್ರಮವನ್ನು ಸ್ಥಳೀಯ ಮಟ್ಟದಲ್ಲಿ ಗ್ರಾಪಂ ಕಟ್ಟಡ, ಶಾಲಾ ಕಟ್ಟಡ ಹಾಗೂ ಸಮುದಾಯ ಭವನ, ಛತ್ರಗಳಲ್ಲಿ ಏರ್ಪಡಿಸಬಹುದಾಗಿದೆ. ರಾಜ್ಯಮಟ್ಟದ ಕಾರ್ಯಕ್ರಮವು ಬೆಳಗಾವಿಯಲ್ಲಿ ನಡೆಯುವು ದರಿಂದ, ಪ್ರತಿ ಕಾರ್ಯಕ್ರಮದಲ್ಲಿ ಒಂದು ಟಿವಿ ಹಾಗೂ 10*10 ಅಳತೆಯ ಎಲ್ ಇಡಿ ಪರದೆಯನ್ನು ಇಟ್ಟು ಟಿವಿ ಮೂಲಕ ಬೆಳಗಾವಿಯಲ್ಲಿ ನಡೆಯುವ ಕಾರ್ಯಕ್ರಮದ ನೇರ ಪ್ರಸಾರ ಪ್ರದರ್ಶಿಸಲು ಹಾಗೂ ಎಲ…ಇಡಿ ಪರದೆಯಲ್ಲಿ ಬೆಳಗಾವಿ ಕಾರ್ಯಕ್ರಮದ ಸ್ಥಳದಿಂದ ಸ್ಥಳೀಯ ಕಾರ್ಯಕ್ರಮದ ಸ್ಥಳ ದೊಂದಿಗೆ ಪರಸ್ಪರ ಸಂವಾದ ನಡೆಸುವುದು. ಹೀಗಾಗಿ ಅಗತ್ಯ ಟಿ.ವಿ ಹಾಗೂ ಎಲ್ ಇಡಿ ಪರದೆಯನ್ನು ಮುಂಗಡ ಕಾಯ್ದಿರಿಸಲು ಸೂಚಿಸಿದರು.
ಎಲ್ಲರೂ ಭಾಗಿ ಯಾಗಿ: ಗೃಹಲಕ್ಷ್ಮೀ ಯೋಜನೆ ಕುರಿತ ಕರಪತ್ರಗಳನ್ನು ಮನೆ ಮನೆಗೆ ವಿತರಿಸಿ ಫಲಾನುಭವಿಗಳನ್ನು ಕಾರ್ಯಕ್ರಮಕ್ಕೆ ಕರೆ ತರಲು ಅಂಗನವಾಡಿ ಕಾರ್ಯಕರ್ತೆಯರು, ಆಶಾ ಕಾರ್ಯಕರ್ತೆಯರು, ಗ್ರಾಪಂ ನೀರು ನಿರ್ವಾಹಕರು, ಸ್ವಸಹಾಯ ಗುಂಪುಗಳ ಸಹಕಾರ ತೆಗೆದುಕೊಳ್ಳಿ ಎಂದರು. ಕಾರ್ಯಕ್ರಮದಲ್ಲಿ ಕುಡಿಯುವ ನೀರು ಮತ್ತು ಲಘು ಉಪಾಹಾರ ವ್ಯವಸ್ಥೆ ಕಲ್ಪಿಸಲು ಕ್ರಮ ವಹಿಸಿ ಎಂದರು. ನಗರ ವ್ಯಾಪ್ತಿಯ ಸ್ಥಳೀಯ ಮಟ್ಟದ ಕಾರ್ಯಕ್ರಮವನ್ನು ಶಾಸಕರ ಅಧ್ಯಕ್ಷತೆಯಲ್ಲಿ ಹಾಗೂ ಗ್ರಾಪಂ ಮಟ್ಟದಲ್ಲಿ ಪಂಚಾಯ್ತಿ ಅಧ್ಯಕ್ಷರ ನೇತೃತ್ವದಲ್ಲಿ ನಡೆಸಲು ಶಿಷ್ಟಾಚಾರದಂತೆ ಸ್ಥಳೀಯ ಜನಪ್ರತಿನಿಧಿಗಳನ್ನು, ಸದಸ್ಯರನ್ನು, ಸಾರ್ವಜನಿಕರು ಭಾಗವಹಿಸಲು ಕ್ರಮ ಕೈಗೊಳ್ಳಿ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಜಿಪಂ ಸಿಇ ಒ ಡಾ. ಅನುರಾಧ ಕೆ.ಎ ನ್.ಉಪ ಕಾರ್ಯದರ್ಶಿ ರಮೇ ಶ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕ ನಟರಾಜ್ ಸೇರಿದಂತೆ ಜಿಲ್ಲಾ ಮಟ್ಟದ, ತಾಲೂಕು ಮಟ್ಟದ ಹಾಗೂ ಸ್ಥಳೀಯ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Parliament: ಸಂಸದರ ತಳ್ಳಾಟ: ಇಂದು ಸಂಸತ್ ಭವನಕ್ಕೆ ದಿಲ್ಲಿ ಪೊಲೀಸರ ಭೇಟಿ?
Former Supreme Court Judge ವಿ.ಸುಬ್ರಹ್ಮಣಿಯನ್ ಎನ್‌ಎಚ್‌ಆರ್‌ಸಿ ಮುಖ್ಯಸ್ಥ
Shatrughan Sinha ಪುತ್ರಿ ವಿವಾಹ ಬಗ್ಗೆ ವಿಶ್ವಾಸ್ ವಿವಾದಾಸ್ಪದ ಹೇಳಿಕೆ
Maharashtra: ನಿಗದಿತ ಮಾರ್ಗ ಬಿಟ್ಟು ಬೇರೆಡೆ ಸಾಗಿದ ವಂದೇ ಭಾರತ್ ರೈಲು!
Syria ಮಾಜಿ ಅಧ್ಯಕ್ಷ ಅಸಾದ್‌ಗೆ ವಿಚ್ಛೇದನ ಕೊಡಲು ಪತ್ನಿ ಚಿಂತನೆ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.