ಭಾರೀ ವರ್ಷಧಾರೆ: ಕೋಡಿ ಹರಿದ ಕೆರೆ
ಅರ್ಕಾವತಿ ನದಿ ಪಾತ್ರದ ಕೆರೆಗಳು ಭರ್ತಿ: ರೈತರಿಗೆ ಸಂತಸ
Team Udayavani, Aug 31, 2021, 2:55 PM IST
ದೊಡ್ಡಬಳ್ಳಾಪುರ: ತಾಲೂಕಿನ ನಂದಿ ಬೆಟ್ಟದ ತಪ್ಪಲಿನಲ್ಲಿ ಕಳೆದೆರಡು ದಿನಗಳಿಂದ ಸುರಿದ ಭಾರಿ ಮಳೆಯಿಂದಾಗಿ ಅರ್ಕಾವತಿ ನದಿ ಪಾತ್ರದ ಕೆರೆಗಳು ಕೋಡಿ ಹರಿದಿರುವುದು ಗ್ರಾಮಸ್ಥರಲ್ಲಿ ಸಂತಸ ತಂದಿದೆ.
ನಂದಿಬೆಟ್ಟದಲ್ಲಿ ಹುಟ್ಟುವ ಅರ್ಕಾವತಿ ನದಿ, ಪಶ್ಚಿಮಾಭಿಮುಖವಾಗಿ ಭೂ ಸ್ಪರ್ಶ ಮಾಡುವ ಕೂಸಮ್ಮನ್ನ ಕೆರೆ, ಸೀಗೇ ಹಳ್ಳಿ ಕೆರೆ ಸೇರಿದಂತೆ ಹಲವಾರು ಬೃಹತ್ ಕುಂಟೆಗಳು ತುಂಬಿ ಹರಿಯುತ್ತಿವೆ.
ಚನ್ನರಾಯಸ್ವಾಮಿ ಬೆಟ್ಟದಲ್ಲಿನ ಪುಟ್ಟ ಜಲಪಾತಗಳು ಧುಮ್ಮಿಕ್ಕಿ ಹರಿಯುತ್ತಿವೆ. ಅರ್ಕಾವತಿ ನದಿ ಪಾತ್ರದಲ್ಲಿನ ದೊಡ್ಡ ಕೆರೆಗಳ ಪೈಕಿ ಒಂದಾಗಿರುವ ಮೆಳೇ ಕೋಟೆಯ ಕೆರೆಯನ್ನು ಸಾರ್ವಜನಿಕರ ಸಹಭಾಗಿತ್ವದಲ್ಲಿ ಎರಡು ವರ್ಷಗಳ ಹಿಂದೆ ಹೂಳೆತ್ತಿ ಅಭಿವೃದ್ಧಿಪಡಿಸಲಾಗಿತ್ತು.
ಶನಿವಾರ ರಾತ್ರಿ ಸುರಿದ ಮಳೆಯಿಂದಾಗಿ ಕೆರೆಗೆ ಭಾರಿ ಪ್ರಮಾಣದಲ್ಲಿ ನೀರು ಹರಿದು ಬರುತ್ತಿದ್ದು ಕೋಡಿ ಬೀಳಲು ಒಂದು ಅಡಿ ಮಾತ್ರ ಬಾಕಿ ಉಳಿದಿದೆ.
ಇದನ್ನೂ ಓದಿ:ನೀರು, ವಿಳಾಸ ಕೇಳಿ ಸರ ಎಗರಿಸ್ತಾರೆ ಹುಷಾರ್!
ಎರಡು ವರ್ಷಗಳ ಹಿಂದೆ ಅಂದಿನ ಜಿಲ್ಲಾಧಿಕಾರಿ ಸಿ.ಎಸ್.ಕರೀಗೌಡ ಅವರ ನೇತೃತ್ವದಲ್ಲಿ ಸಾರ್ವಜನಿಕರ ಸಹಭಾಗಿತ್ವದಲ್ಲಿ ಕೆರೆಯ ಹೂಳು ತೆಗೆದು ಅಭಿವೃದ್ಧಿಪಡಿಸಿದ ನಂತರ ಇಷ್ಟೊಂದು ದೊಡ್ಡ ಪ್ರಮಾಣದಲ್ಲಿ ಕೆರೆಯಲ್ಲಿ ನೀರು ಸಂಗ್ರಹವಾಗಿರುವುದು ಖುಷಿ ತಂದಿದೆ ಎನ್ನುತ್ತಾರೆ ಮೆಳೇಕೋಟೆಯ ಯುವ ಸ್ಪೂರ್ತಿ ಟ್ರಸ್ಟ್‌ನ ವಿಜಯಕುಮಾರ್ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Shivaji Satam: ಕ್ಯಾಷಿಯರ್ ಆಗಿದ್ದ ಹುಡುಗ ಟಿವಿ ಲೋಕದ ʼಸಿಐಡಿʼಯಾಗಿ ಬೆಳೆದು ಬಂದದ್ದೇಗೆ?
INDIA bloc; ಜಾರ್ಖಂಡ್ ಸೀಟು ಹಂಚಿಕೆ ಒಪ್ಪಂದ ಅಂತಿಮ: ಜೆಎಂಎಂಗೆ 43 ಸ್ಥಾನ
Abhimanyu Kashinath; ಸೂರಿ ಲವ್ ಗೆ ಉಪ್ಪಿ ಮೆಚ್ಚುಗೆ
Canada: ಅಮಿತ್ ಶಾ ವಿರುದ್ಧ ಆರೋಪ: ಕೆನಡಾದ ರಾಜತಾಂತ್ರಿಕರಿಗೆ ಸಮನ್ಸ್
INDvsNZ; ಬಿಗಿ ದಾಳಿ ನಡೆಸಿ ಪಂದ್ಯ ಹಿಡಿತಕ್ಕೆ ಪಡೆದುಕೊಂಡ ಟೀಮ್ ಇಂಡಿಯಾ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.