ಐದು ಜನ ಅಂತರ್ ರಾಜ್ಯ ಗಾಂಜಾ ಮಾರಾಟಗಾರರ ಬಂಧನ
Team Udayavani, Oct 23, 2021, 4:52 PM IST
ವಿಜಯಪುರ: ಐದು ಜನ ಅಂತರ್ ರಾಜ್ಯ ಗಾಂಜಾ ಮಾರಾಟಗಾರರನ್ನು ಹೊಸಕೋಟೆ ಪೊಲೀಸರು ಮಿಂಚಿನ ಕಾರ್ಯಾಚರಣೆಯಲ್ಲಿ ಬಂಧಿಸಿದ್ದಾರೆ.
ಹೊಸಕೋಟೆ ಪೊಲೀಸ್ ಠಾಣಾ ವ್ಯಾಪ್ತಿಯ ಸೂಲಿಬೆಲೆ ರಸ್ತೆಯಲ್ಲಿರುವ ರಾಘವೇಂದ್ರ ಚಿತ್ರ ಮಂದಿರ ಬಳಿ ಅ.15 ಮತ್ತು 20 ರಂದು ಮಧ್ಯಾಹ್ನ 3.30_ರ ಸಮಯದಲ್ಲಿ ಹೊಸಕೋಟೆ ಪೊಲೀಸ್ ಠಾಣಾ ಆರಕ್ಷಕ ನಿರೀಕ್ಷಕರಾದ ಎಸ್.ಆರ್ ಮಂಜುನಾಥ್ ಖಚಿತ ಮಾಹಿತಿ ಮೇರೆಗೆ ಪರಿಶೀಲಿಸಿದಾಗ ಇಬ್ಬರು ಆರೋಪಿಗಳು ಆಟೋ ನಿಲ್ಲಿಸಿಕೊಂಡು ಮಾದಕ ವಸ್ತುವಾದ ಗಾಂಜಾವನ್ನು ಗಿರಾಕಿಗಳಿಗೆ ಮಾರಾಟ ಮಾಡಲು ರಸ್ತೆಯ ಪಕ್ಕ ಇದ್ದಿದ್ದು ತಿಳಿದುಬಂತು. ಈ ಮಾಹಿತಿ ಅನುಸರಿಸಿ ಮುಂದುವರೆದಾಗ ಆರೋಪಿಗಳು ಕೈ ಸನ್ನೆ ಮಾಡಿ ಗಿರಾಕಿಗಳನ್ನು ಕರೆಯುತ್ತಿದ್ದರು. ಆ ಸಮಯದಲ್ಲಿ ಮಂಜುನಾಥ್ ಮತ್ತು ಪೊಲೀಸ್ ಸಿಬ್ಬಂದಿಗಳು ಅವರನ್ನು ದಸ್ತಗಿರಿ ಮಾಡಿದ್ದಾರೆ.
ಇವರ ಬಳಿ 2 ಕೆ.ಜಿ ಗಾಂಜಾ ಇದ್ದು 2 ಕೆಜಿಯ 8 ಬಂಡಲ್, 9 ಕೆಜಿಯ 1 ಬಂಡಲ್, 8 ಕೆಜಿಯ 1 ಬಂಡಲ್ ಇತ್ತು. ಪ್ಲಾಸ್ಟಿಕ್ ಗೋಣಿ ಚೀಲದಲ್ಲಿ 14 ಕೆಜಿ 750 ಗ್ರಾಂ, ಇನ್ನೂಂದು ಗೋಣಿ ಚೀಲದಲ್ಲಿ 5 ಕೆಜಿ 900 ಗ್ರಾಂ ಗಾಂಜಾವನ್ನು ವಶಪಡಿಸಿಕೊಂಡು ಆರೋಪಿಗಳಾದ ಸುರಾಂಗಿ, ಮೊನಿಪಾಲ್ ರನ್ನು ವಿಚಾರಣೆಗೊಳಪಡಿಸಿದಾಗ ಸತ್ಯಪ್ರದಾನ್, ಮತ್ತು ಕೃಷ್ಣ ಆಟೋ ಡ್ರೈವರ್ ಮತ್ತು ಮೊಬೈಲ್ ಗಳ ಜೊತೆ ಒಟ್ಟು 55 ಕೆಜಿ ಗಾಂಜಾವನ್ನು ವಶಪಡಿಸಿಕೊಂಡು ಖದೀಮರನ್ನು ಬಂಧಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gas cylinder leakage: ಮನೆ ಛಿದ್ರ ಛಿದ್ರ, ಇಬ್ಬರಿಗೆ ಗಾಯ
Doddaballapura: ಘಾಟಿ ಕ್ಷೇತ್ರದಲ್ಲಿ ಶ್ರೀ ಸುಬ್ರಹ್ಮಣ್ಯಸ್ವಾಮಿ ಬ್ರಹ್ಮ ರಥೋತ್ಸವ
Nelamangala: ಸಾಕು ನಾಯಿ ಸತ್ತಿದ್ದಕ್ಕೆ ಮಾಲಕ ಆತ್ಮಹ*ತ್ಯೆ
Doddaballapur: ಹೊಲದಲ್ಲಿ ಹೂ ಬಿಡಿಸುತ್ತಿದ್ದ ಮಹಿಳೆಗೆ ಕಾರು ಡಿಕ್ಕಿ: ಸಾವು
Road Mishap: ಬೈಕ್ ವ್ಹೀಲಿಂಗ್ ಮಾಡುವಾಗ ಕ್ಯಾಂಟರ್‌ಗೆ ಡಿಕ್ಕಿ; ಇಬ್ಬರು ಸಾವು
MUST WATCH
ಹೊಸ ಸೇರ್ಪಡೆ
Hubballi: ಸಂಪೂರ್ಣ ಬಂದ್… ರಸ್ತೆಗಿಳಿದ ವಾಹನಗಳ ಚಕ್ರದ ಗಾಳಿ ತೆಗೆದು ಪ್ರತಿಭಟನೆ
ಚಂದ್ರಯಾನ, ಗಗನಯಾನ: ಇಸ್ರೋದ ಮಹತ್ವದ ಪ್ಲಾನ್: ವಿ.ನಾರಾಯಣನ್
Los Angeles wildfires: ಕ್ಯಾಲಿಫೋರ್ನಿಯಾದಲ್ಲಿ ಕಾಳ್ಗಿಚ್ಚು… ಐವರು ಸಾವು
Naxal Activity Calm: ಪಶ್ಚಿಮ ಘಟ್ಟದ ಕಾನನದಲ್ಲಿ ನಕ್ಸಲ್ ನಿಶ್ಶಬ್ದ
Language Development: ಕನ್ನಡ ಕೆಲಸಕ್ಕೆ ಅಭಿವೃದ್ಧಿ ಪ್ರಾಧಿಕಾರದಲ್ಲಿ ಹಣವೇ ಇಲ್ಲ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.