ಆಸ್ಪತ್ರೆ ಆವರಣ ಅನೈತಿಕ ಚಟುವಟಿಕೆ ತಾಣ


Team Udayavani, Feb 16, 2021, 1:04 PM IST

Untitled-2

ಆನೇಕಲ್‌: ಸರ್ಜಾಪುರ ಗ್ರಾಮದಲ್ಲಿ ಪ್ರಾಣಿಗಳಿಗೆ ಚಿಕಿತ್ಸೆ ನೀಡಬೇಕಾದ ಪಶು ವೈದ್ಯಕೀಯ ಆಸ್ಪತ್ರೆ ಆವರಣ, ಈಗ ಅನೈತಿಕ ಚಟುವಟಿಕೆಗಳ ತಾಣವಾಗಿ ಮಾರ್ಪಟ್ಟಿದೆ.

ತಾಲೂಕಿನ ಸರ್ಜಾಪುರ ಬಸ್‌ ನಿಲ್ದಾಣದ ಮುಂಭಾಗದ ಪಶು ವೈದ್ಯಕೀಯ ಆಸ್ಪತ್ರೆ ಇದ್ದು, ಅಧಿಕಾರಿಗಳು ಸಮಯಕ್ಕೆ ಸರಿಯಾಗಿ ಹಾಜರಾತಿ ಇರುವುದಿಲ್ಲ. ಆಸ್ಪತ್ರೆಯ ಸುತ್ತಲಿನ ಆವರಣವನ್ನು ಸ್ವಚ್ಛ, ಸಂರಕ್ಷಣೆ ಮಾಡಿಕೊಳ್ಳುವಲ್ಲಿ ಇಲಾಖೆವಿಫ‌ಲವಾಗಿದ್ದು, ರಾತ್ರಿ ಆಗುತ್ತಿದ್ದಂತೆ ಪುಂಡ-ಪೋಕರಿಗಳ ನೆಚ್ಚಿನ ತಾಣವಾಗಿದೆ. ಈ ಸಂಬಂಧ ಅಧಿಕಾರಿಗಳಿಗೆ ದೂರು ನೀಡಿದರೂ, ಕ್ಯಾರೆ ಎನ್ನುತ್ತಿಲ್ಲವೆಂದು ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

 ಸೌಲಭ್ಯ ವಂಚಿತ: ಸುತ್ತಮುತ್ತಲಿನ ಗ್ರಾಮದಲ್ಲಿ ರೈತಾಪಿ ಕುಟುಂಬ ವಾಸಿಸುತ್ತಿದ್ದು, ಹೈನುಗಾರಿಕೆ ನಂಬಿಕೊಂಡು ಜೀವನ ಸಾಗಿಸುತ್ತಿದ್ದಾರೆ. ಆದರೆ, ರಾಸು, ಆಡು, ಕುರಿ, ಮೇಕೆ, ನಾಯಿ ಮುಂತಾದಪ್ರಾಣಿಗಳಿಗೆ ಖಾಯಿಲೆ ಉದ್ಭವಗೊಂಡರೆ ಸೂಕ್ತ ಚಿಕಿತ್ಸೆ ಸಿಗದೆ ಎಷ್ಟೋ ಪ್ರಾಣಿಗಳು ಜೀವ ಬಿಟ್ಟಿವೆ. ಎಲ್ಲ ಸೌಕರ್ಯ ಇದ್ದರೂ ಅಧಿಕಾರಿಗಳ ಬೇಜವಾಬ್ದಾರಿತನದಿಂದ ರೈತರು ಸೌಲಭ್ಯ ಪಡೆಯುವಲ್ಲಿ ವಂಚಿತರಾಗಿದ್ದಾರೆ. ಆಸ್ಪತ್ರೆ ಸುತ್ತಮುತ್ತಲಿನ ಪ್ರದೇಶದಲ್ಲಿ ವಾಸಿಸುವ ಸಾರ್ವಜನಿಕರು ತಮ್ಮ ಮನೆಯಲ್ಲಿ ಸಂಗ್ರಹವಾದ ತ್ಯಾಜ್ಯವನ್ನು ಆಸ್ಪತ್ರೆ ಆವರಣದೊಳಗೆ ಎಸೆಯು ತ್ತಿದ್ದಾರೆ. ಆಸ್ಪತ್ರೆ ಆವರಣವನ್ನು ಶೌಚಾಲಯವನ್ನಾಗಿ ಉಪಯೋಗಿಸುತ್ತಿದ್ದಾರೆ. ಇದಕ್ಕೆಲ್ಲ ಮೂಲ ಕಾರಣ ಕಾಂಪೌಂಡ್‌ ವ್ಯವಸ್ಥೆ ಇಲ್ಲದಿರುವುದು.

ಆವರಣದಲ್ಲಿ ಪಾರ್ಕಿಂಗ್‌: ಬೆಂಗಳೂರು ನಗರದಲ್ಲಿ ಮತ್ತು ಬೊಮ್ಮಸಂದ್ರ, ಅತ್ತಿಬೆಲೆ, ಎಲೆಕ್ಟ್ರಾನಿಕ್‌ ಸಿಟಿ ಕೈಗಾರಿಕಾ ಪ್ರದೇಶಗಳಲ್ಲಿ ಕೆಲಸ ನಿರ್ವಹಿಸುವ ಸುತ್ತಮುತ್ತಲಿನ ಹಳ್ಳಿ ಜನರು ತಮ್ಮ ವಾಹನಗಳನ್ನು ಆಸ್ಪತ್ರೆ ಆವರಣದಲ್ಲೇ ಪಾರ್ಕಿಂಗ್‌ ಮಾಡುತ್ತಾರೆ. ಇದರಿಂದ ರಾಸುಗಳಿಗೆ, ಆಸ್ಪತ್ರೆಗೆ ಬರುವಂತಹ ರೈತರಿಗೆ ತೊಂದರೆಯಾಗುತ್ತಿದೆ.

ಎರಡು ಆಸ್ಪತ್ರೆಗಳ ಜವಾಬ್ದಾರಿ: ಈ ಬಗ್ಗೆ “ಉದಯವಾಣಿ’ಗೆ ಪ್ರತಿಕ್ರಿಯಿಸಿ ಸರ್ಜಾಪುರ ಪಶು ವೈದ್ಯಕೀಯ ಆಸ್ಪತ್ರೆ ಮುಖ್ಯ ಪಶು ವೈದ್ಯಾಧಿಕಾರಿ ಡಾ.ರಾಜಶೇಖರ್‌, ಅತ್ತಿಬೆಲೆ ಪಶು ವೈದ್ಯಕೀಯ ಆಸ್ಪತ್ರೆಗೆ ಪ್ರಭಾರಿಯಾಗಿ ನೇಮಕವಾಗಿದ್ದು, ಗ್ರಾಪಂಚುನಾವಣೆಯ ಚುನಾವಣಾಧಿಕಾರಿಯಾಗಿ ಸಾಕಷ್ಟು ಭಾಗಗಳಲ್ಲಿ ಕೆಲಸ ನಿರ್ವಹಿಸುತ್ತಿದ್ದರಿಂದಕೆಲಸದ ಒತ್ತಡ ಹೆಚ್ಚಿದ್ದು, ಒಂದೇ ಸಮಯದಲ್ಲಿ ಎರಡು ಆಸ್ಪತ್ರೆಗಳ ಜವಾಬ್ದಾರಿ ಹೆಚ್ಚಾಗಿದೆ. ಶುಚಿತ್ವ ಮತ್ತು ಆಸ್ಪತ್ರೆಯ ಸಂರಕ್ಷಣೆ ಬಗ್ಗೆ ಸರ್ಜಾಪುರಗ್ರಾಪಂ ಅಧಿಕಾರಿಗಳಿಗೆ, ಜನಪ್ರತಿನಿಧಿಗಳ ಗಮನಕ್ಕೆ ತಂದರೂ ಕೆಲಸ ಮಾಡಿ ಕೊಡುತ್ತೇವೆ ಎಂದು ಭರವಸೆ ನೀಡಿದ್ದಾರೆಂದು ತಿಳಿಸಿದರು.

ಗ್ರಾಮದಲ್ಲಿ ನೂರಾರು ರೈತರು ಹೈನುಗಾರಿಕೆ ನಂಬಿಕೊಂಡು ಜೀವನ ಸಾಗಿಸುತ್ತಿದ್ದು, ರಾಸುಗಳಿಗೆ ಆರೋಗ್ಯದಲ್ಲಿ ಏರುಪೇರಾದರೆ ಪಶು ವೈದ್ಯಕೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡುತ್ತಿದೆ. ಸಾರ್ವಜನಿಕರು ಆರೋಪಿ ಸುತ್ತಿದ್ದಂತೆ ಆಸ್ಪತ್ರೆ ಆವರಣ ಸಂಪೂರ್ಣ ಕಸಮಯವಾಗಿದೆ. ಗ್ರಾಪಂ ಸಭೆಯಲ್ಲಿ ಚರ್ಚಿಸಿ ಅನೈತಿಕ ಚಟುವಟಿಕೆಗೆ ಅವಕಾಶವಾಗದಂತೆ ಕ್ರಮ ಕೈಗೊಳ್ಳುತ್ತೇವೆ. ಕಲಾವತಿ, ಸರ್ಜಾಪುರ ಗ್ರಾಪಂ ಸದಸ್ಯೆ

ಟಾಪ್ ನ್ಯೂಸ್

Frud

Mangaluru: ಆನ್‌ಲೈನ್‌ ಗೇಮ್‌ನಲ್ಲಿ ವಂಚಕರ ಪರಿಚಯ; ಜಾಲ ಸೇರಿದ್ದ ಯುವಕ

MCC-BankArrest

Mangaluru: ಸಾಲಗಾರನ ಆತ್ಮಹ*ತ್ಯೆಗೆ ಪ್ರಚೋದನೆ ಆರೋಪ: ಎಂಸಿಸಿ ಬ್ಯಾಂಕ್‌ ಅಧ್ಯಕ್ಷನ ಬಂಧನ

Ashok-Vijayendra

Over Remarks: ʼಸಿದ್ದರಾಮೋತ್ಸವʼ ಮಾಡಿಸುವ ನೀವು ‘ಅಂಬೇಡ್ಕರ್‌ ಉತ್ಸವ’ ಮಾಡಲ್ಲ: ಬಿಜೆಪಿ

Mumbai Coast: ಗೇಟ್‌ವೇ ಆಫ್‌ ಇಂಡಿಯಾ ಬಳಿ ದೋಣಿ ದುರಂತ: 13 ಮಂದಿ ದುರ್ಮರಣ!

1-horoscope

Daily Horoscope: ಸಕಾರಾತ್ಮಕ ಚಿಂತನೆಯಿಂದ ಯಶಸ್ಸು, ಪ್ರತಿಭೆ ವೃದ್ಧಿಗೆ ಅವಕಾಶ

BYV-Modi

Internal Dissent: ಪ್ರಧಾನಿ ಮೋದಿ ಭೇಟಿಯಾದ ವಿಜಯೇಂದ್ರ ದೂರದಿದ್ದರೂ ‘ಸಂದೇಶ’ ರವಾನೆ

Narendra Modi: 43 ವರ್ಷದ ಬಳಿಕ ಭಾರತ ಪ್ರಧಾನಿ ಕುವೈಟ್‌ ಭೇಟಿ: 21ರಿಂದ ಮೋದಿ ಪ್ರವಾಸ

Narendra Modi: 43 ವರ್ಷದ ಬಳಿಕ ಭಾರತ ಪ್ರಧಾನಿ ಕುವೈಟ್‌ ಭೇಟಿ: 21ರಿಂದ ಮೋದಿ ಪ್ರವಾಸ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

4

Crime: ರೌಡಿಶೀಟರ್‌ ಕೊಲೆ ಯತ್ನ; ಆರೋಪಿಗೆ ಗುಂಡೇಟು

Doddaballapur: ಎರಡೂ ಬಸ್‌ ನಿಲ್ದಾಣಕ್ಕೆ ಬೇಕಿದೆ ಕಾಯಕಲ್ಪ!

Doddaballapur: ಎರಡೂ ಬಸ್‌ ನಿಲ್ದಾಣಕ್ಕೆ ಬೇಕಿದೆ ಕಾಯಕಲ್ಪ!

11

Lack of Bus stand: ಹೊಸಕೋಟೆ; ಬಸ್‌ ನಿಲ್ದಾಣವಿಲ್ಲದೆ ಪರದಾಟ!

Leopard: ನೆಲಮಂಗಲ ಸಮೀಪ ಚಿರತೆ ಸೆರೆ: ನರಭಕ್ಷಕ ಇದೇನಾ? ವರದಿ ನಿರೀಕ್ಷೆ

Leopard: ನೆಲಮಂಗಲ ಸಮೀಪ ಚಿರತೆ ಸೆರೆ: ನರಭಕ್ಷಕ ಇದೇನಾ? ವರದಿ ನಿರೀಕ್ಷೆ

Anekal: ರೌಡಿಶೀಟರ್‌ ಮೇಲೆ ಮಾರಕಾಸ್ತ್ರಗಳಿಂದ ದಾಳಿ

Anekal: ರೌಡಿಶೀಟರ್‌ ಮೇಲೆ ಮಾರಕಾಸ್ತ್ರಗಳಿಂದ ದಾಳಿ

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

Frud

Mangaluru: ಆನ್‌ಲೈನ್‌ ಗೇಮ್‌ನಲ್ಲಿ ವಂಚಕರ ಪರಿಚಯ; ಜಾಲ ಸೇರಿದ್ದ ಯುವಕ

MCC-BankArrest

Mangaluru: ಸಾಲಗಾರನ ಆತ್ಮಹ*ತ್ಯೆಗೆ ಪ್ರಚೋದನೆ ಆರೋಪ: ಎಂಸಿಸಿ ಬ್ಯಾಂಕ್‌ ಅಧ್ಯಕ್ಷನ ಬಂಧನ

Ashok-Vijayendra

Over Remarks: ʼಸಿದ್ದರಾಮೋತ್ಸವʼ ಮಾಡಿಸುವ ನೀವು ‘ಅಂಬೇಡ್ಕರ್‌ ಉತ್ಸವ’ ಮಾಡಲ್ಲ: ಬಿಜೆಪಿ

Mumbai Coast: ಗೇಟ್‌ವೇ ಆಫ್‌ ಇಂಡಿಯಾ ಬಳಿ ದೋಣಿ ದುರಂತ: 13 ಮಂದಿ ದುರ್ಮರಣ!

1-horoscope

Daily Horoscope: ಸಕಾರಾತ್ಮಕ ಚಿಂತನೆಯಿಂದ ಯಶಸ್ಸು, ಪ್ರತಿಭೆ ವೃದ್ಧಿಗೆ ಅವಕಾಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.