ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಜನಪರ ಯೋಜನೆ ಜಾರಿ
Team Udayavani, Apr 10, 2019, 3:00 AM IST
ದೇವನಹಳ್ಳಿ: ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಹಲವು ಜನಪರ ಯೋಜನೆಗಳು ಜಾರಿಯಾಗುತ್ತವೆ. ಡಾ.ಮನಮೋಹನ್ ಸಿಂಗ್ ಪ್ರಧಾನಿಯಾಗಿದ್ದಾಗ ರೈತರ ಸಾಲ ಮನ್ನಾ ಮಾಡಿದ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ ಎಂದು ಜಿಪಂ ಸದಸ್ಯ ಲಕ್ಷ್ಮೀನಾರಾಯಣ್ ತಿಳಿಸಿದರು.
ತಾಲೂಕಿನ ಐಬಸಾಪುರ ಗ್ರಾಮದಲ್ಲಿ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಜೆಡಿಎಸ್ ಮತ್ತು ಕಾಂಗ್ರೆಸ್ ಮೈತ್ರಿ ಅಭ್ಯರ್ಥಿ ಎಂ.ವೀರಪ್ಪ ಮೊಯ್ಲಿ ಪರ ಮತಯಾಚನೆ ಮಾಡಿ ಮಾತನಾಡಿದರು.
ಮೂಲ ಸೌಕರ್ಯಗಳಿಗೆ ಹೆಚ್ಚು ಆದ್ಯತೆ: ವೀರಪ್ಪ ಮೊಯ್ಲಿ ಕಳೆದ 10 ವರ್ಷಗಳಿಂದ ಸಂಸದರಾಗಿ ಕ್ಷೇತ್ರದ ಅಭಿವೃದ್ಧಿಗಾಗಿ ಉತ್ತಮವಾಗಿ ಶ್ರಮಿಸಿದ್ದಾರೆ. ಬಯಲು ಸೀಮೆ ಪ್ರದೇಶಗಳಿಗೆ ಶಾಶ್ವತ ಕುಡಿಯುವ ನೀರನ್ನು ಕಲ್ಪಿಸುವ ನಿಟ್ಟಿನಲ್ಲಿ ಎತ್ತಿನ ಹೊಳೆ ಯೋಜನೆಯನ್ನು ತರಲೇಬೇಕೆಂಬ ಉದ್ದೇಶದಿಂದ ಸಾಕಷ್ಟು ಶ್ರಮಿಸಿದ್ದಾರೆ.
ಅಲ್ಲದೇ, ಸಂಸದರ ನಿಧಿಯಿಂದ ಚನ್ನರಾಯಪಟ್ಟಣ ಹೋಬಳಿಯಲ್ಲಿ ಶಾಲಾ ಕಟ್ಟಡಗಳಿಗೆ ಅನುದಾನ ಸೇರಿದಂತೆ ಇನ್ನೂ ಮುಂತಾದ ಮೂಲ ಸೌಕರ್ಯಗಳಿಗೆ ಹೆಚ್ಚು ಆದ್ಯತೆ ನೀಡಿದ್ದಾರೆ ಎಂದು ಹೇಳಿದರು.
ಮೊಯ್ಲಿ ಗೆಲ್ಲಿಸಿ: ರಾಜ್ಯ ಮಹಿಳಾ ಕಾಂಗ್ರೆಸ್ ಕಾರ್ಯದರ್ಶಿ ಅಕ್ಕಯಮ್ಮ ಮುನಿಯಪ್ಪ ಮಾತನಾಡಿ, ಸಿದ್ದರಾಮಯ್ಯ ನೇತೃತ್ವದಲ್ಲಿ ಕಾಂಗ್ರೆಸ್ ಪಕ್ಷ 5 ವರ್ಷಗಳ ಕಾಲ ರಾಜ್ಯದಲ್ಲಿ ಉತ್ತಮ ಆಡಳಿತ ನೀಡಿದೆ. ಅಲ್ಲದೇ, ಹತ್ತು ಹಲವಾರು ಭಾಗ್ಯಗಳ ಮುಖಾಂತರ ಸುಭದ್ರ ಹಾಗೂ ಉತ್ತಮ ಸರ್ಕಾರ ನಡೆಸಿದ್ದಾರೆ.
ಕೇಂದ್ರದಲ್ಲಿ ಮನಮೋಹನ್‌ಸಿಂಗ್ ಪ್ರಧಾನಿ ಆಗಿದ್ದಾಗ ಮಹಾತ್ಮ ಗಾಂಧಿ ಉದ್ಯೋಗ ಖಾತರಿ ಯೋಜನೆ ಮುಖಾಂತರ ಗ್ರಾಮ ಪಂಚಾಯಿತಿಗಳಿಗೆ ಕೋಟಿ ಕೋಟಿ ರೂ. ಅನುದಾನ ನೀಡಿದ್ದು ಹಳ್ಳಿಗಳ ಅಭಿವೃದ್ಧಿಗೆ ಸಹಕಾರಿಯಾಗಿದೆ.
ಆದ್ದರಿಂದ, ಮತ್ತೆ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದರೆ ರೈತರು ಹಾಗೂ ಬಡವರ ಪರ ಯೋಜನೆಗಳನ್ನು ನೀಡಿ ದೇಶವನ್ನು ಅಭಿವೃದ್ಧಿ ಕಡೆ ಕೊಂಡೊಯ್ಯಲು ಅನುಕೂಲವಾಗುತ್ತದೆ. ವೀರಪ್ಪ ಮೊಯ್ಲಿ ಅವರಿಗೆ ಮತ ನೀಡಿದರೆ ಕಾಂಗ್ರೆಸ್ ಸರ್ಕಾರ ರಚನೆಯಾಗುತ್ತದೆ ಕೇಂದ್ರದಲ್ಲಿ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಎಸ್ಸಿ ಘಟಕದ ಅಧ್ಯಕ್ಷ ಲೋಕೇಶ್, ತಾಪಂ ಮಾಜಿ ಸದಸ್ಯ ಲಕ್ಷ್ಮಣ್ ಗೌಡ, ಕಿಸಾನ್ ಕೇತ್ ಮಜ್ದೂರ್ ಅಧ್ಯಕ್ಷ ಬೈರೇಗೌಡ, ವಿಜಯಪುರ ಬ್ಲಾಕ್ ಕಾಂಗ್ರೇಸ್ ಅಧ್ಯಕ್ಷ ರಾಮಚಂದ್ರಪ್ಪ, ತಾಪಂ ಸದಸ್ಯ ವೆಂಕಟೇಶ್, ವಿಎಸ್‌ಎಸ್‌ಎನ್ ಅಧ್ಯಕ್ಷ ಬಾಬು, ನಲ್ಲೂರು ವಿಎಸ್‌ಎಸ್‌ಎನ್ ಮಾಜಿ ಅಧ್ಯಕ್ಷ ಲಲಿತೇಶ್,
ನಲ್ಲೂರು ಗ್ರಾಪಂ ಉಪಾಧ್ಯಕ್ಷ ನವೀನ್, ಸದಸ್ಯರಾದ ಮಂಜುನಾಥ್, ಮಹದೇವಿ ವೀರಭದ್ರಪ್ಪ, ಕೃಷ್ಣಪ್ಪ, ಮುಖಂಡರಾದ ಚನ್ನ ಕೃಷ್ಣಪ್ಪ ಚನ್ನರಾಯಪಟ್ಟಣ ಗ್ರಾಪಂ ಸದಸ್ಯರಾದ ಕೇಶವಮೂರ್ತಿ, ನಾರಾಯಣಸ್ವಾಮಿ ಸೇರಿದಂತೆ ಅಪಾರ ಸಂಖ್ಯೆಯ ಕಾರ್ಯಕರ್ತರು ಭಾಗವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Doddaballapura: ಘಾಟಿ ಕ್ಷೇತ್ರದಲ್ಲಿ ಶ್ರೀ ಸುಬ್ರಹ್ಮಣ್ಯಸ್ವಾಮಿ ಬ್ರಹ್ಮ ರಥೋತ್ಸವ
Nelamangala: ಸಾಕು ನಾಯಿ ಸತ್ತಿದ್ದಕ್ಕೆ ಮಾಲಕ ಆತ್ಮಹ*ತ್ಯೆ
Doddaballapur: ಹೊಲದಲ್ಲಿ ಹೂ ಬಿಡಿಸುತ್ತಿದ್ದ ಮಹಿಳೆಗೆ ಕಾರು ಡಿಕ್ಕಿ: ಸಾವು
Road Mishap: ಬೈಕ್ ವ್ಹೀಲಿಂಗ್ ಮಾಡುವಾಗ ಕ್ಯಾಂಟರ್‌ಗೆ ಡಿಕ್ಕಿ; ಇಬ್ಬರು ಸಾವು
Tragic: ಮದುವೆ ಹರಕೆ ಹೊತ್ತು ಘಾಟಿ ದೇಗುಲಕ್ಕೆ ಬಂದಿದ್ದ ಯುವತಿ ಸಾವು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Miracle: ಗುಳಿ ಗುಳಿ ಶಂಕರ ಎಂಬ ಮಾಂತ್ರಿಕ ಕೊಳ… ಇಲ್ಲಿದೆ ಹಲವು ಚಮತ್ಕಾರಿ ವಿಚಾರಗಳು
Table Space: ಟೇಬಲ್ ಸ್ಪೇಸ್ ಸ್ಥಾಪಕ ಅಮಿತ್ ಬ್ಯಾನರ್ಜಿ ಹೃದಯಾಘಾತದಿಂದ ನಿಧನ
Delhi Polls: ದಿಲ್ಲಿಯ ಮಹಿಳಾ ಮತದಾರರ ಸೆಳೆಯಲು ಗ್ಯಾರಂಟಿ ಘೋಷಿಸಿದ ಕಾಂಗ್ರೆಸ್
ನನ್ನ ಮಗಳ ಬಾಯ್‌ಫ್ರೆಂಡ್ ಫೋಟೋ ರಿವೀಲ್ ಮಾಡಿದರೆ 21 ಲಕ್ಷ ಬಹುಮಾನ: ಬಿಗ್ ಬಾಸ್‌ಗೆ ಸವಾಲು
Manipal KMC; ಮಧುಮೇಹಿ ಮಕ್ಕಳಿಗಾಗಿ ಶೈಕ್ಷಣಿಕ ಕಾರ್ಯಕ್ರಮ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.