ಅಕ್ರಮವಾಗಿ ನಿರ್ಮಿಸಿಕೊಂಡಿದ್ದ ಅಂಗಡಿಗಳ ತೆರವು ಕಾರ್ಯಾಚರಣೆ
Team Udayavani, Jan 28, 2020, 3:55 PM IST
ದೊಡ್ಡಬಳ್ಳಾಪುರ: ನಗರದ ಕೋರ್ಟ್ ರಸ್ತೆಯಲ್ಲಿ ಅಕ್ರಮವಾಗಿ ನಿರ್ಮಿಸಲಾಗಿದ್ದ ನಾಲ್ಕು ಅಂಗಡಿ ಮಳಿಗೆಗಳನ್ನು ನಗರಸಭೆ ಅಧಿಕಾರಿಗಳು ಸೋಮವಾರ ಪೊಲೀಸ್ ಭದ್ರತೆಯೊಂದಿಗೆ ತೆರವು ಗೊಳಿಸಿದರು.
ಕೋರ್ಟ್ ರಸ್ತೆಯಲ್ಲಿನ ಖಾಸಗಿ ವಸತಿ ಗೃಹದ ಮುಂಭಾಗದಲ್ಲಿ ನಗರಸಭೆಯಿಂದ ಅನುಮತಿ ಪಡೆಯದೆ, ಹೈ-ಟೆನ್ಷನ್ ವೈರ್ ಹಾದುಹೋಗಿರುವ ಕೆಳಭಾಗದಲ್ಲಿ ಖಾಸಗಿ ವ್ಯಕ್ತಿಯೊಬ್ಬರು ಮಳಿಗೆ ನಿರ್ಮಿಸಿದ್ದರು. ಈ ಕುರಿತು ಸ್ಥಳೀಯರೊಬ್ಬರು ನೀಡಿದ ದೂರಿನ ಮೇರೆಗೆ, ನಗರಸಭೆಯಿಂದ ಕಟ್ಟಡ ತೆರವುಗೊಳಿಸಲು ಈ ಹಿಂದೆ ನೊಟೀಸ್ ನೀಡಲಾಗಿತ್ತು. ಆದರೆ ತೆರವುಗೊಳಿಸದೇ ಇದ್ದುದರಿಂದ, ಕಟ್ಟಡ ಮಾಲೀಕರು ನ್ಯಾಯಾಲಯದ ಮೊರೆ ಹೋಗಿದ್ದರು ಎನ್ನಲಾಗಿದೆ. ನ್ಯಾಯಾಲಯದ ಪ್ರಕ್ರಿಯೆ ಪೂರ್ಣಗೊಂಡು ಕಟ್ಟಡ ತೆರವಿಗೆ ಆದೇಶ ನೀಡಿದ ಹಿನ್ನಲೆ ನಗರಸಭೆ ಸಹಾಯಕ ಕಾರ್ಯಪಾಲಕ ಅಭಿಯಂತರ ಷೇಕ್ ಫಿರೋಜ್, ನಗರ ಠಾಣೆ ಸಬ್ ಇನ್ಸ್ ಪೆಕ್ಟರ್ ವೆಂಕಟೇಶ್ ಸಮ್ಮುಖದಲ್ಲಿ ಕಟ್ಟಡವನ್ನು ತೆರವುಗೊಳಿಸಲಾಯಿತು. ನಗರಸಭೆ ಕಿರಿಯ ಅಭಿಯಂತರರಾದ ಚಂದ್ರಶೇಖರ್, ರಾಮೇಗೌಡ ಹಾಗೂ ಬೆಸ್ಕಾಂ ಸಿಬ್ಬಂದಿ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.