ಉಪ ಆರೋಗ್ಯ ಘಟಕ ಉದ್ಘಾಟನೆ
Team Udayavani, Jan 23, 2021, 7:46 PM IST
ದೇವನಹಳ್ಳಿ: ಜಿಲ್ಲಾಡಳಿತ ಭವನದಲ್ಲಿ ಉಪ ಆರೋಗ್ಯ ಕೇಂದ್ರ ತೆರೆಯಲು ಅನೇಕ ದಿನಗಳಿಂದ ಬೇಡಿಕೆ ಇದ್ದು, ಉಪ ಆರೋಗ್ಯ ಘಟಕವಾಗಿರುವುದ ರಿಂದ ಸಾರ್ವಜನಿಕರಿಗೆ ಹಾಗೂ ವಿವಿಧ ಇಲಾಖೆಯ ಸಿಬ್ಬಂದಿಗಳಿಗೆ ಅನುಕೂಲ ವಾಗಲಿದೆ ಎಂದು ಜಿಪಂ ಅಧ್ಯಕ್ಷ ವಿ.ಪ್ರಸಾದ್ ತಿಳಿಸಿದರು.
ತಾಲೂಕಿನ ಜಿಲ್ಲಾಡಳಿತ ಭವನದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ಉಪ ಆರೋಗ್ಯ ಘಟಕ ಉದ್ಘಾಟಿಸಿ ಮಾತನಾಡಿ,. ಜಿಪಂ ಸರ್ವ ಸದಸ್ಯರ ಸಭೆಯಲ್ಲಿ ಹಲವಾರು ಸದಸ್ಯರು ಜಿಲ್ಲಾಡಳಿತ ಭವನ ದಲ್ಲಿ ಆರೋಗ್ಯ ಕೇಂದ್ರ ಸ್ಥಾಪನೆಗೆ ಒತ್ತಡ ಹೇರಲಾಗಿತ್ತು. ಆರೋಗ್ಯ ಕೇಂದ್ರದ ಅವಶ್ಯಕತೆ ಹೆಚ್ಚಿತ್ತು. ಸಿಬ್ಬಂದಿಗೆ ಏನಾದರೂ ತೊಂದರೆಯಾದರೆ, ದೇವನ ಹಳ್ಳಿ ಅಥವಾ ದೊಡ್ಡಬಳ್ಳಾಪುರ ಹೋಗ ಬೇಕಾದ ಅನಿವಾರ್ಯವಿತ್ತು. ಇದೀಗ ಸ್ಥಳದಲ್ಲಿಯೇ ಪರಿಹಾರ ಸಿಗುವಂತಾಗಿದೆ. ಪ್ರಥಮ ಚಿಕಿತ್ಸೆ ನೀಡಿ, ಹೆಚ್ಚಿನ ಚಿಕಿತ್ಸೆಗೆ ಬೇರೆಡೆಗೆ ಕರೆದುಕೊಂಡು ಹೋಗಲು ಅನುಕೂಲವಾಗುತ್ತದೆ ಎಂದರು.
ಇದನ್ನೂ ಓದಿ:ಶೀಘ್ರ ಹುರಿಕಾರರಿಗೆ ಗುರುತಿನ ಚೀಟಿ
ಜಿಲ್ಲಾಡಳಿತ ಭವನದ ವಿವಿಧ ಇಲಾಖೆಗಳಲ್ಲಿ ಕಾರ್ಯನಿರ್ವಹಿಸುವ ಅಧಿಕಾರಿಗಳು, ಸಿಬ್ಬಂದಿ ಮತ್ತು ಸಾರ್ವಜನಿಕರಿಗೆ ಆರೋಗ್ಯ ತಪಾಸಣೆ ಮಾಡಿಸಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ. ಈ ಘಟಕದಲ್ಲಿ ಒಬ್ಬ ವೈದ್ಯ, ಒಬ್ಬ ಶುಶ್ರೂಷಕಿ ಹಾಗೂ ಒಂದು ಡಿ ಗ್ರೂಪ್ ನೌಕರರು ಇರಲಿ ದ್ದಾರೆ. ಆರೋಗ್ಯ ಘಟಕದಲ್ಲಿ ಪ್ರಾಥಮಿಕ ಚಿಕಿತ್ಸೆ ದೊರೆಯಲಿದ್ದು, ಉಸಿರಾಟದ ಸಮಸ್ಯೆ, ಹೃದಯ ಸಂಬಂಧಿ ಸಮಸ್ಯೆಗಳ ಹೊರ ರೋಗಿಗಳು ಬಂದಲ್ಲಿ ಹೆಚ್ಚಿನ ಚಿಕಿತ್ಸೆಗಾಗಿ ಜಿಲ್ಲಾಸ್ಪತ್ರೆಗೆ ರವಾನಿಸಲಾಗುವುದು. ಜಿಲ್ಲಾಡಳಿತದ ಸಿಬ್ಬಂದಿಗಳಿಗೆ ಹಾಗೂ ಸಾರ್ವಜನಿಕರಿಗೆ ಒ.ಪಿ.ಡಿ. ತಪಾಸಣೆ ಮಾಡಲಾಗುವುದು ಎಂದರು. ಜಿಪಂ ಉಪ ಕಾರ್ಯದರ್ಶಿ ಕೆ. ಕರಿಯಪ್ಪ, ಯೋಜನಾ ನಿರ್ದೇಶಕಿ ವಿನುತಾ ರಾಣಿ, ಜಿಲ್ಲಾ ಆರೋಗ್ಯಾಧಿಕಾರಿ ಡಾ. ಮಂಜುಳಾದೇವಿ, ಆರೋಗ್ಯ ಇಲಾಖೆ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.