ಬಿಬಿಎಂಪಿ ಕಸದ ಲಾರಿಗೆ ಇಬ್ಬರು ಬಲಿ

Team Udayavani, Nov 29, 2022, 1:53 PM IST

tdy-3

ದೊಡ್ಡಬಳ್ಳಾಪುರ: ತಾಲೂಕಿನ ಹುಲಿಕುಂಟೆ ಸಮೀಪ ಬಿಬಿಎಂಪಿ ಕಸದ ಲಾರಿ ಡಿಕ್ಕಿ ಹೊಡೆದ ಪರಿಣಾಮ ಬೈಕ್‌ ಸವಾರರಿಬ್ಬರು ಸ್ಥಳದಲ್ಲೇ ಮೃತ ಪಟ್ಟಿರುವ ಘಟನೆ ಸೋಮವಾರ ಸಂಜೆ ನಡೆದಿದೆ.

ನೆಲಮಂಗಲ ತಾಲೂಕಿನ ಮರಳುಕುಂಟೆ ಗ್ರಾಮದ ನಿವಾಸಿಗಳಾದ ಮಹೇಶ್‌ (27) ಹಾಗು ಮಾರುತಿ (24) ದುರ್ದೈವಿಗಳು.

ದ್ವಿಚಕ್ರ ವಾಹನ ಸವಾರರಿಗೆ ಡಿಕ್ಕಿ ಹೊಡೆದ ತಕ್ಷಣ ಬಿಬಿಎಂಪಿ ಕಸದ ಲಾರಿ ಚಾಲಕ ಸ್ಥಳದಿಂದ ಪರಾರಿಯಾಗಲು ಯತ್ನಿಸಿದ್ದನ್ನು ಗಮನಿಸಿದ ಸ್ಥಳೀಯರು ಚಾಲಕನನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ.

ಈ ವೇಳೆ ಸ್ಥಳದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿತ್ತು. ಅಪಘಾತ ನಡೆದ ಸ್ಥಳಕ್ಕೆ ಶಾಸಕ ಟಿ.ವೆಂಕಟರಮಣಯ್ಯ, ತಹಶೀಲ್ದಾರ್‌ ಮೋಹನ ಕುಮಾರಿ, ಜಿಲ್ಲಾ ಪೊಲೀಸ್‌ ವರಿಷ್ಠಾಧಿ ಕಾರಿ ಮಲ್ಲಿ ಕಾರ್ಜುನ ಬಾಲದಂಡಿ ಭೇಟಿ ನೀಡಿದ್ದು ಉದ್ವಿಗ್ನ ಜನರನ್ನು ಸಮಾಧಾನ ಪಡಿಸಿದ್ದಾರೆ.

ಬೆಂಗಳೂರು ವ್ಯಾಪ್ತಿಯಿಂದ ಕಸ ತುಂಬಿದ ಸುಮಾರು 150 ಲಾರಿಗಳು ಹುಲಿಕುಂಟೆ ಸಮೀ ಪದ ಚಿಗರೇನಹಳ್ಳಿಯ ಕಸ ವಿಲೇವಾರಿ ಘಟಕಕ್ಕೆ ಪ್ರತಿದಿನವು ಬರುತ್ತವೆ. ಸೆಪ್ಟೆಂಬರ್‌ 4 ರಂದು ಸಹ ಬಿಬಿಎಂಪಿ ಕಸದ ಲಾರಿ ಡಿಕ್ಕಿ ಹೊಡೆದು ಮಾವಿನ ಕುಂಟೆ ನಿವಾಸಿ ರಾಜು (28) ಎಂಬಾತ ಮೃತ ಪಟ್ಟಿದ್ದ. ಈ ಘಟನೆ ಮಾಸುವ ಮುನ್ನವೇ ಇಬ್ಬರು ಬಲಿಯಾಗಿದ್ದಾರೆ. ಬಿಬಿಎಂಪಿ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಮೃತರ ಕುಟುಂಬಗಳಿಗೆ ಸೂಕ್ತ ಪರಿಹಾರ ನೀಡು ವವರೆಗೂ ಮೃತ ದೇಹಗಳನ್ನು ತೆರವು ಮಾಡುವು ದಿಲ್ಲ, ಬಿಬಿಎಂಪಿ ಕಸದ ಲಾರಿಗಳು ಈ ಕಡೆಗೆ ಬರಲು ಬಿಡುವುದಿಲ್ಲ ಎಂದು ಸ್ಥಳೀಯರು ಶಾಸಕ ಟಿ.ವೆಂಕಟರಮಣಯ್ಯ ಅವರ ನೇತೃತ್ವದಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ.

ಮುಂಜಾಗ್ರತಾ ಕ್ರಮ ವಾಗಿ ಪೊಲೀಸ್‌ ಬಂದೋಬಸ್ಟ್‌ ಹಾಕಲಾಗಿದೆ. ದಾಬಸ್‌ ಪೇಟೆ ಕಡೆಯಿಂದ ದೊಡ್ಡಬಳ್ಳಾಪುರದ ಕಡೆಗೆ ಬರುವ ವಾಹನಗಳಿಗೆ ಬದಲಿ ಮಾರ್ಗದಲ್ಲಿ ಸಂಚರಿಸುವಂತೆ ಪೊಲೀಸರು ವ್ಯವಸ್ಥೆ ಮಾಡಿದ್ದಾರೆ.

ಟಾಪ್ ನ್ಯೂಸ್

MB-Patil-Minister

Dinner Politics: ಮುಖ್ಯಮಂತ್ರಿ ಊಟಕ್ಕೆ ಹೋದ್ರೆ ತಪ್ಪೇನಿದೆ?: ಸಚಿವ ಎಂ.ಬಿ.ಪಾಟೀಲ್‌

Nagamangala-Police

Assault: ನಾಗಮಂಗಲದಲ್ಲಿ ಎಎಸ್‌ಐಯ ಹಿಡಿದು ಎಳೆದಾಡಿ, ಹಲ್ಲೆ ಮಾಡಿದ ಆರೋಪಿ!

DALAI-LAMA

ಬೈಲುಕುಪ್ಪೆಗೆ ಟಿಬೇಟಿಯನ್ನರ 14ನೇ ಧರ್ಮಗುರು ದಲೈಲಾಮಾ ಆಗಮನ

Raghvendra-Hitnal

Congress Gurantee: ಗ್ಯಾರಂಟಿಯಿಂದ ಅಭಿವೃದ್ಧಿ ಕುಂಠಿತ: ಕಾಂಗ್ರೆಸ್‌ ಶಾಸಕ

Kolara-RSS

Kolara: ಹೈಕೋರ್ಟ್‌ ಅನುಮತಿ ಬಳಿಕ ಬಿಗಿ ಭದ್ರತೆಯಲ್ಲಿ ಆರೆಸ್ಸೆಸ್‌ ಪಥಸಂಚಲನ

DVG-CM

Caste Census: ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಜಾತಿ ಗಣತಿ ವರದಿ ಮಂಡನೆ: ಸಿಎಂ

Delhi Assembly Elections: ಬಿಜೆಪಿ ಗೆದ್ದರಷ್ಟೇ ದಿಲ್ಲಿ ನಂ.1 ರಾಜಧಾನಿ: ಪ್ರಧಾನಿ ಮೋದಿ

Delhi Assembly Elections: ಬಿಜೆಪಿ ಗೆದ್ದರಷ್ಟೇ ದಿಲ್ಲಿ ನಂ.1 ರಾಜಧಾನಿ: ಪ್ರಧಾನಿ ಮೋದಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

13-ghati-1

Doddaballapura: ಘಾಟಿ ಕ್ಷೇತ್ರದಲ್ಲಿ ಶ್ರೀ ಸುಬ್ರಹ್ಮಣ್ಯಸ್ವಾಮಿ ಬ್ರಹ್ಮ ರಥೋತ್ಸವ

Nelamangala: ಸಾಕು ನಾಯಿ ಸತ್ತಿದ್ದಕ್ಕೆ ಮಾಲಕ ಆತ್ಮಹ*ತ್ಯೆ

Nelamangala: ಸಾಕು ನಾಯಿ ಸತ್ತಿದ್ದಕ್ಕೆ ಮಾಲಕ ಆತ್ಮಹ*ತ್ಯೆ

Doddaballapur: ಹೊಲದಲ್ಲಿ ಹೂ ಬಿಡಿಸುತ್ತಿದ್ದ ಮಹಿಳೆಗೆ ಕಾರು ಡಿಕ್ಕಿ: ಸಾವು

Doddaballapur: ಹೊಲದಲ್ಲಿ ಹೂ ಬಿಡಿಸುತ್ತಿದ್ದ ಮಹಿಳೆಗೆ ಕಾರು ಡಿಕ್ಕಿ: ಸಾವು

Road Mishap: ಬೈಕ್‌ ವ್ಹೀಲಿಂಗ್‌ ಮಾಡುವಾಗ ಕ್ಯಾಂಟರ್‌ಗೆ ಡಿಕ್ಕಿ; ಇಬ್ಬರು ಸಾವು

Road Mishap: ಬೈಕ್‌ ವ್ಹೀಲಿಂಗ್‌ ಮಾಡುವಾಗ ಕ್ಯಾಂಟರ್‌ಗೆ ಡಿಕ್ಕಿ; ಇಬ್ಬರು ಸಾವು

Tragic: ಮದುವೆ ಹರಕೆ ಹೊತ್ತು ಘಾಟಿ ದೇಗುಲಕ್ಕೆ ಬಂದಿದ್ದ ಯುವತಿ ಸಾವು

Tragic: ಮದುವೆ ಹರಕೆ ಹೊತ್ತು ಘಾಟಿ ದೇಗುಲಕ್ಕೆ ಬಂದಿದ್ದ ಯುವತಿ ಸಾವು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

MB-Patil-Minister

Dinner Politics: ಮುಖ್ಯಮಂತ್ರಿ ಊಟಕ್ಕೆ ಹೋದ್ರೆ ತಪ್ಪೇನಿದೆ?: ಸಚಿವ ಎಂ.ಬಿ.ಪಾಟೀಲ್‌

Nagamangala-Police

Assault: ನಾಗಮಂಗಲದಲ್ಲಿ ಎಎಸ್‌ಐಯ ಹಿಡಿದು ಎಳೆದಾಡಿ, ಹಲ್ಲೆ ಮಾಡಿದ ಆರೋಪಿ!

DALAI-LAMA

ಬೈಲುಕುಪ್ಪೆಗೆ ಟಿಬೇಟಿಯನ್ನರ 14ನೇ ಧರ್ಮಗುರು ದಲೈಲಾಮಾ ಆಗಮನ

Raghvendra-Hitnal

Congress Gurantee: ಗ್ಯಾರಂಟಿಯಿಂದ ಅಭಿವೃದ್ಧಿ ಕುಂಠಿತ: ಕಾಂಗ್ರೆಸ್‌ ಶಾಸಕ

Kolara-RSS

Kolara: ಹೈಕೋರ್ಟ್‌ ಅನುಮತಿ ಬಳಿಕ ಬಿಗಿ ಭದ್ರತೆಯಲ್ಲಿ ಆರೆಸ್ಸೆಸ್‌ ಪಥಸಂಚಲನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.