Farmers: ರಾಗಿಗೆ ಬೆಂಬಲ ಬೆಲೆಗಿಂತ ಮಾರುಕಟ್ಟೆ ದರ ಹೆಚ್ಚಳ
Team Udayavani, Feb 18, 2024, 3:21 PM IST
ದೇವನಹಳ್ಳಿ: ರಾಗಿಗೆ ಸರ್ಕಾರ 3,846 ರೂ. ಬೆಂಬಲ ಬೆಲೆಯನ್ನು ಘೋಷಿಸಿದೆ. ಆದರೆ, ಸರ್ಕಾರ ನೀಡುವ ಬೆಂಬಲ ಬೆಲೆಗಿಂತ ಮಾರುಕಟ್ಟೆಯಲ್ಲಿ 4 ಸಾವಿರದಿಂದ 4,200 ರೂ.ವರೆಗೆ ರಾಗಿ ಮಾರಾಟವಾಗುತ್ತಿದೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆ ಬಯಲು ಸೀಮೆ ಪ್ರದೇಶವಾಗಿರುವುದರಿಂದ ಯಾವುದೇ ನದಿ ಮೂಲಗಳಿಲ್ಲದೆ ಮಳೆ ಆಶ್ರೀತವಾಗಿಯೇ ರೈತರು ಜಿಲ್ಲೆಯ ಪ್ರಮುಖ ಬೆಳೆಯಾದ ರಾಗಿ ಬೆಳೆಯುತ್ತಿದ್ದಾರೆ. ಈ ಬಾರಿ ಮಳೆ ಕೊರತೆಯಿಂದ ರಾಗಿ ಇಳುವರಿ ಕುಸಿತವಾಗಿದ್ದು, ರೈತರು ಕೈ ಸುಟ್ಟಿಕೊಳ್ಳುವಂತಾಗಿದೆ.
ಜಿಲ್ಲೆಯ ಆಹಾರ ಇಲಾಖೆ ಅಂದಾಜಿನ ಪ್ರಕಾರ ಸುಮಾರು 4 ಲಕ್ಷ ಕ್ವಿಂಟಲ್ ರಾಗಿಗೆ ರೈತರು ನೋಂದಣಿ ಮಾಡುವ ನಿರೀಕ್ಷೆಯಿತ್ತು. ಆದರೆ, ರಾಗಿ ಖರೀದಿ ಕೇಂದ್ರದಲ್ಲಿ 3,846 ರೂ. ಬೆಂಬಲ ಬೆಲೆಯಡಿ 3,20,000 ಕ್ವಿಂಟಲ್ ರಾಗಿ ಖರೀದಿಗೆ ಮಾತ್ರ ನೋಂದಣಿ ಮಾಡಲಾಗಿದೆ. ರೈತರು ರಾಗಿಯನ್ನು ತಮ್ಮ ದಿನ ಬಳಕೆಗೆ ಇಟ್ಟುಕೊಂಡು ಉಳಿದ ರಾಗಿಯನ್ನು ಸಾಮಾನ್ಯವಾಗಿ ಮಾರಾಟ ಮಾಡುತ್ತಿದ್ದಾರೆ.
ರಾಗಿ ಬಿತ್ತನೆ ವೇಳೆ ಮಳೆ ಬರಲಿಲ್ಲ: ಬೆಂ.ಗ್ರಾ ಜಿಲ್ಲೆಯಲ್ಲಿ ಯಾವುದೇ ಬೆಳೆಗಳಿಗಿಂತ ರಾಗಿ ಪ್ರಮುಖ ಬೆಳೆಯಾಗಿದೆ. ರಾಗಿ ಬೆಳೆಗೆ ಹೆಚ್ಚಿನ ಪ್ರಾಮುಖ್ಯತೆಯನ್ನು ರೈತರು ನೀಡುತ್ತಾರೆ. ಬೆಂ.ಗ್ರಾ ಜಿಲ್ಲೆಯ ನಾಲ್ಕು ತಾಲೂಕುಗಳಲ್ಲಿ ರೈತರು ಹೆಚ್ಚು ರಾಗಿ ಬೆಳೆಯುತ್ತಾರೆ. ಮಳೆ ಕೈಕೊಟ್ಟಿರುವುದರಿಂದ ರಾಗಿ ಇಳುವರಿ ಈ ವರ್ಷ ಕುಸಿತವಾಗಿದೆ. ರಾಗಿ ಬಿತ್ತನೆ ಸಂದರ್ಭದಲ್ಲೂ ಸಹ ಮಳೆ ಹೆಚ್ಚಿನ ಪ್ರಮಾಣದಲ್ಲಿ ಬಂದಿಲ್ಲ.
ಜಿಲ್ಲೆಯಲ್ಲಿ ಆರು ಖರೀದಿ ಕೇಂದ್ರ: ಬೆಂ.ಗ್ರಾ ಜಿಲ್ಲೆಯಲ್ಲಿ ಆರು ರಾಗಿ ಖರೀದಿ ಕೇಂದ್ರ ತೆರೆಯಲಾಗಿದೆ. ದೇವನಹಳ್ಳಿ ಮತ್ತು ಹೊಸಕೋಟೆ ತಾಲೂಕಿನಲ್ಲಿ ತಲಾ ಒಂದು ಕೇಂದ್ರ, ದೊಡ್ಡಬಳ್ಳಾಪುರ ಮತ್ತು ನೆಲಮಂಗಲದಲ್ಲಿ ತಲಾ ಎರಡು ಕೇಂದ್ರಗಳನ್ನು ತೆರೆಯಲಾಗಿದೆ. ಕೇಂದ್ರಕ್ಕೆ ಬರುವ ರೈತರಿಗೆ ಶೌಚಾಲಯ, ಕುಡಿಯುವ ನೀರು, ದೀಪಗಳ ವ್ಯವಸ್ಥೆ ಮಾಡಲಾಗಿದೆ. ಟೆಂಡರ್ ಪ್ರಕ್ರಿಯೆ ತಡವಾಗಿರುವುದರಿಂದ ಖರೀದಿ ಇನ್ನೂ ಪ್ರಾರಂಭವಾಗಿಲ್ಲ. ಇದರಿಂದ ನೋಂದಣಿ ಮಾಡಿಕೊಂಡಿರುವ ರೈತರು ಕಾಯುವ ಪರಿಸ್ಥಿತಿ ನಿರ್ಮಾಣವಾಗಿದೆ. ಸದ್ಯಕ್ಕೆ ಏನು ಸಮಸ್ಯೆ ಕಂಡು ಬರದಿದ್ದರೂ, ಮುಂದಿನ ದಿನಗಳಲ್ಲಿ ಮಳೆಯಾದರೆ ರಾಗಿ ಸಂಗ್ರಹಿಸಿ, ಇಟ್ಟುಕೊಳ್ಳುವುದು ರೈತರಿಗೆ ಸಮಸ್ಯೆಯಾಗುತ್ತದೆ.
ರಾಗಿ ಬೆಳೆ ಹಾನಿ: ಜಿಲ್ಲೆಯ ನಾಲ್ಕು ತಾಲೂಕಿನಲ್ಲೂ ವ್ಯಾಪಕವಾಗಿ ರಾಗಿ ಬೆಳೆಯುತ್ತಾರೆ. ಪ್ರತಿ ವರ್ಷ ಸುಮಾರು 60,000 ಹೆಕ್ಟರ್ ಪ್ರದೇಶದಲ್ಲಿ ರಾಗಿ ಬೆಳೆಯುತ್ತಾರೆ. ಈ ಬಾರಿ ಮಳೆ ಇಲ್ಲದೆ ಬರ ವ್ಯಾಪಕವಾಗಿರುವುದರಿಂದ ಸುಮಾರು 40 ಸಾವಿರಕ್ಕೂ ಹೆಚ್ಚು ಹೆಕ್ಟರ್ ಪ್ರದೇಶದಲ್ಲಿ ರಾಗಿ ಬೆಳೆ ಹಾನಿಯಾಗಿದೆ. ಸರ್ಕಾರ ಕೂಡ ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ರಾಗಿ ಖರೀದಿ ನೋಂದಣಿ ಪ್ರಾರಂಭಿಸಿತು. ಕಳೆದ ಬಾರಿಗಿಂತ ಈ ಬಾರಿ ಬೆಂಬಲ ಬೆಲೆಯನ್ನು ಹೆಚ್ಚಿಸಲಾಗಿತ್ತು. ಈ ಬಾರಿ ನಿರೀಕ್ಷೆಗೆ ಹೋಲಿಸಿದರೆ, ನೋಂದಣಿಯೂ ಕೂಡ ಇಳಿಕೆಯಾಗಿದೆ. ಬೆಂ.ಗ್ರಾ ಜಿಲ್ಲೆಯಲ್ಲಿ ಈ ಬಾರಿ 4 ಲಕ್ಷ ಕ್ವಿಂಟಲ್ ರಾಗಿ ಖರೀದಿಸುವ ಗುರಿ ಇಟ್ಟುಕೊಳ್ಳಲಾಗಿತ್ತು. ಈ ಬಾರಿ ಕೇವಲ 3,20,000 ಕ್ವಿಂಟಲ್ ರಾಗಿ ಖರೀದಿಗೆ ಜಿಲ್ಲೆಯ 16 ಸಾವಿರ ರೈತರು ನೋಂದಣಿ ಮಾಡಿದ್ದಾರೆ. ರಾಗಿ ಖರೀದಿ ಕೂಡ ತಡವಾಗುತ್ತಿದೆ.
ಬೆಂ.ಗ್ರಾ ಜಿಲ್ಲೆಯಲ್ಲಿ ಈ ಬಾರಿ 4 ಲಕ್ಷ ಕ್ವಿಂಟಲ್ ರಾಗಿಗೆ ನೋಂದಣಿಯ ನಿರೀಕ್ಷೆ ಇತ್ತು. 3,20,000 ಕ್ವಿಂಟಲ್ ರಾಗಿಗೆ ಮಾತ್ರ ನೋಂದಣಿಯಾಗಿದೆ. ಈ ಪ್ರಮಾಣ ಖರೀದಿಗೆ ಬೆಳೆ ಎಷ್ಟಾಗಲಿದೆ ಎಂಬುದನ್ನು ನಿರೀಕ್ಷೆಯಲ್ಲಿದ್ದೇವೆ. ಮಳೆ ಇಲ್ಲದಿರುವುದರಿಂದ ರಾಗಿ ಇಳುವರಿ ಕಡಿಮೆಯಾಗಿದೆ. ಮುಂದಿನ ವಾರದಲ್ಲಿ ಖರೀದಿ ಪ್ರಾರಂಭಿ ಸಲು ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ.-ಪ್ರವೀಣ್, ಉಪ ನಿರ್ದೇಶಕ, ಆಹಾರ ಹಾಗೂ ನಾಗರಿಕ ಸರಬರಾಜು ಇಲಾಖೆ, ಬೆಂ.ಗ್ರಾ ಜಿಲ್ಲೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Bantwal: ತುಂಬೆ ಶ್ರೀಮಹಾಲಿಂಗೇಶ್ವರ ದೇವಸ್ಥಾನಕ್ಕೆ ಕನ್ನ; ಲಕ್ಷಾಂತರ ಮೌಲ್ಯದ ನಗನಗದು ಲೂಟಿ
Threat: ತಪ್ಪಾಯಿತೆಂದು ಕ್ಷಮೆ ಕೇಳಿ ಇಲ್ಲ 5ಕೋಟಿ ನೀಡಿ.. ಸಲ್ಮಾನ್ ಖಾನ್ ಗೆ ಮತ್ತೆ ಬೆದರಿಕೆ
ಅಂಗಡಿಯಲ್ಲಿ ಬಿಟ್ಟು ಹೋಗಿದ್ದ 1.20 ಲ.ರೂ ಹಿಂದಿರುಗಿಸಿ ಮಾನವೀಯತೆ ಮೆರೆದ ಶಾಸಕ ಬಸವಂತಪ್ಪ
Kavoor: ಎಡನೀರು ಮಠದ ಶ್ರೀಗಳ ಮೇಲೆ ಹಲ್ಲೆ… ಶಾಸಕ ಡಾ.ಭರತ್ ಶೆಟ್ಟಿ ವೈ. ಖಂಡನೆ
ಅಕ್ರಮ ಮರಳುಗಾರಿಕೆ ಕುರಿತು ಮಾಹಿತಿ ನೀಡಿದ ಆರೋಪ… ವ್ಯಕ್ತಿಗೆ ಹಲ್ಲೆ ನಡೆಸಿ ಇರಿಯಲು ಯತ್ನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.