ಸೋಂಕಿತರ ಓಡಾಟ: ಗ್ರಾಮೀಣ ಜನರಲ್ಲಿ ಹೆಚ್ಚಿದ ಆತಂಕ

Team Udayavani, May 8, 2021, 3:47 PM IST

Increased anxiety among rural people

ದೊಡ್ಡಬಳ್ಳಾಪುರ: ಕೊರೊನಾ ಸೋಂಕಿಗೆ ಒಳಗಾಗಿಹೋಂಐಸೋಲೇಷನ್‌ನಲ್ಲಿರುವವರು ಬೇಕಾಬಿಟ್ಟಿಯಾಗಿಸಂಚರಿಸುತ್ತಿದ್ದು, ಇದರಿಂದ ಇತರರಿಗೂ ಸೋಂಕು ಹರಡಬಹುದುಎಂಬ ಆತಂಕ ಗ್ರಾಮೀಣ ಭಾಗದಲ್ಲಿದೆ. ಆರೋಗ್ಯ ಇಲಾಖೆಯಮಾಹಿತಿ ಪ್ರಕಾರ ತಾಲೂಕಿನಲ್ಲಿ 20,086 ಸೋಂಕಿತರನ್ನುನಿಗಾವಹಿಸಲಾಗಿದೆ.

16,498 ಮಂದಿ 14 ದಿನ ಕ್ವಾರಂಟೈನ್‌ ಅವಧಿಮುಗಿಸಿದ್ದಾರೆ. ಪ್ರಸ್ತುತ 3,588 ಮಂದಿ ಹೋಂಐಸೋಲೇಷನ್‌ನಲ್ಲಿಇದ್ದಾರೆ. ಕೊರೊನಾ ಪ್ರಕರಣ ದಿನೇ ದಿನೆ ಹೆಚ್ಚಾಗುತ್ತಿದ್ದು, ಆಸ್ಪತ್ರೆಗಳಲ್ಲಿಆಕ್ಸಿಜನ್‌, ಬೆಡ್‌, ಇತರೆ ಸಮಸ್ಯೆಗಳು ಕಾಡುತ್ತಿವೆ.

ಡೇರಿಗೆ ಹಾಲು ಹಾಕಲು ಹೋಗ್ತಾರೆ: ಈ ನಿಟ್ಟಿನಲ್ಲಿ ಕಡಿಮೆ ಲಕ್ಷಣಇರುವವರಿಗೆ ಹೋಂಐಸೋಲೇಷನ್‌ನಲ್ಲಿ ಇಟ್ಟು ಸಲಹೆನೀಡಲಾಗುತ್ತಿದ್ದು, ಹೋಂ ಐಸೋಲೇಷನ್‌ನವರು ಕಡ್ಡಾಯ ಗೃಹಬಂಧನದಲ್ಲಿರಬೇಕು ಎಂಬ ನಿಯಮವಿದೆ. ವೈದ್ಯರು ನೀಡುವ ಸಲಹೆಕಾಲ ಕಾಲಕ್ಕೆ ಪಾಲಿಸಬೇಕಿದೆ.

ಮುಖ್ಯವಾಗಿ ಜನಸಂಪರ್ಕ ಬಾರದೇಇರಬೇಕಿದೆ. ಆದರೆ, ಹೋಂ ಐಸೋಲೇಷನ್‌ಗೆ ಒಳಗಾಗಿರುವಸೋಂಕಿತರು ನಿಯಮ ಪಾಲಿಸದೆ, ದಿನ ಬಳಕೆ ವಸ್ತುಗಳ ತರಲು,ಡೇರಿಗಳಿಗೆ ಹಾಲು ಹಾಕಲು ತೆರಳುತ್ತಿದ್ದಾರೆ.ಅಂಗಡಿಗಳಲ್ಲಿ ವ್ಯಾಪಾರ ವಹಿವಾಟು ನಡೆಸುವುದು,ಸಾರ್ವಜನಿಕವಾಗಿ ಎಲ್ಲೆಂದರಲ್ಲಿ ಬೇಕಾಬಿಟ್ಟಿ ಓಡಾಟ ನಡೆಸುತ್ತಿದ್ದಾರೆ. ಇವರು ಆರೋಗ್ಯವಂತ ಜನರಿಗೆ ಆತಂಕ ತಂದೊಡ್ಡಿದ್ದು, ಜನತಾಕರ್ಫ್ಯೂ ನಡುವೆಯೂ ಸೋಂಕು ಹೆಚ್ಚಾಗಲು ಕಾರಣ ಎನ್ನುವಆರೋಪ ಕೇಳಿ ಬಂದಿದೆ.

ಅಧಿ ಕಾರಿಗಳು ಗಮನಿಸಬೇಕು: ತಾಲೂಕಿನ ನಗರ, ಹಳ್ಳಿಗಳಲ್ಲಿಹೋಂಐಸೋಲೇಷನ್‌ಗೆ ಒಳಗಾಗಿರುವವರು ಓಡಾಡುತ್ತಿರುವುದರಿಂದ ಕೊರೊನಾ ಸೊಂಕು ತಗುಲುವ ಭೀತಿಯಲ್ಲೇ ಜೀವನನಡೆಸಬೇಕಾದ ಸ್ಥಿತಿ ಎದುರಾಗಿದೆ. ನಾವು ಗುಣಮುಖರಾಗಿದ್ದೇವೆಎಂದು ಸುಳ್ಳು ಹೇಳಿ ಜನರೊಂದಿಗೆ ಬೆರೆಯುತ್ತಿದ್ದಾರೆ. ಇದಕ್ಕೆ ಅಧಿಕಾರಿಗಳ ನಿರ್ಲಕ್ಷವೂ ಕಾರಣ ಎನ್ನಲಾಗಿದೆ.

ಸ್ಥಳೀಯ ಆಶಾಕಾರ್ಯಕರ್ತೆಯರು, ಕಂದಾಯ ಇಲಾಖೆಯ ಸಿಬ್ಬಂದಿ ಸಲಹೆನೀಡಿದರೂ ಅವರ ಮಾತಿಗೆ ಬೆಲೆ ನೀಡದೆ ಓಡಾತ್ತಿರುವುದು ಮತ್ತಷ್ಟುಆತಂಕ ತಂದೊಡ್ಡಿದೆ. ಸ್ಥಳೀಯ ಪಿಡಿಒಗಳಿಗೂ ತಲೆ ಬಿಸಿಯಾಗಿದೆ.ತಾಲೂಕು ಮಟ್ಟದ ಅಧಿ ಕಾರಿಗಳು ಹೋಂ ಐಸೋಲೇಶನ್‌ಒಳಗಾಗಿರುವ ಸೋಂಕಿತರ ನಿಗಾವಹಿಸಲು ಸೂಕ್ತ ಕ್ರಮಕೈಗೊಳ್ಳಬೇಕಿದೆ ಎಂದು ಸ್ಥಳೀಯರು ಆಗ್ರಹಿಸಿದ್ದಾರೆ.

ಟಾಪ್ ನ್ಯೂಸ್

K L RAhul

KL Rahul; ಗಾಯದ ಚಿಂತೆ ನಿವಾರಿಸಲು ನೆಟ್‌ನಲ್ಲಿ ಬ್ಯಾಟಿಂಗ್: ಬ್ಯಾಕ್-ಅಪ್ ಆಗಿ ಪಡಿಕ್ಕಲ್

Maharastra: ಚುನಾವಣಾ ರ್‍ಯಾಲಿ ರದ್ದುಗೊಳಿಸಿ ದಿಢೀರ್ ದೆಹಲಿಗೆ ವಾಪಸ್ಸಾದ ಸಚಿವ ಅಮಿತ್ ಶಾ

Maharastra: ಚುನಾವಣಾ ರ್‍ಯಾಲಿ ರದ್ದುಗೊಳಿಸಿ ದಿಢೀರ್ ದೆಹಲಿಗೆ ವಾಪಸ್ಸಾದ ಸಚಿವ ಅಮಿತ್ ಶಾ

Kantara Chapter 1: ರಿಷಬ್‌ ಶೆಟ್ಟಿ ʼಕಾಂತಾರ ಚಾಪ್ಟರ್‌ -1ʼ ರಿಲೀಸ್ ಗೆ ಡೇಟ್‌ ಪಿಕ್ಸ್

Kantara Chapter 1: ರಿಷಬ್‌ ಶೆಟ್ಟಿ ʼಕಾಂತಾರ ಚಾಪ್ಟರ್‌ -1ʼ ರಿಲೀಸ್ ಗೆ ಡೇಟ್‌ ಫಿಕ್ಸ್

1-wewrewre

The Sabarmati Report ;ಸಿನಿಮಾವಾಗಿ ಗೋಧ್ರಾ ದುರಂತ: ಸತ್ಯ ಹೊರಬರುತ್ತಿದೆ ಎಂದ ಪ್ರಧಾನಿ

BBK11: ಬಿಗ್‌ ಬಾಸ್‌ ಮನೆಗೆ ವೈಲ್ಡ್‌ ಕಾರ್ಡ್ ಸ್ಪರ್ಧಿ; ಅಬ್ಬರಿಸುತ್ತಲೇ ದೊಡ್ಮನೆಗೆ ಎಂಟ್ರಿ

BBK11: ಬಿಗ್‌ ಬಾಸ್‌ ಮನೆಗೆ ವೈಲ್ಡ್‌ ಕಾರ್ಡ್ ಸ್ಪರ್ಧಿ; ಅಬ್ಬರಿಸುತ್ತಲೇ ದೊಡ್ಮನೆಗೆ ಎಂಟ್ರಿ

Bharamasagara: ಅರಣ್ಯ ಇಲಾಖೆ ಕಾರ್ಯಾಚರಣೆ; ಗ್ರಾಮಸ್ಥರ ನಿದ್ದೆಗೆಡಿಸಿದ್ದ ಚಿರತೆ ಸೆರೆ

Bharamasagara: ಅರಣ್ಯ ಇಲಾಖೆ ಕಾರ್ಯಾಚರಣೆ; ಗ್ರಾಮಸ್ಥರ ನಿದ್ದೆಗೆಡಿಸಿದ್ದ ಚಿರತೆ ಸೆರೆ

Kailash Gahlot: ಚುನಾವಣೆಗೂ ಮೊದಲೇ ಆಪ್ ತೊರೆದ ಸಚಿವ ಕೈಲಾಶ್ ಗೆಹ್ಲೋಟ್…

Kailash Gahlot: ಚುನಾವಣೆಗೂ ಮೊದಲೇ ಆಪ್ ತೊರೆದ ಸಚಿವ ಕೈಲಾಶ್ ಗೆಹ್ಲೋಟ್…

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Stray dogs: ಅಂ.ರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬೀದಿ ನಾಯಿಗಳ ಹಾವಳಿ

Stray dogs: ಅಂ.ರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬೀದಿ ನಾಯಿಗಳ ಹಾವಳಿ

Tragic: ಮರದ ಕಾರ್ಖಾನೆಯಲ್ಲಿ ಆಕಸ್ಮಿಕ ಬೆಂಕಿ; ಕಾರ್ಮಿಕ ಸಜೀವ ದಹನ

Tragic: ಮರದ ಕಾರ್ಖಾನೆಯಲ್ಲಿ ಆಕಸ್ಮಿಕ ಬೆಂಕಿ; ಕಾರ್ಮಿಕ ಸಜೀವ ದಹನ

Market: ಬೆಲೆ ಕುಸಿತ; ಬೂದು ಕುಂಬಳ ಬೀದಿಪಾಲು!

Market: ಬೆಲೆ ಕುಸಿತ; ಬೂದು ಕುಂಬಳ ಬೀದಿಪಾಲು!

Crime: ಪಂಚೆ ಧರಿಸು ಎಂದಿದ್ದಕ್ಕೆ ಅಪ್ಪನನ್ನೇ ಕೊಂದ ಮಗ!

Crime: ಪಂಚೆ ಧರಿಸು ಎಂದಿದ್ದಕ್ಕೆ ಅಪ್ಪನನ್ನೇ ಕೊಂದ ಮಗ!

9-bng

Channapatna: ಸಾಲಕ್ಕೆ ಹೆದರಿ ದಂಪತಿ ನೇಣಿಗೆ ಶರಣು

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

K L RAhul

KL Rahul; ಗಾಯದ ಚಿಂತೆ ನಿವಾರಿಸಲು ನೆಟ್‌ನಲ್ಲಿ ಬ್ಯಾಟಿಂಗ್: ಬ್ಯಾಕ್-ಅಪ್ ಆಗಿ ಪಡಿಕ್ಕಲ್

Maharastra: ಚುನಾವಣಾ ರ್‍ಯಾಲಿ ರದ್ದುಗೊಳಿಸಿ ದಿಢೀರ್ ದೆಹಲಿಗೆ ವಾಪಸ್ಸಾದ ಸಚಿವ ಅಮಿತ್ ಶಾ

Maharastra: ಚುನಾವಣಾ ರ್‍ಯಾಲಿ ರದ್ದುಗೊಳಿಸಿ ದಿಢೀರ್ ದೆಹಲಿಗೆ ವಾಪಸ್ಸಾದ ಸಚಿವ ಅಮಿತ್ ಶಾ

Kantara Chapter 1: ರಿಷಬ್‌ ಶೆಟ್ಟಿ ʼಕಾಂತಾರ ಚಾಪ್ಟರ್‌ -1ʼ ರಿಲೀಸ್ ಗೆ ಡೇಟ್‌ ಪಿಕ್ಸ್

Kantara Chapter 1: ರಿಷಬ್‌ ಶೆಟ್ಟಿ ʼಕಾಂತಾರ ಚಾಪ್ಟರ್‌ -1ʼ ರಿಲೀಸ್ ಗೆ ಡೇಟ್‌ ಫಿಕ್ಸ್

1-wewrewre

The Sabarmati Report ;ಸಿನಿಮಾವಾಗಿ ಗೋಧ್ರಾ ದುರಂತ: ಸತ್ಯ ಹೊರಬರುತ್ತಿದೆ ಎಂದ ಪ್ರಧಾನಿ

Kinnal raj; ʼಸಿಂಹರೂಪಿಣಿʼಗೆ 25ರ ಸಂಭ್ರಮ

Kinnal raj; ʼಸಿಂಹರೂಪಿಣಿʼಗೆ 25ರ ಸಂಭ್ರಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.