ದಿನೇ ದಿನೆ ಡ್ರಾಗನ್‌ ಫ್ರೂಟ್ಸ್ ಗೆ ಬೇಡಿಕೆ ಹೆಚ್ಚಳ


Team Udayavani, Mar 16, 2022, 2:09 PM IST

ದಿನೇ ದಿನೆ ಡ್ರಾಗನ್‌ ಫ್ರೂಟ್ಸ್ ಗೆ ಬೇಡಿಕೆ ಹೆಚ್ಚಳ

ದೇವನಹಳ್ಳಿ: ಬಯಲುಸೀಮೆಯ ಪ್ರದೇಶವಾಗಿ ದ್ದರೂ, ಜಿಲ್ಲೆಯ ರೈತರು ಡ್ರಾಗನ್‌ ಫ್ರೂಟ್ಸ್ ಬೆಳೆದು ವಿದೇಶಗಳಿಗೆ ರಫ್ತು ಮಾಡುವ ರೈತರ ಸಂಖ್ಯೆ ಹೆಚ್ಚುತ್ತಿದೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನಾಲ್ಕು ತಾಲೂಕು ವೇಗವಾಗಿ ಅಭಿವೃದ್ಧಿ ಹೊಂದುತ್ತಿದೆ. ದೇವನಹಳ್ಳಿ ತಾಲೂಕಿನಲ್ಲಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಬಂದ ನಂತರ ಭೂಮಿಗೆ ಹೆಚ್ಚಿನ ಬೆಲೆ ಬಂದಂತಾಗಿದೆ. ಲೇಔಟ್‌ಗಳು ನಾಯಿ ಕೊಡೆಗಳಂತೆ ನಿರ್ಮಾಣವಾಗಿವೆ. ಚನ್ನರಾಯಪಟ್ಟಣ ಹೋಬಳಿ ವ್ಯಾಪ್ತಿಯಲ್ಲಿ ನೀರಾವರಿ ಮತ್ತು ಕೃಷಿಗೆ ಯೋಗ್ಯವಾದ ಭೂಮಿಯನ್ನು ಕೆಐಡಿಬಿ ಭೂಸ್ವಾಧೀನ ಪ್ರಕ್ರಿಯೆ ಆಗುತ್ತಿದೆ. ಇರುವ ಅಲ್ಪಸ್ವಲ್ಪದ ಜಮೀನುಗಳಲ್ಲಿ ರೈತರು ತರಕಾರಿ, ಹೂವು, ಹಣ್ಣು ಸೇರಿದಂತೆ ಹಲವು ಬೆಳೆಗಳನ್ನು ಬೆಳೆದು ಬೆಂಗಳೂರಿಗೆ ನೀಡುತ್ತಿದ್ದಾರೆ.

ಹಣ್ಣಿಗೆ ಬೇಡಿಕೆ ಸೃಷ್ಟಿ: ಮತ್ತೂಂದು ಕಡೆ ನೀರಿನ ಸಮಸ್ಯೆ ಕಾಡುತ್ತಿದ್ದು, ಬಯಲುಸೀಮೆ ಜಿಲ್ಲೆಯಾಗಿರುವು ದರಿಂದ ಯಾವುದೇ ನದಿ ಮೂಲ, ನಾಲೆಗಳು ಇಲ್ಲ. ಬೋರ್‌ವೆಲ್‌ ಕೊರೆಸಿದರೂ ನೀರು ಸಿಗದ ಸ್ಥಿತಿ ನಿರ್ಮಾಣ ವಾಗಿದೆ. ಅಂತರ್ಜಲ ಮಟ್ಟ ವರ್ಷದಿಂದ ವರ್ಷಕ್ಕೆ ಕಡಿಮೆಯಾಗುತ್ತಲೇ ಹೋಗುತ್ತಿದೆ.

ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಬಳ್ಳಾರಿ ಸೇರಿ ಉತ್ತರ ಕರ್ನಾಟಕದಲ್ಲಿ ಡ್ರಾಗನ್‌ ಫ್ರೂಟ್ಸ್ ಬೆಳೆಯುವವರ ಪ್ರಮಾಣ ಏರಿಕೆಯಾಗಿದ್ದು, ಸ್ಥಳೀಯ ಮಾರುಕಟ್ಟೆಯಲ್ಲಿ ಹಣ್ಣಿಗೆ ಬೇಡಿಕೆ ಸೃಷ್ಟಿಯಾಗುತ್ತಿದೆ.  ನರೇಗಾ ಮಾತ್ರವಲ್ಲದೆ, ಕೇಂದ್ರ ಸರ್ಕಾರದಿಂದ ಡ್ರಾಗನ್‌ ಫ್ರೂಟ್ಸ್ ಬೆಳೆಯಲು ಆರ್ಥಿಕ ಸಹಾಯ ಸಿಗುತ್ತಿರುವ ಹಿನ್ನೆಲೆ ರೈತರು ಉತ್ಸಾಹ ತೋರುತ್ತಿದ್ದಾರೆ.

ಬೆಳೆಯುವುದು ಹೇಗೆ?: ಸಾವಯುವ ಕೃಷಿ ವಿಧಾನದಲ್ಲಿ ಡ್ರಾಗನ್‌ ಫ್ರೂಟ್ಸ್ ಬೆಳಯಬಹುದಾಗಿದ್ದು, ಪ್ರತಿ ಎಕರೆಗೆ ಕನಿಷ್ಠ 3 ಲಕ್ಷ ರೂ., ವೆಚ್ಚದಲ್ಲಿ ಬೆಳೆಗೆ ಕಂಬ ಸಿದ್ಧಪಡಿಸಿಕೊಳ್ಳಬೇಕಾಗುತ್ತದೆ. ನಿಗದಿತ ಅಂತರದಲ್ಲಿ ಕಲ್ಲುಗಳ ಕಂಬ, ಸುರುಳಿಯಾಕಾರದ ಟೈರ್‌, ಕಬ್ಬಿಣದ ಕಂಬಿ ಸಿದ್ಧಪಡಿಸಿಕೊಂಡರೆ, ಕೃಷಿ ವಿಜ್ಞಾನ ಕೇಂದ್ರದ ಅಧಿಕಾರಿಗಳ ಬೆಳೆ ಕುರಿತಂತೆ ಮಾಹಿತಿ ನೀಡುತ್ತಾರೆ. ಡ್ರಾಗನ್‌ ಫ್ರೂಟ್ಸ್ ಬೆಳೆಯಲು ನರೇಗಾ ಯೋಜನೆ ಯಡಿ 1.20 ಲಕ್ಷ ಪ್ರತಿ ಎಕರೆಗೆ ನೀಡಲಾಗುತ್ತಿದೆ. ಇದು ಮಾತ್ರವಲ್ಲದೆ ರಾಷ್ಟ್ರೀಯ ತೋಟಗಾರಿಕೆ ಮಿಷನ್‌ ಅಡಿಯಲ್ಲಿ ಮೊದಲ ವರ್ಷ 30 ಸಾವಿರ ರೂ.ನೀಡಲಾಗುತ್ತಿದೆ. ಸರ್ಕಾರದಿಂದ ಸಹಾಯಧನವೂ ಸಿಗುತ್ತಿರುವ ಹಿನ್ನೆಲೆ, ವಿದೇಶಿ ಹಣ್ಣನ್ನು ಬೆಳೆಯಲು ರೈತರು ಹೆಚ್ಚು ಒಲವು ತೋರುತ್ತಿದ್ದು, ಈಗಾಗಲೇ ಹಲವು ಆರ್ಥಿಕವಾಗಿ ಲಾಭ ಕಂಡಿದ್ದಾರೆ.

ಏನಿದು ಡ್ರಾಗನ್‌ ಫ್ರೂಟ್ಸ್ ಬೆಳೆ?: ಡ್ರಾಗನ್‌ ಫ್ರೂಟ್ಸ್ ನ್ನು ಮೊದಲ ಬಾರಿಗೆ ದಕ್ಷಿಣ ಅಮೆರಿಕಾದಲ್ಲಿ ಬೆಳೆಯಲಾಯಿತು. ಈ ಹಣ್ಣಿನಲ್ಲಿನ ಔಷಧೀಯ ಗುಣಗಳಿಂದ ಹೆಚ್ಚಿನ ಬೇಡಿಕೆ ಸೃಷ್ಟಿಯಾದ ಬೆನ್ನಲ್ಲೇ ಥಾಯ್‌ಲ್ಯಾಂಡ್‌, ವಿಯೇಟ್ನಾಂನಲ್ಲಿ ಈ ಬೆಳೆ ಪರಿಚಯಗೊಂಡಿತು. ಮಾರುಕಟ್ಟೆಯಲ್ಲಿ ಪ್ರತಿ ಹಣ್ಣಿಗೆ 70ರಿಂದ 100 ರೂ. ಇದ್ದು, ದಿನದಿಂದ ದಿನಕ್ಕೆ ಬೇಡಿಕೆ ಹೆಚ್ಚಿಸಿಕೊಳ್ಳುತ್ತಿದೆ. ವಿದೇಶಗಳಲ್ಲಿ ಈ ಹಣ್ಣಿಗೆ ಬೇಡಿಕೆ ಹೆಚ್ಚಾಗಿದೆ. ಜಿಲ್ಲೆಯಲ್ಲಿ 6.4 ಹೆಕ್ಟೇರ್‌ ಡ್ರಾಗನ್‌ ಫ್ರೂಟ್ಸ್ ಬೆಳೆಯಲಾಗುತ್ತಿದೆ. ನೆಲಮಂಗಲ ತಾಲೂಕಿನಲ್ಲಿ ಡ್ರಾಗನ್‌ ಫ್ರೂಟ್ಸ್ ಬೆಳೆಯುತ್ತಿಲ್ಲ. ಇನ್ನುಳಿದ ಮೂರು ತಾಲೂಕುಗಳಾದ ದೇವನಹಳ್ಳಿ 0.64 ಹೆಕ್ಟೇರ್‌, ದೊಡ್ವಬಳ್ಳಾಪುರ 3.77 ಹೆಕ್ಟೇರ್‌, ಹೊಸಕೋಟೆ 2 ಹೆಕ್ಟೇರ್‌ನಲ್ಲಿ ಡ್ರಾಗನ್‌ ಫ್ರೂಟ್ಸ್ ಬೆಳೆಯಲಾಗುತ್ತಿದೆ.

4ರಿಂದ 6 ಲಕ್ಷ ರೂ. ವಾರ್ಷಿಕ ಆದಾಯ ಗಳಿಕೆ : ಮಾರುಕಟ್ಟೆಯಲ್ಲಿ ಡ್ರಾಗನ್‌ ಫ್ರೂಟ್ಸ್ ಪ್ರತಿ ಸಸಿ ದರ 40 ರೂ, ಇದ್ದು, ಒಮ್ಮೆ ನಾಟಿ ಮಾಡಿದರೆ 20 ರಿಂದ 25 ವರ್ಷ ಫ‌ಲ ನೀಡುತ್ತದೆ. 1 ಎಕರೆಯಲ್ಲಿ 1,800 ಸಸಿ ಗಳನ್ನು ನಾಡಿ ಮಾಡಬಹುದಾಗಿದ್ದು, ಪ್ರತಿ ಸಸಿಯಿಂದ 5 ರಿಂದ 8 ಕೆ.ಜಿ. ಹಣ್ಣು ಸಿಗುತ್ತದೆ. ಹೀಗಾಗಿ, ವಾರ್ಷಿಕ ಕನಿಷ್ಠ 4 ರಿಂದ 6 ಲಕ್ಷ ರೂ. ಆದಾಯ ಗಳಿಸಬಹುದಾಗಿದೆ. ಅಸ್ಥಿರ ಮಾರುಕಟ್ಟೆಯಲ್ಲಿ ಸಹಜ ರೀತಿಯ ಹಣ್ಣು ಬೆಳೆದು ಕೈಸುಟ್ಟುಕೊಳ್ಳುತ್ತಿರುವರ ನಡುವೆ ರಾಜ್ಯದಲ್ಲಿ ನರೇಗಾ ಸಹಾಯಧನ ಬಳಸಿಕೊಂಡು ಹಣ್ಣನ್ನು ಬೆಳೆದು ವಿದೇಶಗಳಿಗೆ ರಫ್ತು ಮಾಡುವ ಯುವ ರೈತರ ಸಂಖ್ಯೆ ಹೆಚ್ಚುತ್ತಿದೆ.

ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಬೇಡಿಕೆ : ಡ್ರಾಗನ್‌ ಫ್ರೂಟ್ಸ್ ನಲ್ಲಿ ನಾರಿನಂಶ ಹೆಚ್ಚಿದ್ದು, ಕಬ್ಬಿಣ, ಪ್ರೊಟೀನ್‌, ಕಾರ್ಬೋ ಹೈಡ್ರೇಟ್‌, ಮೆಗ್ನೀಷಿಯಂ, ವಿಟಮಿನ್‌ ಸಿ, ವಿಟಮಿನ್‌ ಇ ಪೋಷಕಾಂಶ ಹೆಚ್ಚಿನ ಪ್ರಮಾಣದಲ್ಲಿ ಸಿಗುತ್ತದೆ. ರೋಗನಿರೋಧಕ ಶಕ್ತಿ ಹೆಚ್ಚಿಸುವುದರ ಜೊತೆಗೆ ಕ್ಯಾನ್ಸರ್‌, ಹೃದಯ ರೋಗ, ಮಧುಮೇಹವನ್ನು ದೂರವಿಡಲು ಸಹಕಾರಿ ಯಾಗಿದೆ. ಸ್ಥಳೀಯ ಮತ್ತು ಅಂತಾರಾಷ್ಟ್ರೀಯ ಮಟ್ಟದಲ್ಲಿ ಮಾರುಕಟ್ಟೆಯಲ್ಲಿ ಬೇಡಿಕೆಯಿದೆ. ಆರೋಗ್ಯಕ್ಕೆ ಪೂರಕ ಬೆಳೆಯಾಗಿದೆ. ನಿರ್ವಹಣಾ ವೆಚ್ಚ ತೀರಾ ಕಡಿಮೆ. ಶೇ.50ರಷ್ಟು ಸರ್ಕಾರದ ಸಹಾಯಧನ ಸಿಗಲಿದೆ.

ಡ್ರಾಗನ್‌ ಫ್ರೂಟ್ಸ್ ನ್ನು ನಮ್ಮ ಜಮೀನುಗಳಲ್ಲಿ ಬೆಳೆಯಬೇಕು ಎಂದು ನಿರ್ಧರಿಸಿ ಭೂಮಿಯನ್ನು ಹದ ಮಾಡಿ ಕೊಂಡು ಅಧಿಕಾರಿಗಳ ಮಾರ್ಗದರ್ಶನದಲ್ಲಿ ಮಾಡಲಾಯಿತು. ಪ್ರತಿ ಎಕರೆಗೆ 3 ಲಕ್ಷ ರೂ. ವೆಚ್ಚದಲ್ಲಿ ಬೆಳೆಗೆ ಕಂಬ ಸಿದ್ದಪಡಿಸಿಕೊಳ್ಳಬೇಕು. ನಿಗದಿತ ಅಂತರದಲ್ಲಿ ಕಲ್ಲುಗಳ ಕಂಬ, ಸುರುಳಿಯಾಕಾರದ ಟೈರ್‌, ಕಬ್ಬಿಣದ ಕಂಬಿ ಸಿದ್ಧಮಾಡಿಕೊಳ್ಳಬೇಕು. ಜಿಲ್ಲೆಯಲ್ಲಿ ಪ್ರಾಯೋ ಗಿಕವಾಗಿ ಬೆಳೆಯಲು ಮುಂದಾಗಿದ್ದೇವೆ. ಕೃಷ್ಣಮೂರ್ತಿ, ರೈತ, ಕೋಡಿಹಳ್ಳಿ, ಮಧುರೆ ಹೋಬಳಿ

ಜಿಲ್ಲೆಯಲ್ಲಿ ಡ್ರಾಗನ್‌ ಫ್ರೂಟ್ಸ್ ಬೆಳೆಯಲು ರೈತರು ಮುಂದಾಗಿದ್ದಾರೆ. ಡ್ರಾಗನ್‌ ಫ್ರೂಟ್ಸ್ ಗೆ ಹೆಚ್ಚಿನ ಬೇಡಿಕೆ ಇದೆ. ಉದ್ಯೋಗಖಾತ್ರಿ ಯೋಜನೆಯಡಿ ತೋಟಗಾರಿಕಾ ಬೆಳೆಗೆ ಸಹಾಯಧನ ವಿತರಿಸಲಾಗುತ್ತಿದೆ. ಡ್ರಾಗನ್‌ ಫ್ರೂಟ್ಸ್ ಬೆಳೆಯುವ ರೈತರು ಇದರ ಸದುಪಯೋಗ ಮಾಡಿಕೊಳ್ಳಬಹುದಾಗಿದೆ. ರಾಷ್ಟ್ರೀಯ ತೋಟಗಾರಿಕಾ ಮಿಷನ್‌ ಆರಂಭಿಸಿದ್ದು, ಡ್ರಾಗನ್‌ ಫ್ರೂಟ್ಸ್ ಗೆ ಸಹಾಯಧನ ಸಿಗಲಿದೆ. ಗುಣವಂತ, ಜಿಲ್ಲಾ ತೋಟಗಾರಿಕಾ ಉಪನಿರ್ದೇಶಕ

 

ಎಸ್‌.ಮಹೇಶ್‌

ಟಾಪ್ ನ್ಯೂಸ್

Happy New Year 2025: ಹೊಸ ಕ್ಯಾಲೆಂಡರ್‌ನೊಂದಿಗೆ ಹೊಸ ವರ್ಷದ ಆರಂಭ

Happy New Year 2025: ಹೊಸ ಕ್ಯಾಲೆಂಡರ್‌ನೊಂದಿಗೆ ಹೊಸ ವರ್ಷದ ಆರಂಭ

Namma Metro; Metro services till 2 am on December 31

Namma Metro; ಡಿಸೆಂಬರ್‌ 31ರಂದು ಮಧ್ಯರಾತ್ರಿ 2 ಗಂಟೆಯವರೆಗೆ ಮೆಟ್ರೋ ಸಂಚಾರ

Borewell Tragedy: ಹೇಗಾದರು ಮಾಡಿ ನನ್ನ 3ವರ್ಷದ ಮಗಳನ್ನು ರಕ್ಷಣೆ ಮಾಡಿ ಕೊಡಿ.. ತಾಯಿ ಅಳಲು

Borewell Tragedy: ಹೇಗಾದರು ಮಾಡಿ ನನ್ನ 3ವರ್ಷದ ಮಗಳನ್ನು ರಕ್ಷಣೆ ಮಾಡಿ ಕೊಡಿ.. ತಾಯಿ ಅಳಲು

Robbery: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ “ಮೊಟ್ಟೆ ಗ್ಯಾಂಗ್‌”

Robbery: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ “ಮೊಟ್ಟೆ ಗ್ಯಾಂಗ್‌”

ಹೊಸ ಬೆಳಕು ಮೂಡುತಿದೆ, ಬಂಗಾರದ ರಥವೇರುತ;ಆಶಾವಾದದ ಆಶಯದಿಂದ ಬರಮಾಡಿಕೊಳ್ಳೋಣ ನವ ಯುಗವನ್ನು

ಹೊಸ ಬೆಳಕು ಮೂಡುತಿದೆ, ಬಂಗಾರದ ರಥವೇರುತ;ಆಶಾವಾದದ ಆಶಯದಿಂದ ಬರಮಾಡಿಕೊಳ್ಳೋಣ ನವ ಯುಗವನ್ನು

Agarwal

Vijay Hazare Trophy; ಮಯಾಂಕ್‌ ಅಗರ್ವಾಲ್‌ ಭರ್ಜರಿ ಶತಕ; ಸುಲಭ ಜಯ ಸಾಧಿಸಿದ ಕರ್ನಾಟಕ

Video: ಜನವರಿಯಲ್ಲಿ ಮದುವೆ ನಿಶ್ಚಯವಾಗಿದ್ದ ಯುವತಿ 70 ಅಡಿ ಎತ್ತರದ ಸೇತುವೆಯಿಂದ ಜಿಗಿದಳು

Video: 2 ವಾರದಲ್ಲಿ ಮದುವೆಯಾಗಬೇಕಿದ್ದ ಯುವತಿ 70 ಅಡಿ ಎತ್ತರದ ಸೇತುವೆಯಿಂದ ನದಿಗೆ ಜಿಗಿದಳು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Doddaballapur: ಹೊಲದಲ್ಲಿ ಹೂ ಬಿಡಿಸುತ್ತಿದ್ದ ಮಹಿಳೆಗೆ ಕಾರು ಡಿಕ್ಕಿ: ಸಾವು

Doddaballapur: ಹೊಲದಲ್ಲಿ ಹೂ ಬಿಡಿಸುತ್ತಿದ್ದ ಮಹಿಳೆಗೆ ಕಾರು ಡಿಕ್ಕಿ: ಸಾವು

Road Mishap: ಬೈಕ್‌ ವ್ಹೀಲಿಂಗ್‌ ಮಾಡುವಾಗ ಕ್ಯಾಂಟರ್‌ಗೆ ಡಿಕ್ಕಿ; ಇಬ್ಬರು ಸಾವು

Road Mishap: ಬೈಕ್‌ ವ್ಹೀಲಿಂಗ್‌ ಮಾಡುವಾಗ ಕ್ಯಾಂಟರ್‌ಗೆ ಡಿಕ್ಕಿ; ಇಬ್ಬರು ಸಾವು

Tragic: ಮದುವೆ ಹರಕೆ ಹೊತ್ತು ಘಾಟಿ ದೇಗುಲಕ್ಕೆ ಬಂದಿದ್ದ ಯುವತಿ ಸಾವು

Tragic: ಮದುವೆ ಹರಕೆ ಹೊತ್ತು ಘಾಟಿ ದೇಗುಲಕ್ಕೆ ಬಂದಿದ್ದ ಯುವತಿ ಸಾವು

2-

Ayodhya ರಾಮನ ದರ್ಶನ ಪಡೆದಿದ್ದ “ಬಸಪ್ಪ” ಈಗ ಶಬರಿಮಲೆಗೆ ಪ್ರಯಾಣ!

Nelamangala: ಐಷಾರಾಮಿ ಕಾರಿನ ಮೇಲೆ ಬಿದ್ದ ಕಂಟೈನರ್… ಒಂದೇ ಕುಟುಂಬದ 6 ಮಂದಿ ಸಾವು

Nelamangala: ಐಷಾರಾಮಿ ಕಾರಿನ ಮೇಲೆ ಬಿದ್ದ ಕಂಟೈನರ್… ಒಂದೇ ಕುಟುಂಬದ 6 ಮಂದಿ ಸಾ*ವು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Happy New Year 2025: ಹೊಸ ಕ್ಯಾಲೆಂಡರ್‌ನೊಂದಿಗೆ ಹೊಸ ವರ್ಷದ ಆರಂಭ

Happy New Year 2025: ಹೊಸ ಕ್ಯಾಲೆಂಡರ್‌ನೊಂದಿಗೆ ಹೊಸ ವರ್ಷದ ಆರಂಭ

Namma Metro; Metro services till 2 am on December 31

Namma Metro; ಡಿಸೆಂಬರ್‌ 31ರಂದು ಮಧ್ಯರಾತ್ರಿ 2 ಗಂಟೆಯವರೆಗೆ ಮೆಟ್ರೋ ಸಂಚಾರ

14

Padubidri: ವೃದ್ಧ ದಂಪತಿಗೆ ಸುರಕ್ಷಿತ ಕಾಲು ಸಂಕದ ಭರವಸೆ

ಅಡ್ಡಹೊಳೆಯಲ್ಲಿ ಸಂಕೀರ್ತನ ಯಾತ್ರೆ ಮತ್ತು ಸ್ವಾಮೀಜಿಗಳ ಪಾದಯಾತ್ರೆ

ಅಡ್ಡಹೊಳೆ ಗ್ರಾಮದಲ್ಲಿ ಸಂಕೀರ್ತನ ಯಾತ್ರೆ ಮತ್ತು ಸ್ವಾಮೀಜಿಗಳ ಪಾದಯಾತ್ರೆ

13(1

Udupi: ಕೊರಗ ಸಮುದಾಯಕ್ಕೆ ಸಮಸ್ಯೆಗಳ ಸರಣಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.