ಕೈಗಾರಿಕೋದ್ಯಮಿಗಳು ಪರಿಸರ ಕಾಳಜಿವಹಿಸಿ


Team Udayavani, Mar 7, 2020, 5:42 PM IST

ಕೈಗಾರಿಕೋದ್ಯಮಿಗಳು ಪರಿಸರ ಕಾಳಜಿವಹಿಸಿ

ನೆಲಮಂಗಲ : ಕೈಗಾರಿಕೋದ್ಯಮಿಗಳು ನೈತಿಕ ಹೊಣೆಗಾರಿಕೆಯಿಂದ ವ್ಯಾಪಾರ ಮಾಡಿ, ಸವಲತ್ತು ಮತ್ತು ಕಾನೂನು ಗಳನ್ನು ದುರುಪಯೋಗಮಾಡಿಕೊಳ್ಳಬೇಡಿ, ಪರಿಸರದ ಬಗ್ಗೆ ಕಾಳಜಿವಹಿಸಿ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎನ್‌. ಎಂ.ನಾಗರಾಜು ತಿಳಿಸಿದರು.

ಪಟ್ಟಣದ ಹಾಲಿಡೇ ಪಾಮ್ಸ್‌ ಹೊಟೇಲ್‌ ಸಭಾಂಗಣದಲ್ಲಿ ಗ್ರೇಟರ್‌ ನೆಲಮಂಗಲ ಇಂಡಸ್ಟ್ರೀಸ್‌ ಅಸೋಸಿಯೇಷನ್‌ ವತಿಯಿಂದ ಹಮ್ಮಿಕೊಂಡಿದ್ದ ತೆರಿಗೆ ಮತ್ತು ಕಂದಾಯ ನಿಗದಿ ಕುರಿತಾದ ವಿಚಾರ ಸಂಕಿರಣ ಉದ್ಘಾಟಿಸಿ ಮಾತನಾಡಿದರು.  ನಾಗರೀಕತೆ ವಿಕಸನದ ಬಳಿಕ ಕೃಷಿ ಅವಲಂಭನೆ ಹೆಚ್ಚಾಯಿತು, ನಂತರ ತಾಂತ್ರಿಕತೆ ಬೆಳೆದಂತೆಲ್ಲ ಕೈಗಾರಿಕೆಗಳು ಅಭಿವೃದ್ಧಿಯಾಗಿದೆ. ಕೈಗಾರಿಕಾ ಕ್ರಾಂತಿ ಬಳಿಕ ಕೈಗಾರಿಕೆಗಳ ಬೆಳವಣಿಗೆಯಿಂದಾಗಿ ರಾಷ್ಟ್ರೀಯ ಉತ್ಪನ್ನ ಹಾಗೂ ತಲಾದಾಕೈಗಾರಿಕೆಗಳಿಂದ ಹೆಚ್ಚಾಗಿದೆ. ದೇಶದ ಅಭಿವೃದ್ಧಿಯಲ್ಲಿ ಕೃಷಿಯ  ನಂತರ ಕೈಗಾರಿಕೆಗಳು ಮಹತ್ತರವಾದ ಪಾತ್ರವಹಿಸಿದೆ. ವಿದೇಶಿ ವಿನಿಮಯಗಳು ಹೆಚ್ಚಾಗುತ್ತಿದೆ, 3ನೇ ಪಂಚವಾರ್ಷಿಕ ಯೋಜನೆಯ ಬಳಿಕ ಕೈಗಾರಿಕಾ ನೀತಿಗಳೂ ಬದಲಾಗಿವೆ ಎಂದರು.

ಗ್ರಾಮಾಂತರ ಪ್ರದೇಶಗಳಲ್ಲಿ ಕೈಗಾರಿಕೆಗಳು ಸಾಕಷ್ಟು ಸಮಸ್ಯೆಗಳನ್ನು ಎದುರಿಸುತ್ತಿರುವುದು ಕೈಗಾರಿಕೋದ್ಯಮಿಗಳಿಂದ ತಿಳಿದುಬಂದಿದೆ. ಕೈಗಾರಿಕೆಗಳ ಕರ ನಿರ್ಧರಣೆ ಮತ್ತು ತೆರಿಗೆ ಪಾವತಿಯ ಕುರಿತಾಗಿ ಸಾಕಷ್ಟು ಗೊಂದಲುಗಳುಂಟಾಗಿತ್ತು. ಅವುಗಳನ್ನು ಪರಿಸಹರಿಸುವಲ್ಲಿ ಸರ್ಕಾರ ಸೂಕ್ತ ಕ್ರಮವಹಿಸಿದೆ, ಗ್ರಾಮ ಪಂಚಾಯತಿ ವ್ಯಾಪ್ತಿಗಳಲ್ಲಿ ಕೈಗಾರಿಕೆಗಳಿಗೆ ತೆರಿಗೆ ನಿಗದಿಪಡಿಸುವಲ್ಲಿ ವ್ಯತ್ಯಾಸಗಳಾಗಬಾರದೆಂಬ ಕಾರಣದಿಂದ ಸಣ್ಣ ಕೈಗಾರಿಕೆಗಳಿಗೆ ಶೇ.4 ಮಾಧ್ಯಮ ಕೈಗಾರಿಕೆಗಳಿಗೆ ಶೇ.5 ಹಾಗೂ ಬೃಹತ್‌ ಕೈಗಾರಿಕೆಗಳಿಗೆ ಶೇ.6ರಷ್ಟು ಕರ ನಿರ್ಧರಣೆ ಮಾಡಲಾಗಿದ್ದು ಕೈಗಾರಿಕಾ ಪ್ರದೇಶದಲ್ಲಿ ರಸ್ತೆ ಹಾಗೂ ಹಸಿರುವಲಯಕ್ಕೆ ತೆರಿಗೆ ವಿನಾಯತಿಯನ್ನು ನೀಡಲಾಗಿದೆ, ತಮಗೆ ಸ್ಥಳೀಯ ಆಡಳಿತ ಮಂಡಳಿ ಅಥವಾ ಅಭಿವೃದ್ಧಿ ಅಧಿಕಾರಿಗಳಿಂದ ಸಮಸ್ಯೆಗಳು ಎದುರಾದರೆ ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿಗಳು ನಂತರ ಜಿಲ್ಲಾ ಪಂಚಾಯಿತಿ ಮುಖ್ಯಕಾರ್ಯನಿರ್ವಹಣಾಧಿಕಾರಿಗಳ ಗಮನಕ್ಕೆ ತಂದು ಪರಿಹರಿಸಿಕೊಳ್ಳಬೇಕೆಂದು ತಿಳಿಸಿದರು.

ರಾಜ್ಯ ಕಾಷಿಯಾ ಅಧ್ಯಕ್ಷ ಆರ್‌.ರಾಜು ಮಾತನಾಡಿ ಸರಕಾರದ ಯೋಜನೆಗಳನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸುವಲ್ಲಿ ಅಧಿಕಾರಿಗಳ ಪಾತ್ರ ಪರಿಣಾಮಕಾರಿ ಹಾಗೂ ಮಹತ್ವದ್ದಾಗಿದೆ. ಮಹಾನಗರಗಳು ಹಾಗೂ ಪಂಚಾಯಿತಿ ಮಟ್ಟದ ಅಭಿಪ್ರಾಯಗಳು ವಿಭಿನ್ನವಾಗಿರುತ್ತವೆ. ಕೈಗಾರಿಕೆಗಳು ಮತ್ತು ಕೈಗಾರಿಕೋದ್ಯಮಿಗಳು ಎಂದರೆ ಸ್ಥಳೀಯ ಆಡಳಿತಮಂಡಳಿ ಹಾಗೂ ಅಧಿಕಾರಿಗಳಲ್ಲಿ ಬೇರೆಯಿದ್ದು ಇಚ್ಚೆಗನುಸಾರವಾಗಿ ಕಂದಾಯ ತೆರಿಗೆಗಳನ್ನು ನಿಗದಿಪಡಿಸುತ್ತಾರೆ. ಕಾನೂನುಗಳನ್ನು ಸಮರ್ಪಕವಾಗಿ ಅನುಸರಿಸಬೇಕು ಕುಂದು ಕೊರತೆಗಳಿದ್ದರೆ ಸಂಬಂಧಪಟ್ಟವರೊಂದಿಗೆ ಮುಕ್ತವಾಗಿ ಚರ್ಚಿಸಿ ಸಮಸ್ಯೆಗಳಿಗೆ ಪರಿಹಾರವನ್ನು ಕಂಡುಕೊಳ್ಳಬೇಕಿದೆ ಎಂದರು.

ಗ್ರೇಟರ್‌ನೆಲಮಂಗಲ ಇಂಡಸ್ಟ್ರೀಸ್‌ ಅಸೋಸಿಯೇಷನ್‌ ಅಧ್ಯಕ್ಷ ಇಟಿಕೆ ರಾಜು ಮಾತನಾಡಿ, ಕೈಗಾರಿಕೋದ್ಯಮಿಗಳು ಮತ್ತು ಅಧಿಕಾರಿಗಳಿಗೆ ಕಾನೂನು ಕಾಯ್ದೆಗಳ ಅರಿವನ್ನು ಮೂಡಿಸುವ ಕಾರ್ಯಕ್ರಮವನ್ನು ಸಂಸ್ಥೆಯ ವತಿಯಿಂದ ಹಮ್ಮಿಕೊಳ್ಳಲಾಗಿದ್ದು ಪ್ರತಿಯೊಬ್ಬರಿಗೂ ಕಾನೂನು ಅರಿವು ಅತ್ಯವಶ್ಯಕವಾಗಿದೆ. ಕಾಲಕಾಲಕ್ಕೆ ಬದಲಾಗುವ ಕಾಯ್ದೆಗಳನ್ನು ಪ್ರತಿಯೊಬ್ಬರು ಅಳವಡಿಸಿಕೊಂಡು ಪಾಲನೆ ಮಾಡುವುದು ನಮ್ಮೆಲ್ಲರ ಕರ್ತವ್ಯವಾಗಿದೆ ಎಂದು ಕರೆನೀಡಿದರು.

ಕಾರ್ಯಕ್ರಮದ ಅಂಗವಾಗಿ ಜಿಪಂ ಸಿಇಓ ಎನ್‌.ಎಂ. ನಾಗರಾಜು ಹಾಗೂ ತಾಪಂ ಇಓ ಲಕ್ಷ್ಮೀನಾರಾಯಣ್‌ ಅವರುಗಳು ಕೈಗಾರಿಕೋದ್ಯಮಿಗಳು, ಕೈಗಾರಿಕೆಗಳ ಅಧಿಕಾರಿಗಳು ಮತ್ತು ಜಿಎನ್‌ಐಎ ಸದಸ್ಯರೊಂದಿಗೆ ಸಂವಾದವನ್ನು ನಡೆಸಿದರು.

ಕಾರ್ಯಕ್ರಮದಲ್ಲಿ ತಾ ಪಂಇಓ. ಲಕ್ಷ್ಮೀನಾರಾಯಣ್‌, ಕಾಷಿಯಾ ಕಾರ್ಯದರ್ಶಿ ಎಂ.ಜಿ. ರಾಜ ಗೋಪಾಲ್‌, ಜಿಎನ್‌ಐಎ ಉಪಾಧ್ಯಕ್ಷ ಜಿಎನ್‌.ಶೇಖರ್‌, ಹರ್ಷ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಶಿವಕುಮಾರ್‌, ಮಂಜುನಾಥ್‌ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Mulki-kambla

Mulki: ಕಂಬಳದಿಂದ ಕೃಷಿ, ಧಾರ್ಮಿಕ ನಂಬಿಕೆ ವೃದ್ಧಿ: ನ್ಯಾ. ಎನ್‌. ಸಂತೋಷ್‌ ಹೆಗ್ಡೆ

udupi-Bar-Asso

Udupi: ಸುಪ್ರೀಂ, ಹೈಕೋರ್ಟ್‌ಗಳ ತೀರ್ಪು ಆನ್‌ಲೈನ್‌ನಲ್ಲಿ ಲಭ್ಯ: ನ್ಯಾ.ಸೂರಜ್‌

Udupi: ಯುವ ಗೀತೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ಕಾರ್ಯಾಗಾರ

Udupi: ಯುವ ಗೀತೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ಕಾರ್ಯಾಗಾರ

SASTHANA-TOLL

Kota: ಸಾಸ್ತಾನ ಟೋಲ್‌: ಡಿ.30ರ ತನಕ ಯಥಾಸ್ಥಿತಿ ಮುಂದುವರಿಕೆಗೆ ಸೂಚನೆ

mob

Samsung Phone; ಫೋಟೋ ಸೋರಿಕೆ: ಕೆಲಸಗಾರರು ವಜಾ?

Udupi: ಗೀತಾರ್ಥ ಚಿಂತನೆ 133: ಜವಾಬ್ದಾರಿಯೊಂದಿಗೆ ಅಭಿಮಾನಶೂನ್ಯತೆ ಅತಿಸೂಕ್ಷ್ಮ

Udupi: ಗೀತಾರ್ಥ ಚಿಂತನೆ 133: ಜವಾಬ್ದಾರಿಯೊಂದಿಗೆ ಅಭಿಮಾನಶೂನ್ಯತೆ ಅತಿಸೂಕ್ಷ್ಮ

Perla-fire

Disaster: ಪೆರ್ಲದಲ್ಲಿ ಭಾರೀ ಬೆಂಕಿ ದುರಂತ; ಐದು ಅಂಗಡಿಗಳು ಸಂಪೂರ್ಣ ಭಸ್ಮ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Nelamangala: ಐಷಾರಾಮಿ ಕಾರಿನ ಮೇಲೆ ಬಿದ್ದ ಕಂಟೈನರ್… ಒಂದೇ ಕುಟುಂಬದ 6 ಮಂದಿ ಸಾವು

Nelamangala: ಐಷಾರಾಮಿ ಕಾರಿನ ಮೇಲೆ ಬಿದ್ದ ಕಂಟೈನರ್… ಒಂದೇ ಕುಟುಂಬದ 6 ಮಂದಿ ಸಾ*ವು

4

Crime: ರೌಡಿಶೀಟರ್‌ ಕೊಲೆ ಯತ್ನ; ಆರೋಪಿಗೆ ಗುಂಡೇಟು

Doddaballapur: ಎರಡೂ ಬಸ್‌ ನಿಲ್ದಾಣಕ್ಕೆ ಬೇಕಿದೆ ಕಾಯಕಲ್ಪ!

Doddaballapur: ಎರಡೂ ಬಸ್‌ ನಿಲ್ದಾಣಕ್ಕೆ ಬೇಕಿದೆ ಕಾಯಕಲ್ಪ!

11

Lack of Bus stand: ಹೊಸಕೋಟೆ; ಬಸ್‌ ನಿಲ್ದಾಣವಿಲ್ಲದೆ ಪರದಾಟ!

Leopard: ನೆಲಮಂಗಲ ಸಮೀಪ ಚಿರತೆ ಸೆರೆ: ನರಭಕ್ಷಕ ಇದೇನಾ? ವರದಿ ನಿರೀಕ್ಷೆ

Leopard: ನೆಲಮಂಗಲ ಸಮೀಪ ಚಿರತೆ ಸೆರೆ: ನರಭಕ್ಷಕ ಇದೇನಾ? ವರದಿ ನಿರೀಕ್ಷೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Accident-logo

Siddapura: ಕಾರು ಸ್ಕೂಟಿಗೆ ಢಿಕ್ಕಿ; ಸವಾರರು ಗಂಭೀರ

Car-Palti

Sulya: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ

Thief

Kaup: ಉದ್ಯಾವರ: ಮನೆಯ ಬೀಗ ಮುರಿದು ಸೊತ್ತು ಕಳವು

Accident-logo

Putturu: ಬೈಕ್‌-ಪಿಕಪ್‌ ಢಿಕ್ಕಿ: ಇಬ್ಬರು ಸವಾರರಿಗೆ ಗಂಭೀರ ಗಾಯ

Arrest

Bantwala: ನಾವೂರು: ಅತ್ಯಾಚಾರ; ಆರೋಪಿಗೆ ನ್ಯಾಯಾಂಗ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.