ಸೋಂಕು: ನಿರ್ವಹಣೆಯಲ್ಲಿ ಲೋಪ ಬೇಡ
Team Udayavani, Aug 1, 2020, 9:15 AM IST
ದೇವನಹಳ್ಳಿ: ಜಿಲ್ಲೆಯಲ್ಲಿ ಪ್ರತಿದಿನ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿರುವ ಹಿನ್ನೆಲೆ, ಸೋಂಕಿತರ ಸಂಖ್ಯೆ ಅವಲೋಕಿಸಿ, ಆಸ್ಪತ್ರೆಗಳಲ್ಲಿ ಹಾಸಿಗೆ ವ್ಯವಸ್ಥೆ ಸೇರಿದಂತೆ ಸಕಲ ಸಿದ್ಧತೆ ಕೈಗೊಳ್ಳಲು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಪಿ. ಹೇಮಲತಾ ಸೂಚಿಸಿದರು.
ತಾಲೂಕಿನ ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಕೋವಿಡ್ ಸೋಂಕು ತಡೆಗೆ ಜಿಲ್ಲಾಡಳಿತ ಕೈಗೊಂಡ ಕ್ರಮಗಳ ಪರಿಶೀಲನೆ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಜಿಲ್ಲೆಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಮೊಬೈಲ್ ಸ್ವ್ಯಾಬ್ ಸಂಗ್ರಹ ಸೇರಿದಂತೆ ಫೀವರ್ ಕ್ಲಿನಿಕ್ ಗಳ ಬಗ್ಗೆ ಸಂಪೂರ್ಣ ಮಾಹಿತಿ ಪಡೆದ ಅವರು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳು ಮೊಬೈಲ್ ಸ್ವ್ಯಾಬ್ ಸಂಗ್ರಹ ಹೆಚ್ಚಿಸುವಂತೆ ಹಾಗೂ ಜಿಲ್ಲೆಯಲ್ಲಿ ಯಾವುದೇ ಲೋಪದೋಷವಿಲ್ಲದೆ ಖಾಸಗಿ ಹಾಗೂ ಸಾರ್ವಜನಿಕ ಆಸ್ಪತ್ರೆ ಕಾರ್ಯ ನಿರ್ವಹಿಸಬೇಕೆಂದು ತಿಳಿಸಿದರು.
ತಾಲೂಕುಗಳಲ್ಲಿನ ಸಾರ್ವಜನಿಕ ಆಸ್ಪತ್ರೆಗಳಲ್ಲಿ ಡಯಾಲಿಸಿಸ್ ರೋಗಿಗಳು ಸೇರಿದಂತೆ ಇತರೆ ಕಾಯಿಲೆಯುಳ್ಳ ರೋಗಿಗಳಿಗೆ ಚಿಕಿತ್ಸೆಯಲ್ಲಿ ಯಾವುದೇ ತೊಂದರೆ ಉಂಟಾಗದಂತೆ ಕಾರ್ಯನಿರ್ವಹಿಸಬೇಕು. ಔಷಧಿ ವಿತರಣೆಯಲ್ಲಿ ಕೊರತೆ ಉಂಟಾಗದಂತೆ ಎಚ್ಚರವಹಿಸಲು ಜಿಲ್ಲಾ ಆರೋಗ್ಯಾಧಿಕಾರಿಗಳಿಗೆ ಸೂಚಿಸಿದರು. ಅಗತ್ಯ ಸಮಯದಲ್ಲಿ ಸೋಂಕಿತರಿಗೆ ಚಿಕಿತ್ಸೆ ನೀಡಿ ಕೋವಿಡ್ ಸೋಂಕಿತರ ಮರಣ ಪ್ರಮಾಣ ಕಡಿಮೆ ಮಾಡುವ ನಿಟ್ಟಿನಲ್ಲಿ ಕಾರ್ಯನಿರ್ವಹಿಸಬೇಕು ಎಂದು ಹೇಳಿದರು. ಜಿಲ್ಲೆಯಲ್ಲಿ ರಸಗೊಬ್ಬರ ಹಾಗೂ ಬಿತ್ತನೆ ಬೀಜಗಳ ಕೊರತೆ ಉಂಟಾಗದಂತೆ ಸಾಕಷ್ಟು ಪ್ರಮಾಣದಲ್ಲಿ ಸಂಗ್ರಹಣೆ ಮಾಡಿ, ರೈತರಿಗೆ ಸರಿಯಾದ ಸಮಯದಲ್ಲಿ ವಿತರಿಸಬೇಕೆಂದು ನಿರ್ದೇಶಿಸಿದರು.
ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ, ಜಿಪಂ ಸಿಇಒ ಎನ್.ಎಂ.ನಾಗರಾಜ, ಅಪರ ಜಿಲ್ಲಾಧಿಕಾರಿ ಜಗದೀಶ್ ಕೆ.ನಾಯಕ್, ಜಿಲ್ಲಾ ಆರೋಗ್ಯಾಧಿಕಾರಿ ಡಾ.ಮಂಜುಳಾದೇವಿ, ಜಿಲ್ಲಾ ಸರ್ವೆಕ್ಷಣಾಧಿಕಾರಿ ಡಾ.ಧರ್ಮೆಂದ್ರ, ತಹಶೀಲ್ದಾರ್‌ಗಳು, ಇಲಾಖೆಗಳ ಅಧಿಕಾರಿಗಳಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Shirva: ಹೊಂಡ ಗುಂಡಿ, ಧೂಳುಮಯ ಕೋಡು-ಪಂಜಿಮಾರು ರಸ್ತೆ
BBK11: ಮಂಜು ಅವರದ್ದು ಚೀಪ್ ಮೆಂಟಲಿಟಿ ಎಂದ ರಜತ್; ಭವ್ಯ – ಮೋಕ್ಷಿತಾ ವಾಗ್ವಾದ
Udupi: ಉದ್ಘಾಟನೆ ಕಾಣದ ಸರಕಾರಿ ಕಟ್ಟಡಗಳು
Ullala: ಸೇತುವೆಗೆ ತೇಪೆ ಹಚ್ಚುವ ಕಾಮಗಾರಿ; ರಾ. ಹೆದ್ದಾರಿಯಲ್ಲಿ ವಾಹನ ಸಂಚಾರ ವ್ಯತ್ಯಯ
BGT: ಆಸೀಸ್ ಮಾಧ್ಯಮದ ವಿರುದ್ದ ವಿರಾಟ್ ಗರಂ: ಏರ್‌ಪೋರ್ಟ್ ನಲ್ಲಿ ವರದಿಗಾರ್ತಿ ಜತೆ ಜಗಳ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.