ವೀರಸಂದ್ರ ಗ್ರಾಮದ ಕೆರೆ ಜಾಗ ಪರಿಶೀಲನೆ
Team Udayavani, Jan 12, 2020, 5:47 PM IST
ಆನೇಕಲ್ : ಹೆಬ್ಬಗೋಡಿ ನಗರಸಭೆ ವ್ಯಾಪ್ತಿಯ ವೀರಸಂದ್ರ ಗ್ರಾಮದ ಕೆರೆಯ ಅಭಿವೃದ್ಧಿಯ ಹೆಸರಿನಲ್ಲಿ ಕೆಲವು ಖಾಸಗಿ ಕಂಪನಿಗಳು ವೀರಸಂದ್ರ ಗ್ರಾಮಕ್ಕೆ ಹೋಗುವ ಪುರಾತನ ರಸ್ತೆಯ ಜಾಗವನ್ನು ಅತಿಕ್ರಮಣ ಮಾಡಿಕೊಳ್ಳಲು ಮುಂದಾಗಿದ್ದಾರೆ ಎಂಬ ಗ್ರಾಮಸ್ಥರ ದೂರಿನ ಮೇರೆಗೆ ಕಂದಾಯ ಅಧಿಕಾರಿಗಳಾದ ಶಿವಣ್ಣ ಮತ್ತು ತಹಶೀಲ್ದಾರ್ ಮಹದೇವಯ್ಯ ಸ್ಥಳಕ್ಕೆ ತೆರಳಿ ಸ್ಥಳ ಪರಿಶೀಲನೆ ನಡೆಸಿದರು.
ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ನಗರಸಭೆ ಸದಸ್ಯ ವೀರಸಂದ್ರ ರಾಜೇಂದ್ರಪ್ಪ, ರಾಷ್ಟೀಯ ಹೆದ್ದಾರಿ-7 ರಿಂದ ವೀರಸಂದ್ರ ಗ್ರಾಮಕ್ಕೆ ಬರುವ ರಸ್ತೆಯನ್ನು ಪುರಾತನ ಕಾಲದಿಂದಲೂ ನಾವು ಬಳಸುತ್ತಿದ್ದೇವೆ. ಜೊತೆಗೆ ಈ ರಸ್ತೆಗೆ ಸಂಬಂಧಿಸಿದ ಸರ್ಕಾರಿ ದಾಖಲೆಗಳಿವೆ. ಆದರೆ ವೀರಸಂದ್ರ ಕೆರೆ ಅಭಿವೃದ್ಧಿ ಮಾಡುತ್ತೇವೆ ಎಂದು ಹೇಳಿ ಕೆಲ ಖಾಸಗಿ ಕಂಪನಿಗಳು ರಸ್ತೆ ಮುಚ್ಚಿ ರಸ್ತೆಯ ಜಾಗವನ್ನು ಕಬಳಿಕೆ ಮಾಡಿ ತಮ್ಮ ಸ್ವಾರ್ಥಕ್ಕೆ ಬಳಕೆ ಮಾಡಲು ಮುಂದಾಗಿದ್ದಾರೆ, ಇದನ್ನು ಪ್ರಶ್ನಿಸಿದಕ್ಕೆ ನಮ್ಮ ವಿರುದ್ಧವೇ ಪೊಲೀಸ್ ಠಾಣೆಗೆ ದೂರು ನೀಡಿವೆ.ನಮಗೆ ಯಾವುದೇ ಕೆರೆಯ ಅಭಿವೃದ್ಧಿ ಬೇಡ, ನಮ್ಮ ಗ್ರಾಮಕ್ಕೆ ಹೋಗುತ್ತಿದ್ದ ರಸ್ತೆಯೇ ಬೇಕು ಎಂದು ಅಧಿಕಾರಿಗಳಿಗೆ ಎಂದು ಅಧಿಕಾರಿಗಳಿಗೆ ತಿಳಿಸಿದರು.
ಶಿವಣ್ಣ ಮತ್ತು ತಹಶೀಲ್ದಾರ್ ಮಹಾದೇವಯ್ಯ ಮಾತನಾಡಿ, ವೀರಸಂದ್ರ ಗ್ರಾಮದ ಜನರ ಮತ್ತು ಖಾಸಗಿ ಕಂಪನಿಗಳ ಸಮಸ್ಯೆಗಳನ್ನು ಖುದ್ದಾಗಿ ಕೇಳಿದ್ದು, ಕೂಡಲೇ ಜಿಲ್ಲಾಧಿಕಾರಿಗಳಿಗೆ ವಿಷಯ ತಿಳಿಸಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Encounter: ಬೆಳ್ಳಂಬೆಳಗ್ಗೆ ಜಮ್ಮು ಕಾಶ್ಮೀರದಲ್ಲಿ ಗುಂಡಿನ ದಾಳಿ; 5 ಭಯೋತ್ಪಾದಕರು ಹತ
22 Villages: ಡೋಕ್ಲಾಂನಲ್ಲಿ ಚೀನದಿಂದ 22 ಗ್ರಾಮಗಳ ನಿರ್ಮಾಣ?
Vijay Mallya: ಮಲ್ಯ 14,000 ಕೋ. ರೂ. ಆಸ್ತಿ ಬ್ಯಾಂಕುಗಳಿಗೆ ವಾಪಸ್
Mangaluru AirPort: ಬಜಪೆ ವಿಮಾನ ನಿಲ್ದಾಣ ರನ್‌ವೇಗಿಲ್ಲ ರೇಸಾ ಸುರಕ್ಷೆ
H-1B visa: ಎಚ್1ಬಿ ವೀಸಾ ನಿಯಮ ಸಡಿಲಿಕೆ… ಭಾರತೀಯ ಟೆಕ್ಕಿಗಳಿಗೆ ಸಂತಸ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.