ಬೂತ್‌ಮಟ್ಟದಿಂದ ಕಾಂಗ್ರೆಸ್ ಸಂಘಟಿಸಲು ಸೂಚನೆ
Team Udayavani, Sep 23, 2020, 2:54 PM IST
ದೇವನಹಳ್ಳಿ: ಬೂತ್ ಮಟ್ಟದಿಂದ ಪಕ್ಷ ಸಂಘಟಿಸಿ ಗ್ರಾಪಂ ಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳನ್ನು ಗೆಲ್ಲಿಸಿಕೊಳ್ಳಬೇಕು ಎಂದು ಮಾಜಿ ಶಾಸಕ ಮುನಿನರಸಿಂಹಯ್ಯ ತಿಳಿಸಿದರು.
ನಗರದ ಪ್ರವಾಸಿ ಮಂದಿರದಲ್ಲಿ ದೇವನಹಳ್ಳಿ ವಿಧಾನಸಭಾ ಕ್ಷೇತ್ರದ ಎರಡೂ ಬ್ಲಾಕ್‌ಗಳ ಗ್ರಾಪಂ ಚುನಾವಣೆ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದರು.
ಕೇಂದ್ರ ಬಿಜೆಪಿ ಸರ್ಕಾರ ಬಂದ ಮೇಲೆ ನಿರುದ್ಯೋಗ ಸಮಸ್ಯೆ, ಜಿಡಿಪಿ ಕುಸಿತ, ನೋಟ್ ಬ್ಯಾನ್‌ನಿಂದಾಗಿ ಜನರಿಗೆ ಸಂಕಷ್ಟವಾಗಿದೆ. ಪೆಟ್ರೋಲ್, ಡೀಸೆಲ್ ಏರಿಕೆಯಿಂದ ಜನರ ಮೇಲೆ ಗಾಯದ ಮೇಲೆ ಬರೆ ಎಳೆಯುವ ಕೆಲಸವನ್ನು ಕೇಂದ್ರ-ರಾಜ್ಯ ಸರ್ಕಾರಮಾಡಿವೆ ಎಂದು ದೂರಿದರು. ಈಗಾಗಲೇ ಗ್ರಾಮೀಣಾಭಿವೃದ್ಧಿ ಇಲಾಖೆಯಿಂದ ಆಯಾ ಜಿಲ್ಲೆಗಳ ಜಿಲ್ಲಾಧಿಕಾರಿಗಳಿಗೆ ಗ್ರಾಪಂ ಚುನಾವಣೆ ಬಗ್ಗೆ ಸೂಚನೆ ನೀಡಲಾಗುತ್ತಿದೆ. ಮುಂದಿನ ದಿನಗಳಲ್ಲಿ ತಾಲೂಕಿನ 24 ಗ್ರಾಪಂ ಗಳಲ್ಲೂ ಸಭೆ ನಡೆಸಲಾಗುವುದು ಎಂದರು.
ಕೆಪಿಸಿಸಿ ರಾಜ್ಯ ಪ್ರಧಾನ ಕಾರ್ಯದರ್ಶಿ ಎ.ಸಿ.ಶ್ರೀನಿವಾಸ್ ಮಾತನಾಡಿ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ನೇತƒತ್ವದಲ್ಲಿ ರಾಜ್ಯಾದ್ಯಂತ ಕಾಂಗ್ರೆಸ್ ಸಂಘಟನೆ ನಡೆಯುತ್ತಿದೆ. ಗ್ರಾಪಂ ಚುನಾವಣೆಗಳಲ್ಲಿ ಪಕ್ಷದ ಅಭ್ಯರ್ಥಿಗಳನ್ನು ಗೆಲ್ಲಿಸಿ ಕೊಂಡುಜನರಿಗೆಹೆಚ್ಚಿನಕೆಲಸಮಾಡಿಕೊಡಬೇಕು. ಆಯಾ ಗ್ರಾಪಂಗಳಲ್ಲಿ ಪಂಚಾಯ್ತಿ ಚುನಾವಣೆಸಂದರ್ಭದಲ್ಲಿ ಅಭ್ಯರ್ಥಿಗಳ ಬಗ್ಗೆಯಾಗಲಿ ಇನ್ನಿತರೆ ವಿಚಾರದಲ್ಲಿ ಗೊಂದಲವಿಲ್ಲದೇ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳನ್ನು ಗೆಲ್ಲಿಸಬೇಕೆಂದರು. ದೇವನಹಳ್ಳಿ ವಿಧಾನಸಭಾ ಕ್ಷೇತ್ರದಲ್ಲಿನ ಬಹು ತೇಕ ಗ್ರಾಪಂಗಳು ಕಾಂಗ್ರೆಸ್ ವಶವಾಗಲು ಎಲ್ಲಾ ಪ್ರಯತ್ನಗಳನ್ನುಪ್ರಾಮಾಣಿಕವಾಗಿಮಾಡುವುದಾಗಿ ತಿಳಿಸಿದರು.
ದೇವನಹಳ್ಳಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪ್ರಸನ್ನಕುಮಾರ್ ಮಾತನಾಡಿ, ಗ್ರಾಪಂ ಚುನಾವಣೆಯಲ್ಲಿಯೂ ಒಗ್ಗಟ್ಟಿನಿಂದ ಚುನಾವಣೆ ಎದುರಿಸಿ ಕಾಂಗ್ರೆಸ್ ಗ್ರಾಪಂಗಳಲ್ಲಿ ಅಧಿಕಾರ ಹೊಂದಬೇಕು ಎಂದರು.
ಸಭೆಯಲ್ಲಿ ಮಾಜಿ ಸಂಸದ ಸಿ.ನಾರಾಯಣಸ್ವಾಮಿ, ದೇವನಹಳ್ಳಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪ್ರಸನ್ನಕುಮಾರ್, ಉಪಾಧ್ಯಕ್ಷ ದ್ಯಾವರಹಳ್ಳಿ ವಿ.ಶಾಂತಕುಮಾರ್, ರಾಜ್ಯ ಹಿಂದುಳಿದ ವರ್ಗಗಳ ಉಪಾಧ್ಯಕ್ಷ ಜಗನ್ನಾಥ್, ಜಿಪಂ ಸ್ಥಾಯಿ ಸಮಿತಿ ಅಧ್ಯಕ್ಷ ಕೆ.ಸಿ.ಮಂಜುನಾಥ್, ಕೆಪಿಸಿಸಿ ಸದಸ್ಯ ಚೇತನ್, ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಕೆ.ಆರ್.ನಾಗೇಶ್, ಖಾದಿಬೋರ್ಡ್ ಅಧ್ಯಕ್ಷ ನಾಗೇಗೌಡ, ತಾಪಂ ಮಾಜಿ ಸದಸ್ಯ ಲಕ್ಷ್ಮಣ್ ಗೌಡ, ತಾಪಂ ಅಧ್ಯಕ್ಷೆ ಶಶಿಕಲಾ ಆನಂದ್, ಸದಸ್ಯರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.