ಕುಮಾರಣ್ಣನ ನೇತೃತ್ವದಲ್ಲಿ ಸರ್ಕಾರ ರಚನೆ
ಮುಂದಿನ ದಿನಗಳಲ್ಲಿ ರಾಜ್ಯದಲ್ಲಿ ಜೆಡಿಎಸ್ ಶಕೆ ಆರಂಭ ! ಜೆಡಿಎಸ್ ರಾಜ್ಯ ಪ್ರದಾನ ಕಾರ್ಯದರ್ಶಿ ಗೊಟ್ಟಿಗೆರೆ ಮಂಜುನಾಥ್ ಭವಿಷ್ಯ
Team Udayavani, Feb 25, 2021, 6:05 PM IST
ಆನೇಕಲ್: ರಾಜ್ಯದಲ್ಲಿ ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಕುಮಾರಣ್ಣ ನೇತೃತ್ವದ ಜೆಡಿಎಸ್ ತನ್ನ ಸ್ವಂತ ಬಲದಲ್ಲಿ ಸರ್ಕಾರ ರಚನೆ ಮಾಡಿಲಿದೆ ಎಂದು ಜೆಡಿಎಸ್ ರಾಜ್ಯ ಪ್ರದಾನ ಕಾರ್ಯದರ್ಶಿ ಗೊಟ್ಟಿಗೆರೆ ಮಂಜುನಾಥ್ ಭವಿಷ್ಯ ನುಡಿದರು.
ತಾಲೂಕಿನ ಮುಗಳೂರು ಗ್ರಾಮದಲ್ಲಿ ತಾಲೂಕು ಜೆಡಿಎಸ್ ಹಮ್ಮಿ ಕೊಂಡಿದ್ದ ಜೆಡಿಎಸ್ ಸಂಘಟನೆ, ಬೇಟೆ ವೆಂಕಟರಮಣ ದೇಗುಲದಲ್ಲಿ ವಿಶೇಷ ಪೂಜೆ ಹಾಗೂ ವಿವಿಧ ಪಕ್ಷಗಳ ಮುಖಂಡರ ಜೆಡಿಎಸ್ ಸೇರ್ಪಡೆ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು.
ಪಕ್ಷದ ವರಿಷ್ಠರಾದ ದೇವೇಗೌಡ, ಮಾಜಿ ಸಿಎಂ ಕುಮಾರಣ್ಣ ಪಕ್ಷ ಸಂಘಟಿಸಲು ಹಗಲು-ರಾತ್ರಿ ಶ್ರಮಿಸುತ್ತಿದ್ದಾರೆ. ಮುಂದಿನ ದಿನಗಳಲ್ಲಿ ರಾಜ್ಯದಲ್ಲಿ ಜೆಡಿಎಸ್ ಶಕೆ ಆರಂಭವಾಗಿಲಿದೆ. ನಮ್ಮ ಪಕ್ಷ ರಾಜ್ಯದಲ್ಲೇ ಮೊಟ್ಟ ಮೊದಲನೆಯದಾಗಿ ಆನೇಕಲ್ ವಿಧಾನಸಭಾ ಕ್ಷೇತ್ರದ ಆಭ್ಯರ್ಥಿಯಾಗಿ ಕೆ.ಪಿ. ರಾಜು ಅವರನ್ನು ಘೋಷಿಸಿದೆ. ಇದರಿಂದ ತಾಲೂಕಿನಲ್ಲಿ ಪಕ್ಷ ಸಂಘಟಿಸಲು ಸಹಕಾರಿಯಾಗುತ್ತದೆ. ಕ್ಷೇತ್ರದ ಇತಿ ಹಾಸದಲ್ಲಿ ಒಮ್ಮೆ ಜೆಡಿಎಸ್ ಶಾಸಕರು ಆಯ್ಕೆಯಾಗಿದ್ದರು. ಅದಾದ ಬಳಿಕ ಮುಂದಿನ ಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿ ಗೆಲ್ಲಿಸಬೇಕಾದ ಜವಾಬ್ದಾರಿ ನಮ್ಮ ನಿಮ್ಮೆಲ್ಲರ ಮೇಲಿದೆ ಎಂದರು.
ರಾಜ್ಯ ಜೆಡಿಎಸ್ ಮುಖಂಡ ಮೊಹಿದ್ ಆಲ್ತಾಪ್ ಖಾನ್ ಮಾತನಾಡಿ, ಕೇಂದ್ರದಲ್ಲಿ ರೈತರು ಹೋರಾಟ ಮಾಡುತ್ತಿದ್ದರೂ ಅವರಿಗೆ ಸ್ಪಂದಿಸದೆ ರೈತ ವಿರೋಧಿ ಸರ್ಕಾರವಾಗಿದೆ. 14 ತಿಂಗಳು ಸಿಎಂ ಆಗಿದ್ದ ಕುಮಾರಣ್ಣ 48 ಸಾವಿರ ಕೋಟಿ ರೂ. ಸಾಲಮನ್ನಾ ಮಾಡಿ ಜೆಡಿಎಸ್ ಪಕ್ಷ ರೈತ ಪರವಾಗಿದೆ ಎಂದರು.
ಜೆಡಿಎಸ್ ಅಭ್ಯರ್ಥಿ ಕೆ.ಪಿ. ರಾಜು ಮಾತನಾಡಿ,ಇದೇ ಕ್ಷೇತ್ರದಲ್ಲಿ ಸಾಮಾನ್ಯ ಕುಟುಂಬದಲ್ಲಿ ಹುಟ್ಟಿ,ಹಲವು ಹೋರಾಟಗಳ ಮೂಲಕ ತಾಲೂಕಿನ ಜನರಕಷ್ಟ-ಸುಖಗಳನ್ನು ಹತ್ತಿರದಿಂದ ನೋಡಿದ್ದೇನೆ. 25 ವರ್ಷಗಳಿಂದ ಸಾಮಾಜಿಕ ಕಾರ್ಯದಲ್ಲಿ ತೊಡಗಿಕೊಂಡು ಬಂದು ಇಂದು ನಿಮ್ಮ ಮನೆ ಮಗನಾಗಿ ಈ ವೇದಿಕೆಯಲ್ಲಿ ಪಕ್ಷದ ಅಭ್ಯರ್ಥಿಯಾಗಿ ನಿಂತಿರುವೆ ಎಂದರು. ಇಂದು ಕ್ಷೇತ್ರದಲ್ಲಿ ರೈತರು ಹತ್ತಾರು ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ, ಕೆರೆಗಳಲ್ಲಿ ನೀರು ನಿಲ್ಲುತ್ತಿಲ್ಲ. ಅಂತರ್ಜಲ ವೃದ್ಧಿ ಮಾಡುವ ಗೋಜಿಗೆ ಇಲ್ಲಿನ ಯಾವು ಜನಪ್ರತಿನಿಧಿಗಳು ಆಸಕ್ತಿ ತೋರದೆ ಇರುವುದೇ ತಾಲೂಕಿನ ದುರಂತ ಎಂದರು.
ವಿದ್ಯಾವಂತ ಯುವಕರ ಧ್ವನಿಯಾಗಿಬೇಕು: ಕ್ಷೇತ್ರದಲ್ಲಿ ಅರ್ಧದಷ್ಟು ಜನ ಕಾರ್ಮಿಕರಿದ್ದಾರೆ. 20ವರ್ಷ ದುಡಿದರೂ ಕಾರ್ಮಿಕರು ಒಂದು ಸೂರು ಮಾಡಿಕೊಳ್ಳಲು ಆಗುತ್ತಿಲ್ಲ. ಇಂತಹ ಕಾರ್ಮಿಕರಿಗೆ ಒಂದು ಸೂರು ನೀಡಬೇಕಾದ ಜವಾಬ್ದಾರಿಯನ್ನು ಮರೆತಿರುವ ಜನಪ್ರತಿನಿಧಿಗಳು ನಮಗೆ ಅವಶ್ಯಕ ಇದೆಯೇ ಎಂದು ಪ್ರಶ್ನೆ ಮಾಡಿಕೊಳ್ಳಬೇಕು. ಯುವಕರಿಗೆ ಕ್ಷೇತ್ರದಲ್ಲೇ ಉದ್ಯೋಗ ಸೃಷ್ಟಿಸುವುದು, ಸ್ವಯಂ ಉದ್ಯೋಗ ಕಾರ್ಯಕ್ರಮಗಳ ಜಾರಿಗೆ ತರಬೇಕಿತ್ತು. ಆಗ ಯುವಕರು ತಮ್ಮ ಬದುಕು ಕಟ್ಟಿಕೊಳ್ಳುತ್ತಿದ್ದರು. ವಿದ್ಯಾವಂತ ಯುವಕರ ಧ್ವನಿಯಾಗಿ ಕೆಲಸ ಮಾಡಬೇಕಿದೆ ಎಂದರು.
ಸರ್ಜಾಪುರದ ವೆಂಕಟರಮಣ ವಿಧಾನ ಪರಿಷತ್ ಸದಸ್ಯರಾಗಿ ಸೇವೆ ಸಲ್ಲಿಸಿ ಕ್ಷೇತ್ರದಲ್ಲಿ ಪಕ್ಷ ಕಟ್ಟಲು ಶ್ರಮಿಸಿದ್ದಾರೆ. ಅವರೊಂದಿಗೆ ಸಮಂ ದೂರು ವೀರಣ್ಣ, ಅಜಾತಶತೃ ಶ್ರೀನಾಥರೆಡ್ಡಿ, ಸಿದ್ದಾರೆಡ್ಡಿ ಅವರು ಪಕ್ಷ ಕಟ್ಟಲು ತಮ್ಮ ಬದುಕನ್ನು ಮೀಸಲಿಟ್ಟಿದ್ದರು. ಅವರ ಕನಸನ್ನು ನನಸು ಮಾಡಬೇಕಾದ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ ಎಂದರು. ನಿವೃತ್ತ ಪೊಲೀಸ್ ಅಧಿಕಾರಿ ಪುಟ್ಟಸ್ವಾಮಿ, ವೆಂಕಟಸ್ವಾಮಿ ಸೇರಿದಂತೆ ಹಲವು ಮುಖಂಡರು ಬಿಜೆಪಿ, ಕಾಂಗ್ರೆಸ್ ತೊರೆದು ಜೆಡಿಎಸ್ ಸೇರಿಕೊಂಡರು. ಮುಖಂಡ ಆರ್.ದೇವರಾಜ್, ಶ್ರೀನಿವಾಸ್, ತಾಲೂಕು ಅಧ್ಯಕ್ಷ ದೇವೇಗೌಡ ಮಾತನಾಡಿದರು.
ಪಕ್ಷದ ಮುಖಂಡ ಪಾರ್ಥ ಸಾರಥಿ, ರಾಜಣ್ಣ, ಗೋಪಾಲ್‌ಕೃಷ್ಣ, ಕೂಗುರು ನಾರಾಯಣರೆಡ್ಡಿ, ನಂಜಾರೆಡ್ಡಿ, ರಾಮು, ರುದ್ರೇಶ್, ಗ್ರಾಪಂ ಮಾಜಿ ಅಧ್ಯಕ್ಷ ನಾರಾಯಣಸ್ವಾಮಿ, ರವಿ, ಮದುಗೌಡ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kambala Kalarava: ರಾಜ ಮನೆತನದ ಐತಿಹ್ಯವಿರುವ ಮೂಲ್ಕಿ ಸೀಮೆಯ ʼಅರಸು ಕಂಬಳʼ
Puttur: ಎರಡು ಕಡೆ ಚಿನ್ನಾಭರಣ ಕಳವು; ಮೂವರ ಸೆರೆ
Vijayapura: ವೃಕ್ಷಥಾನ್ ಹೆರಿಟೇಜ್ ರನ್‌ಗೆ ಸ್ಪೀಕರ್ ಯು.ಟಿ.ಖಾದರ್ ಚಾಲನೆ
Sullia: ಬಸ್ ನಿಲ್ದಾಣದಲ್ಲಿ ಮಲಗಿದ್ದ ಪ್ರಯಾಣಿಕನ ಬ್ಯಾಗ್, ಶೂ ಕಳವು
ಮಮ್ತಾಜ್ ಅಲಿ ಆತ್ಮಹತ್ಯೆಗೆ ಪ್ರಚೋದನೆ ಆರೋಪ: ಜಾಮೀನು ವಿಚಾರಣೆ ಅರ್ಜಿ ಮುಂದೂಡಿಕೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.