123 ಕ್ಷೇತ್ರದಲ್ಲಿ ಜೆಡಿಎಸ್‌ ಗೆಲುವು ಖಚಿತ


Team Udayavani, Feb 23, 2023, 3:06 PM IST

TDY-12

ದೇವನಹಳ್ಳಿ: ಕೇಂದ್ರ ಮತ್ತು ರಾಜ್ಯ ಬಿಜೆಪಿ ಸರ್ಕಾರ ಜನರನ್ನು ತಿಗಣೆ ಹೀರುವ ರೀತಿಯಲ್ಲಿ ಜನರ ರಕ್ತ ಹೀರುತ್ತಿದೆ. ಸುಳ್ಳು ಭರವಸೆಗಳನ್ನು ನೀಡುವ ಬಿಜೆಪಿ ಸರ್ಕಾರಕ್ಕೆ 2023ರ ವಿಧಾನಸಭಾ ಚುನಾವಣೆಯಲ್ಲಿ ಜನ ತಕ್ಕ ಪಾಠ ಕಲಿಸಲಿದ್ದು, ರಾಜ್ಯದ 123 ಕ್ಷೇತ್ರದಲ್ಲಿ ಜೆಡಿಎಸ್‌ ಅಭ್ಯರ್ಥಿಗಳ ಗೆಲುವು ಖಚಿತ ಎಂದು ಶಾಸಕ ಎಲ್‌. ಎನ್‌.ನಾರಾಯಣಸ್ವಾಮಿ ವಿಶ್ವಾಸ ವ್ಯಕ್ತಪಡಿಸಿದರು.

ಪಟ್ಟಣದ ಪ್ರವಾಸಿ ಮಂದಿರದಲ್ಲಿ ದೇವನಹಳ್ಳಿ ವಿಧಾನಸಭಾ ಕ್ಷೇತ್ರ ಜೆಡಿಎಸ್‌ ವತಿಯಿಂದ ಹಮ್ಮಿಕೊಂಡಿದ್ದ ಜೆಡಿಎಸ್‌ ಕಾರ್ಯಕರ್ತರ ಸಭೆ, ವಿವಿಧ ಪಕ್ಷಗಳಿಂದ ಜೆಡಿಎಸ್‌ ಪಕ್ಷಕ್ಕೆ ಸೇರ್ಪಡೆ ಕಾರ್ಯಕ್ರಮ ಹಾಗೂ ನೂತನ ಪದಾಧಿಕಾರಿಗಳ ಅಧಿಕಾರ ಸ್ವೀಕಾರ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದ ಅವರು, ರಾಜ್ಯದಲ್ಲಿ ಮೂರು ವರ್ಷಗಳಿಂದ ಬಿಜೆಪಿ ಆಡಳಿತ ಸಂಪೂರ್ಣ ಕುಸಿದಿದೆ. ಸಜ್ಜನ ಪಕ್ಷಪಾತ, ಭ್ರಷ್ಟಾಚಾರ ಮಿತಿ ಮೀರಿ ಹೋಗಿದೆ. ಇಡೀ ರಾಜ್ಯದ ಜನತೆ ಬಿಜೆಪಿ ಬಗ್ಗೆ ಇದ್ದ ಭರವಸೆಯನ್ನು ಕಳೆದುಕೊಂಡು ಜನ ನಿರಾಸೆಯಲ್ಲಿದ್ದಾರೆ. ಒಬ್ಬ ಸಾಮಾನ್ಯ ಕಾರ್ಯಕರ್ತನಿಗೆ ಪಕ್ಷದ ಶಾಸಕ ಸ್ಥಾನದ ಟಿಕೆಟ್‌ ನೀಡಿ ಜನರ ಸೇವೆ ಮಾಡಲು ಅವಕಾಶ ಮಾಡಿಕೊಟ್ಟಿರುವ ಮಾಜಿ ಪ್ರಧಾನಿ ದೇವೇಗೌಡರು ಹಾಗೂ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ. ಯಾವುದೇ ಕಪ್ಪುಚುಕ್ಕೆಯಿಲ್ಲದೆ ಭ್ರಷ್ಟಾಚಾರ ರಹಿತವಾಗಿ ಜನರ ಸಮಸ್ಯೆಗಳಿಗೆ ಐದು ವರ್ಷಗಳ ಕಾಲ ಶಾಸಕನಾಗಿ ಕಾರ್ಯನಿರ್ವಹಿಸಿದ್ದೇನೆ. ಇತ್ತೀಚಿನ ಬೆಳವಣಿಗೆಗಳು ಪಕ್ಷದಲ್ಲಿ ನಡೆಯುತ್ತಿದ್ದು ಸತ್ಯಕ್ಕೆ ದೂರವಾದದ್ದು. ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ನಮ್ಮ ಕ್ಷೇತ್ರದ ಜನತೆ ಹಾಗೂ ಪಕ್ಷದ ನಿಷ್ಟಾವಂತ ಕಾರ್ಯಕರ್ತರು ನನ್ನೊಂದಿಗೆ ಇರುತ್ತಾರೆ ಎಂಬ ನಂಬಿಕೆಯಿದೆ ಎಂದು ಹೇಳಿದರು.

ನೀರಾವರಿಗೆ ಹೆಚ್ಚಿನ ಆದ್ಯತೆ: ನಾಡಿನ ಸರ್ವಾಂಗೀಣ ಅಭಿವೃದ್ಧಿಗಾಗಿ ಜೆಡಿಎಸ್‌ ಪಕ್ಷ ರೂಪಿಸಿರುವ ಪಂಚರತ್ನ ಯೋಜನೆಗಳ ಅನುಷ್ಟಾನಕ್ಕೆ ಸಾರ್ವತ್ರಿಕ ಚುನಾವಣೆ ಯಲ್ಲಿ ಜೆಡಿಎಸ್‌ ಪಕ್ಷವನ್ನು ಬೆಂಬಲಿಸುವ ಮೂಲಕ ಕುಮಾರಸ್ವಾಮಿ ಅವರನ್ನು ರಾಜ್ಯದ ಮುಖ್ಯಮಂತ್ರಿಯನ್ನಾಗಲು ಸಹಕರಿಸಬೇಕು. ಶಿಕ್ಷಣ, ಆರೋಗ್ಯ, ವಸತಿ, ಉದ್ಯೋಗ, ಮಹಿಳಾ ಹಾಗೂ ಗ್ರಾಮೀಣ ಅಭಿವೃದ್ಧಿಗಾಗಿ ಜೆಡಿಎಸ್‌ ಪಂಚರತ್ನ ಯೋಜನೆಗಳನ್ನು ರೂಪಿಸಿದೆ. ಜನತಾ ಜಲಧಾರೆ ಮೂಲಕ ನೀರಾವರಿ ಸಮಗ್ರ ಅಭಿವೃದ್ಧಿಗೆ ಜೆಡಿಎಸ್‌ ಸರ್ಕಾರ ಬಂದರೆ ನೀರಾವರಿಗೆ ಹೆಚ್ಚಿನ ಆದ್ಯತೆಯನ್ನು ನೀಡಲಿದೆ ಎಂದು ಹೇಳಿದರು.

ಪಕ್ಷ ಸಂಘಟನೆ ಮಾಡಿ: ಜೆಡಿಎಸ್‌ ಜಿಲ್ಲಾಧ್ಯಕ್ಷ ಬಿ. ಮುನೇಗೌಡ ಮಾತನಾಡಿ, ದೇವನಹಳ್ಳಿ ವಿಧಾನಸಭಾ ಕ್ಷೇತ್ರವು ಜೆಡಿಎಸ್‌ ಭದ್ರಕೋಟೆಯಾಗಿದೆ. ಅದೇ ರೀತಿಯಲ್ಲಿ ದೊಡ್ಡಬಳ್ಳಾಪುರ ವಿಧಾನಸಭಾ ಕ್ಷೇತ್ರವನ್ನು ನಾನು ಮತ್ತು ಜಿಪಂ ಮಾಜಿ ಸದಸ್ಯ ಅಪ್ಪಯಣ್ಣ ಹಾಗೂ ಪಕ್ಷದ ಕಾರ್ಯಕರ್ತರು ಸೇರಿ ದೊಡ್ಡಬಳ್ಳಾಪುರ ಕ್ಷೇತ್ರವನ್ನು ಜೆಡಿಎಸ್‌ ಭದ್ರಕೋಟೆಯನ್ನಾಗಿ ಮಾಡುತ್ತೇವೆ. ನೆಲಮಂಗಲ ದೇವನಹಳ್ಳಿ, ದೊಡ್ಡಬಳ್ಳಾಪುರ ಕ್ಷೇತ್ರಗಳಲ್ಲಿ ಜೆಡಿಎಸ್‌ ಶಾಸಕರನ್ನು ಗೆಲ್ಲಿಸಿಕೊಳ್ಳುತ್ತೇವೆ. ದೇವನಹಳ್ಳಿಯಲ್ಲಿ ಕಾರ್ಯಕರ್ತರು ಮೈಮರೆಯಬಾರದು. ಪದಾಧಿಕಾರಿಗಳು ಇವತ್ತಿನಿಂದಲೇ ಪಕ್ಷ ಸಂಘಟನೆ ಮಾಡಿ ಶಾಸಕರನ್ನು ಗೆಲ್ಲಿಸಿಕೊಳ್ಳಬೇಕು ಎಂದು ಹೇಳಿದರು.

ಗೊಂದಲಗಳಿಗೆ ಕಿವಿಗೊಡಬೇಡಿ: ಜೆಡಿಎಸ್‌ ತಾಲೂಕು ಅಧ್ಯಕ್ಷ ಆರ್‌.ಮುನೇಗೌಡ ಮಾತನಾಡಿ, ತಾಲೂಕಿನಲ್ಲಿ ಶಾಸಕರು ಉತ್ತಮ ಅಭಿವೃದ್ಧಿ ಕಾರ್ಯಗಳನ್ನು ಮಾಡಿದ್ದಾರೆ. ತಾಲೂಕಿಗೆ ಒಂದು ಶಾಪವಿದ್ದು ಅದನ್ನು ಕುಮಾರಸ್ವಾಮಿಯವರು ಈ ಬಾರಿ ಸರ್ಕಾರ ಬಂದರೆ ಶಾಸಕರನ್ನು ಮತ್ತೆ ಗೆಲ್ಲಿಸಿಕೊಂಡರೆ ಸಚಿವರನ್ನಾಗಿ ಮಾಡುವುದರ ಮೂಲಕ ಶಾಪ ವಿಮೋಚನೆ ಮಾಡಲಿದ್ದಾರೆ. ಪ್ರತಿ ನೂತನ ಪದಾಧಿಕಾರಿಗಳು ಪ್ರತಿ ಹಳ್ಳಿ ಹಳ್ಳಿಗಳಿಗೆ ಹೋಗಿ ಜೆಡಿಎಸ್‌ ಪಕ್ಷವನ್ನು ಸಂಘಟಿಸಿ ಶಾಸಕರನ್ನು ಗೆಲ್ಲಿಸಿಕೊಳ್ಳಬೇಕು. ಯಾವುದೇ ಗೊಂದಲಗಳಿಗೆ ಕಿವಿಗೊಡಬೇಡಿ ಎಂದು ಕಾರ್ಯಕರ್ತರಿಗೆ ಮನವಿ ಮಾಡಿದರು.

ಜಿಪಂ ಮಾಜಿ ಸದಸ್ಯ ಅಪ್ಪಯಣ್ಣ, ಮಂಜುಳಾದೇವಿ, ಬಸವರಾಜ್‌, ತಾಲೂಕು ಜೆಡಿಎಸ್‌ ಪ್ರಧಾನ ಕಾರ್ಯದರ್ಶಿ ಜಿ.ಎ.ರವೀಂದ್ರ, ಕಲ್ಯಾಣ್‌ ಕುಮಾರ್‌ ಬಾಬು, ಕಾರ್ಯಾಧ್ಯಕ್ಷ ಲಕ್ಷ್ಮಣ್‌, ಮುನಿರಾಜು, ಪ್ರಚಾರಸಮಿತಿ ಅಧ್ಯಕ್ಷ ನೆರಗನಹಳ್ಳಿ ಶ್ರೀನಿವಾಸ್‌, ತಾಲೂಕು ಸೊಸೈಟಿ ಅಧ್ಯಕ್ಷ ಎ.ದೇವರಾಜ್‌, ಪಿಕಾರ್ಡ್‌ ಬ್ಯಾಂಕ್‌ ಅಧ್ಯಕ್ಷ ಪಟಾಲಪ್ಪ, ಬಿಡಿಸಿಸಿ ಬ್ಯಾಂಕ್‌ ನಿರ್ದೇಶಕ ಸೊಣ್ಣಪ್ಪ, ಕಾಮೇನಹಳ್ಳಿ ರಮೇಶ್‌, ಎಪಿಎಂಸಿ ಮಾಜಿ ಅಧ್ಯಕ್ಷ ಕೆ.ವಿ.ಮಂಜುನಾಥ್‌, ದೇವನಹಳ್ಳಿ ಪುರಸಭಾ ಅಧ್ಯಕ್ಷೆ ಗೋಪಮ್ಮ, ವಿಜಯಪುರ ಪುರಸಭಾ ಅಧ್ಯಕ್ಷೆ ರಾಜೇಶ್ವರಿ, ಉಪಾಧ್ಯಕ್ಷ ಕೇಶವಪ್ಪ, ತಾಲೂಕು ಯುವಜೆಡಿಎಸ್‌ ಅಧ್ಯಕ್ಷ ಟಿ.ರವಿ, ಮಹಿಳಾ ಘಟಕದ ಅಧ್ಯಕ್ಷೆ ಮೀನಾಕ್ಷಿ ಮುನಿಕೃಷ್ಣಪ್ಪ, ದೇವನಹಳ್ಳಿ ಟೌನ್‌ ಅಧ್ಯಕ್ಷ ಮುನಿನಂಜಪ್ಪ, ಉಪಾಧ್ಯಕ್ಷ ವಾಸು, ವಿಜಯಪುರ ಟೌನ್‌ ಅಧ್ಯಕ್ಷ ನಾರಾಯಣಸ್ವಾಮಿ, ರಾಜ್ಯ ಜೆಡಿಎಸ್‌ ಸಂಘಟನಾ ಕಾರ್ಯದರ್ಶಿ ಶ್ರೀನಾಥ್‌ ಗೌಡ, ತಾಪಂ ಮಾಜಿ ಸದಸ್ಯ ಸಾದಹಳ್ಳಿ ಎಸ್‌.ಮಹೇಶ್‌, ಭೀಮರಾಜ್‌, ಮುಖಂಡರಾದ ಜೊನ್ನಹಳ್ಳಿ ಮುನಿರಾಜು, ಕಾಳಪ್ಪನವರ ವೆಂಕಟೇಶ್‌ವಿ.ಗೋಪಾಲ್‌, ಸೊಸೈಟಿ ಕುಮಾರ್‌, ಲಕ್ಷ್ಮೀನಾರಾಯಣ್‌, ಎಸ್‌.ಗುರಪ್ಪ, ಪುರದ ಕೃಷ್ಣಪ್ಪ, ಬಿದಲೂರು ನಾಗರಾಜ್‌, ಕೋಡಗುರ್ಕಿ ಮಹೇಶ್‌, ಹೆಗ್ಗನಹಳ್ಳಿ ಮಂಜುನಾಥ್‌, ರಬ್ಬನಹಳ್ಳಿ ಪ್ರಭಾಕರ್‌, ಹುರುಳುಗುರ್ಕಿ ಶ್ರೀನಿವಾಸ್‌,ಎಸ್‌ .ನಾಗೇಶ್‌, ವೈ.ಆರ್‌. ರುದ್ರೇಶ್‌, ಬಿ.ವಿ.ನಾಗರಾಜ್‌, ಕಾರಹಳ್ಳಿ ರಾಜಣ್ಣ, ರಾಜೇಂದ್ರ, ಕಾರಹಳ್ಳಿ ಆರ್‌. ಮಂಜುನಾಥ್‌, ರವಿ, ಪ್ರಸನ್ನಹಳ್ಳಿ ವಿಜಯಕುಮಾರ್‌, ಚಿಕ್ಕನಾರಾಯಣಸ್ವಾಮಿ, ಮುನಿರಾಜು,ವಿಜಯಪುರ ಭಾಸ್ಕರ್‌, ಚೌಡಪ್ಪನಹಳ್ಳಿ ಶಂಕರ್‌,ಕನ್ನಮಂಗಲಪಾಳ್ಯ ನಾಗೇಶ್‌ ಹಾಗೂ ಮತ್ತಿತರರು ಇದ್ದರು.

ಬಿಜೆಪಿ ಬಣ್ಣದ ಮಾತಿಗೆ ಮರುಳಾಗಬೇಡಿ : ಆಪರೇಷನ್‌ ಕಮಲದ ಮೂಲಕ ತಮ್ಮನ್ನು ಮಂತ್ರಿ ಮಾಡುತ್ತೇನೆ ಎಂದು ಆಮಿಷ ಒಡ್ಡಿದ್ದರು. ನನಗೆ ಎಷ್ಟೇ ಆಮಿಷ ಬಂದರೂ ಮೊದಲು ಕಾರ್ಯಕರ್ತರು. ಕಾರ್ಯಕರ್ತರಿದ್ದರೆ ಮಾತ್ರ ನಾವು ಪಕ್ಷದಲ್ಲಿರಲು ಸಾಧ್ಯ. ಬಿಜೆಪಿಯವರ ಬಣ್ಣ ಬಣ್ಣದ ಮಾತಿಗೆ ಯಾರೂ ಮರುಳಾಗಬೇಡಿ. ತಾಲೂಕಿನಲ್ಲಿ ಬಿಜೆಪಿ ಶಾಲುವನ್ನು ಹಿಡಿದು ಮನೆ ಮನೆಗೆ ಹೋಗಿ ಸೇರ್ಪಡೆ ಮಾಡಲು ಹೊರಟಿದ್ದಾರೆ. ರಾಷ್ಟ್ರೀಯ ಪಕ್ಷಗಳಿಂದ ರಾಜ್ಯದಲ್ಲಿ ಯಾವುದೇ ಅಭಿವೃದ್ಧಿಯಾಗುವುದಿಲ್ಲ ಎಂದು ಶಾಸಕ ಎಲ್‌.ಎನ್‌.ನಾರಾಯಣಸ್ವಾಮಿ ಹೇಳಿದರು.

ಟಾಪ್ ನ್ಯೂಸ್

1-horoscope

Daily Horoscope: ಉದ್ಯೋಗ ಸ್ಥಾನದಲ್ಲಿ ಹಲವು ಬಗೆಯ ಅವಕಾಶಗಳು, ಆರೋಗ್ಯ ವೃದ್ಧಿ

Mangaluru: ಅಪ್ರಾಪ್ತ ಬಾಲಕಿಯ ಅತ್ಯಾ*ಚಾರ: ಗರ್ಭಪಾತ ಪ್ರಕರಣ ಅಪರಾಧಿಗೆ 20 ವರ್ಷ ಜೈಲು

ಬಾಲಕಿಯ ಅತ್ಯಾಚಾರ-ಗರ್ಭಪಾತ ಪ್ರಕರಣ: ಅಪರಾಧಿಗೆ 20 ವರ್ಷ ಜೈಲು ಶಿಕ್ಷೆ; 50 ಸಾವಿರ ರೂ. ದಂಡ

adani

Adani ವಿರುದ್ಧ ಲಂಚ ಆರೋಪ; ಏನಿದು ಪ್ರಕರಣ? ಅಮೆರಿಕದಲ್ಲಿ ಪ್ರಕರಣ ಏಕೆ?

Naxal ಎನ್‌ಕೌಂಟರ್‌ ತನಿಖೆ ಆರಂಭ; ಉಳಿದವರು ಯಾವ ಕಡೆಗೆ ಪರಾರಿ?

Naxal ಎನ್‌ಕೌಂಟರ್‌ ತನಿಖೆ ಆರಂಭ; ಉಳಿದವರು ಯಾವ ಕಡೆಗೆ ಪರಾರಿ?

Hebri: ಎನ್‌ಕೌಂಟರ್‌ ತನಿಖೆ ನಡೆಸುವ ಹೆಬ್ರಿ ಪೊಲೀಸ್‌ ಠಾಣೆ ಇಲ್ಲಗಳ ಆಗರ!

Hebri: ಎನ್‌ಕೌಂಟರ್‌ ತನಿಖೆ ನಡೆಸುವ ಹೆಬ್ರಿ ಪೊಲೀಸ್‌ ಠಾಣೆ ಇಲ್ಲಗಳ ಆಗರ!

ashok

CM ಸಿದ್ದರಾಮಯ್ಯ ಭ್ರಷ್ಟ ಎಂದು ನಿರೂಪಿಸಲು ಯಶಸ್ವಿ: ಆರ್‌.ಅಶೋಕ್‌

BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?

BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Anekal: ರೌಡಿಶೀಟರ್‌ ಮೇಲೆ ಮಾರಕಾಸ್ತ್ರಗಳಿಂದ ದಾಳಿ

Anekal: ರೌಡಿಶೀಟರ್‌ ಮೇಲೆ ಮಾರಕಾಸ್ತ್ರಗಳಿಂದ ದಾಳಿ

nelamangala

Leopard Attack: ನೆಲಮಂಗಲ ಸಮೀಪ ಚಿರತೆ ದಾಳಿಗೆ ರೈತ ಮಹಿಳೆ ಬಲಿ

Stray dogs: ಅಂ.ರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬೀದಿ ನಾಯಿಗಳ ಹಾವಳಿ

Stray dogs: ಅಂ.ರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬೀದಿ ನಾಯಿಗಳ ಹಾವಳಿ

Tragic: ಮರದ ಕಾರ್ಖಾನೆಯಲ್ಲಿ ಆಕಸ್ಮಿಕ ಬೆಂಕಿ; ಕಾರ್ಮಿಕ ಸಜೀವ ದಹನ

Tragic: ಮರದ ಕಾರ್ಖಾನೆಯಲ್ಲಿ ಆಕಸ್ಮಿಕ ಬೆಂಕಿ; ಕಾರ್ಮಿಕ ಸಜೀವ ದಹನ

Market: ಬೆಲೆ ಕುಸಿತ; ಬೂದು ಕುಂಬಳ ಬೀದಿಪಾಲು!

Market: ಬೆಲೆ ಕುಸಿತ; ಬೂದು ಕುಂಬಳ ಬೀದಿಪಾಲು!

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

1-horoscope

Daily Horoscope: ಉದ್ಯೋಗ ಸ್ಥಾನದಲ್ಲಿ ಹಲವು ಬಗೆಯ ಅವಕಾಶಗಳು, ಆರೋಗ್ಯ ವೃದ್ಧಿ

Mangaluru: ಅಪ್ರಾಪ್ತ ಬಾಲಕಿಯ ಅತ್ಯಾ*ಚಾರ: ಗರ್ಭಪಾತ ಪ್ರಕರಣ ಅಪರಾಧಿಗೆ 20 ವರ್ಷ ಜೈಲು

ಬಾಲಕಿಯ ಅತ್ಯಾಚಾರ-ಗರ್ಭಪಾತ ಪ್ರಕರಣ: ಅಪರಾಧಿಗೆ 20 ವರ್ಷ ಜೈಲು ಶಿಕ್ಷೆ; 50 ಸಾವಿರ ರೂ. ದಂಡ

adani

Adani ವಿರುದ್ಧ ಲಂಚ ಆರೋಪ; ಏನಿದು ಪ್ರಕರಣ? ಅಮೆರಿಕದಲ್ಲಿ ಪ್ರಕರಣ ಏಕೆ?

Naxal ಎನ್‌ಕೌಂಟರ್‌ ತನಿಖೆ ಆರಂಭ; ಉಳಿದವರು ಯಾವ ಕಡೆಗೆ ಪರಾರಿ?

Naxal ಎನ್‌ಕೌಂಟರ್‌ ತನಿಖೆ ಆರಂಭ; ಉಳಿದವರು ಯಾವ ಕಡೆಗೆ ಪರಾರಿ?

Hebri: ಎನ್‌ಕೌಂಟರ್‌ ತನಿಖೆ ನಡೆಸುವ ಹೆಬ್ರಿ ಪೊಲೀಸ್‌ ಠಾಣೆ ಇಲ್ಲಗಳ ಆಗರ!

Hebri: ಎನ್‌ಕೌಂಟರ್‌ ತನಿಖೆ ನಡೆಸುವ ಹೆಬ್ರಿ ಪೊಲೀಸ್‌ ಠಾಣೆ ಇಲ್ಲಗಳ ಆಗರ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.