ಜೆಡಿಎಸ್‌ ಅಧಿಕಾರಕ್ಕೆ ಬರುವುದು ಖಚಿತ

Team Udayavani, Mar 10, 2023, 1:56 PM IST

tdy-14

ದೇವನಹಳ್ಳಿ: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್‌ ಪಕ್ಷ ಅಧಿಕಾರಕ್ಕೆ ಬರುವುದು ಖಚಿತ. ಅಧಿಕಾರಕ್ಕೆ ಬಂದಕೂಡಲೇ ಪಂಚರತ್ನ ಯೋಜನೆಗಳು ಜಾರಿಯಾಗಲಿವೆ ಎಂದು ದೇವನಹಳ್ಳಿ ಶಾಸಕ ಎಲ್‌.ಎನ್‌. ನಾರಾಯಣಸ್ವಾಮಿ ತಿಳಿಸಿದರು.

ಪಟ್ಟಣದ 21ನೇ ವಾರ್ಡಿನಲ್ಲಿ ಮಹೇಶ್ವರಮ್ಮ ದೇವಾಲಯ ಸಮೀಪದಲ್ಲಿ ತಾಲೂಕು ಜೆಡಿಎಸ್‌ ಮತ್ತು ಟೌನ್‌ ಜೆಡಿಎಸ್‌ ವತಿಯಿಂದ ಹಮ್ಮಿಕೊಂಡಿದ್ದ ಮನೆ ಮನೆಗೆ ಕುಮಾರಣ್ಣ ಕನಸಿನ ಯೋಜನೆ ಪಂಚರತ್ನ ಯೋಜನೆಯ ಕರಪತ್ರಗಳನ್ನು ಜನರಿಗೆ ಹಂಚಿ ಮನವಿ ಮಾಡಿದ ನಂತರ ಮಾತನಾಡಿದ ಅವರು, ರಾಜ್ಯದ ಸರ್ವತೋಮುಖ ಅಭಿವೃದ್ಧಿಗೆ ಜನತಾಪರ್ವ ಕಾರ್ಯಕ್ರಮವನ್ನು ರೂಪಿಸಿದ್ದಾರೆ. ಜನತಾಪರ್ವ ಕಾರ್ಯಕ್ರಮದ ಅಡಿಯಲ್ಲಿ ಜನತಾ ಜಲಧಾರೆ, ಜನತಾಮಿತ್ರ ಮತ್ತು ಪಂಚರತ್ನ ಯೋಜನೆಗಳನ್ನು ರೂಪಿಸಿದ್ದಾರೆ ಎಂದರು. 123 ಸ್ಥಾನಗಳನ್ನು ಪಡೆಯುವುದರ ಮೂಲಕ ರಾಜ್ಯದಲ್ಲಿ ಜೆಡಿಎಸ್‌ ಸರ್ಕಾರ ಅಧಿಕಾರಕ್ಕೆ ಬರಲಿದೆ. ಕಳೆದ ಐದು ವರ್ಷದಲ್ಲಿ ತಾಲೂಕಿನ ಸರ್ವತೋಮುಖ ಅಭಿವೃದ್ಧಿಗೆ ಹೆಚ್ಚಿನ ಒತ್ತನ್ನು ನೀಡಿದ್ದೇನೆ. ತಾಲೂಕಿನ ಸಮಗ್ರ ಅಭಿವೃದ್ಧಿಯೇ ನನ್ನ ಅಜೆಂಡಾ ಆಗಿದೆ. ತಾಲೂಕಿನ ಪ್ರತಿ ಹಳ್ಳಿ ಮತ್ತು ಪಟ್ಟಣ ಪ್ರದೇಶಗಳಿಗೆ ಹೋಗಿ ಮನೆ ಮನೆಗೆ ತೆರಳಿ ಶಾಸಕರ ಅಭಿವೃದ್ಧಿ ಕಾರ್ಯ, ಕುಮಾರಸ್ವಾಮಿ ಅವರ ಪಂಚರತ್ನ ಯೋಜನೆಯ ಸಂಬಂಧಪಟ್ಟಂತೆ ಜನರಿಗೆ ತಿಳಿಸಲಾಗುವುದು ಎಂದು ಹೇಳಿದರು.

ವಸತಿ ರಹಿತರಿಗೆ ಮನೆ ನಿರ್ಮಾಣ: ಜೆಡಿಎಸ್‌ ಪಕ್ಷ ಅಧಿಕಾರಕ್ಕೆ ಬಂದರೆ ಪಂಚರತ್ನ ಯೋಜನೆಗಳಲ್ಲಿ ಶಿಕ್ಷಣವೇ ಆಧುನಿಕ ಶಕ್ತಿ ಅಡಿಯಲ್ಲಿ ಗ್ರಾಪಂಗೆ ಒಂದರಂತೆ ಉತ್ತಮ ಹೈಟೆಕ್‌ ಶಾಲೆ ಸ್ಥಾಪಿಸುವುದು. ಆರೋಗ್ಯ ಸಂಪತ್ತು ಯೋಜನೆ ಅಡಿಯಲ್ಲಿ ಮಾನವನ ದೈಹಿಕ ಮತ್ತು ಮಾನಸಿಕ ವಿಕಾಸಕ್ಕೆ ಆರೋಗ್ಯವೇ ಅಡಿಪಾಯ. ಪಂಚಾಯಿತಿ ಕೇಂದ್ರಕ್ಕೆ ಒಂದರಂತೆ 30 ಹಾಸಿಗೆಗಳ ಹೈಟೆಕ್‌ ಆಸ್ಪತ್ರೆ, ರೈತ ಚೈತನ್ಯ ಯೋಜನೆಯಲ್ಲಿ ಕೃಷಿ ಪಂಪ್‌ಸೆಟ್‌ಗಳಿಗೆ 24ಗಂಟೆ ಉಚಿತ ವಿದ್ಯುತ್‌ ಒದಗಿಸುವುದು. ತಂತ್ರಜ್ಞಾನ ಆಧಾರಿತ ವ್ಯವ ಸಾಯ, ವಸತಿಯ ಆಸರೆ ಯೋಜನೆಯಡಿ ಯಲ್ಲಿ ಸರ್ವರಿಗೂ ಸ್ವಂತ ಸೂರು ಎಂಬ ಸೂತ್ರದಡಿಯಲ್ಲಿ ವಸತಿ ರಹಿತರಿಗೆ ಮನೆ ನಿರ್ಮಿ ಸುವುದು ಈ ಕಾರ್ಯಕ್ರಮದ ಗುರಿಯಾಗಿದೆ ಎಂದರು.

ಬೂತ್‌ಮಟ್ಟದಿಂದ ಪಕ್ಷ ಸಂಘಟನೆ: ಜೆಡಿಎಸ್‌ ತಾಲೂಕು ಅಧ್ಯಕ್ಷ ಆರ್‌.ಮುನೇಗೌಡ ಮಾತನಾಡಿ, ಈಗಾಗಲೇ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಹಾಗೂ ಜೆಡಿಎಸ್‌ ರಾಜ್ಯಾಧ್ಯಕ್ಷ ಸಿ.ಎಂ.ಇಬ್ರಾಹಿಂ ಹಾಗೂ ಜೆಡಿಎಸ್‌ ಅಭ್ಯರ್ಥಿಯಾಗಿ ಶಾಸಕರನ್ನು ಘೋಷಿಸಿದ್ದಾರೆ. ಅಭ್ಯರ್ಥಿ ಆಯ್ಕೆ ವಿಚಾರದಲ್ಲಿ ಯಾವುದೇ ಗೊಂದಲಗಳು ಇಲ್ಲ. ಶಾಸಕರು ತಾಲೂಕಿನಲ್ಲಿ ಐದು ವರ್ಷಗಳ ಕಾಲ ಉತ್ತಮವಾಗಿ ಶಕ್ತಿಮೀರಿ ಕೆಲಸ ಮಾಡಿದ್ದಾರೆ. ತಾಲೂಕಿನಲ್ಲಿ ಈಗಾಗಲೇ ಪ್ರತಿ ಬೂತ್‌ಮಟ್ಟದಿಂದ ಪಕ್ಷವನ್ನು ಸಂಘಟಿಸುತ್ತಿದ್ದೇವೆ ಎಂದು ಹೇಳಿದರು.

ಜೆಡಿಎಸ್‌ ಪ್ರಧಾನ ಕಾರ್ಯದರ್ಶಿ ಜಿ.ಎ. ರವೀಂದ್ರ, ಟೌನ ಜೆಡಿಎಸ್‌ ಅಧ್ಯಕ್ಷ ಮುನಿನಂಜಪ್ಪ, ಶಾಸಕರ ಪತ್ನಿ ನಾಗರತ್ನ, ಪುರಸಭಾ ಅಧ್ಯಕ್ಷೆ ಗೋಪಮ್ಮ, ಸದಸ್ಯ ಎಸ್‌.ನಾಗೇಶ್‌, ವೈ.ಆರ್‌. ರುದ್ರೇಶ್‌, ಕೋಮಲಾ, ಲೀಲಾವತಿ, ಪುಷ್ಪಲತಾ, ಮಾಜಿ ಪುರಸಭಾ ಅಧ್ಯಕ್ಷ ನರಸಿಂಹಮೂರ್ತಿ, ಎಂ.ಕುಮಾರ್‌, ದೇವರಾಜ್‌, ಟಿ.ರವಿ, ಮಾಜಿ ಅಧ್ಯಕ್ಷ ಆರ್‌.ಭರತ್‌ ಕುಮಾರ್‌,ಕಾಳಪ್ಪನವರ ವೆಂಕಟೇಶ್‌, ಮನಗೊಂಡನಹಳ್ಳಿ ಜಗದೀಶ್‌, ಮೀನಾಕ್ಷಿ ಹಾಗೂ ಕಾರ್ಯಕರ್ತರು ಇದ್ದರು.

ಟಾಪ್ ನ್ಯೂಸ್

Udupi: ಗೀತಾರ್ಥ ಚಿಂತನೆ-104: “ಅಂತಃಸ್ಫೂರ್ತಿ’ಯಿಂದ ತೊಂದರೆ ಇದಿರಿಸುವ ಶಕ್ತಿ

Udupi: ಗೀತಾರ್ಥ ಚಿಂತನೆ-104: “ಅಂತಃಸ್ಫೂರ್ತಿ’ಯಿಂದ ತೊಂದರೆ ಇದಿರಿಸುವ ಶಕ್ತಿ

aus-rohit

Australia: ಪರ್ತ್‌ಗೆ ಆಗಮಿಸಿದ ರೋಹಿತ್‌ ಶರ್ಮ

Pro Kabaddi League: ಬೆಂಗಾಲ್‌ ವಾರಿಯರ್ ಮೇಲೆ ಪುಣೇರಿ ಪಲ್ಟಾನ್‌ ಸವಾರಿ

Pro Kabaddi League: ಬೆಂಗಾಲ್‌ ವಾರಿಯರ್ ಮೇಲೆ ಪುಣೇರಿ ಪಲ್ಟಾನ್‌ ಸವಾರಿ

Kolkata: ತಮ್ಮದೇ ಪ್ರತಿಮೆ ಅನಾವರಣ ಮಾಡಿದ ಪಶ್ವಿ‌ಮ ಬಂಗಾಲ ಗವರ್ನರ್‌

Kolkata: ತಮ್ಮದೇ ಪ್ರತಿಮೆ ಅನಾವರಣ ಮಾಡಿದ ಪಶ್ವಿ‌ಮ ಬಂಗಾಲ ಗವರ್ನರ್‌

Uttar Pradesh: ತಪ್ಪು ದಾರಿ ತೋರಿದ ಜಿಪಿಎಸ್‌: ನದಿಗೆ ಬಿದ್ದು ಮೂವರ ಸಾವು

Uttar Pradesh: ತಪ್ಪು ದಾರಿ ತೋರಿದ ಜಿಪಿಎಸ್‌: ನದಿಗೆ ಬಿದ್ದು ಮೂವರ ಸಾವು

Jharkhand: ಬಿಜೆಪಿ ಗೆದ್ದೇ ಗೆಲ್ಲುತ್ತದೆ ಎಂದಿಲ್ಲ: ಅಸ್ಸಾಂ ಸಿಎಂ ಬಿಸ್ವಾ ವಾದ

Jharkhand: ಬಿಜೆಪಿ ಗೆದ್ದೇ ಗೆಲ್ಲುತ್ತದೆ ಎಂದಿಲ್ಲ: ಅಸ್ಸಾಂ ಸಿಎಂ ಬಿಸ್ವಾ ವಾದ

Darshan (3)

Renukaswamy ಹ*ತ್ಯೆ ಸ್ಥಳದಲ್ಲಿ ದರ್ಶನ್‌ ಇದ್ದ ಚಿತ್ರ ಲಭ್ಯ: ಪರಂ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Anekal: ರೌಡಿಶೀಟರ್‌ ಮೇಲೆ ಮಾರಕಾಸ್ತ್ರಗಳಿಂದ ದಾಳಿ

Anekal: ರೌಡಿಶೀಟರ್‌ ಮೇಲೆ ಮಾರಕಾಸ್ತ್ರಗಳಿಂದ ದಾಳಿ

nelamangala

Leopard Attack: ನೆಲಮಂಗಲ ಸಮೀಪ ಚಿರತೆ ದಾಳಿಗೆ ರೈತ ಮಹಿಳೆ ಬಲಿ

Stray dogs: ಅಂ.ರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬೀದಿ ನಾಯಿಗಳ ಹಾವಳಿ

Stray dogs: ಅಂ.ರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬೀದಿ ನಾಯಿಗಳ ಹಾವಳಿ

Tragic: ಮರದ ಕಾರ್ಖಾನೆಯಲ್ಲಿ ಆಕಸ್ಮಿಕ ಬೆಂಕಿ; ಕಾರ್ಮಿಕ ಸಜೀವ ದಹನ

Tragic: ಮರದ ಕಾರ್ಖಾನೆಯಲ್ಲಿ ಆಕಸ್ಮಿಕ ಬೆಂಕಿ; ಕಾರ್ಮಿಕ ಸಜೀವ ದಹನ

Market: ಬೆಲೆ ಕುಸಿತ; ಬೂದು ಕುಂಬಳ ಬೀದಿಪಾಲು!

Market: ಬೆಲೆ ಕುಸಿತ; ಬೂದು ಕುಂಬಳ ಬೀದಿಪಾಲು!

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

Udupi: ಗೀತಾರ್ಥ ಚಿಂತನೆ-104: “ಅಂತಃಸ್ಫೂರ್ತಿ’ಯಿಂದ ತೊಂದರೆ ಇದಿರಿಸುವ ಶಕ್ತಿ

Udupi: ಗೀತಾರ್ಥ ಚಿಂತನೆ-104: “ಅಂತಃಸ್ಫೂರ್ತಿ’ಯಿಂದ ತೊಂದರೆ ಇದಿರಿಸುವ ಶಕ್ತಿ

aus-rohit

Australia: ಪರ್ತ್‌ಗೆ ಆಗಮಿಸಿದ ರೋಹಿತ್‌ ಶರ್ಮ

Pro Kabaddi League: ಬೆಂಗಾಲ್‌ ವಾರಿಯರ್ ಮೇಲೆ ಪುಣೇರಿ ಪಲ್ಟಾನ್‌ ಸವಾರಿ

Pro Kabaddi League: ಬೆಂಗಾಲ್‌ ವಾರಿಯರ್ ಮೇಲೆ ಪುಣೇರಿ ಪಲ್ಟಾನ್‌ ಸವಾರಿ

Kolkata: ತಮ್ಮದೇ ಪ್ರತಿಮೆ ಅನಾವರಣ ಮಾಡಿದ ಪಶ್ವಿ‌ಮ ಬಂಗಾಲ ಗವರ್ನರ್‌

Kolkata: ತಮ್ಮದೇ ಪ್ರತಿಮೆ ಅನಾವರಣ ಮಾಡಿದ ಪಶ್ವಿ‌ಮ ಬಂಗಾಲ ಗವರ್ನರ್‌

1-ewew

ಸಂಗೀತ ವಿವಿಯಲ್ಲಿ ಕೋರ್ಸ್‌ ಆರಂಭ: ಕುಲಪತಿ ನಾಗೇಶ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.