ಜೆಡಿಎಸ್ ಅಧಿಕಾರಕ್ಕೆ ಬರುವುದು ಖಚಿತ
Team Udayavani, Apr 9, 2023, 1:54 PM IST
ದೇವನಹಳ್ಳಿ: ರಾಜ್ಯದಲ್ಲಿ ಜೆಡಿಎಸ್ ಪಕ್ಷ ಸ್ಪಷ್ಟ ಬಹುಮತದೊಂದಿಗೆ ಅಧಿಕಾರಕ್ಕೆ ಬರಲಿದೆ ಎಂದು ಶಾಸಕ ನಾರಾಯಣಸ್ವಾಮಿ ತಿಳಿಸಿದರು.
ಪಟ್ಟಣದ ಗಾರೆ ರವಿಕುಮಾರ್ ಲೇಔಟ್ ನಲ್ಲಿರುವ ಶಾಸಕರ ಕಚೇರಿ ಅವರಣದಲ್ಲಿ ಬಿಜೆಪಿ ಮುಖಂಡ ವಕೀಲ ಚನ್ನಹಳ್ಳಿ ರಮೇಶ್ ಹಾಗೂ ತಮ್ಮ ಬೆಂಬಲಿಗರೊಂದಿಗೆ ಜೆಡಿಎಸ್ ಸೇರ್ಪಡೆ ಕಾರ್ಯಕ್ರಮದಲ್ಲಿ ಮಾತನಾಡಿದರು.
ತಾಲೂಕಿನಲ್ಲಿ 5 ವರ್ಷಗಳ ಕಾಲ ತಾಲೂ ಕಿನ ಅಭಿವೃದ್ಧಿಗೆ ಶ್ರಮಿಸಲಾಗಿದೆ. ರಾಜ್ಯ ದಲ್ಲಿ ಮಹಿಳೆಯರು ಮತ್ತು ಯುವಕರು ಕಲ್ಯಾಣಕ್ಕಾಗಿ ಕುಮಾರಸ್ವಾಮಿ ಅವರು ಪಂಚರತ್ನ ಯೋಜನೆಯನ್ನು ರೂಪಿಸಿದ್ದಾರೆ. ಪ್ರತಿ ಯೊಂದು ಗ್ರಾಪಂ ಮಟ್ಟದಲ್ಲಿ ಉತ್ತಮ ಆರೋಗ್ಯ ಕ್ಕಾಗಿ ಸಾರ್ವಜನಿಕ ಆಸ್ಪತ್ರೆಗಳ ನಿರ್ಮಾಣ. ಇರುವ ಎಲ್ಲಾ ಮಕ್ಕಳಿಗೆ ಗುಣ ಮಟ್ಟದ ಶಿಕ್ಷಣ ನೀಡುವ ಸಲುವಾಗಿ ಎಲ್ಕೆಜಿಯಿಂದ ದ್ವಿತೀಯ ಪಿಯುಸಿ ವರೆಗೆ ಶಾಲೆಗಳ ನಿರ್ಮಾಣ.ರೈತರನ್ನು ಆರ್ಥಿಕವಾಗಿ ಅಭಿವೃದ್ಧಿಗೊಳಿಸಲು ಯೋಜನೆಗಳ ಅನುಷ್ಠಾನ ಮಾಡಲಿದ್ದಾರೆ ಎಂದು ಹೇಳಿದರು.
ಕುಮಾರಸ್ವಾಮಿಯವರು ಮುಖ್ಯಮಂತ್ರಿ ಆಗಿದ್ದಾಗ ಅನೇಕ ಜನಪರ ರೈತ ಪರ ಕ್ರಾಂತಿಕಾರಿ ಯೋಜನೆಗಳನ್ನು ಜಾರಿಗೊಳಿಸುವುದರ ಮೂಲಕ ಜೊತೆಗೆ ರೈತರ ಸಾಲ ಮನ್ನಾ ಮಾಡಿ ಬಡವರು ದೀನದಲಿತರು ಹಿಂದುಳಿದ ಸಮು ದಾಯಗಳಿಗೆ ಅನುಕೂಲ ಮಾಡಿದ್ದಾರೆ. ಮತ್ತೂಮ್ಮೆ ಅವರಿಗೆ ಅಧಿಕಾರ ನೀಡಿ ಪಂಚರತ್ನ ಯೋಜನೆಗಳು ಜಾರಿಗೊಳಿಸಲಿದ್ದಾರೆ. ವಿವಿಧ ಪಕ್ಷಗಳಿಂದ ಪಕ್ಷಕ್ಕೆ ಸೇರ್ಪಡೆ ಯಾಗುತ್ತಿರುವುದರಿಂದ ಪಕ್ಷ ಮತ್ತಷ್ಟು ಬಲಿಷ್ಠಗೊಳ್ಳಲು ಸಹಕರಿಯಾಗಿದೆ. ಪಕ್ಷದ ತತ್ವ ಸಿದ್ಧಾಂತಗಳನ್ನು ಒಪ್ಪಿ ರಮೇಶ್ ಹಾಗೂ ಅವರ ಬೆಂಬಲಿಗರು ಸೇರ್ಪಡೆಯಾಗಿದ್ದಾರೆ. 2023ರ ಚುನಾವಣೆ ಯಲ್ಲಿ ಕುಮಾರಸ್ವಾಮಿ ಅವರನ್ನು ಮುಖ್ಯಮಂತ್ರಿಯನ್ನಾಗಿ ಮಾಡುವುದರ ಮೂಲಕ ರಾಜ್ಯ ಸರ್ವತೋಮುಖಅಭಿವೃದ್ಧಿಗೆ ನೀಡಲಿದ್ದಾರೆ ಎಂದು ಹೇಳಿದರು.
ಈ ವೇಳೆಯಲ್ಲಿ ತಾ.ಜೆಡಿಎಸ್ ಅಧ್ಯಕ್ಷ ಮುನೇ ಗೌಡ, ಪ್ರಧಾನ ಕಾರ್ಯದರ್ಶಿ ಜಿ ರವೀಂದ್ರ, ಟೌನ್ ಜೆಡಿಎಸ್ ಅಧ್ಯಕ್ಷ ಮುನಿ ನಂಜಪ್ಪ, ತಾಲೂಕು ಸೊಸೈಟಿ ಮಾಜಿ ಅಧ್ಯಕ್ಷ ಶ್ರೀನಿವಾಸ್ ಮೂರ್ತಿ, ಪುರಸಭೆ ಮಾಜಿ ಸದಸ್ಯರಾದ ವಿ ಗೋಪಾಲ್, ರವಿಕುಮಾರ್, ತಾ.ಜೆಡಿಎಸ್ ಎಸ್ಸಿ ಘಟಕದ ಅಧ್ಯಕ್ಷ ವಕೀಲ ಶ್ರೀನಿವಾಸ್, ಚನ್ನರಾಯಪಟ್ಟಣ ಹೊಬಳಿಅಧ್ಯಕ್ಷ ಮುನಿರಾಜು, ಮುಖಂಡರಾದ ಆನಂದ್ ,ಶಿವಾನಂದ್, ಮಂಜುಳಾದೇವಿ ಮತ್ತಿತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Siddakatte Kodange Kambala: ಈ ಸೀಸನ್ ನ ಮೊದಲ ಕಂಬಳದ ಫಲಿತಾಂಶ ಇಲ್ಲಿದೆ
Karkala: ನಿಟ್ಟೆಯಲ್ಲಿ ಬಾವಿಗೆ ಬಿದ್ದ ಒಂದು ವರ್ಷದ ಮರಿ ಚಿರತೆ ರಕ್ಷಣೆ
Maharashtra polls; ದೇಶ ಒಡೆಯುವ ಮಾತನಾಡುವವರಿಗೆ ತಕ್ಕ ಪಾಠ: ಕಂಗನಾ
IPL 2025 Auction: ಮೊದಲ ಎರಡು ಸುತ್ತಿನಲ್ಲಿ ಮಾರಾಟವಾದ ಆಟಗಾರರ ಸಂಪೂರ್ಣ ಪಟ್ಟಿ..
IPL Auction: ಡೆಲ್ಲಿ ಕ್ಯಾಪಿಟಲ್ಸ್ ಪಾಲಾದ ಕೆಎಲ್ ರಾಹುಲ್; ಖರೀದಿ ಆರಂಭಿಸಿದ ಆರ್ ಸಿಬಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.