ಪೂರ್ಣ ಬಹುಮತದೊಂದಿಗೆ ಜೆಡಿಎಸ್ ಅಧಿಕಾರಕ್ಕೆ ತನ್ನಿ
Team Udayavani, Jan 15, 2023, 1:15 PM IST
ದೇವನಹಳ್ಳಿ: ವಿಧಾನಸಭಾ ಚುನಾವಣೆಯಲ್ಲಿ ಮತದಾನ ಪ್ರಕ್ರಿಯೆ ಕೆಲವೇ ದಿನಗಳಲ್ಲಿ ಪ್ರಾರಂಭವಾಗುವ ಹಿನ್ನೆಲೆ, ಪ್ರತಿ ಬೂತ್ ಮಟ್ಟದಿಂದ ಸಂಘಟಿಸುವುದರ ಮೂಲಕ ರಾಜ್ಯದಲ್ಲಿ 2023ರ ವಿಧಾನಸಭಾ ಚುನಾವಣೆಯಲ್ಲಿ ಪೂರ್ಣ ಬಹುಮತದೊಂದಿಗೆ ಜೆಡಿಎಸ್‌ನ್ನು ಅಧಿಕಾರಕ್ಕೆ ತರಬೇಕು ಎಂದು ಶಾಸಕ ಎಲ್.ಎನ್. ನಾರಾಯಣಸ್ವಾಮಿ ತಿಳಿಸಿದರು.
ಪಟ್ಟಣದ ಪುರಸಭೆ ವ್ಯಾಪ್ತಿಯ 23ನೇ ವಾರ್ಡಿನ ಅಕ್ಕುಪೇಟೆಯಲ್ಲಿ ವಿವಿಧ ಪಕ್ಷಗಳನ್ನು ತೊರೆದು ಜೆಡಿಎಸ್‌ಗೆ ಸೇರಿದ ಮುಖಂಡರನ್ನು ಸ್ವಾಗತಿಸಿ ಮಾತನಾಡಿದ ಅವರು, ಕಳೆದ ಐದು ವರ್ಷಗಳಿಂದ ಶಾಸಕನಾಗಿ ತಾಲೂಕಿನ ಅಭಿವೃದ್ಧಿಯೇ ನನ್ನ ಮೂಲ ಮಂತ್ರವಾಗಿದೆ. ದೇವನಹಳ್ಳಿ ಪಟ್ಟಣ ಹಾಗೂ ವಿಜಯಪುರ ಪಟ್ಟಣಗಳ ಅಭಿವೃದ್ಧಿಗೂ ಹೆಚ್ಚಿನ ಒತ್ತು ನೀಡಲಾಗಿದೆ. ಪ್ರತಿ ಗ್ರಾಮದಲ್ಲೂ ಒಂದಲ್ಲ ಒಂದು ಕಾಮಗಾರಿ ಮಾಡಿ ಅಭಿವೃದ್ಧಿ ಪಡಿಸಲಾಗಿದೆ ಎಂದರು.
ರಾಜ್ಯದ ಸಮಗ್ರ ಅಭಿವೃದ್ಧಿ: ಶಾಸಕರು ತಾಲೂಕಿನಲ್ಲಿ ಯಾವುದೇ ಅಭಿವೃದ್ಧಿ ಮಾಡಿಲ್ಲ ಎಂದು ಟೀಕೆ ಮಾಡುತ್ತಾರೆ. ನಾವು ಮಾಡಿರುವ ಕಾರ್ಯಕ್ರಮಗಳನ್ನು ನೋಡಿಕೊಳ್ಳಲಿ. ಅವರಿಗೆ ಅರ್ಥವಾಗುತ್ತದೆ. ಎಚ್.ಡಿ.ಕುಮಾರಸ್ವಾಮಿ ನೇತೃತ್ವದ ಜೆಡಿಎಸ್ ಅನ್ನು ಬೆಂಬಲಿಸಿ ಅಧಿಕಾರಕ್ಕೆ ತಂದರೆ ರಾಜ್ಯದ ಸಮಗ್ರ ಅಭಿವೃದ್ಧಿ ಸಾಧ್ಯ ಎಂದು ಹೇಳಿದರು.
ಜೆಡಿಎಸ್ ಪಕ್ಷದ ಸಿದ್ಧಾಂತ ಮೆಚ್ಚಿ 50ಕ್ಕೂ ಹೆಚ್ಚು ಕಾರ್ಯಕರ್ತರು ವಿವಿಧ ಪಕ್ಷಗಳನ್ನು ತೊರೆದು ಜೆಡಿಎಸ್‌ಗೆ ಸೇರ್ಪಡೆಗೊಂಡಿದ್ದಾರೆ. ದೇವನಹಳ್ಳಿ ವಿಧಾನಸಭಾ ಕ್ಷೇತ್ರದಲ್ಲಿ ಕುಮಾರಸ್ವಾಮಿ ಅವರ ಅಲೆ ವ್ಯಾಪಕವಾಗಿ ಬೀಸುತ್ತಿರುವುದು ಸ್ಪಷ್ಟವಾಗಿ ಗೋಚರಿಸುತ್ತಿರುವ ಹಿನ್ನೆಲೆ, ಅನೇಕ ಕಾರ್ಯ ಕರ್ತರು ಮುಖಂಡರು ಅನ್ಯ ಪಕ್ಷಗಳನ್ನು ತೊರೆದು ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಯಾಗುತ್ತಿದ್ದಾರೆ ಎಂದರು.
ಸಮಸ್ಯೆ ಬಗೆಹರಿಸಿದ್ದೇನೆ: ಮೂರು ವರ್ಷ ಅಭಿವೃದ್ಧಿಯಲ್ಲಿ ಹಿನ್ನಡೆಯಾಗಿದೆ. 23ನೇ ವಾರ್ಡಿನ ಸದಸ್ಯರಾದ ನಾಗೇಶ್ ಅವರು ಅನೇಕ ಹೋರಾಟ ಮಾಡಿ ಪುರಸಭೆಯ ಎಲ್ಲಾ ಸದಸ್ಯ. ರನ್ನು ವಿಶ್ವಾಸಕ್ಕೆ ಪಡೆದು ಹೆಚ್ಚು ಅನುದಾನವನ್ನು ತಂದು ವಾರ್ಡಿನಲ್ಲಿ ಅನೇಕ ಅಭಿವೃದ್ಧಿ ಕೆಲಸ ಮಾಡಿದ್ದಾರೆ. ತಾಲೂಕಿನ ಜನತೆಗೆ ಸಿಎಂ ಪರಿಹಾರ ನಿಧಿಯಿಂದ ಅನೇಕರಿಗೆ ಸಹಾಯ ಮಾಡಿದ್ದೇನೆ. ಸಾರ್ವಜನಿಕರ ಸಮಸ್ಯೆಗಳನ್ನು ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಚರ್ಚಿಸಿ ಸಮಸ್ಯೆ ಬಗೆಹರಿಸಿದ್ದೇನೆ ಎಂದರು. ಬೂತ್‌ಮಟ್ಟದಲ್ಲಿ ಪಕ್ಷ ಸಂಘಟನೆ: ಜೆಡಿಎಸ್ ತಾಲೂಕು ಅಧ್ಯಕ್ಷ ಆರ್. ಮುನೇಗೌಡ ಮಾತನಾಡಿ, ತಾಲೂಕಿನಲ್ಲಿ ಜೆಡಿಎಸ್ ಪಕ್ಷವು ಸದೃಢವಾಗಿ ಕಟ್ಟ ಲಾಗುತ್ತಿದೆ. ಪ್ರತಿ ಬೂತ್‌ಮಟ್ಟದಲ್ಲಿ ಪಕ್ಷವನ್ನು ಸಂಘ ಟಿಸಲಾಗುತ್ತಿದೆ. 2023ರ ವಿಧಾನಸಭಾ ಚುನಾವಣೆ ಯಲ್ಲಿ ಮತ್ತೆ ಶಾಸಕರನ್ನಾಗಿ ನಾರಾಯಣಸ್ವಾಮಿ ಅವರನ್ನು ಆಯ್ಕೆ ಮಾಡಬೇಕು. ಕುಮಾರಸ್ವಾಮಿ ಅವರನ್ನು ಮುಖ್ಯಮಂತ್ರಿಯನ್ನಾಗಿ ಮಾಡಬೇಕು ಎಂದು ಹೇಳಿದರು.
ಜೆಡಿಎಸ್ ತಾಲೂಕು ಪ್ರಧಾನ ಕಾರ್ಯದರ್ಶಿ ಜಿ.ಎ.ರವೀಂದ್ರ, ಟೌನ್ ಅಧ್ಯಕ್ಷ ಮುನಿನಂಜಪ್ಪ, ಪುರಸಭೆ ಸದಸ್ಯ ಕೋಡಿಮಂಚೇ ನಹಳ್ಳಿ ಎಸ್.ನಾಗೇಶ್, ಮಾಜಿ ಪುರಸಭೆ ಸ್ಥಾಯಿಸಮಿತಿ ಅಧ್ಯಕ್ಷ ವಿ.ಗೋಪಾಲ್, ಬೇಕರಿ ಮಂಜುನಾಥ್, ಸೊಸೈಟಿ ಕುಮಾರ್, ತಾಲೂಕು ಯುವಜೆಡಿಎಸ್ ಅಧ್ಯಕ್ಷ ಆರ್.ಭರತ್ ಕುಮಾರ್, ಟೌನ್ ಜೆಡಿಎಸ್ ಪ್ರಧಾನ ಕಾರ್ಯದರ್ಶಿ ಸಾಯಿಕುಮಾರ್ ಬಾಬು, ಮುಖಂಡ ನಟರಾಜ್, ವಿಜಯ್‌ಕುಮಾರ್, ಶಶಿಕುಮಾರ್ ಹಾಗೂ ಮತ್ತಿತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
INDvAUS: ಬ್ಯಾನ್ ತಪ್ಪಿಸಿಕೊಂಡ ವಿರಾಟ್ ಕೊಹ್ಲಿ; ಆದರೂ ಶಿಕ್ಷೆ ತಪ್ಪಲಿಲ್ಲ
Belagavi: ಪಿಒಕೆ ಬಗ್ಗೆ ಕಾಂಗ್ರೆಸ್ ನಿಲುವಿನ ಬಗ್ಗೆ ಮತ್ತೆ ಹೇಳಬೇಕಿಲ್ಲ: ಡಿಕೆ ಶಿವಕುಮಾರ್
ಮಂಗಳಮುಖಿಯನ್ನು ಪ್ರೀತಿಸಿ ಮದುವೆ ಆಗುತ್ತೇನೆಂದ ಪುತ್ರ; ಅವಮಾನದಿಂದ ಪೋಷಕರು ಆತ್ಮ*ಹತ್ಯೆ
Vijay Hazare Trophy: ಮಯಾಂಕ್ ಅಗರ್ವಾಲ್ ಶತಕದಾಟ; ಪಂಜಾಬ್ ಕೈನಿಂದ ಜಯ ಕಸಿದ ಕರ್ನಾಟಕ
Borewell Tragedy: 4ನೇ ದಿನಕ್ಕೆ ಕಾಲಿಟ್ಟ ರಕ್ಷಣಾ ಕಾರ್ಯಾಚರಣೆ… ಬಾಲಕಿಯ ಸ್ಥಿತಿ ಹೇಗಿದೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.